ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿಯ ಅಭಿವೃದ್ದಿ ನಡೆಯುತ್ತಿರುವ ತಲಪಾಡಿಯಲ್ಲಿ ನಿರ್ಮಿಸಲಾದ ಪ್ರಧಾನ ರಸ್ತೆಯ ಒಂದು ಭಾಗವನ್ನು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ತಲಪಾಡಿಯಿಂದ ತೂಮಿನಾಡು ತನಕ ಇರುವ 1 ಕಿ.ಲೋ. ಮೀಟರ್ ರಸ್ತೆಯನ್ನು ಬಿಟ್ಟು ಕೊಡಲಾಗಿದೆ. 21 ಮೀಟರ್ ಅಗಲದಲ್ಲಿ ನಿರ್ಮಿಸಲಾಗುತ್ತಿರುವ ಆರು ಪಥದ ರಸ್ತೆಯ 8 ಮೀಟರ್ ಬರುವ ಮಾರ್ಗವನ್ನು ಸಂಚಾರ
ಉಳ್ಳಾಲ : ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಜತೆಯಾಗಿ ಬರೆದಿದ್ದ ತಾಯಿ ಮಗಳಿಬ್ಬರು ತೇರ್ಗಡೆಯಾಗಿದ್ದಾರೆ.ಮುನ್ನೂರು ಗ್ರಾಮದ ತೇವುಲ ನಿವಾಸಿ ಮಮತಾ ರಮೇಶ್ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ತೇರ್ಗಡೆಯಾಗಿದ್ದು, ಈಕೆಯ ಪುತ್ರಿ ಖುಷಿಯೂ ಆಂಗ್ಲಮಾಧ್ಯಮ ಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆದು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. 21 ವರ್ಷಗಳ ಹಿಂದೆ ವಿದ್ಯಾರ್ಥಿ ಜೀವನದಲ್ಲಿ ಸ್ವಯಂ ನಿರ್ಧಾರದಿಂದ ಎಸ್ ಎಸ್ ಎಲ್ ಸಿ ಕಲಿಯುವ ಅವಕಾಶದಿಂದ
ಭಾರತ ಜಗದ್ಗುರುವಾಗಿ ಬೆಳೆಯಬೇಕಾದರೆ ಮಕ್ಕಳು ಆ ಮಟ್ಟದಲ್ಲಿ ಬೆಳೆಯಬೇಕಾಗಿದೆ. ಈ ಕಾರಣದಿಂದ ಮಕ್ಕಳನ್ನು ಕೇಂದ್ರವಾಗಿಟ್ಟುಕೊಂಡು ಹೊಸ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದು ರಾಜ್ಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಬಿ. ಸಿ. ನಾಗೇಶ್ ಹೇಳಿದರು. ಪುತ್ತೂರಿನ ಹಾರಾಡಿ ದ.ಕ. ಜಿ.ಪಂ. ಮಾದರಿ ಉನ್ನತ ಹಿ.ಪ್ರಾ. ಶಾಲೆಯಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ ಮತ್ತು ತಾಲೂಕು ಮಟ್ಟದ ಸರಕಾರದ ವಿವಿಧ ಶೈಕ್ಷಣಿಕ ಸೌಲಭ್ಯಗಳ ವಿತರಣಾ
ವಿಟ್ಲ: ಮನೆಯ ಮಾಡಿನ ಹಂಚು ತೆಗೆದು ಮನೆಗೆ ನುಗ್ಗಿದ ಕಳ್ಳರು ನಗದು, ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಕಟ್ಟೆ ಮನೆ ಎಂಬಲ್ಲಿ ನಡೆದಿದೆ. ಈ ಘಟನೆ ಕೊಳ್ನಾಡು ಗ್ರಾಮ ಕಟ್ಟೆ ಮನೆ ನಿವಾಸಿ ಕೆ.ಎಂ ಮಹಮ್ಮದ್(60) ಎನ್ನುವವರ ಮನೆಯಲ್ಲಿ ನಡೆದಿದ್ದು, ಮನೆಗೆ ನಗ್ಗಿದ ಕಳ್ಳರು ಸುಮಾರು 5 ಪವನ್ ತೂಕದ ನಕ್ಲೇಸ್-01, ಸುಮಾರು 1 ಪವನ್ ತೂಕದ ಸರ-01, ಸುಮಾರು ಅರ್ದ ಪವನ್ ತೂಕದ ಉಂಗುರ-01, ಹಾಗೂ ಗಾದ್ರೇಜ್ ಪಕ್ಕದಲ್ಲಿದ್ದ ಮೇಜಿನ
ಬಂಟ್ವಾಳ: ಖ್ಯಾತ ಕಬಡ್ಡಿ ಆಟಗಾರ ಉದಯ ಚೌಟ ಅನಾರೋಗ್ಯದಿಂದಾಗಿ ಮೇ.21 ರಂದು ನಿಧನರಾದರು.ದೇಶದ ಪ್ರಮುಖ ಕಬಡ್ಡಿ ಆಟಗಾರರಲ್ಲಿ ಒಬ್ಬರಾದ ಉದಯ ಚೌಟರವರು ಬಂಟ್ವಾಳ ತಾಲೂಕಿನ ಮಾಣಿಯ ಬದಿಗುಡ್ಡೆ ನಿವಾಸಿ. 2007ರ ದ್ವಿತೀಯ ವಿಶ್ವಕಪ್ ಕಬಡ್ಡಿ ಪಂದ್ಯಾಟದಲ್ಲಿ ಗೆಲುವು ಸಾಧಿಸಿರುವ ತಂಡದಲ್ಲಿ ‘ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನು ಪಡೆದಿದ್ದರು.ಪ್ರಸಕ್ತ ಬ್ಯಾಂಕ್ ಆಫ್ ಬರೋಡದ ಸುರತ್ಕಲ್ ಕಚೇರಿಯಲ್ಲಿ ಉಪ ಪ್ರಬಂಧಕರಾಗಿರುವ ಉದಯ ಚೌಟ, ಕ್ರೀಡಾ ಕೋಟದಲ್ಲಿ 8 ತಿಂಗಳ ಕಾಲ
ಮೂಡುಬಿದಿರೆ: ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರವರ್ತಿತ ಆಳ್ವಾಸ್ ಹೈಸ್ಕೂಲ್ ವಿದ್ಯಾರ್ಥಿಗಳು ರಾಜ್ಯದಲ್ಲಿ ದಾಖಲೆಯ ಸಾಧನೆ ಮಾಡಿದ್ದಾರೆ. ಪರೀಕ್ಷೆಗೆ ಹಾಜರಾದ ಎಲ್ಲಾ 379 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶೇಕಡಾ ನೂರು ಫಲಿತಾಂಶ ದಾಖಲಿಸಿದ್ದಾರೆ. ಐದು ಮಂದಿ ವಿದ್ಯಾರ್ಥಿಗಳು 625ಕ್ಕೆ 625ಅಂಕ ಪಡೆದುಕೊಂಡಿದ್ದಾರೆ ಎಂದು ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಹೇಳಿದರು. ಅವರು ಸುದ್ದಿಗೋಷ್ಟಿ ನಡೆಸಿ ಮಾತನಾಡಿ,
ಕರಾವಳಿಯ ಸಮಗ್ರ ಅಭಿವೃದ್ಧಿ ಮತ್ತು ಎಲ್ಲ ವರ್ಗಗಳ ಹಿತವನ್ನು ಕಾಯ್ದು ಕೊಳ್ಳುವ ಗುರಿಯನ್ನಿರಿಸಿಕೊಂಡು ಕಾಂಗ್ರೆಸ್ ಪಕ್ಷ ಕರಾವಳಿಗೆ ಪ್ರತ್ಯೇಕ ಚುನಾವಣ ಪ್ರಣಾಳಿಕೆಯನ್ನು ಸಿದ್ಧಪಡಿ ಸಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ದಕ್ಷಿಣ ಕನ್ನಡ ಮೂಲದ, ಕರ್ನಾಟಕ ವಿಧಾನಪರಿಷತ್ತಿನ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ಹಾಗೂ ವಿಧಾನಸಭೆಯ ವಿಪಕ್ಷ ಉಪ ನಾಯಕ ಯು.ಟಿ. ಖಾದರ್ ಅವರಿಗೆ ಅಭಿನಂದನ ಸಮಿತಿ ವತಿಯಿಂದ
