HomeFresh Newsಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭ

ಬೈಂದೂರು ಬಂಟರ ಯಾನೆ ನಾಡವರ ಸಂಘದ ನೂತನ ಪದಾಧಿಕಾರಿಗಳ ಪದಪ್ರದಾನ ಸಮಾರಂಭವು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ನಡೆಯಿತು.ಬೈಂದೂರು ಬಂಟರ ಯಾನೆ ನಾಡವರ ಸಂಘದ ಸಭಾಭವನದಲ್ಲಿ ಈ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ, ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿವೇತನ ವಿತರಣೆ ನಿವೃತ್ತ ಶಿಕ್ಷಕರನ್ನು ಸನ್ಮಾನ ಕಾರ್ಯಕ್ರಮವನ್ನು ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟಿಸಿದರು,

ನಂತರ ಮಾತನಾಡಿದ ಅವರು, ಬಂಟ ಸಮಾಜ ಇವತ್ತು ಜಾಗತಿಕ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದೆ. ಶೈಕ್ಷಣಿಕವಾಗಿ ಸಮಾಜ ಜಾಗೃತವಾದಗ ಮಾತ್ರ ಬೆಳವಣಿಗೆ ಮತ್ತು ಬದಲಾವಣೆ ಸಾಧ್ಯವಿದೆ ಹಾಗೆ ಸಮುದಾಯವನ್ನು ಒಂದುಗೂಡಿಸುವ ದೃಷ್ಠಿಯಲ್ಲಿ ಹಮ್ಮಿಕೊಂಡಿರುವುದು ಈ ಕಾರ್ಯಕ್ರಮ ಅತ್ಯಂತ ಜೌಚಿತ್ಯ ಪೂರ್ಣವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆವಹಿಸಿದ್ದ ನೂತನ ಅಧ್ಯಕ್ಷ ಸಾಲಗದ್ದೆ ಶಶಿಧರ ಶೆಟ್ಟಿ ಸ್ವಾಗತಿಸಿದರು.ನೂತನ ಮಹಾಪೋಷಕ ಸದಸ್ಯರನ್ನು ಗೌರವಿಸಲಾಯಿತು. ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿ ವೇತನ ವಿತರಿಸಲಾಯಿತು.

byndur

ಈ ಸಂದರ್ಭದಲ್ಲಿ ಗೌರವಾಧ್ಯಕ್ಷ ಚಿತ್ತೂರು ಮಂಜಯ್ಯ ಶೆಟ್ಟಿ, ಕೋಶಾಧಿಕಾರಿ ಉಪ್ಪುಂದ ಎನ್. ರಘುರಾಮ ಶೆಟ್ಟಿ, ಉದ್ಯಮಿ ತಗ್ಗರ್ಸೆ ನಾರಾಯಣ ಹೆಗ್ಡೆ, ಕುಂದಾಪುರ ಬಂಟರ ಯಾನೆ ನಾಡವರ ಮಾತೃ ಸಂಘದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ, ಕರ್ನಾಟಕ ಸರ್ಕಾರ ನಿವೃತ್ತ ಹೆಚ್ಚುವರಿ ಕಾರ್ಯದರ್ಶಿ ಬಿ. ಎನ್. ಶೆಟ್ಟಿ, ಸಂಘದ ನೂತನ ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಹಾಗೂ ನಾಮನಿರ್ದೇಶನ ಸದಸ್ಯರು ಉಪಸ್ಥಿತರಿದ್ದರು.ವಿಶ್ವನಾಥ ಶೆಟ್ಟಿ ನಿರೂಪಿಸಿ, ಪ್ರಧಾನ ಕಾರ್ಯದರ್ಶಿ ಬಿ. ನಿತಿನ್ ಶೆಟ್ಟಿ ವಂದಿಸಿದರು.

add - BDG
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments