HomeFresh Newsಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯಲ್ಲಿ ರಕ್ತದಾನ ಶಿಬಿರ

ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಿದ್ದರು.

ಫಾದರ್ ಮುಲ್ಲರ್ ಸಂಸ್ಥೆಯ ಇಮ್ಯುನೊ-ಹೆಮಟಾಲಜಿ ಮತ್ತು ರಕ್ತ ವರ್ಗಾವಣೆ ವಿಭಾಗ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದೊಂದಿಗೆ ಮುಲ್ಲರ್ ಮಿನಿ ಹಾಲ್‌ನ ಕನ್ವೆನ್ಷನ್ ಸೆಂಟರ್‌ನಲ್ಲಿ ರಕ್ತದಾನ ಶಿಬಿರ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು.

ಇದೇ ವೇಳೆ ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಯ ನಿರ್ದೇಶಕರಾದ ರೆವರೆಂಡ್ ಫಾದರ್ ರಿಚರ್ಡ್ ಅಲೋಶಿಯಸ್ ಕೊಯಿಲೊ ಅವರು, ರಕ್ತನಿಧಿಯಲ್ಲಿ ರಕ್ತದ ಕೊರತೆ ಇದ್ದಾಗ, ವಿದ್ಯಾರ್ಥಿಗಳು ರಕ್ತದಾನ ಮಾಡುವ ಮೂಲಕ ನಿಸ್ವಾರ್ಥ ಸೇವೆಯನ್ನು ಸಲ್ಲಿಸಿರುವ ಕಾರ್ಯ ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಯೂತ್ ರೆಡ್‌ಕ್ರಾಸ್ ಘಟಕದ ಮುಖ್ಯಸ್ಥರಾದ ಡಾ. ನಿಶಾಂತ್ ಕೃಷ್ಣ ಕೆ, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ಆಡಳಿತಾಧಿಕಾರಿ ರೆ.ಫಾ. ಜೀವನ್ ಜಾರ್ಜ್ ಸೀಕ್ವೇರಾ, ಸಹಾಯಕ ಆಡಳಿತಾಧಿಕಾರಿ ರೆ.ಫಾ ನೆಲ್ಸನ್ ಧೀರಜ್ ಪೈಸ್, ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಆಂಟನಿ ಸಿಲ್ವನ್ ಡಿಸೋಜಾ ಮತ್ತಿತರರು ಉಪಸ್ಥಿತರಿದ್ದರು.

ಐಎಚ್‌ಬಿಟಿ ಮುಖ್ಯಸ್ಥ ಡಾ.ಕಿರಣ ಪೈಲೂರು ಸ್ವಾಗತಿಸಿದರು. ಎಫ್‌ಎಂಎಂಸಿಯ ಯೂತ್ ರೆಡ್‌ಕ್ರಾಸ್ ಘಟಕದ ಅಧ್ಯಕ್ಷ ಡಾ. ನಿಶಾಂತ್ ಕೃಷ್ಣ ಕೆ ವಂದಿಸಿದರು. ವಿದ್ಯಾರ್ಥಿಗಳಾದ ಜೋನ್ನಾ ಜಾನ್ ಮತ್ತು ಬ್ಲೆಸಿನ್ ಬೈಜು ಕಾರ್ಯಕ್ರಮ ನಿರೂಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments