ಬ್ರಹ್ಮಾವರ : ವಿದ್ಯಾಲಕ್ಷ್ಮೀ ಕಾಲೇಜಿನಲ್ಲಿ ಪೋಸ್ಟರ್ ಮೇಕಿಂಗ್ ಸ್ಪರ್ಧೆ
ಬ್ರಹ್ಮಾವರ :ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಇಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ವತಿಯಿಂದ ವಿದ್ಯಾರ್ಥಿಗಳಿಗೆ “ಪೋಸ್ಟರ್ ಮೇಕಿಂಗ್” ಸ್ಪರ್ಧೆಯನ್ನು ನಡೆಸಲಾಯಿತು. ವಿದ್ಯಾರ್ಥಿಗಳು ಸಂಭ್ರಮದಿಂದ ಭಾಗವಹಿಸಿ “ಮಾನವೀಯತೆ” ಎಂಬ ವಿಷಯದ ಕುರಿತು ಪೋಸ್ಟರ್ ಗಳನ್ನು ವಿಭಿನ್ನವಾಗಿ ತಯಾರಿಸಿದರು . ಕಾಲೇಜಿನ ಸಂಸ್ಥಾಪಕರಾದ ಶ್ರೀ ಸುಬ್ರಹ್ಮಣ್ಯ. ನಿರ್ದೇಶಕಿ ಶ್ರೀಮತಿ ಮಮತಾ, ಪ್ರಾಂಶುಪಾಲರಾದ ಶ್ರೀ ರವಿರಾಜ್ ಶೆಟ್ಟಿ ಸಂಸ್ಥೆಯ ಎಲ್ಲಾ ಉಪನ್ಯಾಸಕರು, ಉಪನ್ಯಾಸಕ್ಕೇತರರು ಹಾಗೂ ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.