ಕೆ.ಎಸ್. ಈಶ್ವರಪ್ಪ ಅವರಿಗೆ ನೀಡಿದ ಬೆಂಬಲ ವಾಪಾಸ್: ಬಿಜೆಪಿ ಅಭ್ಯರ್ಥಿ ಗೆಲ್ಲಿಸುವುದು ನಮ್ಮ ಗುರಿ: ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿಕೆ

ಬೈಂದೂರು: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಬಿಜೆಪಿ ಮತಗಳನ್ನು ಟಾರ್ಗೆಟ್ ಮಾಡಿ, ಕಾಂಗ್ರೆಸ್ ಗೆಲ್ಲಿಸುವ ಮಾನಸಿಕತೆಯಲ್ಲಿದ್ದದ್ದು ಅರಿವೆ ಬಂದಿದೆ. ಹೀಗಾಗಿಯೇ ರಾಷ್ಟ್ರಭಕ್ತರಾದ ನಾವೆಲ್ಲರೂ ಪ್ರಧಾನಿ ಮೋದಿಯವರಿಗೆ ಬೆಂಬಲ ನೀಡುತ್ತೇವೆ ಮತ್ತು ಬೈಂದೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಕೆಲಸ ಮಾಡಲಿದ್ದೇವೆ ಎಂದು ರಾಷ್ಟ್ರಭಕ್ತರ ಬಳಗದ ಶ್ರೀಧರ್ ಬಿಜೂರ್ ಹೇಳಿದರು.

ಅವರು ಬೈಂದೂರು ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಕಾರ್ಯಕರ್ತರ ಕಡೆಗಣನೆ ಆಗುತ್ತಿದೆ ಎನ್ನುವ ಕಾರಣಕ್ಕೆ ಪಕ್ಷದಿಂದ ದೂರಾಗಿದ್ದು ನಿಜ. ಅದೇ ಸಂದರ್ಭದಲ್ಲಿ ಈಶ್ವರಪ್ಪ ಅವರು, ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ನಿಟ್ಟಿನಲ್ಲಿ ಸ್ಪರ್ಧೆಗೆ ಇಳಿದಿದ್ದರು. ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಬಂದಿದ್ದರಿಂದ ಅವರೊಂದಿಗೆ ಸೇರಿಕೊಂಡಿದ್ದೇವು. ಈಗ ನಿಜಾಂಶ ಅರಿವಾಗಿದೆ. ಕಾಂಗ್ರೆಸ್ ಗೆಲ್ಲಿಸಲು ಅವರು ಶ್ರಮಿಸುತ್ತಿದ್ದಾರೆ ಮತ್ತು ಬಿಜೆಪಿ ಮತವನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಹೀಗಾಗಿ ಅವರಿಗೆ ನಮ್ಮ ಬೆಂಬಲ ಇಲ್ಲ. ಈ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಈಶ್ವರಪ್ಪನವರು ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಕೆಲವರನ್ನು ಸೆಳೆದಿರುವುದು ನಿಜ. ಈಶ್ವರಪ್ಪರಿಂದ ಮೋಸ ಹೋಗಿರುವ ಬಗ್ಗೆ ಅವರಿಗೆ ಸತ್ಯದ ಅರಿವಿವಾಗಿ ಪುನರ್ ಬಿಜೆಪಿಗೆ ಬಂದಿದ್ದಾರೆ. ಹೀಗಾಗಿ ಬಿಜೆಪಿ ಅಭ್ಯರ್ಥಿ ಪರವಾಗಿ, ನರೇಂದ್ರ ಮೋದಿಯವರನ್ನು ಇನ್ನೊಮ್ಮೆ ಪ್ರಧಾನಿ ಮಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ಬೆಂಬಲವಾಗಿ ನಿಂತಿದ್ದಾರೆ.

ಈ ಸಂದರ್ಭ ಸುದ್ದಿಗೋಷ್ಟಿಯಲ್ಲಿ ಶಾಸಕರಾದ ಗುರುರಾಜ ಗಂಟಿಹೊಳೆ, ಮಾಜಿ ಶಾಸಕರಾದ ಕೆ.ರಘುಪತಿ ಭಟ್, ಮಂಡಲ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಖಜಾಂಚಿ ಶ್ರೀಗಣೇಶ್ ಗಾಣಿಗ ಮೊದಲಾದವರು ಉಪಸ್ಥಿತರಿದ್ದರು.

Related Posts

Leave a Reply

Your email address will not be published.