Home ಕರಾವಳಿ Archive by category ಉಡುಪಿ (Page 128)

ತೆಂಕ ಎರ್ಮಾಳಿನಲ್ಲಿ ಸರಣಿ ಅಪಘಾತ: ಮೂರು ವಾಹನಗಳು ಜಖಂ, ಮೂವರಿಗೆ ಗಾಯ

ಎರಡು ಕಾರು ಹಾಗೂ ಅಟೋ ರಿಕ್ಷಾ ನಡುವೆ ಸರಣಿ ಅಪಘಾತ ನಡೆದು ರಿಕ್ಷಾ ಚಾಲಕ ಸಹಿತ ಮೂವರು ಗಾಯಗೊಂಡ ಘಟನೆ ಪಡುಬಿದ್ರಿ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 66 ರ ತೆಂಕ ಎರ್ಮಾಳು ಗರಡಿ ಬಳಿ ಪಡುಬಿದ್ರಿಯತ್ತ ಚಲಿಸುತ್ತಿದ್ದ ಆಟೋ ರಿಕ್ಷಕ್ಕೆ ಉಡುಪಿಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ

ಉಡುಪಿ ಜಿಲ್ಲೆಯ ಮೂವರು ಅಧಿಕಾರಿಗಳಿಗೆ ಮುಖ್ಯಮಂತ್ರಿಗಳಿಂದ ಚಿನ್ನದ ಪದಕ ಪ್ರದಾನ

ಅಗ್ನಿ ಶಾಮಕ ದಳ ಹಾಗೂ ತುರ್ತು ಸೇವಾ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಉಡುಪಿ ಜಿಲ್ಲೆಯ ಮೂವರು ಸಿಬ್ಬಂದಿಗಳಿಗೆ ಕರ್ನಾಟಕ ಸರಕಾರದಿಂದ ನೀಡುವ ಚಿನ್ನದ ಪದಕವನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೀಡಿ ಗೌರವಿಸಿದ್ದಾರೆ.  ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಪದಕ‌ ಪ್ರಧಾನ ಕಾರ್ಯಕ್ರಮದಲ್ಲಿ ಅಗ್ನಿ ಶಾಮಕ ದಳ ಜಿಲ್ಲಾ ಮುಖ್ಯ ಅಧಿಕಾರಿ ಹೆಚ್ ಎಂ ವಸಂತ್ ಕುಮಾರ್, ಅಶ್ವಿನ್ ಸನಿಲ್ ಹಾಗೂ ಎಂ. ಕೇಶವ್ ಇವರಿಗೆ ಮುಖ್ಯಮಂತ್ರಿಗಳಿಂದ

ಉಡುಪಿಯಲ್ಲಿ ಮಗು ಅಪಹರಣ ಪ್ರಕರಣ: ಆರೋಪಿಯ ಬಂಧನ

ಉಡುಪಿಯ ಕರಾವಳಿ ಬೈಪಾಸ್ ಬಳಿ ಶಿವರಾಜ್ ಎನ್ನುವ ಎರಡುವರೆ ವರುಷದ ಮಗುವೊಂದನ್ನ ಅಪಹರಣ ಮಾಡಲಾಗಿತ್ತು.ಕಾರವಳಿ ಬೈಪಾಸ್ ಬಳಿಯ ಭಾರತಿ ಮತ್ತು ಅರುಣ್ ಎನ್ನುವವರ ಮಗುವನ್ನು ಪರಿಚಯದ ವ್ಯಕ್ತಿಯೇ ಅಪಹರಿಸಿದ್ದ. ಮಗುವಿಗೆ ಚಾಹಾ ಕುಡಿಸ್ತೇನೆ ಎಂದು ಕರೆದುಕೊಂಡು ಹೋಗಿದ್ದ ಬಾಗಲಕೋಟೆ ಮೂಲದ ಪರುಶರಾಮ ಎನ್ನುವ ವ್ಯಕ್ತಿ ವಾಪಸ್ಸು ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಉಡುಪಿ ನಗರ ಠಾಣೆಗೆ ದೂರು ನೀಡಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿ ಕೊಂಡ ನಗರ ಠಾಣಾ ಪೊಲೀಸರು ಕಾರ್ಯ

ಉಡುಪಿಯಲ್ಲಿ ಆ.14ರಂದು ಮೆಘಾ ಲೋಕ ಅದಾಲತ್

ಉಡುಪಿ: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಉಡುಪಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಯಿಂದ ಮೆಘಾ ಲೋಕ ಅದಾಲತ್ ಕಾರ್ಯಕ್ರಮವನ್ನು ಆಗಸ್ಟ್ 14ರಂದು ಉಡುಪಿಯ ಎಲ್ಲಾ ನ್ಯಾಯಾಲಯದಲ್ಲಿ ನಡೆಯಲಿದೆ ಎಂದು ಸೀನಿಯರ್ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್. ಹಾಗೂ ಎಡಿಷನಲ್ ಸೀನಿಯರ್ ಸಿವಿಲ್ ಜಡ್ಜ್ ನಟೇಶ್ ಆರ್. ಅವರು ತಿಳಿಸಿದ್ದಾರೆ. ಅವರು

ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತೇನೆ : ಮಂಜುನಾಥ ಪೂಜಾರಿ

ಕಾರ್ಕಳ: ಒಬ್ಬ ತುಳುವನಾಗಿ ತುಳುನಾಡಿನ ಸಂಸ್ಕøತಿ ಮತ್ತು ಸಂಸ್ಕಾರದ ಬಗ್ಗೆ ವಿಶೇಷ ಗೌರವವನ್ನು ಹೊಂದಿರುವ ನನ್ನಿಂದ ತುಳುನಾಡಿಗೆ ಅಪಚಾರವಾಗಿದೆ ಎನ್ನುವ ಬಿಜೆಪಿ ಹೇಳಿಕೆಯನ್ನು ತಿರಸ್ಕರಿಸುತ್ತಿರುವುದಾಗಿ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಪೂಜಾರಿ ಹೇಳಿದ್ದಾರೆ. ಅವರು ಕಾರ್ಕಳದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾರ್ಕಳಕ್ಕೆ ಬರಮಾಡಿಕೊಳ್ಳಲು ಆಹ್ವಾನಿಸುವ ಜತೆಗೆ,

ಶಿರ್ವದ ಮುಟ್ಲಪಾಡಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಹಶೀಲ್ದಾರ್ ದಾಳಿ

ಶಿರ್ವ: ಅಕ್ರಮ ಮರಳುಗಾರಿಕೆ ಅಡ್ಡೆಗೆ ಕಾಪು ತಶೀಲ್ದಾರ್ ಪ್ರತಿಭಾ ದಾಳಿ ನಡೆಸಿದ್ದಾರೆ.ಕಳೆದ ಹಲವು ದಿನಗಳಿಂದ ಶಿರ್ವ ಬಳಿಯ ಮುಟ್ಲುಪಾಡಿ ಸೇತುವೆ ಕೆಳಗಡೆ ಕೇರಳ ಮೂಲದ ಕೋಶಿ ಎನ್ನುವಾತನ ತೋಟದ ಜಾಗದಲ್ಲಿ ಅಕ್ರಮ ಮರಳುಗಾರಿಕೆಯನ್ನು ಎಗ್ಗಿಲದೆ ನಡೆಸುತ್ತಿದ್ದರು. ಹಗಲಿನಲ್ಲೇ ರಾಜಾರೋಶವಾಗಿ ಹೊಳೆಗೆ ಡ್ರಜ್ಜಿಂಗ್ ಮಿಶಿನ್‌ಗಳನ್ನು ಹಾಕಿ ಮರಳು ತೆಗೆದು ನೂರಾರು ಲೋಡುಗಳನ್ನು ರಾಜಾರೋಶವಾಗಿ ಸಾಗಿಸುತ್ತಿದ್ದರು. ಸ್ಥಳೀಯರು ಶಿರ್ವ ಪೊಲೀಸರಿಗೆ ಹಾಗೂ ಗಣಿ

ಎಲ್ಲೂರಿನಲ್ಲಿ ಬಾವಿ ಕುಸಿತ: ಮೂರು ಲಕ್ಷಕ್ಕೂ ಅಧಿಕ ನಷ್ಟ

ಎಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾನಿಯೂರಿನಲ್ಲಿ ಭಾರೀ ಮಳೆಗೆ ಕುಡಿಯುವ ನೀರಿನ ಬಾವಿಯೊಂದು ಪಂಪ್ ಸೆಟ್ಟ್ ಸಹಿತ ಕುಸಿದು ಸುಮಾರು ಮೂರು ಲಕ್ಷಕ್ಕೂ ಅಧಿಕ ನಷ್ಟ ಸಂಭವಿಸಿದೆ. ಮಾನಿಯೂರಿನ ಗಣೇಶ್ ಮೂಲ್ಯ ಎಂಬವರಿಗೆ ಸೇರಿದ ಕಲ್ಲು ಕಟ್ಟಿದ್ದ ಬಾವಿ ಗುರುವಾರ ಕುಸಿತ ಕಂಡಿದ್ದು, ಸ್ಥಳಕ್ಕೆ ಎಲ್ಲೂರು ಗ್ರಾ.ಪಂ. ಅಧ್ಯಕ್ಷ ಜಯಂತ್ ಕುಮಾರ್ ಆಗಮಿಸಿ ಪರಿಶೀಲನೆ ಮಾಡಿದ್ದು, ಪ್ರಕೃತಿ ವಿಕೋಪದಡಿ ಸರ್ಕಾರದಿಂದ ಸಂತ್ರಸ್ಥರಿಗೆ ಪರಿಹಾರ ನೀಡಲು ಶ್ರಮಿಸುವುದಾಗಿ

