ಬೈಂದೂರು : ಸರ್ಕಾರಿ ಶಾಲೆಯ ಮೇಲ್ಚಾವಣಿ ಕುಸಿತ, ಶಾಲೆಗೆ ರಜೆಯಿದ್ದ ಕಾರಣ ತಪ್ಪಿದ ದೊಡ್ಡ ದುರಂತ

ಬೈಂದೂರು ವ್ಯಾಪ್ತಿಯಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಡುವರಿ ಗ್ರಾ.ಪಂ ವ್ಯಾಪ್ತಿಯ ತಾರಾಪತಿ ಶಾಲೆಯ ಮೇಲ್ಚಾವಣೆ ಕುಸಿದು ಬಿದ್ದಿದೆ. ಶಾಲೆಗೆ ರಜೆ ಇದ್ದ ಕಾರಣದಿಂದ ಪ್ರಾಣಹಾನಿ ಸಂಭವಿಸಿಲ್ಲ.

ಕನ್ನಡ ಮಾಧ್ಯಮ ಶಾಲೆಯ ಅಭಿವೃದ್ದಿಗೆ ಸರಕಾರ ಹಲವು ಯೋಜನೆಗಳನ್ನು ನೀಡುವ ಭರವಸೆ ನೀಡಿದರೂ ಕೂಡ ಅಧಿಕಾರಿಗಳ ನಿರ್ಲಕ್ಷತನದಿಂದ ಇಂತಹ ಘಟನೆಗಳು ನಡೆಯುತ್ತಿರುವುದು ಪಾಲಕರಿಗೆ ಆತಂಕ ಉಂಟು ಮಾಡುತ್ತಿದೆ. ಕುಸಿದ ಬಳಿಕ ಎಚ್ಚೆತ್ತುಕೊಳ್ಳುವುದಕ್ಕಿಂತ ಮುಂಜಾಗೃತೆ ವಹಿಸುವ ಇಚ್ಚಾಶಕ್ತಿ ಅಧಿಕಾರಿಗಳಿಗೆ ಇರಬೇಕು ಎಂದು ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿದೆ.

ಶಾಲಾ ಮುಖ್ಯೋಪಾಧ್ಯಾಯರಾದ ಆನಂದ ಗಾಣಿಗ ಮಾತನಾಡಿ, ಶಿಥಿಲಾವಸ್ಥೆಯಲ್ಲಿದ್ದ ಶಾಲಾ ಕಟ್ಟಡ ತೆರವುಗೊಳಿಸಬೇಕೆಂದು ಇಂಜಿನಿಯರ್ ವರದಿ ನೀಡಿದರು ಸಹ ಅಧಿಕಾರಿಗಳು ಗಮನ ಹರಿಸಿಲ್ಲ. ಕೆಲವು ಸಮಯದ ಹಿಂದೆ ಈ ಕಟ್ಟಡದಲ್ಲಿ ತರಗತಿ ಮಾಡುತ್ತಿದ್ದು ಅಪಾಯ ಅರಿತ ಸ್ಥಳೀಯರು ಈ ಕಟ್ಟಡದಲ್ಲಿ ತರಗತಿ ನಡೆಸದಂತೆ ಸೂಚಿಸಿದ್ದಾರೆ. ಶಾಲೆಯ ರಂಗಮಂಟಪದಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದೆವು. ಆದಷ್ಟು ಬೇಗ ಕಟ್ಟಡ ನಿರ್ಮಾಣ ಮಾಡಬೇಕಾಗಿ ಸಂಬಂಧಪಟ್ಟ ಅಧಿಕಾರಿಗೆ ಮನವಿ ಸಲ್ಲಿಸಿದರು.

ಘಟನೆ ನಡೆದ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥ್ ಎಂ, ಪಟ್ಟಣ ಪಂಚಾಯತ್ ನಿರ್ವಹಣಾಧಿಕಾರಿ ನವೀನ್, ಬೈಂದೂರು ಠಾಣಾಧಿಕಾರಿ ನಿರಂಜನ್ ಗೌಡ, ರಾಜೇಂದ್ರ ಉಪ್ಪುಂದ , ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

Related Posts

Leave a Reply

Your email address will not be published.