Home ಕರಾವಳಿ Archive by category ಉಳ್ಳಾಳ (Page 11)

ನರಿಂಗಾನ ಗ್ರಾ.ಪಂ.ನ ದ್ವಿತೀಯ ಹಂತದ ಗ್ರಾಮಸಭೆ

ನರಿಂಗಾನ ಗ್ರಾಮದಲ್ಲಿ ರೈತರು ಹಿಂದಿನಿಂದಲೂ ಹೈನುಗಾರಿಕೆ ಬಗ್ಗೆ ಒಲವು ಹೊಂದಿದ್ದು ಅತಿ ಹೆಚ್ಚು ದನಗಳನ್ನು ಸಾಕುತ್ತಿದ್ದಾರೆ. ಆದರೆ ಗೋವುಗಳಿಗೆ ಆರೋಗ್ಯದಲ್ಲಿ ಏರುಪೇರಾದಾಗ ಸ್ವತಃ ದನದ ಮಾಲೀಕರೇ ಪಶು ವೈದ್ಯರ ಬಳಿಗೆ ಹೋದರೂ ಚಿಕಿತ್ಸೆಗೆ ಬರುತ್ತಿಲ್ಲ. ವೈದ್ಯರು ಈ ರೀತಿ ವರ್ತಿಸಿದರೆ ಹೈನುಗಾರಿಕೆ ಹೇಗೆ ಅಭಿವೃದ್ಧಿ ಸಾಧ್ಯ ಎಂದು ನರಿಂಗಾನ ಗ್ರಾಮಸ್ಥರೊಬ್ಬರು

ತಲಪಾಡಿ, ಅಪ್ರಾಪ್ತೆಗೆ ಕಿರುಕುಳ : ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತೆ ಮೇಲೆ ಕಿರುಕುಳ ನೀಡಿರುವ ಘಟನೆ ತಲಪಾಡಿ ರಿಕ್ಷಾ ಸ್ಟ್ಯಾಂಡ್ ಬಳಿ ಇಂದು ಸಂಜೆ ವೇಳೆ ನಡೆದಿದ್ದು, ಆರೋಪಿ ಮುಡಿಪು ದರ್ಖಾಸು ಸೈಟ್ ನಿವಾಸಿ ಮುವಾದ್ (35) ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿದ್ದಾರೆ.ಆರೋಪಿ ಮುವಾದ್ ವಿರುದ್ಧ ಕೊಣಾಜೆ ಠಾಣೆಯಲ್ಲಿ ಗಾಂಜಾ ಸಹಿತ ಇತರೆ ಎರಡು ಪ್ರಕರಣಗಳಿದ್ದು, ನ್ಯಾಯಾಲಯದಲ್ಲಿ ವಿಚಾರಣಾ ಹಂತದಲ್ಲಿದೆ. ಇಂದು ಸಂಜೆ ಎಸ್ ಎಸ್ ಎಲ್ ಸಿ ವಿದ್ಯಾರ್ಥಿನಿ ಶಾಲೆಯಿಂದ

ಉಳ್ಳಾಲ : ನೇತ್ರಾವತಿ ನದಿತಟದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಉಳ್ಳಾಲ: ನೇತ್ರಾವತಿ ನದಿತಟದಲ್ಲಿ ಪತ್ತೆಯಾದ ಅಪರಿಚಿತ ವ್ಯಕ್ತಿಯ ಗುರುತು ಪತ್ತೆಯಾಗಿದ್ದು, ಹಾಸನ ಬೇಳೂರು ನಿವಾಸಿ ಮೊಹಮ್ಮದ್ ಝಾಕಿರ್ (50) ಎಂದು ಉಳ್ಳಾಲ ಠಾಣೆಗೆ ಆಗಮಿಸಿದ ಮನೆಮಂದಿ ತಿಳಿಸಿದ್ದಾರೆ. ಕೆಲ ತಿಂಗಳುಗಳಿಂದ ಅಸೌಖ್ಯಕ್ಕೀಡಾಗಿದ್ದ ಝಾಕೀರ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಬರುತ್ತಿದ್ದರು. ಎರಡು ದಿನಗಳ ಹಿಂದೆಯೂ ಊರುಬಿಟ್ಟು ಔಷಧಿಗೆಂದು ಬಂದಿದ್ದವರು ಬಳಿಕ ನಾಪತ್ತೆಯಾಗಿದ್ದರು. ಈ ಬಗ್ಗೆ ಮನೆಮಂದಿ ಎಲ್ಲೆಡೆ ಎರಡು ದಿನಗಳ ಕಾಲ

