Home Blog Full WidthPage 902

ಬಹುಭಾಷಾ ಹಿರಿಯ ನಟಿ ಜಯಂತಿ ಇನ್ನಿಲ್ಲ

ಆರು ಭಾಷೆಗಳಲ್ಲಿ ನಟಿಸಿದ್ದ ಕನ್ನಡದ ಹಿರಿಯ ನಟಿ ಇಂದು ನಿಧನರಾದರು . ‘ ಜೇನುಗೂಡು ‘ ಚಿತ್ರವು ಜಯಂತಿ ಅವರು ನಾಯಕಿ ನಟಿಯಾಗಿ ನಟಿಸಿದ ಮೊದಲ ಸಿನಿಮಾ. ನಾಲ್ಕು ಬಾರಿ ಅತ್ಯುತ್ತಮ ನಟಿ ರಾಜ್ಯ ಪ್ರಶಸ್ತಿ ಪಡೆದಿದ್ದ ಜಯಂತಿ ಅವರು 500 ಕ್ಕೂ ಹೆಚ್ಚು ಚಿತ್ರದಲ್ಲಿ ನಟಿಸಿದ್ದರು. 1945 ರ ಜನವರಿ 6 ರಂದು ಜನಿಸಿದ್ದ ಜಯಂತಿ ಅವರ ಮೂಲ ಹೆಸರು ಕಮಲ ಕುಮಾರಿ

ಮರವಂತೆಯಲ್ಲಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಕುಂದಾಪುರ: ಎಲ್ಲೆಡೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಬಗ್ಗೆ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಮರವಂತೆಯಲ್ಲಿ ಭಾನುವಾರ ನಡೆದ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಮಂಗಳೂರಿನಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ ಮಾಧ್ಯಮ ದವರೊಂದಿಗೆ ಮಾತಾನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ವ್ವವಸ್ಥಿತವಾಗಿ ಆಡಳಿತ ನಡೆಯುತ್ತಿದೆ

ಆಸ್ಕರ್ ಫೆರ್ನಾಂಡಿಸ್ ಅವರು ಬಹುಬೇಗನೇ ಗುಣಮುಖರಾಗಿ ಬರಲಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್ ರೈಲ್ವೇ, ಹೆದ್ದಾರಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ಆಸ್ಕರ್ ಕಾರಣಕರ್ತರು. ಒಂದು ಆದರ್ಶ

ಪರ್ಕಳದ ಸಣ್ಣಕ್ಕಿಬೆಟ್ಟುವಿನಲ್ಲಿ ಹಡೀಲು ಭೂಮಿಯಲ್ಲಿ ಕೃಷಿ ಆಂದೋಲನ

ಉಡುಪಿಯಲ್ಲಿ “ಹಡೀಲು ಭೂಮಿ ಕೃಷಿ ಆಂದೋಲನ”ದಡಿ ಉಡುಪಿ ನಗರಸಭಾ ವ್ಯಾಪ್ತಿಯ ಹಡಿಲು ಭೂಮಿಗಳ ಕಡೇ ನಾಟಿ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ನಾಟಿ ಕಾರ್ಯದಲ್ಲಿ ಪಾಲ್ಗೊಂಡ ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತನಾಡಿ, ಒಬ್ಬ ಜನಪ್ರತಿನಿಧಿ ಕೇವಲ ಮತದ ಲೆಕ್ಕಾಚಾರಗಳನ್ನು ಹಾಕುವುದಲ್ಲ. ವಿಭಿನ್ನವಾದ ಕಾರ್ಯಗಳನ್ನು ಮಾಡಬೇಕು. ಇಂದು ನಶಿಸಿ ಹೋಗುತ್ತಿದ್ದ ಕೃಷಿ ಪರಂಪರೆಯನ್ನು ಉಳಿಸುವ ಕೆಲಸವಾಗಿದೆ. ಕೃಷಿಯ ಮೇಲಿನ ಪ್ರೀತಿ,

ಕಾಪು ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ: ನಗ ನಗದು ದೋಚಿ ಪರಾರಿ

ಕಾಪು ಠಾಣಾ ವ್ಯಾಪ್ತಿಯ ಮೂಳೂರು ಮುಖ್ಯ ರಸ್ತೆಯ ಬಳಿಯ ಮೂರು ಮನೆಗಳಿಗೆ ನುಗ್ಗಿದ ಕಳ್ಳರು ಲಕ್ಷಾಂತರ ಮೌಲ್ಯದ ನಗನಗದು ಕಳವು ಗೈದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೂಳೂರು ಈಸ್ಟ್ ವೆಸ್ಟ್ ನರ್ಸರಿ ಸಮೀಪದ ಮಹಮ್ಮದ್ ರಫೀಕ್, ಮಧುರ ಕಾಂಪೌಂಡ್ ನಿವಾಸಿ ಇಬ್ರಾಹಿಂ ಹಾಗೂ ಶಹನಾಜ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಅಪಾರ ನಗ ಹಾಗೂ ನಗದು ಕಳವು ಗೈದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ ಯಾದರೂ ಮೌಲ್ಯ ಇನ್ನಷ್ಟೇ ತಿಳಿದು ಬರ ಬೇಕಾಗಿದೆ. ಈ ಮೂರೂ ಮನೆ […]

ಬೇಲೂರಿನಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ

ಬೇಲೂರು ತಾಲೂಕಿನ ಮಲೆನಾಡು ಪ್ರದೇಶವಾದ ಅರೆಹಳ್ಳಿ ಮತ್ತು ಬಿಕ್ಕೋಡು ಹೋಬಳಿಯ ಸುತ್ತಮುತ್ತಲ ಹಳ್ಳಿಗಳಲ್ಲಿ ಕಳೆದ ಒಂದು ವಾರಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಸಂಪೂರ್ಣ ಜನಜೀವನ ಅಸ್ತವ್ಯಸ್ತವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಸುಂಡೆಕೆರೆ ಹಾಗೂ ನಾರ್ವೆ ಪೇಟೆ ಸಂಪರ್ಕಿಸುವ ಸೇತುವೆ ಮುಳುಗಡೆ ಯಾಗಿದೆ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬಗಳು ಹಾಗೂ ರಸ್ತೆಬದಿಯ ಮರಗಳು ನೆಲಕಚ್ಚಿದ್ದು ಅನೇಕ ಹಳ್ಳಿಗಳಲ್ಲಿ ವಿದ್ಯುತ್ ಕಡಿತಗೊಂಡಿದೆ ಕೆರೆ-ಕಟ್ಟೆ

ವಿಟ್ಲದಲ್ಲಿ ಚಿರತೆಗಳ ಕಾಟ: ಬೇಸತ್ತ ಸಾರ್ವಜನಿಕರಿಂದ ಬೋನು ಅಳವಡಿಕೆ

ಬಂಟ್ವಾಳ ತಾಲೂಕಿನ ವಿಟ್ಲದ ಕೊಳ್ನಾಡು ಗ್ರಾಮದ ಮದಕ, ಪಡಾರು, ಮಾದಕಟ್ಟೆ, ಬಾರೆಬೆಟ್ಟು, ಮುಂಡತ್ತಜೆ ಮತ್ತು ತಾಳಿತ್ತನೂಜಿ ಸುತ್ತಮುತ್ತ ಕಳೆದ ಎರಡು ತಿಂಗಳಿಂದ ಮಿತಿಮೀರಿದ ಚಿರತೆಗಳ ಕಾಟದಿಂದ ಬೇಸತ್ತ ಸಾರ್ವಜನಿಕರು ಬೋನು ಅಳವಡಿಸಿದ್ದಾರೆ. ಅರಣ್ಯ ಇಲಾಖೆಯವರಿಗೆ ಮಾಹಿತಿ ನೀಡಿದ್ದರೂ ಒಂದು ಬಾರಿ ಮಾತ್ರ ಸ್ಥಳಕ್ಕಾಗಮಿಸಿ ಹರಕೆ ತೀರಿಸಿದ್ದಾರೆ. ಬೋನು ತಂದಿಟ್ಟು ಚಿರತೆ ಹಿಡಿಯುವಂತೆ ಸ್ಥಳೀಯರು ಅಂಗಲಾಚಿದ್ದರೂ  ತಂದಿರಿಸುತ್ತೇವೆಂದು ತಿಳಿಸಿದ್ದರು. ಅದಾದ ಬಳಿಕ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಉಡುಪಿ ಅದಮಾರು ಮಠದ ಶ್ರೀಗಳು

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.

ಉಳ್ಳವರು ಸಮಾಜಕ್ಕೆ ಕೊಡುಗೆ ನೀಡಬೇಕು: ಸಚಿವ ಅಂಗಾರ ಅಭಿಮತ

ಕಡಬ: ಆರ್ಥಿಕವಾಗಿ ಶಕ್ತರಾಗಿರುವವರು ಸಮಾಜಕ್ಕೆ ಸಹಾಯವಾಗುವ ರೀತಿಯಲ್ಲಿ ಕೊಡುಗೆ ನೀಡಿ ಸಮಾಜದ ಋಣ ತೀರಿಸಬೇಕು ಎಂದು ಬಂದರು, ಮೀನುಗಾರಿಕೆ, ಒಳನಾಡು ಜಲ ಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು. ಅವರು ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಕಾರ್ಡಿಯಾಲಾಜಿ ಎಟ್ ಡೋರ್ ಸ್ಟೆಪ್ಸ್ ಫೌಂಡೇಷನ್ ಟ್ರಸ್ಟ್ , ಕಡಬ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಹಾಗೂ ಭಾರತೀಯ ಜನೌಷಧಿ ಕೇಂದ್ರ ಇದರ ಸಹಯೋಗದಲ್ಲಿ ಮಂಗಳೂರು ಕೆ.ಎಂ.ಸಿ ಆಸ್ಪತ್ರೆಯ ಕಾರ್ಡಿಯಾಲಾಜಿ