Home Blog Full WidthPage 792

ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ. ದೀಪಕ್ ರೈ ನೇಮಕ

ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು

ವಿಜಯಪುರದಲ್ಲಿ ತೈಲ ಬೆಲೆ ಏರಿಕೆಗೆ ಕಾಂಗ್ರೆಸ್ ಖಂಡನೆ

ವಿಜಯಪುರ: ಕೇಂದ್ರ ಸರಕಾರ ನಿರಂತರವಾಗಿ ತೈಲ ಬೆಲೆ ಏರಿಸುವ ಮೂಲಕ ಬಡವರನ್ನು ಸಂಕಷ್ಟಕ್ಕೆ ದೂಡಿದೆ ಎಂದು ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆರ್ ಬಿ ಪ್ರಕಾಲಿ ಅವರು ಆರೋಪಿಸಿದ್ದಾರೆ. ಕೇಂದ್ರ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ದೇಶದಲ್ಲಿ ನಿರಂತರವಾಗಿ ಬೆಲೆ ಏರಿಕೆ ಮಾಡುವ ಮೂಲಕ ಜನರನ್ನು ಸುಲಿಗೆ ಮಾಡುತ್ತಿದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ತೈಲ ದರ ಕಡಿಮೆ ಇದ್ದರು ಕೂಡ ಸರಕಾರ ಬೆಲೆಯನ್ನು ಗಗನಕ್ಕೆ ಏರಿಸುವ ಮೂಲಕ ಜನರ ಹಿತ

ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ

ಬೆಳ್ಳಾರೆ:-ಎಸ್.ವೈ.ಎಸ್. ಎಸ್ಸೆಸ್ಸೆಫ್ ಬೆಳ್ಳಾರೆ ಶಾಖೆ ಮತ್ತು ಇಸಾಬ ಟೀಂ ಹಾಗೂ ಸುಳ್ಯ ಸಹಾಯಿ ತಂಡದ ವತಿಯಿಂದ ಬೆಳ್ಳಾರೆಯಲ್ಲಿ ಸ್ಯಾನಿಟೈಸರ್ ಸಿಂಪಡಣೆ ನಡೆಸಲಾಯಿತು. ಸಾರ್ವಜನಿಕ ಸ್ಥಳಗಳಲ್ಲಿ ವೈರಸ್ ಹರಡದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಬೆಳ್ಳಾರೆಯ ವಿವಿಧ ಕಡೆಗಳಲ್ಲಿ ಸ್ಯಾನಿಟೈಸೇಶನ್ ನಡೆಸಲಾಯಿತು. ಅಂಗಡಿ ಮುಂಗಟ್ಟುಗಳ ಮುಂಭಾಗ,ಸರಕಾರಿ ಕಛೇರಿ,ಆಸ್ಪತ್ರೆ ಪರಿಸರ,ಶಾಲಾ ವಠಾರ,ಪಂಚಾಯತ್ ಕಛೇರಿ,ಬಸ್ಸ್ಟಾಂಡ್,ಕಂಟೈನ್ ಮೆಂಟ್ ಝೋನ್ ಹಾಗೂ ಸಾರ್ವಜನಿಕರು

ಇಂಧನ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯನ್ನು ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ 100 ನಾಟೌಟ್ ಪ್ರತಿಭಟನೆಯು ನಗರದ ಕೆಪಿಟಿ ಪೆಟ್ರೋಲ್ ಬಂಕ್ ಎದುರು ನಡೆಯಿತು. ‘ 100 ನಾಟೌಟ್’ ಎಂಬ ಹೆಸರಿನಲ್ಲಿ ನಡೆದ ಪ್ರತಿಭಟನೆಯಲ್ಲಿ ಜಾಗಟೆ ಬಾರಿಸುವ ಮೂಲಕ ಇಂಧನ ತೈಲ ಬೆಲೆ ಏರಿಕೆಯನ್ನು ಖಂಡಿಸಲಾಯಿತು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಬ್ಯಾರೆಲ್ ಗೆ

ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನಾ ಸಮಿತಿಯಿಂದ ಪ್ರತಿಭಟನೆ

ಮಂಜೇಶ್ವರ: ವ್ಯಾಪಾರ ವಲಯದಲ್ಲಿ ಸರಕಾರದ ನಿಯಂತ್ರಣಗಳು ದಿನದಿಂದ ದಿನಕ್ಕೆ ಉಲ್ಬಣಗೊಳುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನೀತಿಯನ್ನು ಖಂಡಿಸಿ ಕೇರಳ ವ್ಯಾಪಾರಿ ವ್ಯವಸಾಯಿ ಏಕೋಪನ ಸಮಿತಿ ಜಿಲ್ಲಾ ಮಟ್ಟದಲ್ಲಿ ನಡೆಸುತ್ತಿರುವ ಪ್ರತಿಭಟನೆಯ ಭಾಗವಾಗಿ ಮಂಜೇಶ್ವರದ ಹೊಸಂಗಡಿಯಲ್ಲೂ ಮಂಜೇಶ್ವರ ವ್ಯಾಪಾರ ಯೂನಿಟ್ ನ ನೇತೃತ್ವದಲ್ಲಿ ಕೋವಿಡ್ ಮಾನದಂಡಗಳನ್ನು ಪಾಲಿಸಿಕೊಂಡು ಒಂದು ಗಂಟೆಗಳ ಕಾಲ ನಿಂತುಕೊಂಡು ಪ್ರತಿಭಟನೆಯನ್ನು ನಡೆಸಿ ಗಮನ ಸೆಳೆದರು. ಕೆಲವೊಂದು ಅಂಗಡಿಗಳನ್ನು

ಹಾಸನ ಜಿಲ್ಲೆಯಲ್ಲಿ ಮತ್ತೊಂದು ವಾರ ಲಾಕ್‌ಡೌನ್: ಸಚಿವ ಗೋಪಾಲಯ್ಯ

ಹಾಸನ ಜಿಲ್ಲೆಯಲ್ಲಿ ಜೂನ್ 14 ರ ನಂತರವೂ ಒಂದು ವಾರ ಲಾಕ್ಡೌನ್ ಮುಂದುವರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಗೋಪಾಲಯ್ಯ ಹೇಳಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ 16.97 ಇರುವುದರಿಂದ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಒಂದು ವಾರ ಹೆಚ್ಚುವರಿಯಾಗಿ ಜಿಲ್ಲೆಯನ್ನು ಲಾಕ್ಡೌನ್ ಮಾಡಲು ಅನುಮತಿ ನೀಡಬೇಕೆಂದು ಮುಖ್ಯಮಂತ್ರಿಯವರಿಗೆ ಮನವಿ

ಪುಟ್ಟ ಮಗುವಿನೊಂದಿಗೆ ಬೀದಿ ಪಾಲಾಗಿದ್ದ ಸಂಸಾರಕ್ಕೆ ನೆರವಾದ ಟೀಂ- ಬಿ ಹ್ಯೂಮನ್ ಮತ್ತು ಟೀಂ ಐ.ವೈ.ಸಿ

ಇದೊಂದು ಹೃದಯ ಕಲಕುವ ಘಟನೆ, ಲಾಕ್ ಡೌನ್ ಮತ್ತು ಕೊರೊನಾದಿಂದ ತತ್ತರಿಸಿದ ಜನರ ಬದುಕಿನ ಭೀಕರತೆ ಈ ಘಟನೆ ಸಾಕ್ಷಿ. ತುಮಕೂರಿನ ಸುಬ್ರಹ್ಮಣ್ಯ ಅವರು ಲಾಕ್ ಡೌನ್ ಕಾರಣಕ್ಕೆ ಕೆಲಸ ಕಳೆದುಕೊಂಡಿದ್ದರು. ಪತ್ನಿಗೆ ಮೂರನೇ ಹೆರಿಗೆ ದಿನ ಹತ್ತಿರವಾಗಿತ್ತು. ಇಬ್ಬರು ಮಕ್ಕಳು ಮನೆಯಲ್ಲಿದ್ದರು . ಸಂಕಷ್ಟದ ನಡುವೆ ಹೆರಿಗೆಗಾಗಿ, ಸುಬ್ರಹ್ಮಣ್ಯ ತನ್ನ ಪತ್ನಿಯನ್ನು ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಗೆ ಕರೆ ತರುತ್ತಾರೆ. ಪತ್ನಿಯ ಆರೋಗ್ಯಕರವಾಗಿ ಹೆರಿಗೆ ಆಗುತ್ತದೆ. ಹೆರಿಗೆ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ ಶೇಖರ್ ಬಂಗೇರ ನಿಧನ