ಉಳ್ಳಾಲ: ಪೋಕ್ಸೊ ಕಾಯಿದೆಯಡಿ ದಾಖಲಾದ ಪ್ರಕರಣದ ಆರೋಪಿ ಪರಾರಿ

ಉಳ್ಳಾಲ: ಅಪ್ರಾಪ್ತ ವಿದ್ಯಾರ್ಥಿನಿ ವಿರುದ್ಧ ಕಿರುಕುಳ ನೀಡಿದ ರಿಕ್ಷಾ ಚಾಲಕನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.ಅಂಬ್ಲಮೊಗರು ನಿವಾಸಿ ಇಕ್ಬಾಲ್ ಎಂಬಾತ ನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಸ್ಸಿಗಾಗಿ ಕಾಯುವ ಸಂದರ್ಭ ಮಾತನಾಡಿಸಲು ಯತ್ನಿಸಿದ್ದ ರಿಕ್ಷಾ ಚಾಲಕ ವಿದ್ಯಾರ್ಥಿನಿ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದನು. ಜೂನ್ ತಿಂಗಳಲ್ಲಿ ನಡೆದ ಘಟನೆ ಕುರಿತು ಅಪ್ರಾಪ್ತೆ ಹೆತ್ತವರಲ್ಲಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ

ಉಳ್ಳಾಲ: ಓವರ್ ಲೋಡ್ ಇದ್ದ ಲಾರಿ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಘಟನೆ ನಾಟೆಕಲ್ – ಮಂಜನಾಡಿ ಮಾರ್ಗ ಮಧ್ಯೆ ಸಂಭವಿಸಿದ್ದು, ಘಟನೆಯಲ್ಲಿ ಚಾಲಕ ಅಲ್ಪಸ್ವಲ್ಪ ಗಾಯದಿಂದ ಪಾರಾಗಿದ್ದು, ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದೇರಳಕಟ್ಟೆ ಕಡೆಯಿಂದ ತೌಡುಗೋಳಿ ಕಡೆಗೆ ಪ್ಲೈವುಡ್ ಇದ್ದ ಲಾರಿ ತೆರಳುತ್ತಿದ್ದು, ಈ ನಡುವೆ ತಿರುವಿನಲ್ಲಿ  ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಎದುರಿನಿಂದ ಬಂದಿದೆ. ಲಾರಿಯಲ್ಲಿ ಓವರ್ ಲೋಡ್ ಇದ್ದ

ಮುಡಿಪು : ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ

ಉಳ್ಳಾಲ: ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಮುಡಿಪು ಜಂಕ್ಷನ್ನಿನಲ್ಲಿ ಸಂಭವಿಸಿದೆ. ಘಟನೆಯಲ್ಲಿ ಕಾರು ಚಾಲಕ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ. ಮಂಗಳೂರಿನಿಂದ ಬಿ.ಸಿ ರೋಡಿನತ್ತ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ಮುಡಿಪು ಜಂಕ್ಷನ್ನಿನಲ್ಲಿ ತಿರುಗುವ ಸಂದರ್ಭ , ಭಾರತಿ ಶಾಲೆ ಕಡೆಯಿಂದ ಬರುತ್ತಿದ್ದ ಝೆನ್ ಕಾರಿಗೆ ಮುಖಾಮುಖಿ ಢಿಕ್ಕಿ ಹೊಡೆದಿದೆ. ಬಸ್ಸು ಮುಂಭಾಗಕ್ಕೆ ಕಾರು ಒಳನುಗ್ಗಿದ್ದು, ಕಾರು ಚಾಲಕ ಪವಾಡಸದೃಶ

ಉಳ್ಳಾಲ : ಸಿಟಿ ಬಸ್ ಚಾಲಕನ ಬೇಜವಾಬ್ದಾರಿ ವರ್ತನೆ ವಿರುದ್ಧ ಆಕ್ರೋಶ

ಉಳ್ಳಾಲ : ಸ್ಟೇಟ್ ಬ್ಯಾಂಕ್ ತಲಪಾಡಿ ನಡುವೆ ಚಲಿಸುವ ಸಿಟಿ ಬಸ್ ಚಾಲಕ ಚಾಲನೆ ವೇಳೆ ಮೊಬೈಲ್ ಉಪಯೋಗಿಸುತ್ತಿರುವುದನ್ನು ಪ್ರಯಾಣಿಕರೊಬ್ಬರು ಸೆರೆಹಿಡಿದಿರುವುದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೀಡಿಯೋ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಿಂದ ಚಾಲಕನ ವಿರುದ್ಧ ಕ್ರಮಕ್ಕಾಗಿ ಆಗ್ರಹ ವ್ಯಕ್ತವಾಗಿದೆ. ಖಾಸಗಿ ಬಸ್ ಚಾಲಕ ನಿರ್ಲಕ್ಷ್ಯರೀತಿಯಲ್ಲಿ ಬಸ್ ಚಲಾಯಿಸಿದ್ದಾನೆ. ನೇತ್ರಾವತಿ ಸೇತುವೆಯಿಂದ ಮೊಬೈಲ್ ನೋಡಲು ಆರಂಭಿಸಿದ ಚಾಲಕ

