Home ಕರಾವಳಿ Archive by category ಉಡುಪಿ (Page 39)

ಉಡುಪಿ ಜಿಲ್ಲಾಧಿಕಾರಿ ವರ್ಗಾವಣೆ

ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಗುರುವಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ವಿದ್ಯಾಕುಮಾರಿ ಅವರನ್ನು ನೇಮಿಸಲಾಗಿದೆ. ಈ ಬಗ್ಗೆ, ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ.ವಿದ್ಯಾಕುಮಾರಿ ಅವರು ಈ ಹಿಂದೆ ಉಡುಪಿ ಜಿಲ್ಲೆಯ ಎಡಿಸಿಯಾಗಿ ಸೇವೆ ಸಲ್ಲಿಸಿದ್ದಾರೆ. ಮೂಲತಃ

ಕೊಲ್ಲೂರು : ಮಾನಸಿಕ ಅಸ್ವಸ್ಥ ಮಹಿಳೆಗೆ ಪುನರ್ವಸತಿ ಕಲ್ಪಿಸಿದ ಪೊಲೀಸರು

ಮಾನಸಿಕ ಅಸ್ವಸ್ಥ ಮಹಿಳೆಯೊಬ್ಬರು ಕೊಲ್ಲೂರಿನ ಸಲಗೇರಿ ಎಂಬಲ್ಲಿ ತಿರುಗಾಡುತ್ತಿದ್ದು, ಇದನ್ನು ಮನಗಂಡ ಸ್ಥಳೀಯರು ಠಾಣೆಗೆ ದೂರು ನೀಡಿದ್ದಾರೆ. ಬಳಿಕ ಆಕೆಯನ್ನು ಮಂಜೇಶ್ವರದ ಪುನರ್ವಸತಿ ಕೇಂದ್ರಕ್ಕೆ ಕಳುಹಿಸಲಾಯಿತು. ಮಹಿಳೆ ತಿರುಗಾಡುತ್ತಿದ್ದ ವಿಚಾರವನ್ನು ಸ್ಥಳೀಯರು ಮತ್ತು ರಿಕ್ಷಾ ಚಾಲಕರು ಕೊಲ್ಲೂರು ಟಾಣೆಗೆ ದೂರು ನೀಡಿದ್ದಾರೆ. ಕೂಡಲೇ ಸ್ಪಂದಿಸಿದ ಪಿಎಸ್‍ಐ ಜಯಶ್ರೀ ಹನ್ನೂರ ಹಾಗೂ ಸುಧಾರಾಣಿ ಅವರ ಗಮನಕ್ಕೆ ತಂದರು. ನಂತರ ಮಹಿಳೆಗೆ ಭದ್ರತೆಯನ್ನು

ಶೌರ್ಯ ವಿಪತ್ತು ಘಟಕದಿಂದ ಶಾಂಭವಿ ನದಿಯ ಕಿಂಡಿ ಅಣೆಕಟ್ಟಿನಲ್ಲಿ ಸಿಲುಕಿದ್ದ ತ್ಯಾಜ್ಯಗಳ ತೆರವು

ಸಾಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಪುಲ ಬಳಿ ಶಾಂಭವಿ ನದಿಗೆ ನಿರ್ಮಿಸಲಾದ ಕಿಂಡಿ ಅಣೆಕಟ್ಟುವಿನಲ್ಲಿ ತ್ಯಾಜ್ಯಗಳು ಸಿಲುಕಿ ಹಾಕಿಕೊಂಡಿದ್ದು, ಅದನ್ನು ತೆರವುಗೊಳಿಸುವ ಕಾರ್ಯಕ್ಕೆ ಶೌರ್ಯ ವಿಪತ್ತು ಘಟಕ ಮುಂದಾಗಿದ್ದು, ಸತತ ನಾಲ್ಕು ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ ತ್ಯಾಜ್ಯಗಳನ್ನು ತೆರವು ಮಾಡಿದರು. ಕಿಂಡಿ ಅಣೆಕಟ್ಟುವಿಗೆ ಕಡಿದು ಹಾಕಿದ ಬೃಹತ್ ಗಾತ್ರದ ಮರದ ದಿಮ್ಮಿ , ಗಿಡ, ಕಸ, ಪ್ಲಾಸ್ಟಿಕ್ ತ್ಯಾಜ್ಯಗಳು ಸಿಕ್ಕಿಹಾಕಿಕೊಂಡು ನದಿಯ ನೀರು ಸರಾಗವಾಗಿ

ಶಿರೂರಿನಲ್ಲಿ ಹಾಡಹಗಲೇ ಮನೆಗೆ ನುಗ್ಗಿ ಕಳವು

: ಹಾಡುಹಗಲೇ ಮನೆಗೆ ನುಗ್ಗಿ ಮೂರು ಲಕ್ಷಕ್ಕೂ ಅಧಿಕ ಚಿನ್ನಾಭರಣ ಕದ್ದೋಯ್ದ ಘಟನೆ ಶಿರೂರಿನಲ್ಲಿ ನಡೆದಿದೆ. ಶಿರೂರು ಮಾರ್ಕೆಟ್ ಬಳಿ ಠಾಕೇಶ್ ಪಟಗಾರ್ ದಂಪತಿ ವೃತ್ತಿಯಲ್ಲಿ ಶಿಕ್ಷಕರಾಗಿದ್ದು ನಿನ್ನೆ ಮಧ್ಯಾಹ್ನ ಊಟ ಮುಗಿಸಿ ಕಾಲೇಜಿಗೆ ಮರಳಿದ ಸಮಯ ನೋಡಿ ಹಿಂಬಾಗಿಲಿನಿಂದ ನುಗ್ಗಿದ ಕಳ್ಳರು, 32 ಗ್ರಾಂ ಮಾಂಗಲ್ಯ ಸರ ಸೇರಿದಂತೆ 10 ಗ್ರಾಂ ಕಿವಿಯೋಲೆ, 100 ಗ್ರಾಂ ಬೆಳ್ಳಿ ಹಾಗೂ 1000 ರೂಪಾಯಿ ನಗದು ಕದ್ದೊಯ್ದಿದ್ದಾರೆ. ಪಕ್ಕದ ಮನೆಗೆ ತೆರಳಿ ಅಲ್ಲೂ ಕೂಡ ಬಾಗಿಲು

ಬ್ರಹ್ಮಾವರ : ಕೆಸರು ಗದ್ದೆಯಲ್ಲಿ ಒಂದು ದಿನ

ಬ್ರಹ್ಮಾವರದ ಶ್ರೀ ವೇಣುಗೋಪಾಲಕೃಷ್ಣ ಯುವಕ ಸಂಘ ಮೂಡುಕೇರಿ ಬಾರ್ಕೂರು, ಸೋಮ ಕ್ಷತ್ರಿಯ ಗಾಣಿಗ ಸಮಾಜ, ಶ್ರೀ ಅನ್ನಪೂರ್ಣೇಶ್ವರಿ ಮಹಿಳಾ ಸಂಘ, ಜಿಲ್ಲಾ ಗಾಣಿಗ ಯುವ ಸಂಘಟನೆ ಉದ್ಯಾವರ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಕೆಸರು ಗದ್ದೆಯಲ್ಲಿ ಒಂದು ದಿನ ಕಾರ್ಯಕ್ರಮವು ದೇವಸ್ಥಾನದ ಬಳಿಯ ಸುಜಾತ ಶೆಟ್ಟಿ ಅವರ ಗದ್ದೆಯಲ್ಲಿ ಜರುಗಿತು. ಸೋಮಕ್ಷತ್ರಿಯ ಗಾಣಿಗೆ ಸಮಾಜದ ಅಧ್ಯಕ್ಷ ಸೂರ್ಯನಾರಾಯಣಗಾಣಿಗ ಮಟಪಾಡಿ ಮತ್ತು ಗಣ್ಯರು ಗದ್ದೆಗೆ ಹಾಲು ಸಮರ್ಪಿಸಿ

ಕಾಪುವಿನಲ್ಲಿ ಕಡಲು ಅಪಾಯಕಾರಿ: ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ

ಕಾಪು ಬೀಚ್‌ನಲ್ಲಿ ಕಡಲು ಪ್ರಕ್ಷುಬ್ಧಗೊಂಡಿರುವುದರಿಂದ ಲೈಟ್‌ಹೌಸ್ ಪಕ್ಕದಲ್ಲಿ ಸಮುದ್ರಕ್ಕೆ ಇಳಿಯುವುದು ಮತ್ತು ಲೈಟ್‌ಹೌಸ್ ಬಂಡೆ ಮೇಲಿನ ಪ್ರವೇಶ ನಿರ್ಬಂಧಿಸಲಾಗಿದೆ. ಕಡಲು ಪ್ರಕ್ಷುಬ್ಧಗೊಂಡು, ಲೈಟ್‌ಹೌಸ್ ಬಳಿಯಲ್ಲಿ ಸಮುದ್ರ ಮತ್ತು ಹಿನ್ನೀರಿನ ಹೊಳೆ ಪರಸ್ಪರ ಜೋಡಣೆಯಾಗಿದೆ. ಇದರಿಂದಾಗಿ ಲೈಟ್‌ಹೌಸ್ ಇರುವ ಬಂಡೆ ಮೇಲೆ ಪ್ರವೇಶಿಸುವುದೇ ಕಷ್ಟಕರವಾಗಿದೆ. ಇಷ್ಟಿದ್ದರೂ ಕೆಲವೊಂದು ಪ್ರವಾಸಿಗರು ಪ್ರಯಾಸಪಟ್ಟು ಮೆಟ್ಟಿಲಗಳನ್ನೇರಿ ಲೈಟ್ ಹೌಸ್ ಪಕ್ಕಕ್ಕೆ ಹೋಗಲು

ಕಿಟಕಿ ಪೊರಂನಲ್ಲಿ ಸಿಲುಕಿಕೊಂಡ ವಿಶೇಷಚೇತನ ಬಾಲಕನ ರಕ್ಷಣೆ

ಉಡುಪಿ: ಉಡುಪಿ ನಗರದ ಬ್ರಹ್ಮಗಿರಿಯ ಅಪಾರ್ಟ್ಮೆಂಟ್ ನ ಕಿಟಕಿ ಪೊರಂನಲ್ಲಿ ಎಂಟು ವರ್ಷದ ವಿಶೇಷಚೇತನ ಬಾಲಕ ಸಿಲುಕಿಕೊಂಡಿರುವ ಘಟನೆ ನಡೆದಿದೆ. 11ನೇ ಮಹಡಿಯ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿ ಪೋರಂ‌ನಲ್ಲಿ ಸಿಲುಕಿಕೊಂಡಿದ್ದ ಆರುಷ್ ಎಂಬ ಬಾಲಕನನ್ನು ಅಗ್ನಿಶಾಮಕ ದಳದ ಸಿಬ್ಬಂದಿಗಳು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದ ಯಶಸ್ವಿ ಕಾರ್ಯಚರಣೆಯಿಂದ ಆರುಷ್ ಪೋಷಕರು ನಿಟ್ಟುಸಿರು ಬಿಟ್ಟರು.

ಜೈನ ಮುನಿಗಳ ಹತ್ಯೆಗೆ ಪೇಜಾವರ ಶ್ರೀಗಳು ಖಂಡನೆ

ಉಡುಪಿ : ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಇಂದು ಉಡುಪಿಯಲ್ಲಿ ಮಾತನಾಡಿದ ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥರು, ವಿಚಾರ ತಿಳಿದು ನನಗೆ ಅತೀವ ದುಃಖವಾಗಿದೆ. ಇದು ಜನತೆಯಲ್ಲಿ ಗಾಬರಿ ಹುಟ್ಟಿಸುವ ಘಟನೆ. ಓರ್ವ ಸಾಧುವನ್ನು ಸ್ವತಂತ್ರ ಭಾರತದಲ್ಲಿ ಈ ರೀತಿ ಹತ್ಯೆ ಮಾಡಿರುವುದು ದುರಂತ. ಹೀಗಾದರೆ ಸಾಮಾನ್ಯ ಜನರ ಪಾಡೇನು? ಇಂತಹ ಕೃತ್ಯ ಎಂದೂ ಎಲ್ಲೆಲ್ಲೂ ನಡೆಯಬಾರದು. ಈ ಘಟನೆಯನ್ನು ತೀಕ್ಷ್ಣ ಮಾತುಗಳಿಂದ ಖಂಡಿಸುತ್ತೇವೆ. ಸರ್ಕಾರ ತಕ್ಷಣ ಕ್ರಮ ಕೈಗೊಂಡು

ಉಡುಪಿ ಸಂತೆಕಟ್ಟೆ ಬಳಿ ಕುಸಿಯುತ್ತಿರುವ ಹೆದ್ದಾರಿ

ಉಡುಪಿಯ ಸಂತೆಕಟ್ಟೆಯಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಮಣ್ಣು ಕುಸಿಯುತ್ತಿದ್ದು ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಇದರಿಂದ ಇಲ್ಲಿ ನಿರ್ಮಿಸಲಾದ ತಡೆಗೋಡೆಗಳಿಗೂ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ ಮಣ್ಣು ಕುಸಿತ ಹೆಚ್ಚಾಗುತ್ತಿದ್ದು

ಪಡುಬಿದ್ರಿ : ಜೆ.ಪಿ ಟ್ರೋಫಿ-2023 – ಪಡುಬಿದ್ರಿಯ ಆರ್.ಸಿ.ಪಿ ತಂಡಕ್ಕೆ ಗೆಲುವು

ಪಡುಬಿದ್ರಿಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಮೈದಾನದಲ್ಲಿ ನಡೆದ ನಿಗದಿತ ಒವರ್ ಗಳ “ಜೆ.ಪಿ. ಟ್ರೋಫಿ- 2023 “ಕ್ರಿಕೆಟ್ ಪಂದ್ಯಾಕೂಟದಲ್ಲಿ ಪಡುಬಿದ್ರಿಯ ಆರ್.ಸಿ.ಪಿ. ತಂಡ ಜೆ.ಪಿ. ಟ್ರೋಫಿ ತನ್ನದಾಗಿಸಿಕೊಂಡಿದೆ. ಜಸ್ವಿದ್ ಪಡುಬಿದ್ರಿ, ಅಪ್ಪು ಪಡುಬಿದ್ರಿ, ಹಾಗೂ ರಂಜತ್ ಎರ್ಮಾಳ್ ನೇತ್ರತ್ವದಲ್ಲಿ ಎರಡು ದಿನಗಳ ಕಾಲ ನಡೆದ ಈ ಪಂದ್ಯಾಕೂಟದಲ್ಲಿ ಒಟ್ಟು ಹತ್ತು ತಂಡಗಳು ಭಾಗವಹಿಸಿದ್ದವು. ಇಪ್ಪತ್ತೊಂದು ವಯೋಮಿತಿಯವರಿಗೆ ನಡೆದ ಪಂದ್ಯಾಕೂಟದಲ್ಲಿ ಅಪ್ಪು