Home ಕರಾವಳಿ Archive by category ಉಡುಪಿ (Page 28)

ಬೈಂದೂರು: ಸಹಾಯದ ನಿರೀಕ್ಷೆಯಲ್ಲಿ ಚಂದು ಕುಟುಂಬ

ಬೈಂದೂರು ತಾಲೂಕು ಕಚೇರಿಯ ಸಮೀಪದಲ್ಲಿರುವ ದರ್ಖಾಸ್ತು ಕಾಲೋನಿ ನಿವಾಸಿ ಚಂದು ಅವರ ಕುಟುಂಬಕ್ಕೆ ದಿಕ್ಕೇ ತೋಚದಂತಹ ಪರಿಸ್ಥಿತಿ ಇದೆ. ಕಿತ್ತು ತಿನ್ನುವ ಬಡತನದ ನಡುವೆ ಆಧಾರಸ್ಥಂಭವಾಗಿದ್ದ ಹಿರಿ ಮಗ ಪ್ರಕಾಶ್ ಅಪಘಾತದಲ್ಲಿ ಬೆನ್ನು ಮೂಳೆ ಮುರಿದುಕೊಂಡು ಆರು ವರ್ಷದಿಂದ ಹಾಸಿಗೆ ಹಿಡಿದಿದ್ದಾರೆ. ಎರಡು ವರ್ಷಗಳ ಹಿಂದಿನ ಭಾರೀ ಮಳೆಗೆ ಮನೆ ಮೇಲೆ ಮರ ಬಿದ್ದ ಕಾರಣ

ಬ್ರಹ್ಮಾವರ : ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ಹೊಸ ತಂತ್ರಜ್ಞಾನದ ಸಿಸಿ ಕ್ಯಾಮರಾ ಅಳವಡಿಕೆ

ಬ್ರಹ್ಮಾವರ ಪೊಲೀಸ್ ಠಾಣಾ ವ್ಯಾಪ್ತಿಯ ಬಾರಕೂರು ಕಲ್ಲು ಚಪ್ಪರ ಮತ್ತು ಆಕಾಶವಾಣಿ ವೃತ್ತದ ಬಳಿ ದಾನಿಗಳ ನೆರವಿನಿಂದ ಹೊಸ ತಂತ್ರಜಾÐನದ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಇತ್ತೀಚೆಗೆ ಬಾರಕೂರಿನಲ್ಲಿ 3 ಪೆಟ್ರೋಲ್ ಬಂಕ್‍ನಲ್ಲಿ ಅಳವಡಿಸಿರುವ ಸಿಸಿ ಕ್ಯಾಮಾರಾಕ್ಕೆ ಬಟ್ಟೆ ಮುಚ್ಚಿ ಅಲ್ಲಿರುವ ಹಣವನ್ನು ಕಳ್ಳರು ಕದ್ದೊಯ್ದ ಘಟನೆ ನಡೆದಿತ್ತು. ಇದೀಗ ಅಳವಡಿಸಿದ್ದ ಸಿಸಿ ಕ್ಯಾಮರಾ ಹೊಸ ತಂತ್ರಜ್ಞಾನದ್ದಾಗಿದ್ದು ಮಂದ ಬೆಳಕಿನಲ್ಲಿ ಕೂಡಾ ವ್ಯಕ್ತಿ, ವಾಹನಗಳ

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದಲ್ಲಿ ಬೆಳಕಿಗಾಗಿ ಪರದಾಟ

ಬ್ರಹ್ಮಾವರ : ರಾಷ್ಟ್ರೀಯ ಹೆದ್ದಾರಿ 66 ಬ್ರಹ್ಮಾವರ ನಗರಭಾಗ ಸೇರಿದಂತೆ ಹೇರೂರಿನಿಂದ ಉಪ್ಪಿನಕೋಟೆ ತನಕ ಕೇಂದ್ರ ಭಾಗದಲ್ಲಿ ಚತುಷ್ಪಥ ರಸ್ತೆಗೆ ಹೆದ್ದಾರಿ ಇಲಾಖೆಯಿಂದ ಬೆಳಕಿನ ವ್ಯವಸ್ಥೆಯಿಲ್ಲ. ರಸ್ತೆ ಬದಿ ವಿದ್ಯುತ್ ಕಂಬಗಳು ಮಾತ್ರ ಕಂಡುಬರುತ್ತಿದ್ದು, ವಿದ್ಯುತ್ ದೀಪಗಳು ಮಾತ್ರ ಉರಿಯುತ್ತಿಲ್ಲ. ಬ್ರಹ್ಮಾವರ ಸರ್ವಿಸ್ ರಸ್ತೆ ಆರಂಭವಾಗುವ ಮಹೇಶ್ ಆಸ್ಪತ್ರೆಯಿಂದ ಧರ್ಮಾವರ ವೃತ್ತ ತನಕ ವಾಹನ ಸಂಚಾರಿ ಮತ್ತು ಪಾದಚಾರಿಗಳಿಗೆ ಸರಿಯಾದ ಬೆಳಕಿನ ವ್ಯವಸ್ಥೆ

