HomeFresh Newsಪ್ರಚಂಡ ಬಹುಮತದಿಂದ ಬಿ. ವೈ ರಾಘವೇಂದ್ರ ಗೆಲುವು ನಿಶ್ಚಿತ : ಶಾಸಕ ಗುರುರಾಜ್ ಗಂಟಿಹೊಳೆ ವಿಶ್ವಾಸ

ಪ್ರಚಂಡ ಬಹುಮತದಿಂದ ಬಿ. ವೈ ರಾಘವೇಂದ್ರ ಗೆಲುವು ನಿಶ್ಚಿತ : ಶಾಸಕ ಗುರುರಾಜ್ ಗಂಟಿಹೊಳೆ ವಿಶ್ವಾಸ

ಬಿಜೆಪಿ ಪಕ್ಷ ಕಾರ್ಯಕರ್ತರಿಂದ ಬೆಳೆದು ನಿಂತ ಪಕ್ಷವಾಗಿದೆ. ಪ್ರತಿ ಕಾರ್ಯಕರ್ತನು ಪಕ್ಷದ ಬೆನ್ನಲುಬಾಗಿದ್ದಾರೆ. ಸಂಘರ್ಷದ ರಾಜಕಾರಣಕ್ಕೆ ಅವಕಾಶ ಕೊಟ್ಟಿಲ್ಲ ಆದರೆ ಬೈಂದೂರು ಕ್ಷೇತ್ರದಲ್ಲಿ ಕೆಲವು ಕಾಂಗ್ರೆಸ್ ನಾಯಕರು ಸಣ್ಣ ಮಟ್ಟದ ರಾಜಕೀಯ ಮಾಡುತ್ತಿದ್ದಾರೆ ಎಂದು ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.

ಅವರು ಬೈಂದೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಿಜೆಪಿ ಕಾರ್ಯಕರ್ತರನ್ನು ಹೆದರಿಸುವ ಪ್ರಯತ್ನ ಮತ್ತು ಅಧಿಕಾರದ ಅವಕಾಶ ಉಪಯೋಗಿಸಿಕೊಂಡು ಒತ್ತಡ ಹೇರುತ್ತಿರುವ ಪ್ರಯತ್ನ ಗಮನಕ್ಕೆ ಬಂದಿದೆ. ಕಾರ್ಯಕರ್ತರಿಗೆ ತೊಂದರೆಯಾದರೆ ನೇರ ನಾಯಕರಿಗೆ ಸವಾಲೆಸೆಯಲು ಸಿದ್ದರಿದ್ದೇವೆ. ತೊಂದರೆಯಾಗುವ ರಾಜಕೀಯ ಬೇಡ ಎನ್ನುವುದು ನನ್ನ ಆಶಯ. ಸಂಸದ ಬಿ.ವೈ ರಾಘವೇಂದ್ರ ಮೂರು ಸಾವಿರ ಕೋಟಿ ಅನುದಾನ ಬೈಂದೂರು ಕ್ಷೇತ್ರಕ್ಕೆ ನೀಡಿದ್ದಾರೆ. ರಾಜ್ಯದ ಕೇಂದ್ರ ಸರಕಾರದ ಯೋಜನೆಗಳನ್ನು ತರುವಲ್ಲಿ ದೇಶದಲ್ಲೆ ಮಾದರಿ ಸಂಸದರಾಗಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಬೈಂದೂರು ಬಿಜೆಪಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ,ಚುನಾವಣಾ ಉಸ್ತುವಾರಿಗಳಾದ ಬಾನು ಪ್ರಕಾಶ್ ಜೀ, ಬಿಜೆಪಿ ಮುಖಂಡರಾದ ಅಶೋಕ ಮೂರ್ತಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬೈಂದೂರು ಬಿಜೆಪಿ ಮಂಡಲದ ಕಾರ್ಯದರ್ಶಿ ಮಹೇಂದ್ರ ಪೂಜಾರಿ, ಉಮೇಶ ಕಲ್ಗದ್ದೆ, ಬಂದೂರು ಬಿಜೆಪಿ ಮಂಡಲದ ಕೋಶಾಧಿಕಾರಿ ಗಣೇಶ ಗಾಣಿಗ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments