Home Blog Left SidebarPage 233

ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಕುಸಿತ

ಉಡುಪಿ : ಉಡುಪಿ ಜಿಲ್ಲೆಗೆ ಹವಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜಿಲ್ಲೆಯೆಲ್ಲೆಡೆ ವ್ಯಾಪಕ ಮಳೆಯಾಗುತ್ತಿದೆ. ನಿನ್ನೆಯಿಂದ ಉಡುಪಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಡುಪಿ-ಮಣಿಪಾಲ ರಸ್ತೆ ಬದಿಯಲ್ಲಿ ಗುಡ್ಡ ಜರಿತ ಉಂಟಾಗಿದೆ. ನಿರಂತರ ಮಳೆಯಿಂದ ಮಣ್ಣು ಹದಗೊಂಡು ಮಣಿಪಾಲದ ಏರು ಪ್ರದೇಶದಲ್ಲಿ ಗುಡ್ಡಗಳು ರಸ್ತೆಯ ಮೇಲೆ

ಪಡುಬಿದ್ರಿಯ ಕಾಡಿಪಟ್ಣ ಪ್ರದೇಶದಲ್ಲಿ ತೀವೃಗೊಂಡ ಕಡಲ್ಕೊರೆತ

ಬೀಸಿದ ಭಾರೀ ಗಾಳಿ ಮಳೆಗೆ ಪಡುಬಿದ್ರಿ ಬೀಚ್ ಪಕ್ಕದ ಕಾಡಿಪಟ್ಣ ಶಂಕರ ಎಮ್.ಅಮೀನ್ ಮನೆ ಬಳಿ ಸುಮಾರು 50 ಮೀ. ಭಾಗದಲ್ಲಿ ಕಡಲ್ಕೊರೆತವುಂಟಾಗಿದ್ದು, ಸೊತ್ತು ಇನ್ನಷ್ಟು ಕಡಲು ಪಾಲಾಗುವ ಸಾಧ್ಯತೆ ಇದೆ. ಕಡಲಿ ತಡಿಗೆ ಅಪ್ಪಳಿಸುತ್ತಿರುವ ಅಬ್ಬರದ ತೆರೆಗಳಿಗೆ ಈಗಾಗಲೇ 4 ತೆಂಗಿನ ಮರಗಳು, ಪಡುಬಿದ್ರಿ ಬೀಚ್ ಅಭಿವೃದ್ಧಿ ಕಾಮಗಾರಿಯ ಭಾಗವಾಗಿರುವ ಒಂದು ಬೃಹತ್ ವಿದ್ಯುತ್ ಕಂಬವು ನೆಲಕಚ್ಚಿದೆ. ಇಲ್ಲಿನ ಅಭಿವೃದ್ಧಿ ಕಾಮಗಾರಿಯ ವೇಳೆ ಹಾಸಲಾಗಿದ್ದ ಹಾಲೋ ಬ್ಲಾಕ್ಸ್ ಅಂಗಳದ

ಕಾಪು : ಮಳೆಗೆ ಮನೆ ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ

ಪುರಸಭಾ ವ್ಯಾಪ್ತಿಯ ತೆಂಕಪೇಟೆಯಲ್ಲಿ ಮನೆಯೊಂದು ಕುಸಿದು ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಉಂಟಾಗಿದೆ. ಕಾಪು ತೆಂಕಪೇಟೆ ನಿವಾಸಿ ವಿಜಯಲಕ್ಷ್ಮಿ ಕಾಮತ್ ಅವರಿಗೆ ಸೇರಿದ ಹಳೆ ಹೆಂಚಿನಮನೆ ಭಾರೀ ಮಳೆಗೆ ಸಂಪೂರ್ಣ ಕುಸಿದು ಬಿದ್ದಿದೆ. ಮನೆಯಲ್ಲಿ ಯಾರೂ ವಾಸಿಸುತ್ತಿಲ್ಲವಾಗಿದ್ದು ಇದರಿಂದಾಗಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ .

ಉಡುಪಿ : ಕಾಲು ಜಾರಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲಕೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲು ನೆರವಾದರು. ಈ

ದ.ಕ ಜಿಲ್ಲೆ : ಮಳೆ ಹಿನ್ನಲೆ ಶಾಲಾ ಕಾಲೇಜುಗಳಿಗೆ ರಜೆ

ಜು.04 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅತಿಹೆಚ್ಚು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಜು.4ರ ಮಂಗಳವಾರ ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಶಾಲೆಗಳು‌ ಹಾಗೂ‌ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ರಜೆ ಘೋಷಿಸಿದ್ದಾರೆ.