ಬೆಳ್ತಂಗಡಿಯ ಹೃದಯ ಭಾಗದಲ್ಲಿ ಇರುವ ಕಟ್ಟಡ ಒಂದಕ್ಕೆ ಬ್ಯಾಂಕ್ ಅಧಿಕಾರಿಗಳು ಬಂದು ಏಕಾ ಏಕಿ ಅಂಗಡಿ ತೆರವು ಮಾಡುವಂತೆ ಬಾಡಿಗೆ ದಾರರಿಗೆ ನೋಟಿಸ್ ಜಾರಿಗೊಳಿಸಿದ ಘಟನೆ ನಡೆದಿದೆ.ಇದರಿಂದ ಕಟ್ಟಡದ ಮಾಲೀಕರು ನ್ಯಾಯಾಲಯದಿಂದ ತಡೆಯಾಜ್ಞೆ ತಂದು ಬಾಡಿಗೆದಾರರು ನಿಟ್ಟುಸಿರು ಬಿಡುವಂತೆ ಆಗಿದೆ. ನಗರದ ವಿಗ್ನೇಶ್ ಸಿಟಿ ಕಟ್ಟಡದಲ್ಲಿ ಸುಮಾರು 30 ಅಂಗಡಿ ಬಾಡಿಗೆಗೆ ಪಡೆದಿದ್ದು ಕಟ್ಟಡದ ಮಾಲೀಕರು ಸಾಲ ಮರು ಪಾವತಿ ಮಾಡಿಲ್ಲ ಅನ್ನುವ ಕಾರಣಕ್ಕೆ ಕಟ್ಟಡ ವಶಪಡಿಸಿ ಕೊಳ್ಳಲು
ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ಟೆಡೆಕ್ಸ್ ಭಾಷಣ ಸರಣಿ ಕಾರ್ಯಕ್ರಮವು ಮೇ 22ರಂದು ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ವಂದನೀಯ ಡಾ. ಪ್ರವೀಣ್ ಮಾರ್ಟಿಸ್ ಎಸ್.ಜೆ. ತಿಳಿಸಿದರು. ಅವರು ನಗರದ ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು.ಟೆಡ್ ಒಂದು ಲಾಭರಹಿತ ಜಾಗತಿಕ ಮಾನ್ಯತೆಯನ್ನು ಪಡೆದ ಸ್ವತಂತ್ರ ಸಂಸ್ಥೆ. ಇಂದಿನ ಹೊಸ ತಲೆಮಾರಿನ ಉತ್ಸಾಹೀ ಚಿಂತಕರಿಂದ ಹೊಸ ಯೋಚನೆಗಳನ್ನು ಮತ್ತು ಜ್ಞಾನವನ್ನು ಪುಟ್ಟ
ಮಂಗಳೂರು: ಸಮಾಜದ ಭಿನ್ನ ಸಾಮರ್ಥ್ಯರ ಕಷ್ಟಕ್ಕೆ ಧ್ವನಿಯಾಗಿ ಬಂಟರ ಯಾನೆ ನಾಡವರ ಮಾತೃ ಸಂಘ(ರಿ) ಮಂಗಳೂರು ತಾಲೂಕು ಸಮಿತಿಯಿಂದ ಸಹಾಯಧನ ನೀಡುತ್ತಿರುವುದು, ವಿದ್ಯಾರ್ಥಿಗಳಿಗೆ ಪುರಸ್ಕಾರ, ಪ್ರತಿಭಾವಂತರಿಗೆ ವಿದ್ಯಾರ್ಥಿ ವೇತನ ನೀಡುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಮುಂಬೈ ವಿ.ಕೆ. ಸಮೂಹ ಸಂಸ್ಥೆಯ ಅಧ್ಯಕ್ಷ ಕರುಣಾಕರ ಎಮ್ ಶೆಟ್ಟಿ ಮಧ್ಯಗುತ್ತು ತಿಳಿಸಿದರು. ಬಂಟರ ಯಾನೆ ನಾಡವರ ಮಾತೃ ಸಂಘ (ರಿ) ಮಂಗಳೂರು ತಾಲೂಕು ಸಮಿತಿ ಇದರ