HomeFresh Newsಮಣಿಪುರದ ಹಿಂಸಾಚಾರ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರದ ಹಿಂಸಾಚಾರ ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಹಿಂಸಾಚಾರವನ್ನು ಖಂಡಿಸಿ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬ್ರಹ್ಮಾವರದ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್ ಅವರು, ಕೇಂದ್ರದ ಬಿಜೆಪಿ ಸರಕಾರ ಬೇಟಿ ಬಚಾವೋ ಎಂದು ಹೇಳಿ ಅಧಿಕಾರಕ್ಕೆ ಬಂದು, ಇದೀಗ ಬೇಟಿಕೋ ಮಾರ್‍ಡಾಲೋ ಮಾಡುತ್ತಿದೆ. ಬಿಜೆಪಿಯವರು ಮುಂದಿನ ಲೋಕಸಭಾ ಚುನಾವಣೆಯ ಸಿದ್ದತೆಗೆ ಮಣಿಪುರದಲ್ಲಿ ಮತ ರಾಜಕೀಯ ಮಾಡುತ್ತಿದ್ದಾರೆ, ಇದನ್ನು ಕಾಂಗ್ರೆಸ್ ಬಲವಾಗಿ ಖಂಡಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಿನಕರ್ ಹೇರೂರ್, ಪಕ್ಷದ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಬಿ. ಭುಜಂಗ ಶೆಟ್ಟಿ, ನಿತ್ಯಾನಂದ ಶೆಟ್ಟಿ ಹಾರಾಡಿ, ಮೈರ್ಮಾಡಿ ಸುಧಾಕರ ಶೆಟ್ಟಿ, ಡಾ. ಸುನೀತಾ ಶೆಟ್ಟಿ, ಪ್ರಖ್ಯಾತ್ ಶೆಟ್ಟಿ, ಮಲ್ಲಿಕಾ ಬಾಲಕೃಷ್ಣ ಪೂಜಾರಿ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments