HomeFresh Newsಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

ಪುತ್ತೂರು: ವಿದ್ಯಾರ್ಥಿಗಳ ಭವಿಷ್ಯದ ಶಿಕ್ಷಣ ಹಾಗೂ ವೃತ್ತಿ ಆಯ್ಕೆಯ ಕುರಿತು ಸಮಗ್ರ ಅರಿವು ಮೂಡಿಸುವ ಉದ್ದೇಶದಿಂದ ಸುದಾನ ಪದವಿಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಪ್ರೊಫೆಸರ್ ವಿವೇಕ್ ರಂಜನ್ ಭಂಡಾರಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಲು ಸರಿಯಾದ ಮಾರ್ಗದರ್ಶನ, ಸಮರ್ಪಕ ಯೋಜನೆ ಹಾಗೂ ಪರಿಣಾಮಕಾರಿ ಕಾರ್ಯತಂತ್ರಗಳ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೇವಲ ಪಾಠಪುಸ್ತಕ ಜ್ಞಾನ ಮಾತ್ರ ಸಾಕಾಗದೆ, ಸಮಯ ನಿರ್ವಹಣೆ, ನಿರಂತರ ಅಭ್ಯಾಸ, ಆತ್ಮವಿಶ್ವಾಸ ಮತ್ತು ಸ್ಪಷ್ಟ ಗುರಿಯನ್ನು ಹೊಂದಿರುವುದು ಅತ್ಯಂತ ಮಹತ್ವದ್ದಾಗಿದೆ ಎಂದು ಅವರು ತಿಳಿಸಿದರು.

ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧರಾಗುವ ಸಂದರ್ಭದಲ್ಲಿ ವಿಷಯದ ಆಳವಾದ ಅರಿವು, ನಿಯಮಿತ ಅಭ್ಯಾಸ ಹಾಗೂ ದಿನನಿತ್ಯದ ಅಧ್ಯಯನ ಕ್ರಮವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಸಲಹೆ ನೀಡಿದರು. ಜೊತೆಗೆ, ಮಾನಸಿಕ ಒತ್ತಡವನ್ನು ಸಮರ್ಥವಾಗಿ ನಿಭಾಯಿಸುವುದು ಹಾಗೂ ಆತ್ಮವಿಶ್ವಾಸದಿಂದ ನಿರಂತರ ಪ್ರಯತ್ನಿಸುವ ಗುಣವೇ ಯಶಸ್ಸಿನ ಮೂಲಮಂತ್ರ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುದಾನ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಶ್ರೀ ಸುಪ್ರೀತ್ ಕೆ. ಸಿ. ವಹಿಸಿದ್ದರು. ಸರಿಯಾದ ಮಾರ್ಗದರ್ಶನ ಮತ್ತು ದೃಢಸಂಕಲ್ಪದೊಂದಿಗೆ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉತ್ತಮ ಸಾಧನೆ ಮಾಡಬಹುದು ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಗಣಕ ವಿಜ್ಞಾನ ಉಪನ್ಯಾಸಕಿ ಶ್ರೀಮತಿ ಧನ್ಯಶ್ರೀ ಅವರು ಸ್ವಾಗತಿಸಿದರು. ಗಣಕ ವಿಜ್ಞಾನ ಉಪನ್ಯಾಸಕಿ ಶ್ರೀಮತಿ ಶ್ರುತಿ ಅವರು ಧನ್ಯವಾದ ಸಮರ್ಪಿಸಿದರು. ಇಂಗ್ಲಿಷ್ ಉಪನ್ಯಾಸಕಿ ಶ್ರೀಮತಿ ವಿಶಾಲಾಕ್ಷಿ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರು ಉತ್ಸಾಹದಿಂದ ಭಾಗವಹಿಸಿದ ಈ ಕಾರ್ಯಕ್ರಮವು ಸ್ಪರ್ಧಾತ್ಮಕ ಪರೀಕ್ಷೆಗಳ ಕುರಿತು ವಿದ್ಯಾರ್ಥಿಗಳಲ್ಲಿ ಹೊಸ ಚೈತನ್ಯ ಮತ್ತು ಆತ್ಮವಿಶ್ವಾಸವನ್ನು ಮೂಡಿಸಿತು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments