ಬೈಂದೂರು : ನಾರಿ ಶಕ್ತಿ ಮಹಿಳಾ ಸಮಾವೇಶ

ಬೈಂದೂರು ವಿಧಾನ ಸಭಾ ಕ್ಷೇತ್ರದ ಕಿರಿ ಮಂಜೇಶ್ವರದಲ್ಲಿ ನಾರಿ ಶಕ್ತಿ ಮಹಿಳಾ ಸಮಾವೇಶ ನಡೆಯಿತು. ಸಾವಿರಾರು ಸಂಖ್ಯೆಯಲ್ಲಿ ಮಹಿಳೆಯರು ಭಾಗವಹಿಸಿದರು.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರು ಮಾತನಾಡಿ, ಮಹಿಳೆಯರ ಕಲ್ಯಾಣಕ್ಕಾಗಿ ಮೋದಿ ಸರಕಾರ ಶೇಕಡಾ 33% ಮೀಸಲಾತಿಯನ್ನು ನೀಡಿದೆ. ಯಡಿಯೂರಪ್ಪ ಸರ್ಕಾರ ಕರ್ನಾಟಕ ರಾಜ್ಯದಲ್ಲಿ ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ನಲ್ಲಿ ಶೇಕಡಾ 50% ಮೀಸಲಾತಿ ನೀಡುವುದರ ಮೂಲಕ ಮಹಿಳೆಯರ ಪರ ಧ್ವನಿಯಾಗಿ ಕೆಲಸ ಮಾಡುತ್ತಿದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅವರು ಮಾತನಾಡಿ, ಬೈಂದೂರು ಕ್ಷೇತ್ರದ ಮಾದರಿ ಇಟ್ಟುಕೊಂಡು ಕೊಲ್ಲೂರು ಕಾರಿಡಾರ್ ಯೋಜನೆಗೆ ಮಾನ್ಯ ಪ್ರಧಾನ ಮಂತ್ರಿಗಳು ಮುಂದಿನ ದಿನಗಳಲ್ಲಿ ಅಡಿಗಲ್ಲು ಹಾಕಲಿದ್ದಾರೆ ಎಂದು ಭರವಸೆ ನೀಡಿದರು.
ಚಲನಚಿತ್ರ ನಟಿ ಶ್ರುತಿ ಮಹಿಳಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿ, ಮಹಿಳೆಯರು ಪ್ರತಿ ರಂಗದಲ್ಲಿಯೂ ಮುನ್ನೆಲೆಗೆ ಬರಬೇಕು ಎನ್ನುವುದು ಭಾರತಿ ಜನತಾ ಪಾರ್ಟಿ ಉದ್ದೇಶವಾಗಿದೆ. ಹತ್ತು ವರ್ಷಗಳ ಅವಧಿಯಲ್ಲಿ ಒಂದು ಭ್ರಷ್ಟಾಚಾರ ಮಾಡದ ಕೇಂದ್ರ ಸರ್ಕಾರ ವಿಶ್ವದ ಹತ್ತು ಬಲಿಷ್ಠ ರಾಷ್ಟ್ರಗಳಲ್ಲಿ ಒಂದಾಗಿದೆ
ಬೈಂದೂರು ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.ಮಹಿಳಾ ಮೋರ್ಚಾದ ಪ್ರಮುಖರಾದ ಸಂಧ್ಯಾ ರಮೇಶ್, ಶಿಲ್ಪಾ ಸುವರ್ಣ, ಭಾಗಿರಥಿ, ಶ್ಯಾಮಲಾ ಕುಂದರ್,ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮಹೇಂದ್ರ ಪೂಜಾರಿ, ಉಮೇಶ್ ಶೆಟ್ಟಿ,ಇಂದಿರಾ ಶೆಟ್ಟಿ, ಮಾಲಿನಿ ಕೆ ಉಪಸ್ಥಿತರಿದ್ದರು. ಶ್ಯಾಮಲ ಕುಂದರ್ ಸ್ವಾಗತಿಸಿದರು.
ಪ್ರಿಯದರ್ಶಿನಿ ದೇವಾಡಿಗ ನಿರೂಪಿಸಿದರು.
