ಬ್ರಹ್ಮಾವರದಲ್ಲಿ ಭಾರೀ ಮಳೆಗೆ ಮನೆ ಕುಸಿತ

ಬ್ರಹ್ಮಾವರದಲ್ಲಿ ಕಳೆದ ಕೆಲವು ದಿನದಿಂದ ಸುರಿಯುತ್ತಿರುವ ಭಾರೀ ಮಳೆಗೆ ಬ್ರಹ್ಮಾವರ ರಥ ಬೀದಿಯಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಬಳಿ ಇರುವ ಮನೆಯೊಂದು ಕುಸಿದು ಬಿದ್ದಿದೆ.

ಗೋಪಾಲ ಪೂಜಾರಿ ಎನ್ನುವವರ ಮನೆಯು ಮಳೆಗೆ ಕುಸಿದು ಬಿದ್ದು ಸಂಪೂರ್ಣ ಹಾನಿಯಾಗಿದೆ. ಘಟನಾ ಸ್ಥಳಕ್ಕೆ ಬ್ರಹ್ಮಾವರ ತಾಲೂಕು ತಹಶೀಲ್ದಾರ್ ರಾಜಶೇಖರ ಮೂರ್ತಿ ಕಂದಾಯ ನೀರೀಕ್ಷಕ ಲಕ್ಷ್ಮೀ ಮೀನಾರಾಯಣ ಭಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆ ಕುಸಿತಗೊಂಡ ಸಂದರ್ಭದಲ್ಲಿ ಗೋಪಾಲ ಪೂಜಾರಿಯವರ ಮನೆಯಲ್ಲಿ ಯಾರೂ ಇಲ್ಲದ ಕಾರಣ ಜೀವ ಹಾನಿ ಸಂಭವಿಸಿಲ್ಲ.