ಕೊಣಾಜೆ ಗ್ರಾ.ಪಂ ಮಾಜಿ ಅಧ್ಯಕ್ಷ ದೇವಪ್ಪ ಗಟ್ಟಿ ನಿಧನ

ಉಳ್ಳಾಲ: ಕೊಣಾಜೆ ಗ್ರಾಮ ಪಂಚಾಯತ್‍ನ ಮಾಜಿ ಅಧ್ಯಕ್ಷ ಬೆಳ್ಮ ಕಟ್ಟಪುಣಿ ನಿವಾಸಿ ದೇವಪ್ಪ ಗಟ್ಟಿ (90) ಅಲ್ಪಕಾಲದ ಅಸೌಖ್ಯದಿಂದ ಜು.22ರಂದು ಶನಿವಾರ ನಿಧನ ಹೊಂದಿದರು. ಮೃತರು ಪತ್ನಿ, ಇಬ್ಬರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಸೋಮೇಶ್ವರ ಸೋಮನಾಥ ದೇವಸ್ಥಾನದ ಬೃಹ್ಮಕಲಶೋತ್ಸವ, ಸಮಿತಿ ಉಪಾಧ್ಯಕ್ಷರಾಗಿ, ಗಟ್ಟಿ ಸಮಾಜ ಶ್ರೀ ಸೋಮನಾಥ ಸೇವಾ ಸಮಿತಿ ಅಧ್ಯಕ್ಷರಾಗಿ, ಮುಲಾರ ಶ್ರೀ ಗೋಪಾಲಕೃಷ್ಣ ಭಜನಾ ಮಂದಿರದ ಅಧ್ಯಕ್ಷರಾಗಿ, ಗೌರವಾಧ್ಯಕ್ಷರಾಗಿ,

ಉಳ್ಳಾಲ : ಮಟ್ಕಾ ಅಡ್ಡೆಗೆ ದಾಳಿ: ಐವರ ಬಂಧನ 

ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಓಳಪೇಟೆ ಬಳಿ ಖಾಸಗಿ ಜಾಗದಲ್ಲಿ ಮಟ್ಕಾ ಅಡ್ಡೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಲ್ಯಾನ್ಸಿ ವೇಗಸ್, ನವಾಝ್ , ಸತೀಶ್ ಗಟ್ಟಿ, ನಾಸೀರ್ ಮತ್ತು ಮಧು ಯಾನೆ ಮನು ಎಂದು ಗುರುತಿಸಲಾಗಿದೆ. ಬಂಧಿತರಿಂದ 7040ರೂ .ನಗದು, ಐದು ಮೊಬೈಲ್ ಹಾಗೂ ಜೂಜಾಟಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಉಳ್ಳಾಲದಲ್ಲಿ ಮಟ್ಕಾ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸ್ ಆಯುಕ್ತ

ಮುನ್ನೂರು ಗ್ರಾ.ಪಂ ಸದಸ್ಯ ಭುಜಂಗ ರೈ ನಿಧನ

ಉಳ್ಳಾಲ: ಸಿಪಿಎಂ ನೇತಾರ, ಮುನ್ನೂರು ಗ್ರಾ.ಪಂ. ಸದಸ್ಯ ಕುತ್ತಾರು ಮದಕ ನಿವಾಸಿ ಭುಜಂಗ ರೈ (74) ಇವರು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೂಲತ: ಕಾಸರಗೋಡು ನಿವಾಸಿಯಾಗಿರುವ ಇವರು ಕುತ್ತಾರು ಮದಕಕ್ಕೆ 30 ವರ್ಷಗಳ ಹಿಂದೆ ಬಂದಿದ್ದರು. ರಿಕ್ಷಾ ಚಾಲಕರಾಗಿ ವೃತ್ತಿ ನಿರ್ವಹಿಸುತ್ತಿದ್ದವರು. ಸಿಪಿಎಂ ಪಕ್ಷದ ಚಟುವಟಿಕೆಗಳು ಹಾಗೂ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿದ್ದರು. ಯಕ್ಷಗಾನ ಕಲಾವಿದರೂ ಆಗಿದ್ದ ಇವರು ಆಂಗ್ಲ ಭಾಷೆಯಲ್ಲಿ