ಪುತ್ತೂರು: ಪುತ್ತೂರು ತಾಲೂಕು ಆರೋಗ್ಯಾಧಿಕಾರಿಯಾಗಿ ಡಾ.ದೀಪಕ್ ರೈ ಅವರನ್ನು ನೇಮಕ ಮಾಡಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ಜಿಲ್ಲಾಧಿಕಾರಿಯಾಗಿರುವ ರಾಜೇಂದ್ರ ಕೆ.ವಿ ಅವರು ಆದೇಶ ನೀಡಿದ್ದಾರೆ. ಈ ಹಿಂದೆ ತಾಲೂಕು ಆರೋಗ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ. ಅಶೋಕ್ ಕುಮಾರ್ ರೈ ಅವರನ್ನು ಮುಂದಿನ ಅದೇಶದ ತನಕ ಪುತ್ತೂರು
ಕಡಬ: ಐತ್ತೂರು ಗ್ರಾಮದ ಕಲ್ಲಾಜೆ ಎಂಬಲ್ಲಿರುವ ತಬ್ಬಲಿ ಸಹೋದರರು ಇರುವ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಅವರ ಮನೆ ಬೆಳಕು ನೀಡುವ ಮೂಲಕ ಕಡಬ ವಿಶ್ವ ಹಿಂದೂ ಪರಿಷತ್ ಸಂಘಟನೆ ಮಾನವೀಯತೆ ಮೆರೆದಿದೆ. ಐತ್ತೂರು ಗ್ರಾಮದ ಕಲ್ಲಾಜೆ ನಿವಾಸಿ ದಿ.ಗೋಪಾಲ ಗೌಡ, ದಿ. ಹೇಮಾವತಿ ದಂಪತಿಯ ಪುತ್ರರಾದ ಹಿತೇಶ್ ಹಾಗೂ ತೀರ್ಥಪ್ರಸಾದ್ ಅವರು ಕಳೆದ16 ವರ್ಷಗಳ ಹಿಂದೆ ತಂದೆಯನ್ನು ಕಳೆದುಕೊಂಡಿದ್ದರೆ. ಕಳೆದ 2 ವರ್ಷದ ಹಿಂದೆ ತಾಯಿಯನ್ನು ಕಳೆದುಕೊಂಡು ತಬ್ಬಲಿಯಾಗಿದ್ದರು.
ಉಪ್ಪಿನಂಗಡಿ : ಲಾರಿ ಚಾಲಕನ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಗೃಹರಕ್ಷಕ ಸಿಬ್ಬಂದಿ ಕುಸುಮಾ ಭಟ್ ಅವರಿಗೆ ಡಿವೈಎಸ್‌ಪಿ ಡಾ.ಗಾನಾ ಪಿ ಕುಮಾರ್ ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಬಾಟಲಿಯಿಂದ ಲಾರಿ ಚಾಲಕನಿಗೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ ಆರೋಪಿಗಳನ್ನು ದಸ್ತಗಿರಿ ಮಾಡಲು ಸಹಕರಿಸಿದ ಮಹಿಳಾ ಗೃಹರಕ್ಷಕ ಸಿಬ್ಬಂದಿಗೆ ಪ್ರಶಂಸನಾ ಪತ್ರ ನೀಡಿ ಗೌರವಿಸಲಾಯಿತು. ಜೂನ್ ೬ ರಂದು ಬಂಟ್ವಾಳ ತಾಲೂಕಿನ
ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್‌ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು ಕಾರ್ಯಾಚರಣೆಗೆ ಇಳಿದಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ ಹಾಕಿದ್ದಾರೆ. ಡಿ.ಸಿ ಸೂಚನೆಯಂತೆ ತಾಲೂಕು ಮಟ್ಟದಲ್ಲಿ ಕೊರೋನಾ ನಿಂತ್ರಣಕ್ಕಾಗಿ ಮೂರು ವಿಚಕ್ಷಣ ದಳ