ಭಾರತೀಯ ಫುಟ್ಬಾಲ್ ತಂಡದ ಮಾಜಿ ನಾಯಕ, ಉಡುಪಿ ಮೂಲದ ಶೇಖರ್ ಬಂಗೇರ (74) ಅವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಶೇಖರ್ ಬಂಗೇರ ಅವರು ಬ್ರಹ್ಮಾವರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೆ ಗುರುವಾರ ಬೆಳಗ್ಗೆ ಅವರು ಕೊನೆಯುಸಿರೆಳೆದಿದ್ದಾರೆ. ಉಡುಪಿಯ ಬಡಾನಿಡಿಯೂರು ಮೂಲದ ಶೇಖರ್ ಬಂಗೇರ ಅವರು ಭಾರತೀಯ ಫುಟ್ಬಾಲ್ ತಂಡದ ಗೋಲ್ ಕೀಪರ್ ಆಗಿದ್ದರು. ಇದೇವೇಳೆ ಅವರು ತಂಡದ ನಾಯಕರೂ ಆಗಿದ್ದರು. ಬಹುಕಾಲ

ದ.ಕ ಜಿಲ್ಲೆಯಲ್ಲಿ ಜೂ.21ರವರಗೆ ಲಾಕ್‌ಡೌನ್ ಮುಂದುವರಿಕೆ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ದ.ಕ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್‌ಡೌನ್ ಮುಂದುವರಿಸಲು ನಿರ್ಧಾರ ಮಾಡಲಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಈ ಕುರಿತು ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ 8 ಜಿಲ್ಲೆಗಳ ಪರಿಸ್ಥಿತಿಯನ್ನು ಅವಲೋಕಿಸುವ ನಿಟ್ಟಿನಲ್ಲಿ ವಿಡಿಯೋ ಕಾನ್ಫರೇನ್ ಮೂಲಕ ಗುರುವಾರ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲೆಗೆ ಹೆಚ್ಚುವರಿ

ತುಳುಕೂಟ ಕತಾರ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ದೋಹ ಕತಾರ್ ನಲ್ಲಿರುವ ತುಳುಕೂಟ ಕತಾರ್ 2021 ನೇ ಸಾಲಿನ ವಿಶ್ವ ಪರಿಸರ ದಿನಾಚರಣೆಯನ್ನು ಅಧ್ಯಕ್ಷೆ ಶ್ರೀಮತಿ ಚೈತಾಲಿ ಉದಯ್ ಶೆಟ್ಟಿಯವರ ನೇತೃತ್ವದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲಿಸಿಕೊಂಡು ಬಹಳ ವಿಭಿನ್ನ ರೀತಿಯಲ್ಲಿ ಆಚರಿಸಿತು.  JOY OF GIVING WEEK – ದಾನದಲ್ಲಿರುವ ಧನ್ಯತೆ ಸಪ್ತಾಹ ಎಂಬ ಶೀರ್ಷಿಕೆಯೊಂದಿಗೆ 7 ದಿನಗಳ ಕಾಲ ನಡೆದಂತಹ ಈ ಕಾರ್ಯಕ್ರಮವು  ಪ್ರಕೃತಿಪ್ರಿಯ ಸದಸ್ಯರನ್ನು  ಒಗ್ಗೂಡಿಸುವುದರ ಜೊತೆಗೆ ಪ್ರಸ್ತುತ