ಶಿರೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳವು

: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು, 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ. ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು ಒಡೆಯುತ್ತಿರುವುದನ್ನು ನೋಡಿ ಮನೆಯವರು ಕೂಗಿದ ಬಳಿಕ ಕಳ್ಳರು ಪರಾರಿಯಾಗಿದ್ದಾರೆ.

byndoor robbery

ಕೆಲವೇ ದಿನಗಳ ಹಿಂದೆ ಇದೇ ಭಾಗದಲ್ಲಿ ಸಂಜೆ ವೇಳೆ ಸುಮಾರು 35 ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯದ್ದ ಬೆನ್ನಲೇ ಈ ರೀತಿ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಶಿರೂರಿನಲ್ಲಿ ಹೆಚ್ಚುತ್ತಿರುವ ಗಾಂಜಾ ಪ್ರಕರಣ,ಅನಧೀಕೃತ ಚಟುವಟಿಕೆಗಳು ಇಂತಹ ಪ್ರಕರಣಕ್ಕೆ ಇನ್ನಷ್ಟು ದಾರಿ ಮಾಡಿಕೊಡುತ್ತಿದೆ. ಹೀಗಾಗಿ ಆರಕ್ಷಕ ಇಲಾಖೆ ಅನಧೀಕೃತ ಚಟುವಟಿಕೆಗೆ ಕಡಿವಾಣ ಹಾಕುವ ಜೊತೆಗೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕೆಂಬುವುದು ಸಾರ್ವಜನಿಕರ ಅಭಿಪ್ರಾಯವಾಗಿದೆ. ಬೈಂದೂರು ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.

manju shree silks and sarees

Related Posts

Leave a Reply

Your email address will not be published.