ಕಾರ್ಮಿಕರಿಗೆ ನೀಡಲಾದ ಆಹಾರ ಕಿಟ್ ವಿತರಣೆಯಲ್ಲಿ ಅವ್ಯವಹಾರ- ತನಿಖೆಗೆ ಆಗ್ರಹಿಸಿ ಉಡುಪಿಯಲ್ಲಿ ಸಿಐಟಿಯು ಪ್ರತಿಭಟನೆ

ಉಡುಪಿ: ಕಾರ್ಮಿಕರ ಹೆಸರಲ್ಲಿ ನೀಡಲಾದ ಆಹಾರ ಕಿಟ್ ಅವ್ಯವಹಾರ ತನಿಖೆಗೆ ಅಗ್ರಹಿಸಿ ಹಾಗೂ ತೈಲ ಬೆಲೆ ಏರಿಕೆ ವಿರೋಧಿಸಿ ಉಡುಪಿಯಲ್ಲಿ ಸಿಐಟಿಯು ಕಾರ್ಮಿಕ ಸಂಘಟನೆ ಪ್ರತಿಭಟನೆ ನಡೆಸಿದರು. ಕೊವಿಡ್ ಸಂಕಷ್ಟ ಕಾಲದಲ್ಲಿ ಕಾರ್ಮಿಕರ ಹೆಸರಲ್ಲಿ ಬಿಡುಗಡೆಗೊಂಡ ಆಹಾರ ಕಿಟ್ ಖರೀದಿಯಲ್ಲಿ ಭಾರೀ ನಡೆದಿರುವ ಅವ್ಯಹಾರ ತನಿಖೆ ನಡೆಸುವ ಜೊತೆಗೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಅಗ್ರಹಿಸಿ ಉಡುಪಿ ತಾಲೂಕು ಕಚೇರಿ ಎದುರುಗಡೆ ಸಿಐಟಿಯು ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ

ಉದಯ್ ಗಾಣಿಗ ಕೊಲೆ ಪ್ರಕರಣ: ಬಿಜೆಪಿ ಮೌನದ ಬಗ್ಗೆ ಅನುಮಾನ ಹುಟ್ಟುತ್ತಿದೆ: ಡಿಕೆಶಿ

ಕುಂದಾಪುರ: ರಾಜಕೀಯ ದ್ವೇಷ ಸಾಧನೆಗಾಗಿ ಯಡಮೊಗೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ತಮ್ಮ ಪಕ್ಷದವರೇ ಆದ ಉದಯ್ ಗಾಣಿಗ ಅವರನ್ನು ಅಮಾನುಷವಾಗಿ ಹತ್ಯೆ ನಡೆಸಿರುವುದು ಖಂಡನೀಯ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದರು.ತಾಲೂಕಿನ ಯಡಮೊಗೆಯ ಹೊಸಬಾಳು ಉದಯ್ ಗಾಣಿಗ ಅವರ ಮನೆಗೆ ಮಂಗಳವಾರ ಸಂಜೆ ಭೇಟಿ ನೀಡಿ ಅವರ ಪತ್ನಿ ಹಾಗೂ ಕುಟುಂಬಿಕರಿಗೆ ಸಾಂತ್ವನ ಹೇಳಿದ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಪಕ್ಷ, ಜಾತಿ, ಧರ್ಮದ ನೆಲೆಯಲ್ಲಿ

ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ಮಾಡುವ ಅಗತ್ಯವಿಲ್ಲ: ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಜ್ಯ ಕಾಂಗ್ರೆಸ್‌ನಲ್ಲಿ ಸಿಎಂ ಅಭ್ಯರ್ಥಿ ಬಗ್ಗೆ ಚರ್ಚೆ ನಡೆಯುತ್ತಿದೆ. ನಾನು ಯಾವತ್ತೂ ಯಾರಿಗೂ ನನ್ನನ್ನು ಅಭ್ಯರ್ಥಿ ಮಾಡಿ ಎಂದು ಹೇಳಿಲ್ಲ. ಈಗ ಅದನ್ನು ಚರ್ಚೆ ಮಾಡುವ ಅಗತ್ಯ ಇಲ್ಲ. ಜನರ ಸಮಸ್ಯೆ ಆಲಿಸಿ ನ್ಯಾಯ ಒದಗಿಸೋಣ ಎಂದು ಉಡುಪಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು. ಅವರು ಉಡುಪಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಕೊರೋನಾ ಕಾಲದಲ್ಲಿ ಜೀವ ಇದ್ದರೆ ಜೀವನ ಎಂದು ಹೇಳಿದರು. ಸಿದ್ದರಾಮಯ್ಯ ಬಾದಾಮಿಯಿಂದ ಸ್ಪರ್ಧೆ ವಿಚಾರದ ಬಗ್ಗೆ