ಶಾಲಾ ಕಾಲೇಜುಗಳಿಗೆ ರಜೆ ಕೊಡುವ ಜವಾಬ್ದಾರಿ ತಹಶೀಲ್ದಾರ್ ಗೆ: ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್

ದ.ಕ.ಜಿಲ್ಲೆಯಲ್ಲಿ ಸುರಿಯುತ್ತಿರುವ ಸತತ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆಗಳನ್ನು ಘೋಷಿಸುವ ಅಧಿಕಾರವನ್ನು ಆಯಾ ತಾಲೂಕಿನ ತಹಶೀಲ್ದಾರರಿಗೆ ನೀಡಲಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದ್ದಾರೆ. ಆಯಾ ಕ್ಷೇತ್ರದ ಶಿಕ್ಷಣಾಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು, ಕಾಲೇಜಿನ ಪ್ರಾಂಶುಪಾಲರಿಂದ ವರದಿ ತಯಾರಿಸಿ ತಹಶೀಲ್ದಾರರಿಗೆ ಸಲ್ಲಿಸಬೇಕು. ತಹಶೀಲ್ದಾರರು ಪ್ರತಿದಿನ ಬೆಳಗ್ಗೆ 6ಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಜೊತೆ ವೀಡಿಯೋ

ಬೀಡಿನಗುಡ್ಡೆಯಲ್ಲಿ ತೋಡಿಗೆ ಬಿದ್ದು ವ್ಯಕ್ತಿ ಮೃತ್ಯು

ಉಡುಪಿ : ದಾರಿಯಲ್ಲಿ ನಡೆದುಕೊಂಡು‌ ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು‌ ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು

ಸೇನೆ ಸೇರುವ ಕನಸುಗಳಿಗೆ ‘ಕೋಟಿ ಚೆನ್ನಯ’ ತರಬೇತಿ

ಉಡುಪಿ : ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕರ ಕನಸು. ಆದರೆ ಸೂಕ್ತ ಮಾಹಿತಿ ಹಾಗೂ ತರಬೇತಿಯ ಕೊರತೆಯಿಂದ ಕನಸು ನನಸಾಗೋದೆ ಇಲ್ಲ. ಇಂತಹ ದೇಶ ಸೇವೆಯ ಕನಸು ಹೊತ್ತ ಯುವಕರಿಗೆ ತರಬೇತಿ ನೀಡಿ, ಸೈನಿಕರಾಗಲು ಪ್ರೇರೆಪಿಸುತ್ತಿದೆ ಉಡುಪಿಯ ಕೋಟಿ ಚೆನ್ನಯ ಸೇನಾ ತರಬೇತಿ ಪೂರ್ವ ಸಂಸ್ಥೆ. ಇದು ಸೈಕರಾಗಿ ದೇಶ ಕಾಯಲು ಹೊರಟ ಯುವಕರಿಗೆ ತರಬೇತಿ ನೀಡುವ ಸೇನಾ ಪೂರ್ವ ತರಬೇತಿ ಶಾಲೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ

ಉಡುಪಿಯ ಹಳೆ ಜೈಲಿನ ನೆಲಸಮಕ್ಕೆ ಆದೇಶ : ಕಾಂತಾರ ಚಿತ್ರೀಕರಣಗೊಂಡ ಸ್ವಾತಂತ್ರ್ಯ ಪೂರ್ವದ ಜೈಲು

ಉಡುಪಿ : ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿ ನಗರದ ಹಳೆ ಸಬ್‌ಜೈಲು ಇನ್ನಿಲ್ಲದಂತಾಗುವಂತಿದೆ. ಕಾಂತಾರ ಸಿನಿಮಾದ ಕೆಲ ಭಾಗಗಳು ಚಿತ್ರೀಕರಣಗೊಂಡ, ಉಡುಪಿಯ ಏಕೈಕ ಪಾರಂಪರಿಕ ಕಟ್ಟಡದ ನೆಲಸಮಕ್ಕೆ ಇದೀಗ ಆದೇಶ ನೀಡಲಾಗಿದೆ. ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಪಾರಂಪರಿಕ ಜೈಲನ್ನು‌ ಕೆಡವಲು ಉಡುಪಿ ನಗರಸಭೆ ಮೂದಾಗಿರುವುದು, ಆರ್ಕಿಟೆಕ್ಟ್‌ಗಳು ಹಾಗೂ ಕಲಾವಿದರಿಂದ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ಉಡುಪಿ,

ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನ

ಉಜಿರೆ ಎಸ್ ಡಿ ಎಂ ಕಾಲೇಜು ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥ ಡಾ. ಭಾಸ್ಕರ ಹೆಗಡೆ ಅವರ ಪತ್ನಿ ಸುವರ್ಣ(49) ನಿಧನರಾಗಿದ್ದಾರೆ.ಸುವರ್ಣ ಅವರಿಗೆ ಮನೆಯಲ್ಲಿ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಷ್ಟರಲ್ಲಿ ಅವರು ಸಾವನ್ನಪ್ಪಿದ್ದಾರೆ. ಸುವರ್ಣ ಅವರು ಪತಿ ಭಾಸ್ಕರ್ ಹೆಗಡೆ, ಪುತ್ರ ಶಶಾಂಕ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