ಕುಂದಾಪುರ: ಉತ್ತರಕನ್ನಡ ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ್ದ ಮುರ್ಡೇಶ್ವರದ 21 ವರ್ಷದ ಯುವತಿ ಯಮುನಾ ನಾಯ್ಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸುವಂತೆ ಧಾರವಾಡದ ಉಚ್ಚ ನ್ಯಾಯಾಲಯದ ಪೀಠ ಮಹತ್ವದ ತೀರ್ಪು ನೀಡಿದೆ. ಅತ್ಯಾಚಾರ, ಕೊಲೆ ಪ್ರಕರಣ ನಡೆದು ಸುಮಾರು 11 ವರ್ಷಗಳ ಬಳಿಕ ಮರು ತನಿಖೆ ನಡೆಸುವಂತೆ ನ್ಯಾಯಾಲಯ ತೀರ್ಪು ನೀಡಿದ್ದು ಭಾರೀ
ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.
ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ
ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ
ಹಾಸನ: ಕಳೆದ ಎರಡು ದಿನಗಳಿಂದ ಸುರಿದ ಭಾರೀ ಮಳೆಗೆ ಹಾಸನ ಸಕಲೇಶಪುರದಲ್ಲಿ ಅಪಾರ ಹಾನಿ ಸಂಭವಿಸಿದ್ದು, ಇಂದು ಕಂದಾಯ ಸಚಿವ ಆರ್ ಆಶೋಕ್ ಮತ್ತು ಅಬಕಾರಿ ಸಚಿವರಾದ ಕೆ. ಗೋಪಾಲಯ್ಯ ಅವರು ಭೇಟಿ ನೀಡಿ ಅತಿವೃಷ್ಠಿ ಪ್ರದೇಶವನ್ನು ಪರಿಶೀಲಿಸಿದರು. ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿ ರಾಷ್ಟ್ರೀಯ ಹೆದ್ದಾರಿ ಎನ್.ಹೆಚ್ 75 ರಲ್ಲಿ ಆಗಿರುವ ಭೂ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಸಚಿವರು ಆದಷ್ಟು ಶೀಘ್ರವಾಗಿ ರಸ್ತೆ ದುರಸ್ತಿ ಪಡಿಸುವಂತೆ ಸೂಚಿಸಿದರು. ಅತೀವೃಷ್ಠಿ
ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ
ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆ ನೀಡಿರುವಂತಹ ಆಡಿಯೋ ಧ್ವನಿ ನಳಿನ್ ಕುಮಾರ್ ಕಟೀಲ್ ಅವರದ್ದು. ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರೂ ಹೇಳಿಕೊಂಡಿದ್ದಾರೆ ಎಂದು ಅವರು
ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ
ಪೀಠ ಕ್ರಿಯೇಷನ್ ವತಿಯಿಂದ ’ವಿವಾಸ್ವತ’ ಕನ್ನಡ ಕಿರುಚಿತ್ರದ ಲೋಕಾರ್ಪಣೆ ಕಾರ್ಯಕ್ರಮವು ಮಂಗಳೂರಿನ ಮ್ಯಾಪ್ಸ್ ಕಾಲೇಜಿನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮ್ಯಾಪ್ಸ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರಭಾಕರ್ ನೀರ್‌ಮಾರ್ಗ ಅವರು ’ವಿವಾಸ್ವತ’ ಕನ್ನಡ ಕಿರುಚಿತ್ರವನ್ನು ಲೋಕಾರ್ಪಣೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಪೀಠ ಕ್ರಿಯೇಶನ್‌ನವರು ವಿವಾಸ್ವತ ಎಂಬ ಕಿರುಚಿತ್ರವನ್ನು ಹೊರತಂದಿದೆ. ಸಮಾಜಕ್ಕೆ ಕನ್ನಡಿ ಹಿಡಿದು ಸಮಾಜವನ್ನು ತಿದ್ದುವ ಕೆಲಸ ಇವರ ಕಿರುಚಿತ್ರ
ಮಂಜೇಶ್ವರ: ಕೇಂದ್ರ ಸರ್ಕಾರವು ವಿರೋಧ ಪಕ್ಷದ ನಾಯಕರ ಸುಪ್ರೀಂ ಕೋರ್ಟ್ ನ್ಯಾಯಾಧೀಶ ಸೇರಿದಂತೆ ದೂರವಾಣಿ ವಿವರಗಳನ್ನು ಸೋರಿಕೆ ಮಾಡಿರುವುದು ಅತ್ಯಂತ ಗಂಭೀರವಾಗಿದೆ.ಇರ ವಿರುದ್ಧ ಎ ಐ ವೈ ಎಫ್ ಮಂಜೇಶ್ವರ ಮಂಡಲ ಸಮಿತಿಯ ವತಿಯಿಂದ ಹೊಸಂಗಡಿಯಲ್ಲಿ ಪ್ರತಿಭಟನಾ ಧರಣಿ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್ ಪೆಗಾಸಸ್ ಸರ್ಕಾರಿ ಸಂಸ್ಥೆಗಳಿಗೆ ಮಾತ್ರ ಸೇವೆ ಸಲ್ಲಿಸುತ್ತದೆ. ಆದ್ದರಿಂದ ಕೇಂದ್ರ ಸಚಿವರು ಸೇರಿದಂತೆ