ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬೆಳಗ್ಗಿನ ಉಪಾಹಾರ ಪ್ರಸಾದ ಯೋಜನೆಗೆ ಚಾಲನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಶ್ರೀ ದೇಗುಲಕ್ಕೆ ಆಗಮಿಸುವ ಭಕ್ತರಿಗೆ ಬೆಳಗ್ಗಿನ ಉಪಾಹಾರ ಪ್ರಸಾದದ ವ್ಯವಸ್ಥೆ ಯೋಜನೆ ಇಂದಿನಿಂದ ವಿದ್ಯುಕ್ತವಾಗಿ ಆರಂಭವಾಯಿತು.

ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಶ್ರೀಗಳಾದ ಡಾl ವಿದ್ಯಾಪ್ರಸನ್ನ ಶ್ರೀಗಳು ದೀಪ ಬೆಳಗಿಸಿ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು.

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, . ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಸುಬ್ರಹ್ಮಣ್ಯ ಗ್ರಾ.ಪಂ ಅಧ್ಯಕ್ಷೆ ಶ್ರೀಮತಿ ಸುಜಾತ ಕಲ್ಲಾಜೆ, ಬೆಂಗಳೂರಿನ ನಾಗಭೂಷಣ್ ಗುರೂಜಿ, ಮಾಜಿ ಸಚಿವ ರಮಾನಾಥ ರೈ, ವ್ಯವಸ್ಥಾಪನಾ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ದ.ಕ ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ ಜಯರಾಮ, ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಭಿಲಾಷ್ ಪಿ.ಕೆ, ಕಡಬ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಸುಧೀರ್ ಶೆಟ್ಟಿ, ಅರೆಭಾಷೆ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷ ಡಾ. ಕೆ.ವಿ ರೇಣುಕಾ ಪ್ರಸಾದ್,ಡಾ. ಜ್ಯೋತಿ ಆರ್ ಪ್ರಸಾದ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಡಾ. ರಘು, ಅಶೋಕ್ ನೆಕ್ರಾಜೆ, ಶ್ರೀಮತಿ ಲೀಲಾ ಮನಮೋಹನ್, ಅಜಿತ್ ಕುಮಾರ್,
ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯರಾದ ಸತೀಶ್ ಕೂಜುಗೋಡು, ಅಚ್ಚುತ ಆಲ್ಕಬೆ, ಲೋಲಾಕ್ಷ ಕೈಕಂಬ, ಪವನ್ ಎಂ.ಡಿ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಾಹಣಾಧಿಕಾರಿ ಯೇಸುರಾಜ್,
ಮಾಜಿ ವ್ಯವಸ್ಥಾಪನಾ ಸದಸ್ಯ ಬಾಲಕೃಷ್ಣ ಬಳ್ಳೇರಿ, ಕೃಷ್ಣಮೂರ್ತಿ ಭಟ್, ಮಾಧವ ದೇವರಗದ್ದೆ, ಕೆ.ಎಸ್.ಎಸ್ ಕಾಲೇಜು ಪ್ರಾಂಶುಪಾಲ ದಿನೇಶ್ ಪಿ.ಟಿ, ಎಸ್ ಎಸ್.ಪಿ.ಯು.ಸಿ ಪ್ರಾಂಶುಪಾಲ ಸೋಮಶೇಖರ್, ಮುಖಂಡರುಗಳಾದ ಜಿ. ಕೃಷ್ಣಪ್ಪ, ಗ್ರಾ.ಪಂ ಸದಸ್ಯೆ ಸವಿತಾ ಭಟ್, ಶಿವರಾಮ ನೆಕ್ರಾಜೆ, ಕಿಶೋರ್ ಅರಂಪಾಡಿ, ಶಿವರಾಮ ರೈ, ಕಿರಣ್ ಬುಡ್ಲೆಗುತ್ತು, ಸುಬ್ರಹ್ಮಣ್ಯ ರಾವ್, ಗೋಪಾಲ ಎಣ್ಣೆಮಜಲು, ದಿನೇಶ್ ಎಣ್ಣೆಮಜಲು ಮತ್ತಿತರರು ಉಪಸ್ಥಿತರಿದ್ದರು.