ಪಡುಬಿದ್ರಿ ; ಟ್ಯಾಂಕರ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ – ಸ್ಕೂಟರ್ ಸಹಸವಾರನಿಗೆ ಗಂಭೀರ ಗಾಯ

ಟ್ಯಾಂಕರ್ ಹಾಗೂ ಸ್ಕೂಟರ್ ನಡುವೆ ಅಪಘಾತವಾದ ಘಟನೆ ಪಡುಬಿದ್ರಿಯ ಕನ್ನಂಗಾರಿನಲ್ಲಿ ನಡೆದಿದೆ. ಅಪಘಾತದಲ್ಲಿ ಸ್ಕೂಟರ್‍ನ ಹಿಂಬದಿ ಸವಾರ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆ ದಾಖಲಿಸಲಾಗಿದೆ. ಯುಪಿ ಮೂಲದ ಇಬ್ಬರು ಸ್ಕೂಟರ್ ಏರಿಕೊಂಡು ಹೆಜಮಾಡಿ ಒಳ ರಸ್ತೆಯಿಂದ ಕನ್ನಂಗಾರಿನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಎಂಟ್ರಿ ಕೊಡುತ್ತಿದಂತೆ, ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಟ್ಯಾಂಕರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್‍ನ ಹಿಂಬದಿ

ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ

ಉಡುಪಿ ಜಿಲ್ಲೆಯ ಗಡಿಭಾಗದ ಹೆಜಮಾಡಿ ಟೋಲ್‍ಗೇಟ್‍ನಲ್ಲಿ ಕಳೆದ ರಾತ್ರಿ ಬೆಂಗಳೂರು ಯುವಕರು ಹಾಗೂ ಟೋಲ್ ಸಿಬ್ಬಂದಿಗಳ ನಡುವೆ ಹೊಡೆದಾಟ ನಡೆದಿದೆ. ಬೆಂಗಳೂರಿನ ಐವರು ಯುವಕರ ತಂಡ ಕಾರಲ್ಲಿ ಬಂದಿದ್ದು ಪಾಸ್ಟ್ ಟ್ಯಾಗ್ ಇಲ್ಲದ ಅವರು ಗೇಟನ್ನು ಕೈಯಿಂದ ತೆರೆದು ಮುಂದೆ ಹೋದಾಗ ಟೋಲ್ ಸಿಬ್ಬಂದಿಗಳು ತಡೆದಿದ್ದು ಆಗ ಯುವಕನೊರ್ವ ಟೋಲ್ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾನೆ. ಇದರಿಂದ ಆಕ್ರೋಶಗೊಂಡ ಟೋಲ್ ಸಿಬ್ಬಂದಿಗಳು ಯುವಕರಿಗೆ ಚೆನ್ನಾಗಿ ಬಾರಿಸಿದ್ದಾರೆ.

ಶಿರೂರು: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಮೃತ್ಯು

ಶಿರೂರಿನ ಕೈರಂಪಣಿ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ನಾಲ್ವರು ಮೀನುಗಾರರಲ್ಲಿ ಇಬ್ಬರು ಮೀನುಗಾರರು ಸಮುದ್ರ ಪಾಲಾಗಿ ಮೃತಪಟ್ಟ ಘಟನೆ ಅಳ್ವೆಗದ್ದೆಯಲ್ಲಿ ನಡೆದಿದೆ. ಶಿರೂರು ಗ್ರಾಮದ ಕೆಸರಕೋಡಿ ನಿವಾಸಿಗಳಾದ ಗಂಗೊಳ್ಳಿ ಮುಸಾಭ್(22) ಹಾಗೂ ನಝಾನ್(24) ಮೃತಪಟ್ಟ ದುದೈವಿಗಳಾಗಿದ್ದಾರೆ. ಕಳೆದ ಹಲವು ಸಮಯದಿಂದ ಕೈರಂಪಣಿ ಮೀನುಗಾರಿಕೆ ನಡೆಸುತ್ತಿರುವ ಇವರು ಭಾನುವಾರ ಸಂಜೆ ಕೂಡ ಕೈರಂಪಣಿ ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಪ್ರಕ್ಷುಬ್ದ ಇರುವ ಕಾರಣ

ಉಡುಪಿ: ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸದಿರಲಿ – ಜಗದೀಶ್ ಶೆಟ್ಟರ್

ಉಡುಪಿ : ರಾಜ್ಯದ ಎಲ್ಲಾ ಜಿಲ್ಲೆಗಳು ಸಮಗ್ರವಾಗಿ ಅಭಿವೃದ್ಧಿಯಾಗಬೇಕಾಗಿದೆ. ಇಂತಹ ಸಂದರ್ಭದಲ್ಲಿ ಪರಿಸರ ಹೋರಾಟ ಅಭಿವೃದ್ಧಿಯ ಪಥ ತಪ್ಪಿಸುವಂತಾಗಬಾರದು. ನಮ್ಮಲ್ಲಿ ಅಭಿವೃದ್ಧಿಯ ಪರ ಚಿಂತನೆ ಇರಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಹೇಳಿದರು. ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯು ಆಯೋಜಿಸಿದ್ದ ಮಾಲಿನ್ಯ ನಿಯಂತ್ರಿತ ಕೈಗಾರೀಕರಣ ಹಾಗೂ ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಸಂವಾದ

ಕಾಂಗ್ರೆಸ್ ಸೇರಲು ತಾಲೂಕು, ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ :ಜಗದೀಶ್ ಶೆಟ್ಟರ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಲಿದೆ. ಕಾಂಗ್ರೆಸ್ 12 ರಿಂದ 15 ಸ್ಥಾನ ಗೆಲ್ಲುವುದು ನಿಶ್ಚಿತ. ಸದ್ಯದ ಪರಿಸ್ಥಿತಿ ನೋಡಿದ್ರೆ 15ಕ್ಕಿಂತ ಹೆಚ್ಚು ಸ್ಥಾನ ಬಂದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದು ಕಾಂಗ್ರೆಸ್ ನಾಯಕ ಜಗದೀಶ್ ಶೆಟ್ಟರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ಸೇರಲು ರಾಜ್ಯದ ಎಲ್ಲಾ ತಾಲೂಕು ಜಿಲ್ಲೆಯ ಜನ ಉತ್ಸುಕರಾಗಿದ್ದಾರೆ. ಕರ್ನಾಟಕದಲ್ಲಿ ಬಿಜೆಪಿ ಇನ್ನೂ ದಯನೀಯ

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಾಲಯಗಳಲ್ಲಿ ವರಮಹಾಲಕ್ಷ್ಮೀ ಪೂಜೆ

ಬ್ರಹ್ಮಾವರ: ಬಾರಕೂರಿನ ವಿವಿಧ ದೇವಸ್ಥಾನಗಳಲ್ಲಿ ವರಮಹಾಲಕ್ಷ್ಮೀ ವೃತ ಪೂಜೆ ನಡೆಯಿತು. ಬಾರಕೂರು ಶ್ರೀ ಕಾಳಿಕಾಂಬಾ ದೇವಸ್ಥಾನ, ಮೂಡುಕೇರಿ ಶ್ರೀ ಸರಸ್ವತಿ ನಾರಾಯಣಿ ದೇವಸ್ಥಾನ, ಶ್ರೀ ಬ್ರಹ್ಮಲಿಂಗ ವೀರಭದ್ರ ದುರ್ಗಾ ಪರಮೇಶ್ವರೀ ದೇವಸ್ಥಾನ, ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ, ಕಚ್ಚೂರು ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನ, ಶ್ರೀ ಏಕನಾಥೇಶ್ವರೀ ದೇವಸ್ಥಾನ, ಕಚ್ಚೂರು ಮಾಲ್ತಿ ದೇವಿ ದೇವಸ್ಥಾನ, ಮೂಡುಕೇರಿ ಶ್ರೀ ವೇಣು ಗೋಪಾಲಕೃಷ್ಣ, ಬೆಣ್ಣೆಕುದ್ರು ಶ್ರೀ

ಬ್ರಹ್ಮಾವರ: ಚಂದ್ರಯಾನ-3 ಯಶಸ್ಸಿಗೆ ಸಂಭ್ರಮಾಚರಣೆ

ಬ್ರಹ್ಮಾವರ : ವಿಶ್ವಕ್ಕೆ ಅಚ್ಚರಿ ಮೂಡಿಸಿದ ಭಾರತದ ಚಂದ್ರಯಾನದ ಯಶಸ್ಸಿಗೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಸಂಭ್ರಮಾಚರಣೆ ನಡೆಸಿದ್ದಾರೆ.ಬ್ರಹ್ಮಾವರ ಫ್ರೆಂಡ್ಸ್ ಮತ್ತು ಡೈಮಂಡ್ ಜಿಮ್‍ನ ಸದಸ್ಯರು ಭಾರತದ ಹೆಮ್ಮೆಯ ವಿಜ್ಞಾನಿಗಳ ತಂಡದ ಶ್ರಮಕ್ಕೆ, ಇಸ್ರೋ ಸಂಸ್ಥೆಗೆ, ದೇಶದ ಪ್ರಧಾನಿ ನರೇಂದ್ರ ಮೋದಿಜೀಯವರಿಗೆ ಮತ್ತು ಭಾರತ ಮಾತೆಗೆ ಜೈ ಕಾರ ಹಾಕಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಈ ಸಂದರ್ಭದಲ್ಲಿ ತಂಡದ ದೇವಾನಂದ ನಾಯಕ್, ಅರ್ಜುನ ಪ್ರಭು, ಮಧುಸೂಧನ