ವಿವಾಹ ನಿಶ್ಚಿತಾರ್ಥಗೊಂಡಿದ್ದ 25 ರ ಹರೆಯದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಹೊರವಲಯ ಈಶ್ವರಮಂಗಲ ಸಮೀಪದಿಂದ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ನೆಟ್ಟನಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕದ ಸುಬ್ಬಣ್ಣ ನಾಯ್ಕ ಎಂಬವರ ಪುತ್ರಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಈಗಾಗಲೇ ವಿವಾಹ ನಿಶ್ಚಿತಾರ್ಥವಾಗಿದ್ದೂ ಕಳೆದ ಮೇ ತಿಂಗಳಿನಲ್ಲಿ ವಿವಾಹಕ್ಕೆ ದಿನಾಂಕ ನಿಗದಿಯಾಗಿತ್ತು . ಲಾಕ್ ಡೌನ್ ಹೇರಲ್ಪಟ್ಟ
ಪುತ್ತೂರು: 34 ನೆಕ್ಕಿಲಾಡಿ ಗ್ರಾಪಂ ವ್ಯಾಪ್ತಿಯ ಮೈಂದನಡ್ಕದಲ್ಲಿ ಸಾರ್ವಜನಿಕ ಆಟದ ಮೈದಾನದ ಪ್ರವೇಶ ದಾರಿಯನ್ನು ಮುಚ್ಚಿ ಧರ್ಮಾಧಾರಿತ ರಾಜಕಾರಣದ ಮೂಲಕ ಸಮಾಜದ ಸಾಮರಸ್ಯವನ್ನು ಒಡೆಯುವ ಹುನ್ನಾರ ಗ್ರಾಪಂ ನಡೆಸಿದ್ದು, ಇದೊಂದು ಸಂಘರ್ಷದ ವಾತಾವರಣ ಉಂಟುಮಾಡುವ ಕಾರ್ಯವಾಗಿದೆ ಎಂದು ಮೈಂದನಡ್ಕ ಶಾಂತಿ-ಸೌಹಾರ್ದತೆ ಉಳಿಸಿ ಹೋರಾಟ ಸಮಿತಿ ಆರೋಪಿಸಿದೆ. ಸುದ್ದಿಗೋಷ್ಠಿಯಲ್ಲಿ ಸಮಿತಿ ಅಧ್ಯಕ್ಷ ಎ.ಜತೀಂದ್ರ ಶೆಟ್ಟಿ ಅಲಿಮಾರ್ ಮಾತನಾಡಿ, ಕಳೆದ ಎಂಟು ವರ್ಷಗಳಿಂದ ಸತತವಾಗಿ
ಪುತ್ತೂರು: ನಗರ ಕಾಂಗ್ರೆಸ್ ವತಿಯಿಂದ ಪುತ್ತೂರು ತಾಲೂಕು ಪತ್ರಕರ್ತರ ಸಂಘಕ್ಕೆ ಎನ್95 ಮಾದರಿಯ ಮಾಸ್ಕನ್ನು ಪತ್ರಿಕಾಭವನದಲ್ಲಿ ವಿತರಿಸಲಾಯಿತು. ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾಸ್ಕ್‍ವಿತರಿಸಿ ಮಾತನಾಡಿ, ಕೊರೋನಾ ಸಂಕಷ್ಟ ಕಾಲದಲ್ಲಿ ಕೊರೋನಾ ವಾರಿಯರ್ಸ್ ಆಗಿ ಸಮಾಜದ ಜನರ ನಡುವೆ ತೊಡಗಿಸಿಕೊಂಡಿರುವ ಪತ್ರಕರ್ತರಿಗೆ ಸರಕಾರ ಕೊಡುಗೆಗಳನ್ನು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸರಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಅವರು ಒತ್ತಾಯಿಸಿದರು. ಈ
ಪುತ್ತೂರು: ಮನೆಯಿಂದ ಹೊರಗಡೆ ಹೋಗಿದ್ದ ಮಾನಸಿಕ ಅಸ್ವಸ್ಥೆ ಯುವತಿಯೊಬ್ಬರು ನಾಪತ್ತೆಯಾದ ಘಟನೆ ನರಿಮೊಗರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಡೆದ ಬಗ್ಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಗೆ ದೂರು ದಾಖಲಾಗಿದೆ ನರಿಮೊಗರು ಗ್ರಾಮದ ಕರ್ಗಲ್ಲು ನಿವಾಸಿ ಅಣ್ಣುಪೂಜಾರಿ ಅವರ ಪುತ್ರಿ ವಿಜೇತ(23)ರವರು ನಾಪತ್ತೆಯಾದವರು. ವಿಜೇತ ಅವರು ಮಾನಸಿಕವಾಗಿ ಹುಷಾರಿಲ್ಲದೇ ಮನೆಯಲ್ಲಿದ್ದು, ಜೂ.೪ರಂದು ಬೆಳಿಗ್ಗೆ ಆಕೆ ವಾಸ್ತವ್ಯದ ಮನೆಯಿಂದ ಹೊರಗೆ ಹೋದವರು ಬಳಿಕ ಮನೆಗೆ ಬಾರದೆ
ಪುತ್ತೂರು: ಜಿಲ್ಲೆಯಲ್ಲಿ ಭತ್ತ ಕೃಷಿಗೆ ಆದ್ಯತೆ ನೀಡುವ ನಿಟ್ಟಿನಲ್ಲಿ ಚಿಂತನೆ ನಡೆಸಲಾಗಿದ್ದು, ಜಿಲ್ಲೆಯಲ್ಲಿ ಒಟ್ಟು 5 ಸಾವಿರ ಎಕ್ರೆ ಹಡೀಲು ಭೂಮಿಯಲ್ಲಿ ಭತ್ತದ ಕೃಷಿ ಮಾಡುವ ಬಗ್ಗೆ ಯೋಜನೆ ರೂಪಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ಪುತ್ತೂರು ವಿಧಾಸಸಭಾ ಕ್ಷೇತ್ರ ವ್ಯಾಪ್ತಿಗೆ ಸಂಬಂಧಿಸಿದಂತೆ ಪುತ್ತೂರು ತಾಲೂಕು ಪಂಚಾಯತ್‍ನ ಕಿರು ಸಭಾಂಗಣದಲ್ಲಿ ಶುಕ್ರವಾರ ಕೃಷಿ ಸಂಬಂಧಿತ ಇಲಾಖೆಗಳ ತಾಲೂಕು ಮಟ್ಟದ
ಪುತ್ತೂರು: ಕೊರೋನಾ ಸಂಕಷ್ಟದಲ್ಲಿ ವ್ಯಾಪಾರ ಕೈಗಾರಿಕೆಗಳು ಕುಂಠಿತವಾಗಿದೆ. ಇಂತಹ ಸಂದರ್ಭದಲ್ಲಿ ಜನರು ಕೃಷಿಕೆ ಒಲವು ತೋರಿಸಿದ್ದಾರೆ. ಅವರಿಗೆ ಸಮರ್ಪಕ ಮಾಹಿತಿ ನೀಡುವ ಮೂಲಕ ಕೃಷಿ ಮತ್ತು ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗಳಿಗೆ ಆದ್ಯತೆ ನೀಡಿ ಎಂದು ಶಾಸಕ ಸಂಜೀವ ಮಠಂದೂರು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಕೃಷಿ, ತೋಟಗಾರಿಕಾ ಬೆಳೆಗಳಿಗೆ ಹೆಚ್ಚಿನ ಪೆÇ್ರೀತ್ಸಾಹ ನೀಡುವ ನಿಟ್ಟಿನಲ್ಲಿ ತಾ.ಪಂ ಕಿರು ಸಭಾಂಗಣದಲ್ಲಿ ನಡೆದ ಕೃಷಿ, ತೋಟಗಾರಿಕೆ,