Home ಕರಾವಳಿ Archive by category ಕಾಸರಗೋಡು (Page 4)

ಮಂಜೇಶ್ವರ|| ಸರ್ಕಾರಿ ಶಾಲೆಯಲ್ಲಿ ಶುಚಿತ್ವವಿಲ್ಲದ ಶೌಚಾಲಯ: ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಶಾಲಾ ಮಕ್ಕಳು

ಮಂಜೇಶ್ವರದ ಉಪಜಿಲ್ಲಾ ವ್ಯಾಪ್ತಿಯಲ್ಲಿರುವ ಸರಕಾರಿ ಶಾಲೆಗಳಲ್ಲಿ ಹಾಗೂ ಖಾಸಗಿ ಶಾಲೆಗಳ ಶೌಚಾಲಯಗಳಲ್ಲಿ ಶುಚಿತ್ವ ಇಲ್ಲದೇ ಇರುವುದು ಪೋಷಕರಲ್ಲಿ ಸಾಂಕ್ರಾಮಿಕ ರೋಗದ ಭೀತಿಯನ್ನು ಹೆಚ್ಚಿಸಿದೆ. ಮಂಜೇಶ್ವರ ಉಪಜಿಲ್ಲೆಯ ವ್ಯಾಪ್ತಿಯಲ್ಲಿರುವ ಶಾಲೆಯೊಂದರಲ್ಲಿ ಶೌಚಾಲಯದಲ್ಲಿ ಮಾಲಿನ್ಯ ಕಟ್ಟಿ ನಿಂತು ದುರ್ವಾಸನೆಯಿಂದ ವಿದ್ಯಾರ್ಥಿಗಳು ಮೂಗು ಮುಚ್ಚಿಕೊಂಡು ಹೋಗುವ

ಮಂಜೇಶ್ವರ: ನೆತ್ತಿಲ ಪದವು ಗೋವಿಂದ ಪೈ ರಸ್ತೆ ಕಳಪೆ ಕಾಮಗಾರಿ ಆರೋಪ

ಮಂಜೇಶ್ವರದ ನೆತ್ತಿಲ ಪದವು ಗೋವಿಂದ ಪೈ ರಸ್ತೆಯ ಮರುಡಾಮರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಐದು ಕೋಟಿ ರೂಪಾಯಿ ಮಂಜೂರುಗೊಂಡು ಕಾಮಗಾರಿ ನಡೆಸಲಾಗಿದೆ. ಆದರೆ, ಇದೀಗ ಕಾಮಗಾರಿಯಲ್ಲಿ ಲೋಪದೋಷಗಳು ಕಂಡುಬಂದಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ. ಈ ಮೊದಲು ರಸ್ತೆಯು 3 ಮೀಟರ್ 80 ಸೆಂಟಿ ಮೀಟರ್ ಅಗಲವಾಗಿತು. ಆದರೆ ನೂತನವಾಗಿ ನಿರ್ಮಾಣವಾಗುವ ರಸ್ತೆ 5 ಮೀಟರ್ 80 ಸೆಂಟಿ ಮೀಟರ್ ಇರಬೇಕೆಂಬುವುದು ಸ್ಥಳೀಯರ ಬೇಡಿಕೆಯಾಗಿತ್ತು. ಆದರೆ ಈಗಾಗಲೇ ಕಾಮಗಾರಿ

ಮಂಜೇಶ್ವರ: ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಮಕ್ಕಳಿಗೆ ಡ್ರಗ್ಸ್ ಜಾಗೃತಿ ಶಿಬಿರ

ಮಂಜೇಶ್ವರದ ಕುನ್ನಿಲ್ ನೋಬಲ್ ಫೌಂಡೇಶನ್‍ನ 5ನೇ ವಾರ್ಷಿಕೋತ್ಸವದ ಪ್ರಯುಕ್ತ ಡ್ರಗ್ಸ್ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಯಿತು. ಉದ್ಯಾವರ ಗುಡ್ಡೆ ಸರಕಾರಿ ಶಾಲೆಯಲ್ಲಿ ಸಂಘಟನೆಯ ಅಧ್ಯಕ್ಷ ಝಕರಿಯ್ಯ ಶಾಲಿಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಜೇಶ್ವರ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ರಾಜೇಶ್ ತೆರುವತ್ತ್ ಪೀಡಿಗಯಿಲ್ ಉದ್ಘಾಟಿಸಿದರು. ಮಂಜೇಶ್ವರ ಠಾಣೆಯ ಜನ ಮೈತ್ರಿ ಪೊಲೀಸ್ ಅಧಿಕಾರಿಗಳಾದ ಮಧು ಕರಕಡವತ್ ಹಾಗೂ ಅನೂಪ್

ಮಂಜೇಶ್ವರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಎನ್‍ಆರ್ ಇಜಿ ಯೂನಿಯನ್ ನೇತೃತ್ವದಲ್ಲಿ ಪ್ರತಿಭಟನೆ

ಮಂಜೇಶ್ವರ: ಉದ್ಯೋಗ ಖಾತರಿ ಯೋಜನೆಯನ್ನು ಬುಡಮೇಲುಗೊಳಿಸುವ ಕ್ರಮವನ್ನು ಕೊನೆಗೊಳಿಸಿ, ಹೆಚ್ಚಿಸಿದ ಮಜೂರಿಯನ್ನು ಕೂಡಲೇ ವಿತರಿಸಿ, ಕಡಿತಗೊಳಿಸಿದ ಲೇಬರ್ ಬಜೆಟ್ ಪುನಸ್ತಾಪಿಸಿ ಇತ್ಯಾದಿ ಬೇಡಿಕೆಯನ್ನು ಮುಂದಿಟ್ಟುಕೊಂಡು ಎನ್‍ಆರ್‍ಇಜಿ ಯೂನಿಯನ್ ನೇತೃತ್ವದಲ್ಲಿ ಮೀಯಪದವಿನಲ್ಲಿ ಪ್ರತಿಭಟನೆ ನಡೆಸಿದರು. ಸಭೆಯನ್ನು ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಟಿ.ಎಂ.ಏ. ಕರೀಂ ಉದ್ಘಾಟಿಸಿದರು. ಮೀಂಜ ಪಂಚಾಯತ್ ಸದಸ್ಯ ಜನಾರ್ಧನ ಪೂಜಾರಿ ಅಧ್ಯಕ್ಷತೆ

ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ, ರಸ್ತೆಯಲ್ಲಿ ವಿದ್ಯಾರ್ಥಿ ಶವವಿಟ್ಟು ನಾಗರಿಕರಿಂದ ಪ್ರತಿಭಟನೆ

ಮಂಜೇಶ್ವರದ ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರೊಂದು ಢಿಕ್ಕಿಯಾಗಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟಿದ್ದು, ಘಟನೆಯನ್ನು ಖಂಡಿಸಿ ಇಂದು ನಾಗರಿಕರು ವಿದ್ಯಾರ್ಥಿ ಸುಮಂತ್‌ನ ಮೃತದೇಹವಿಟ್ಟು ಪ್ರತಿಭಟನೆ ನಡೆಸಿದರು. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ಖಾಸಗಿ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಸಾವನ್ನಪ್ಪಿದ ವಿದ್ಯಾರ್ಥಿಯಾಗಿದ್ದಾನೆ.  ಸುಮಂತ್‌ನ ತಲೆಗೆ

ಮಂಜೇಶ್ವರ: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಢಿಕ್ಕಿ- ಗಂಭೀರ ಗಾಯ

ಮಂಜೇಶ್ವರ: ಉದ್ಯಾವರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಮಿತ ವೇಗದಿಂದ ಬಂದ ಇನೋವಾ ಕಾರೊಂದು ರಸ್ತೆದಾಟುತ್ತಿದ್ದ ವಿದ್ಯಾರ್ಥಿಗೆ ಡಿಕ್ಕಿ ಹೊಡೆದು ಗಂಭೀರ ಗಾಯಗಳೊಂದಿಗೆ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಉದ್ಯಾವರ ಮಾಡ ಕ್ಷೇತ್ರ ಸಮೀಪದ ರಘುನಾಥ ಆಳ್ವ ಎಂಬವರ ಪುತ್ರ ಮಂಗಳೂರು ನಿಟ್ಟೆ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿ ಸುಮಂತ್ (17) ಗಾಯಗೊಂಡ ವಿದ್ಯಾರ್ಥಿ. ಈತನನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾಸರಗೋಡು: ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ

ಕಾಸರಗೋಡು: ಮಂಗಲ್ಪಾಡಿ- ಕೈಕಂಬ 12*4 ಅಂಡರ್ ಪಾಸ್ ನಿರ್ಮಾಣಕ್ಕೆ ಅನುಮತಿ ದೊರೆತಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಹಾಗೂ ಕೇಂದ್ರ ಸಚಿವ ವಿ. ಮುರಳಿಧರನ್ ಅವರಿಗೆ ಕೇರಳ ರಾಜ್ಯ ಬಿಜೆಪಿ ಅಧ್ಯಕ್ಷರಾದ ಕೆ. ಸುರೇಂದ್ರನ್, ಜಿಲ್ಲಾಧ್ಯಕ್ಷರಾದ ರವೀಶ್ ತಂತ್ರಿ ಕುಂಟಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ್ ಕುಮಾರ್ ರೈ ಅವರು ಭೇಟಿಯಾಗಿ ಮನವಿಯನ್ನು ಸಲ್ಲಿಸಿದ್ದರು.ಇದೀಗ ಸ್ಪಂದಿಸಿರುವ ಕೇಂದ್ರ ಸರ್ಕಾರ ಮಂಗಲ್ಪಾಡಿ-ಕೈಕಂಬ ಅಂಡರ್ ಪಾಸ್

ಮಂಗಲ್ಪಾಡಿ: ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಪ್ರತಿಭಟನೆ

ಮುಸ್ಲಿಂ ಲೀಗ್ ಆಡಳಿತ ವೈಫಲ್ಯ ಹಾಗೂ ದುರಾಡಳಿತದ ವಿರುದ್ಧ ಭಾರತೀಯ ಜನತಾ ಪಕ್ಷ ಮಂಗಲ್ಪಾಡಿ ಪಂಚಾಯತ್ ಸಮಿತಿ ನೇತೃತ್ವದಲ್ಲಿ ಮಂಗಲ್ಪಾಡಿ ಪಂಚಾಯತ್ ಕಚೇರಿಗೆ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ರೈ ಅವರು ಪ್ರತಿಭಟನಾ ಮೆರವಣಿಗೆಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ಮುಸ್ಲಿಂ ಲೀಗ್ ಆಡಳಿತದ ವೈಫಲ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಪಂಚಾಯತು ಸಮಿತಿ ಅಧ್ಯಕ್ಷರಾದ ರಾಮಚಂದ್ರ ಬಲ್ಲಾಳ್

ಭಾವನೆಯ ಬಂಧದಿಂದ ಧರ್ಮ ಬೆಳೆಸೋಣ : ಕೊಂಡೆವೂರು ಶ್ರೀಗಳು

ದಿ.28.09.2023 ಗುರುವಾರ ಕೊಂಡೆವೂರು ಮಠದ ಶ್ರೀ ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿಯವರ 20 ನೇ ಚಾತುರ್ಮಾಸ್ಯದ ಮಂಗಲೋತ್ಸವ ತದಂಗವಾಗಿ ನಡೆದ 48 ಗಂಟೆಗಳ ಅಖಂಡ ಭಜನೆಯ ಮಂಗಲ ಕಾರ್ಯಕ್ರಮಗಳು ವಿಜೃಂಭಣೆಯಿAದ ನಡೆದವು. ಸಂಜೆ ನಡೆದ ಧಾರ್ಮಿಕ ಸಭೆಯಲ್ಲಿ ಶ್ರೀಗಳವರು ಆಶೀರ್ವಚನಗೈಯುತ್ತಾ “ ಮಠದ ಬೆಳವಣಿಗೆಗೆ ಭಕ್ತಿ,ಜೊತೆಗೆ ಭಾವನೆಗಳ ಹೃದಯ ಬಂಧ ಕಾರಣ. ಹೆತ್ತ ಮಾತೆಯಿಂದ ಅನೇಕ ಸಜ್ಜನ ಬಂಧುಗಳ ಭಾವನಾತ್ಮಕ ಮತ್ತು ಸರ್ವ ರೀತಿಯ ನೆರವಿನಿಂದ ಅನೇಕ ಚಟುವಟಿಕೆಗಳು

ಕಾಸರಗೋಡು: ಅ.1ರಂದು ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿ

ವಿಶ್ವಹಿಂದೂ ಪರಿಷತ್ ಬಜರಂಗದಳ, ಮಾತೃಶಕ್ತಿ ಮತ್ತು ದುರ್ಗಾವಾಹಿನಿ , ಪ್ರೇರಣಾ ಜಿಲ್ಲಾ ಕಾರ್ಯಾಲಯ ಹೊಸಂಗಡಿ ಇವರ ಸಹಯೋಗದಲ್ಲಿ ಶೌರ್ಯ ಜಾಗರಣ ರಥಯಾತ್ರೆ ಮತ್ತು ಬೈಕ್ ರ್‍ಯಾಲಿಯು ಅಕ್ಟೋಬರ್ 1ರಂದು ಬೆಳಿಗ್ಗೆ 10.30 ಕ್ಕೆ ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ. ಬೆಳಿಗ್ಗೆ ೮.೩೦ ರಿಂದ ವಿವಿದ ಭಜನಾ ತಂಡಗಳಿಂದ ಕುಣಿತ ಭಜನೆ ಮತ್ತು ನಂತರ ೧೦.೩೦ರಿಂz ನಡೆಯಲಿರುವ ಸಭಾಕಾರ್ಯಕ್ರಮವನ್ನು ಧಾರ್ಮಿಕ ಮುಂದಾಳು ರವೀಶ್ ತಂತ್ರಿ