HomeFresh Newsಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ "ನೋಶ್ ಅನ್ವೇಶನ್" ಕಾರ್ಯಕ್ರಮ

ಬ್ರಹ್ಮಾವರ : ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿ “ನೋಶ್ ಅನ್ವೇಶನ್” ಕಾರ್ಯಕ್ರಮ

ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಇಲ್ಲಿನ ಆಹಾರ ತಂತ್ರಜ್ಞಾನ ವಿಭಾಗದಿಂದ ” ನೋಶ್ ಅನ್ವೇಶನ್” ಎನ್ನುವ ಕಾರ್ಯಕ್ರಮ ನಡೆಯಿತು “ನೋಶ್” ಎಂದರೆ ಆಹಾರ . ನವೀನವಾದ ಮಾದರಿಯ ಹೊಸ ಉತ್ಪನ್ನಗಳನ್ನು ತಯಾರಿಸುವ ಕುರಿತಾಗಿ ಮಾಹಿತಿ ನೀಡಲಾಯಿತು.

ವಿದ್ಯಾರ್ಥಿಗಳಿಗೆ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಸ್ಪರ್ಧೆಯನ್ನು ಏರ್ಪಡಿಸಿ ಬಹುಮಾನ ವಿತರಣೆಯನ್ನು ನಡೆಸಲಾಯಿತು. ಈ ಕಾರ್ಯಕ್ರಮಕ್ಕೆ ಅತಿಥಿಯಾಗಿಯಾಗಿ ಶ್ರೀ ವೆರ್ಲಿನ್ ಜಾನ್ ಗೋವೇಸ್ ಪ್ರಾವಿಟ್ ಫುಡ್ಸ್ ಪ್ರೈವೇಟ್ ಲಿಮಿಟೆಡ್ ಮಂಗಳೂರು ಇವರು ವಿದ್ಯಾರ್ಥಿಗಳಿಗೆ ಆಹಾರ ತಂತ್ರಜ್ಞಾನ ವಿಭಾಗವನ್ನು ಆಯ್ಕೆ ಮಾಡಿಕೊಳ್ಳುವುದರ ಮೂಲಕ ಇರುವ ಉಪಯೋಗ ,ಭವಿಷ್ಯದಲ್ಲಿ ಸಿಗುವ ಉದ್ಯೋಗದ ಕುರಿತು, ಯಾವ ರೀತಿ ಹೊಸ ಆಹಾರ ಉತ್ಪನ್ನಗಳನ್ನು ತಯಾರಿಸುವ ಮಾಹಿತಿ ನೀಡಿದರು .ಇದರ ಜೊತೆಗೆ ವಿದ್ಯಾರ್ಥಿಗಳೇ ರಚಿಸಿದ ಭಿತ್ತಿ ಪತ್ರಿಕೆಯ ಅನಾವರಣವಾಯಿತು. ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಮಣ್ಯ ,ಹಾಗೂ ಕಾಲೇಜಿನ ನಿರ್ದೇಶಕಿಯಾದ ಶ್ರೀಮತಿ ಮಮತಾ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ಶ್ರೀಮತಿ ಸುಜಾತ ,ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಶ್ರೀಮತಿ ವಿನಂತಿ, ವಿದ್ಯಾರ್ಥಿ ಪ್ರತಿನಿಧಿಯಾಗಿ ಕ್ರೂಸ್ ,ನಿಶ್ಚಿತಾ, ಎಲ್ಲಾ ಉಪನ್ಯಾಸಕರು ಹಾಗೂ ಉಪನ್ಯಾಸಕೇತರರು ಆಹಾರ ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಆಹಾರ ತಂತ್ರಜ್ಞಾನದ ವಿದ್ಯಾರ್ಥಿ ಕೈರುನಿಸಾ ನಿರೂಪಿಸಿದರೆ, ಪೃಥ್ವಿ ಸ್ವಾಗತಿಸಿ , ವಿದ್ಯಾರ್ಥಿನಿ ಆ್ಯನಂ ವಂದಿಸಿದರು.

add- Suraj
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments