ಬೈಂದೂರು: 62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್, ಮಣಿಕಾಂತ ಹೋಬಳಿದಾರ್‍ಗೆ ಚಿನ್ನದ ಪದಕ

62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‍ನಲ್ಲಿ ಬೈಂದೂರಿನ ಮಣಿಕಾಂತ ಹೋಬಳಿದಾರ್ ದಾಖಲೆಯೊಂದಿಗೆ ಚಿನ್ನದ ಪದಕ ಜಯಿಸಿದ್ದಾರೆ.

62ನೇ ರಾಷ್ಟ್ರೀಯ ಮುಕ್ತ ಅಥ್ಲೆಟಿಕ್ ಚಾಂಪಿಯನ್‍ಶಿಪ್‍ನಲ್ಲಿ ಸರ್ವಿಸರ್ಸ್ ತಂಡವನ್ನು ಪ್ರತಿನಿಧಿಸಿದ 21 ವರ್ಷದ ಮಣಿಕಾಂತ ಹೋಬಳಿದಾರ್ ಅವರು 100 ಮೀ. ಓಟದ ಸೆಮಿಫೈನಲನ್ನು ಕೇವಲ 10.23 ಸೆಕೆಂಡ್‍ಗಳಲ್ಲಿ ಓಡುವ ಮೂಲಕ ರಾಷ್ಟ್ರೀಯ ದಾಖಲೆ ಬರೆದು ಅಗ್ರಸ್ಥಾನದೊಂದಿಗೆ ಫೈನಲ್‍ಗೆ ತಲುಪಿದ್ದರು.

ಕಂಠೀರವ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 62ನೇ ರಾಷ್ಟ್ರೀಯ ಅಥ್ಲೆಟಿಕ್ಸ್ ಓಪನ್ ಚಾಂಪಿಯನ್‍ಶಿಪ್‍ನ ಪುರುಷರ 100 ಮೀಟರ್ ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಮಣಿಕಾಂತ ಅವರು ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನವರಾಗಿದ್ದು, 2020 ರಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಮಣಿಕಂಠ ಅವರು 2006 ರ ಏಷ್ಯನ್ ಗೇಮ್ಸ್‍ನಲ್ಲಿ 4*400 ಮೀ. ರಿಲೇ ತಂಡದೊಂದಿಗೆ ಬೆಳ್ಳಿ ಪದಕ ಗೆದ್ದಿದ್ದರು. ಟಿ. ಅಬೂಬಕರ್ ಅವರಿಂದ ತರಬೇತಿ ಪಡೆದಿದ್ದಾರೆ. ಕೊಲ್ಲೂರು ದೇವಸ್ಥಾನ ಸಮಿತಿಯ ಸದಸ್ಯರಾದ ಜಯಾನಂದ ಹೋಬಳಿದಾರ್ ಅವರು ಮಣಿಕಾಂತ್ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Related Posts

Leave a Reply

Your email address will not be published.