ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಹಾಗೂ ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಹಯೋಗದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.

ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷರಾದ ಜಯಕರ ಶೆಟ್ಟಿ ಮತ್ತು ವಿದ್ಯಾಲಕ್ಷೀ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ ಕಾರ್ಯಕ್ರಮ ಉದ್ಘಾಟಿಸಿದರು.

ರಕ್ತದಾನ ಶಿಬಿರದಲ್ಲಿ ನೂರಕ್ಕೂ ಅಧಿಕ ವಿದ್ಯಾರ್ಥಿಗಳು, ಉಪನ್ಯಾಸಕರು ಮತ್ತು ಉಪನ್ಯಾಸಕೇತರರು ರಕ್ತದಾನವನ್ನು ನೀಡಿದರು.

ಕುಂದಾಪುರ ಎಚ್ ಡಿ ಎಫ್ ಸಿ ಬ್ಯಾಂಕ್ ನ ಪ್ರತಿನಿಧಿಯಾದ ಶ್ರೀಮತಿ ಮಮತಾ ಹಂದೆ , ಸತ್ಯನಾರಾಯಣ ಪುರಾಣಿಕ ಹಾಗೂ ವಿದ್ಯಾಲಕ್ಷ್ಮೀ ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ, ನಿರ್ದೇಶಕಿಯಾದ ಶ್ರೀಮತಿ ಮಮತಾ, ಉಪಪ್ರಾಂಶುಪಾಲರಾದ ಕಾಲೇಜು ಘಟಕದ ರೆಡ್ ಕ್ರಾಸ್ ಸಂಚಾಲಕಿಯಾದ ಶ್ರೀಮತಿ ಶೈಲಾ, ಕಾಲೇಜು ರೆಡ್ ಕ್ರಾಸ್ ನ ನಾಯಕನಾದ ಶ್ರೀಧರ್ ವಿದ್ಯಾರ್ಥಿ ಸಂಚಾಲಕರಾದ ಸ್ಟಿವರ್ಡ್,ಅವಿನಾಶ್ , ವರ್ಷ ಹಾಗೂ ಎಲ್ಲಾ ಉಪನ್ಯಾಸಕರು ಮತ್ತು ಉಪನ್ಯಾಸಕೇತರರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related Posts

Leave a Reply

Your email address will not be published.