ದ.ಕ. ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಬಳಂಜದಲ್ಲಿ ಶನಿವಾರ ಬೆಳಿಗ್ಗೆ 8.30ರವರೆಗೆ 24 ಗಂಟೆಗಳಲ್ಲಿ 12.90 ಸೆಂ.ಮೀ ಮಳೆಯಾಗಿದೆ. ಇದು ಜಿಲ್ಲೆಯಲ್ಲೇ ಅತ್ಯಧಿಕ. ಬೆಳ್ತಂಗಡಿ ತಾಲ್ಲೂಕಿನ ಹೊಸಂಗಡಿಯಲ್ಲಿ, 10.40 ಸೆಂ.ಮೀ., ಕುಕ್ಕೇಡಿಯಲ್ಲಿ 10.25 ಸೆಂ.ಮೀ. ಪಡಂಗಡಿ, ಮಾಲಾಡಿ ಮತ್ತು ಲಾಯಿಲದಲ್ಲಿ ತಲಾ 9.50 ಸೆಂ.ಮೀ.ಮಳೆಯಾಗಿದೆ. ಮಂಗಳೂರು ತಾಲ್ಲೂಕಿನ

ಸುಳ್ಯ : ಹೊಳೆ ದಾಟುವಾಗ ಹೊಳೆಗೆ ಬಿದ್ದು ವ್ಯಕ್ತಿ ನಾಪತ್ತೆ

ಸುಳ್ಯದ ಅಲೆಟ್ಟಿ ಎಂಬಲ್ಲಿ ವ್ಯಕ್ತಿ ಯೋರ್ವರು ಹೊಳೆ ದಾಟುವಾಗ ಹೊಳೆಗೆ ಬಿದ್ದು ನಾಪತ್ತೆಯಾಗಿರುವ ಘಟನೆ ನಡೆದಿದೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ ಸುಳ್ಯ ಪೊಲೀಸರೊಂದಿಗೆ ತೆರಳಿ ಹುಡುಕಾಟ ನಡೆಸಿದ್ದಾರೆ. ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿ, ಎಸ್‍ಡಿಆರ್‍ಎಫ್ ತಂಡ, ಸ್ಥಳೀಯ ಈಜುಗಾರರ ತಂಡ ಸುಳ್ಯ ಪೊಲೀಸರು ರಾತ್ರಿವರೆಗೂ ಹುಡುಕಾಟ ನಡೆಸಿದ್ದಾರೆ. ನಾಪತ್ತೆಯಾಗಿರುವ ವ್ಯಕ್ತಿ ಇನ್ನೂ ಪತ್ತೆಯಾಗಿರುವುದಿಲ್ಲ. ನಾಪತ್ತೆಯಾಗಿರುವ ವ್ಯಕ್ತಿ

ವಿನಯ್ ಕುಮಾರ್ ಸೊರಕೆ ರವರ ತಾಯಿ ಅಸೌಖ್ಯದಿಂದ ನಿಧನ || VINAY KUMAR SORAKE’S MOTHER PASSESD AWAY

ಕರ್ನಾಟಕ ಸರ್ಕಾರದ ಮಾಜಿ ಸಚಿವರು ಹಾಗೂ ಮಾಜಿ ಸಂಸದರು ಆದಂತಹ ವಿನಯ್ ಕುಮಾರ್ ಸೊರಕೆ ರವರ ತಾಯಿ ಸುನೀತಿ ಅಚ್ಯುತ ಸೊರಕೆ (91) ರವರು ಅಲ್ಪಕಾಲದ ಅಸೌಖ್ಯದಿಂದ ನಿಧನಹೊಂದಿದ್ದಾರೆ. ಇವರು ಮೂರು ಜನ ಪುತ್ರರು,ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು,ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ.ಇವರ ಅಂತ್ಯ ಸಂಸ್ಕಾರವನ್ನು ಇಂದು ಮದ್ಯಾಹ್ನ 1.30 ರ ನಂತರ ತಮ್ಮ ಸ್ವಗೃಹವಾದ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆ ಯಲ್ಲಿ ನಡೆಯುವುದು ಎಂದು ತಿಳಿಸಲಾಗಿದೆ.

ಕೆಂಚನಕೆರೆ : ಧರೆಗುರುಳಿದ ಭಾರೀ ಗಾತ್ರದ ಮರ || Kinnigoli

ಕಿನ್ನಿಗೋಳಿ-ಮುಲ್ಕಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ಬಳಿ ಬಾರಿ ಗಾತ್ರದ ಮರವೊಂದು ಬಿದ್ದು ಸಂಚಾರ ಅಸ್ತವ್ಯಸ್ತಗೊಂಡ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದೆ. ಮರವು ಟ್ರಾನ್ಸ್ಫಾರ್ಮರ್ ಮೇಲೆ ಬಿದ್ದು ಬಳಿಕ ರಸ್ತೆಗೆ ಬಿದ್ದಿದೆ. ಈ ಸಂದರ್ಭ ಸ್ಥಳದಲ್ಲಿ ಭೀಕರ ಶಬ್ದ ಉಂಟಾಗಿದ್ದು, ವಿದ್ಯುತ್ ಸಂಚಾರ ನಿಲುಗಡೆಗೊಂಡಿದ್ದರಿಂದ ಭಾರೀ ಅನಾಹುತ ತಪ್ಪಿದೆ.ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬಗಳು, ಟ್ರಾನ್ಸ್ಫಾರ್ಮರ್ ಹಾಗೂ ತಂತಿಗಳಿಗೆ ಹಾನಿಯಾಗಿದ್ದು ಕಿನ್ನಿಗೋಳಿ,

ಈ ಬಜೆಟ್ ಎಲ್ಲಾ ವರ್ಗದ ಜನರ ಪರವಾದ ಬಜೆಟ್ : ರಮನಾಥ ರೈ

BEST KARNATAKA BUDGET HAS EVER SEEN: RAMANATHA RAI ಸಿಎಂ ಸಿದ್ದರಾಮಯ್ಯರವರು ಮಂಡಿಸಿದ 2023-24ನೇ ಸಾಲಿನ ಬಜೆಟ್ ಈವರೆಗೆ ಕರ್ನಾಟಕದಲ್ಲಿ ಮಂಡನೆಯಾಗಿರುವ ಬಜೆಟ್’ಗಳ ಪೈಕಿ ಶ್ರೇಷ್ಠ ಬಜೆಟ್. ಈ ಬಜೆಟ್ ಅಪರೂಪದಲ್ಲೇ ಅಪರೂಪದ ಬಜೆಟ್. ಐದು ಗ್ಯಾರಂಟಿ ಯೋಜನೆಗಳಿಗೆ ಅನುದಾನ ಒದಗಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳ ಪೈಕಿ 76 ಪ್ರಣಾಳಿಕೆಗಳನ್ನು ಈ ಬಜೆಟ್ ನಲ್ಲಿ ಜಾರಿ ಮಾಡಿ ಘೋಷಣೆ ಮಾಡಲಾಗಿದೆ. ಈ ಬಜೆಟ್ ಎಲ್ಲಾ

ಮಂಗಳೂರು : ಎಚ್ಚರಿಕೆ ಕ್ರಮಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ಸೂಚನೆ

ಬಂಟ್ವಾಳದಲ್ಲಿ ಸಂಭವಿಸಿದ ಗುಡ್ಡ ಕುಸಿತ ಪ್ರಕರಣದಲ್ಲಿ ಪ್ರಾಣಹಾನಿ ಸಂಭವಿಸಿದಂತೆ ಜಿಲ್ಲೆಯಲ್ಲಿ ಇನ್ನು ಮುಂದೆ ಈ ರೀತಿಯ ಯಾವುದೇ ಪ್ರಕರಣಗಳು ಮರುಕಳಿಸಬಾರದು, ಈ ದಿಸೆಯಲ್ಲಿ ಗುಡ್ಡದ ಸಮೀಪದ ಅಪಾಯಕಾರಿ ಮನೆಗಳಲ್ಲಿ ವಾಸಿಸುತ್ತಿರುವವರನ್ನು ಕಾಳಜಿ ಕೇಂದ್ರಗಳು ಅಥವಾ ಸಂಬಂಧಿಕರ ಮನೆಗಳಿಗೆ ಸ್ಥಳಾಂತರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಸಂಸದರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಕಛೇರಿಯನ್ನು ವಾರ್ ರೂಂ ಆಗಿ ಮಾರ್ಪಾಡು ಮಾಡಲಾಗಿದೆ. ಮಳೆಯಿಂದ ತೊಂದರೆ ಉಂಟಾದಲ್ಲಿ ವಾರ್ ರೂಂ ನಿಂದ  ನೆರವಿನ ಸಹಾಯ ಹಸ್ತಕ್ಕಾಗಿ ಈ ಕೆಳಕಂಡ ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ. ವಾರ್ ರೂಮ್ (ಲ್ಯಾಂಡ್ ಲೈನ್): 0824-2448888  ಮೊ: 9606595356/ 9606595394

