HomeFresh Newsಸಿಎ ಅಂತಿಮ ಪರೀಕ್ಷೆ : ಆಳ್ವಾಸ್‌ನ 8 ವಿದ್ಯಾರ್ಥಿಗಳು ಉತ್ತೀರ್ಣ- ದೀಪಕ್ ಹೆಗ್ಡೆಗೆ ಅಖಿಲ ಭಾರತ...

ಸಿಎ ಅಂತಿಮ ಪರೀಕ್ಷೆ : ಆಳ್ವಾಸ್‌ನ 8 ವಿದ್ಯಾರ್ಥಿಗಳು ಉತ್ತೀರ್ಣ- ದೀಪಕ್ ಹೆಗ್ಡೆಗೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್

ಮೂಡುಬಿದಿರೆ: ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ಪದವಿ ಕಾಲೇಜಿನ ದೀಪಕ್ ಹೆಗ್ಡೆ ಅಖಿಲ ಭಾರತ ಮಟ್ಟದಲ್ಲಿ 28ನೇ ರ‍್ಯಾಂಕ್ ಗಳಿಸಿ ಗಮನ ಸೆಳೆದಿದ್ದಾರೆ. ಜೊತೆಗೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಒಟ್ಟು 8 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಎ ಅಂತಿಮ ಪರೀಕ್ಷೆಯಲ್ಲಿ ದೀಪಕ್ ಹೆಗ್ಡೆ, ನಿತೇಶ್ ಕಾಮತ್, ವೀಕ್ಷಾ ಶೆಟ್ಟಿ, ನಾಗರಾಜ ಮಂಜಿತ್ತಾಯ, ಪ್ರಣವ್ ಎಸ್. ಭಟ್, ವೈಷ್ಣವಿ ಜವಾರ್, ಅಕ್ಷಯ ಬಿ.ಎಸ್. ಹಾಗೂ ಸುದೀಪ್ ಉತ್ತೀರ್ಣರಾಗಿದ್ದಾರೆ.

ಆಳ್ವಾಸ್‌ನ ಶೈಕ್ಷಣಿಕ ದತ್ತು ಸ್ವೀಕಾರ ಯೋಜನೆಯಡಿ ಉಚಿತ ಶಿಕ್ಷಣ ಪಡೆದ ದೀಪಕ್ ಹೆಗ್ಡೆ, ಈ ಹಿಂದೆ ಸಿಎ ಇಂಟರ್‌ಮೀಡಿಯೇಟ್ ಪರೀಕ್ಷೆಯಲ್ಲಿ ಅಖಿಲ ಭಾರತ ಮಟ್ಟದಲ್ಲಿ 10ನೇ ರ‍್ಯಾಂಕ್ ಪಡೆದಿದ್ದರು.

ಇದೀಗ ಸಿಎ ಅಂತಿಮ ಪರೀಕ್ಷೆಯ ಎರಡೂ ಗ್ರೂಪ್‌ಗಳನ್ನು ಮೊದಲ ಪ್ರಯತ್ನದಲ್ಲೇ ತೇರ್ಗಡೆಗೊಂಡು 28ನೇ ರ‍್ಯಾಂಕ್ ಗಳಿಸುವ ಮೂಲಕ ಮತ್ತೊಮ್ಮೆ ಸಾಧನೆ ಮಾಡಿದ್ದಾರೆ.

ಸಿಎ ಅಂತಿಮ ಪರೀಕ್ಷೆಯಲ್ಲಿ ಆಳ್ವಾಸ್ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಉತ್ತಮ ರ‍್ಯಾಂಕ್‌ಗಳನ್ನು ಗಳಿಸುತ್ತಿರುವುದು ಗುಣಮಟ್ಟದ ಶಿಕ್ಷಣ ಮತ್ತು ಫಲಿತಾಂಶ ಕೇಂದ್ರಿತ ತರಬೇತಿಯ ಪ್ರತೀಕವಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಟ್ರಸ್ಟಿ ವಿವೇಕ್ ಆಳ್ವ, ಪ್ರಾಂಶುಪಾಲ ಡಾ. ಕುರಿಯನ್, ವಾಣಿಜ್ಯ ವಿಭಾಗದ ಡೀನ್ ಪ್ರಶಾಂತ ಎಂ.ಡಿ., ಸಿಎ ಸಂಯೋಜಕಿ ಅಪರ್ಣಾ ಅಭಿನಂದಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments