ಮಾಡೆಲಿಂಗ್: ಆಕಾಶ್ ಪ್ರಭು ’ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ’ ಅಂತಿಮ ಸುತ್ತಿಗೆ ಆಯ್ಕೆ

ಮಂಗಳೂರು ಮೂಲದ ಮೆಕ್ಯಾನಿಕಲ್ ಇಂಜಿನಿಯರ್ ಆಕಾಶ್ ಪ್ರಭು ಅವರು ಈ ವರ್ಷ ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ ಫೈನಲಿಸ್ಟ್ (ಟಾಪ್ 10) ಆಗಿ ಅರ್ಹತೆ ಪಡೆದಿದ್ದು, ಪೋಲೆಂಡ್‌ನಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾರೆ. ಅಕಾಶ್ ಪ್ರಭು ಅವರು, ಮಿಸ್ಟರ್ ಇಂಡಿಯಾ 2017 ರ ಬೆಂಗಳೂರು ಫೈನಲಿಸ್ಟ್ ಆಗಿದ್ದರು. ಈ ವರ್ಷ ಅವರು ಮಿಸ್ಟರ್ ಸುಪ್ರಾನೇಶನಲ್ ಇಂಡಿಯಾ 2021 ರ

ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕುಂದಾಪುರ: ರಾಷ್ಟ್ರಾಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಅಥವಾ ಮುಖ್ಯಮಂತ್ರಿಗಳಲ್ಲಾಗಲಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನಿನ್ನೆ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯಕ್ರಮದಲ್ಲಿ ದೇವರಾಜು ಅರಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಂದರ್ಭದಲ್ಲಿ ಮುಖ್ಯಮಂತ್ರಿಯವರು, ಹೈಕಮಾಂಡ್ ನನಗೆ ಸಹಮತ ಕೊಟ್ಟು ನಾನೊಬ್ಬ

ಸರ್ಕಾರವನ್ನು ವಿಪಕ್ಷ ಎಚ್ಚರಿಸುವ ಕೆಲಸ ಮಾಡುತ್ತಿದೆ: ಮಾಜಿ ಸಚಿವ ರಮಾನಾಥ ರೈ

ಬಂಟ್ವಾಳ : ಕರೋನಾ ಮಹಾಮಾರಿ ಯಿಂದ ಜನರಿಗೆ ಸಾಕಷ್ಟು ತೊಂದರೆಯಾಗಿದ್ದು, ಪ್ರಮುಖ ವಿರೋಧ ಪಕ್ಷವಾದ ಕಾಂಗ್ರೆಸ್ ಜನರಿಗೆ ಅಗತ್ಯ ನೆರವು ನೀಡುವುದರ ಜೊತೆಯಲ್ಲಿ ಕಾಲಕಾಲಕ್ಕೆ ಸರ್ಕಾರವನ್ನು ಎಚ್ಚರಿಸುವ ಕೆಲಸವನ್ನು ನಡೆಸುತ್ತಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು. ಬಿ.ಸಿ.ರೋಡಿನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಮಾರಿಯನ್ನು ಸಮರ್ಥವಾಗಿ ಎದುರಿಸಲು ಯೋಜನೆ ರೂಪಿಸಬೇಕು ಎಂದರು.ರೆಡಿಸೀವರ್ ಹಾಗೂ ಬ್ಲಾಕ್ ಫಂಗಸ್‌ನ ಔಷಧಿಗಳು

ಪಡುಬಿದ್ರಿ ಬೀದಿ ವ್ಯಾಪಾರಿಗಳನ್ನು ಮೈದಾನಕ್ಕೆ ಸ್ಥಳಾಂತರಿಸಿದ ಗ್ರಾ.ಪಂ.

ಪಡುಬಿದ್ರಿ ಮಾರುಕಟ್ಟೆ ರಸ್ತೆಯಲ್ಲಿ ನಿರಂತರ ಸಾಮಾಜಿಕ ಅಂತರವಿಲ್ಲದೆ ವ್ಯಾಪಾರ ವಹಿವಾಟು ನಡೆಸುತ್ತಿದ್ದರಿಂದ ಬೀದಿಬದಿ ವ್ಯಾಪಾರಿಗಳನ್ನು ಗ್ರಾ.ಪಂ. ಪಕ್ಕದ ಸರ್ಕಾರಿ ಶಾಲಾ ಮೈದಾನಕ್ಕೆ ಸ್ಥಳಾಂತರಿಸಿದ್ದರೂ.. ಅಂಗಡಿ ಹೊಂದಿರುವ ತರಕಾರಿ ವ್ಯಾಪಾರಿಗಳು ರಸ್ತೆಯಲ್ಲೇ ತರಕಾರಿಗಳನ್ನು ಇಟ್ಟು ವ್ಯಾಪಾರನಡೆಸುತ್ತಿರುವ ಬಗ್ಗೆ ಜನರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಗ್ರಾ.ಪಂ. ಅಧ್ಯಕ್ಷ ರವಿ ಶೆಟ್ಟಿ, ಮುಖ್ಯ ಮಾರುಕಟ್ಟೆಯ ರಸ್ತೆಗೆ ಅಂಟಿಕೊಂಡೇ

ಮೈದಾನದ ಪ್ರವೇಶ ದಾರಿ ಬಂದ್ ಗ್ರಾಪಂನಿಂದ ಸಾಮರಸ್ಯ ಒಡೆಯುವ ಕೆಲಸ : ಎ.ಜತೀಂದ್ರ ಶೆಟ್ಟಿ ಆರೋಪ

ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಎ.ಜತೀಂದ್ರ ಶೆಟ್ಟಿ ಅಲಿಮಾರ್ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಸತತವಾಗಿ

ತೈಲ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ವತಿಯಿಂದ ಪ್ರತಿಭಟನೆ ನಡೆಸಿದರು.ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಪ್ರಧಾನಿ ಮೋದಿ ನೇತೃತ್ವದ ಸರಕಾರ

ಲಾಕ್ ಡೌನ್ ನಿಯಮ ಉಲ್ಲಂಘನೆ : 31 ವಾಹನಗಳ ಜಫ್ತಿ, 70 ಕೇಸು ದಾಖಲು

ಮೂಡುಬಿದಿರೆ : ಕಳೆದ ಮೂರು ದಿನಗಳಿಂದ ಬೆಳಿಗ್ಗೆ 6-10 ಗಂಟೆಯ ನಂತರ ಸುಮ್ಮನೆ ಕಾಲ ಕಳೆಯಲು ಮೂಡುಬಿದಿರೆ ಪೇಟೆಯಲ್ಲಿ ಅಡ್ಡಾದಿಡ್ಡಿ ಓಡಾಟ ಮಾಡಿ ಲಾಕ್ ಡೌನ್ ನಿಯಮವನ್ನು ಉಲ್ಲಂಘನೆ ಮಾಡುತ್ತಿದ್ದ 31 ವಾಹನಗಳನ್ನು ಮೂಡುಬಿದಿರೆ ಪೊಲೀಸರು ಜಫ್ತಿ ಮಾಡಿದ್ದು ಅಲ್ಲದೆ ಮಾಸ್ಕ್ ಧರಿಸದಿದ್ದ 70 ಜನರ ವಿರುದ್ಧ ಕೇಸು ದಾಖಲಿಸುವ ಮೂಲಕ ಕಾರ್ಯಚರಣೆಯನ್ನು ಬಿಗಿಗೊಳಿಸಿದ್ದಾರೆ. ಅಗತ್ಯ ವಸ್ತುಗಳ ಖರೀದಿಯ ಸಂದರ್ಭ ಬೆಳಿಗ್ಗೆ ಮೂಡುಬಿದಿರೆಯ ಪೇಟೆಯಲ್ಲಿ ಮತ್ತು

ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣ : ಆರೋಪಿಗಳ ರಕ್ಷಣೆಗೆ ಯಾರೂ ಮಧ್ಯಪ್ರವೇಶ ಮಾಡಿಲ್ಲ : ಸಚಿವ ಕೋಟ

ಕುಂದಾಪುರ: ಯಡಮೊಗೆ ಉದಯ್ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ರಕ್ಷಣೆಗೆ ನಮ್ಮ‌ ಶಾಸಕರಾಗಲಿ, ಸಂಸದರಾಗಲಿ ಮಂತ್ರಿಗಳಾಗಲಿ ಯಾರೂ ಮಧ್ಯಪ್ರವೇಶ ಮಾಡಿಲ್ಲ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಉದಯ್ ಗಾಣಿಗ ಕೊಲೆ ಪ್ರಕರಣದ ಆರೋಪಿಗಳಿಗೆ ಬಿಜೆಪಿ‌ ನಾಯಕರು ರಕ್ಷಣೆ ನೀಡುತ್ತಿದ್ದಾರೆ ಎಂಬ ಆರೋಪಗಳಿಗೆ ಅವರು ಕುಂದಾಪುರದ ಪ್ರವಾಸಿ ಮಂದಿರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.ಕಾನೂನು ಎಲ್ಲರಿಗೂ ಒಂದೇ.

ಉದಯ್ ಕುಟುಂಬಕ್ಕೆ ನ್ಯಾಯ ಕೊಡಿಸಿ: ಕೆ. ಗೋಪಾಲ ಪೂಜಾರಿ

ಕುಂದಾಪುರ: ಅನ್ಯಾಯಗಳ ವಿರುದ್ದ ಧ್ವನಿ ಎತ್ತುತ್ತಿದ್ದ ಉದಯ್ ಗಾಣಿಗ ಅವರನ್ನು ಕಳೆದ ಕೆಲ ದಿನಗಳಿಂದ ಹೊಂಚು ನಡೆಸಿ ಭೀಕರವಾಗಿ ಕೊಲೆಗೈಯ್ಯಲಾಗಿದೆ. ಉದಯ್ ಕೊಲೆಯಲ್ಲಿ ಭಾಗಿಯಾದ ಎಲ್ಲರಿಗೂ ಶಿಕ್ಷೆಯಾಗಬೇಕು. ಅವರ ಕುಟುಂಬಕ್ಕೆ ಸರ್ಕಾರ ಪರಿಹಾರ ನೀಡಬೇಕು ಎಂದು ಮಾಜಿ ಶಾಸಕ ಕೆ ಗೋಪಾಲ ಪೂಜಾರಿ ಹೇಳಿದರು. ಅವರು ಹೆಮ್ಮಾಡಿ ಸಮೀಪದ ಕಟ್‌ಬೇಲ್ತೂರು ನಿವಾಸದಲ್ಲಿ ಕರೆಯಲಾದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೊಳವೆ ಬಾವಿಗೆ ಎನ್‌ಓಸಿ ಕೊಡಲು ನಿರಾಕರಿಸಲಾಗಿದೆ.

ಕೇಂದ್ರ ಸಚಿವ ಡಿವಿಎಸ್ ಭೇಟಿಯಾದ ಸಚಿವ ಕೋಟ: ಲಸಿಕೆ ಕುರಿತು ಚರ್ಚೆ

ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರಿಂದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ಭೇಟಿ ಮಾಡಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಕುರಿತು ಚರ್ಚೆ ನಡೆಸಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಕೋವಿಡ್ – 19 ಲಸಿಕೆ ಕೊರತೆ ಹಿನ್ನಲೆಯಲ್ಲಿ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ ವಿ ಸದಾನಂದ ಗೌಡರನ್ನು ದಕ್ಷಿಣ ಕನ್ನಡ ಜಿಲ್ಲಾ