ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು : ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ

ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು.
ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 595 ಅಂಕಗಳಿಸಿ ತೃತೀಯ ಸ್ಥಾನ ಪಡೆದ ಪ್ರತೀಕ್ ಮಲ್ಯ, ವಿಜ್ಞಾನ ವಿಭಾಗದಲ್ಲಿ 592 ಅಂಕಗಳಿಸಿ ಐದನೇ ಸ್ಥಾನ ಪಡೆದ ವೈಭವಿ ನಾಗರಾಜ ನಾಯಕ್ ಇವರುಗಳನ್ನು ಸನ್ಮಾನಿಸಲಾಯಿತು.

570ಕ್ಕಿಂತ ಅಧಿಕ ಅಥವಾ 95 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಕೆನರಾ ಪಿ .ಯು ಕಾಲೇಜಿನ ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 26 ವಿದ್ಯಾರ್ಥಿಗಳು ಹಾಗೂ ಕೆನರಾ ವಿಕಾಸ್ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದ 8 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ 7 ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.
ಸಮಾರಂಭದಲ್ಲಿ ಕೆನರಾ ಪಿ.ಯು ಕಾಲೇಜಿನ ಸಂಚಾಲಕರಾದ ಶ್ರೀ ಟಿ. ಗೋಪಾಲಕೃಷ್ಣ ಶೆಣೈ ಅವರು ಮಾತನಾಡಿ – ನಮ್ಮ ಕೆನರಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ತೋರಿದ ಸಾಧನೆ ಗಮನಾರ್ಹವಾದುದು. ಕೆನರಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂಬುವುದಕ್ಕೆ ನಮ್ಮ ವಿದ್ಯಾರ್ಥಿಗಳ ಸಾಧನೆ ಸಾಕ್ಷಿಯಾಗಿದೆ ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕೆನರಾ ವಿಕಾಸ ಪಿಯು ಕಾಲೇಜಿನ ಸಂಚಾಲಕರಾದ ಶ್ರೀ ಸಿ.ಎ ಎಂ. ವಾಮನ್ ಕಾಮತ್ ರವರು ಮಾತನಾಡಿ – ಕೆನರಾ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರ. ಇದಕ್ಕೆ ಪೂರಕವೆಂಬಂತೆ ಇಂದು ಕೂಡ ನಮ್ಮ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಪಡುವಂಥದ್ದು ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕೆನರಾ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಶ್ರೀ ಎಂ.ರಂಗನಾಥ ಭಟ್ ರವರು ಮಾತನಾಡಿ – ಕೆನರಾ ಶಿಕ್ಷಣ ಸಂಸ್ಥೆಗಳು ಇಂದು ನಿನ್ನೆಯದ್ದಲ್ಲ. ಈ ಶಿಕ್ಷಣ ಸಂಸ್ಥೆಗಳ ಬಗೆಗೆ ನಾಡಿನ ಜನರಿಗೆ ಅಪಾರ ಅಭಿಮಾನವಿದೆ. ಈ ಅಭಿಮಾನ ಇನ್ನಷ್ಟು ಹೆಚ್ಚಾಗುವಂತೆ ನಮ್ಮ ವಿದ್ಯಾರ್ಥಿಗಳು ಸಾಧನೆ ತೋರಿದ್ದಾರೆ. ಅಂತಹ ನಮ್ಮೆಲ್ಲ ವಿದ್ಯಾರ್ಥಿಗಳಿಗೆ ನಮ್ಮ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಭಿಮಾನ ವ್ಯಕ್ತಪಡಿಸಿದರು.

ಈ ಸಮಾರಂಭದಲ್ಲಿ ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಂಯೋಜಕರಾದ ಶ್ರೀ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ವಿಕಾಸ್ ಕಾಲೇಜಿನ ಮ್ಯಾನೇಜರ್ ಶ್ರೀ ರಾಘವೇಂದ್ರ ಕುಡ್ವ, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಶ್ರೀ ಎಂ. ಸುರೇಶ್ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಮಿತಿ ಸದಸ್ಯ ಶ್ರೀ ಎಂ. ನರೇಶ್ ಶೆಣೈ, ಕೆನರಾ ಪಿ. ಯು. ಕಾಲೇಜಿನ ಡೀನ್ ಶ್ರೀ ಗೋಪಾಲಕೃಷ್ಣ ಶೆಟ್ಟಿ, ಕೆನರಾ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಲತಾಮಹೇಶ್ವರಿ ಕೆ ಬಿ, ಕೆನರಾ ವಿಕಾಸ್ ಪಿ.ಯು ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಐಶ್ವರ್ಯ ಕೆ. ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಕೆನರಾ ಶಿಕ್ಷಣ ಸಂಸ್ಥೆಗಳ ಪಿ. ಆರ್. ಓ ಶ್ರೀಮತಿ ಉಜ್ವಲ್ ಮಲ್ಯ ನಿರೂಪಿಸಿ ಧನ್ಯವಾದ ಅರ್ಪಿಸಿದರು. ಕೆನರಾ ಪಿ.ಯು. ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ಸುಜಾತ ಪಿ.ವಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಹೆಸರುಗಳನ್ನು ಪ್ರಸ್ತುತಪಡಿಸಿದರು. ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಹೆತ್ತವರು ಪೋಷಕರು ಕಾಲೇಜುಗಳ ಉಪನ್ಯಾಸಕರು ಮತ್ತು ಕಛೇರಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Related Posts

Leave a Reply

Your email address will not be published.