ಬಜೆಟ್ ಸುಳ್ಳು ಭರವಸೆಗಳ ಕಂತೆ : ನಳಿನ್‌ಕುಮಾರ್ ಕಟೀಲ್

ಮಂಗಳೂರು : ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸದೆ ರಾಜ್ಯದ ಜನತೆಯನ್ನು ವಂಚಿಸಿದ ಕಾಂಗ್ರೆಸ್ ಸರಕಾರ ಇದೀಗ ಸುಳ್ಳು ಭರವಸೆಗಳ ಬಜೆಟ್ ಮಂಡಿಸಿ ಮತ್ತೆ ಜನರ ವಂಚಿಸಲು ಪ್ರಯತ್ನಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಗ್ಯಾರಂಟಿಗಳ ಜಾರಿಗೆ 57,910 ಕೋಟಿ ರೂ. ವೆಚ್ಚ ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಆದರೆ ಆದಾಯ ಸಂಗ್ರಹದ ಬಗ್ಗೆ ಯಾವುದೇ ಸ್ಪಷ್ಟತೆ ಇಲ್ಲ. ನಿರುದ್ಯೋಗಿ ಪದವೀಧರರಿಗೆ ಮಾಸಿಕ ಭತ್ಯೆ

ವಿಟ್ಲ: ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ

ವ್ಯಕ್ತಿಯೋರ್ವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದಲ್ಲಿ ನಡೆದಿದೆ. ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪ್ರಶಾಂತ್ ಮೇಗಿನಪೇಟೆ ( 30) ಮೃತರು. ಕೌಟುಂಬಿಕ ಕಿರಿಕಿರಿ ಹಿನ್ನೆಲೆ ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತರು ಪತ್ನಿ, ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ (30ವ)ಕಾಣೆಯಾಗಿದ್ದಾರೆ

ಬೆಳುವಾಯಿ ಕರಿಯನಂಗಡಿ ನಿವಾಸಿ ಗೋಪಾಲ್ ನಾಯ್ಕ್ (30ವ) ಜು 2 ರಂದು ಕ್ರಿಕೆಟ್ ಆಡಿ ತಾಯಿ ಮನೆಗೆ ಹೋಗುವುದಾಗಿ ಹೇಳಿ ಮನೆಯಿಂದ ಹೋದವರು ಮರಳಿ ಮನೆಗೆ ಬಂದಿಲ್ಲ ಎಂದು ಅವರ ಪತ್ನಿ ದೀಕ್ಷಿತಾ ಮೂಡುಬಿದಿರೆ ಪೋಲಿಸರಿಗೆ ದೂರು ನೀಡಿದ್ದಾರೆ. ತಮ್ಮನ ಬೈಕ್ ನಲ್ಲಿ ತೆರಳಿ ಬೇಳುವಾಯಿಗೆ ಡ್ರಾಪ್ ಪಡೆದ ಅವರನ್ನು ನಂತರ ಫೋನ್ ಮೂಲಕ ಸಂಪರ್ಕಿಸಲು ಪ್ರಯತ್ನಿಸಿದರೂ ಪ್ರಯೋಜನವಾಗಿಲ್ಲ ಸಂಬಂಧಿಕರಲ್ಲಿ ಮತ್ತು ಗೆಳೆಯರಲ್ಲಿ ವಿಚಾರಿಸಿದ್ದರೂ ಸುಳಿವು ದೊರೆತ್ತಿಲ್ಲ ಎಂದು