Home ಕರಾವಳಿ Archive by category ಬಂಟ್ವಾಳ

ದ.ಕ ದಲ್ಲಿ ಮತದಾನಕ್ಕೆ ಎಲ್ಲಾ ಸಿದ್ಧತೆ ಪೂರ್ಣ : ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್

ದಕ್ಷಿಣ ಕನ್ನಡ ಲೋಕ ಸಭಾ ಕ್ಷೇತ್ರದಲ್ಲಿ ಎ.26ರಂದು ನಡೆಯುವ ಸಾರ್ವತ್ರಿಕ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಎ.೨೪.ರಂದು ಸಂಜೆ 6ಗಂಟೆಗೆ ಎಲ್ಲಾ ರೀತಿಯ ಬಹಿರಂಗ ಪ್ರಚಾರ ಅಂತ್ಯಗೊಳ್ಳಲಿದೆ.ಎ.26ರಂದು ದಕ್ಷಿಣ ಕನ್ನಡ ಜಿಲ್ಲೆಯ 1876ಮತಗಟ್ಟೆಗಳಲ್ಲಿ ಬೆಳಗ್ಗೆ 7ಗಂಟೆಯಿಂದ ಸಂಜೆ 6ಗಂಟೆಯ ವರೆಗೆ ಮತದಾನ ನಡೆಸಲು ಎಲ್ಲಾ ಸಿದ್ದತೆ ಪೂರ್ಣ ಗೊಂಡಿದೆ ಎಂದು ದಕ್ಷಿಣ

ವಿಟ್ಲ: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತ್ಯು

ವಿಟ್ಲ: ಬಾವಿಗೆ ರಿಂಗ್‌ ಹಾಕುವಾಗ ಆಕ್ಸಿಜನ್‌ ಸಿಗದೇ ಇಬ್ಬರು ಮೃತಪಟ್ಟ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ನಡೆದಿದೆ. ಮೃತ ಕಾರ್ಮಿಕರನ್ನು ಕುಕ್ಕಿಲ ನಿವಾಸಿ ಪ್ರಸ್ತುತ ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು ಯಾನೆ ಇಬ್ರಾಹಿಂ(40) ಮತ್ತು ಮಲಾರ್‌ ನಿವಾಸಿ ಆಲಿ(24) ಎಂದು ಗುರುತಿಸಲಾಗಿದೆ. ಸುಮಾರು30 ಫೀಟ್‌ ಆಳದ ಬಾವಿಗೆ ರಿಂಗ್‌ ಹಾಕಿ ನಂತರ ಕ್ಲೀನಿಂಗ್‌ ಮಾಡಲೆಂದು ಬಾವಿಗೆ ಇಳಿದ ಒಬ್ಬ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದು, ಬಾವಿಗೆ ಇಳಿದವನು

ಎ.21ರಂದು ನರಿಕೊಂಬು ನವಜೀವನ ವ್ಯಾಯಾಮ ಶಾಲೆಯ ಹನುಮಾನ್ ಮಂದಿರ ಲೋಕಾರ್ಪಣೆ

ಬಂಟ್ವಾಳ: ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ವತಿಯಿಂದ ರೂ 1 ಕೋಟಿ ವೆಚ್ಚದಲ್ಲಿ ಪುನರ್ ನಿರ್ಮಾಣಗೊಂಡ ಶ್ರೀ ಹನುಮಾನ್ ಮಂದಿರ ಲೋಕಾರ್ಪಣೆ ಮತ್ತು ಶ್ರೀ ಆಂಜನೇಯ ಬಿಂಬ ಪುನರ್ ಪ್ರತಿಷ್ಠೆ ಕಾರ್ಯಕ್ರಮ ಎ. 21ರಂದು ಬೆಳಿಗ್ಗೆ ಗಂಟೆ 10.14ರ ಶುಭ ಮುಹೂರ್ತದಲ್ಲಿ ನಡೆಯಲಿದೆ ಎಂದು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಬಿ.ರಘು ಸಪಲ್ಯ ಹೇಳಿದರು.ನರಿಕೊಂಬು ಗ್ರಾಮದ ನವಜೀವನ ವ್ಯಾಯಾಮ ಶಾಲೆ ಬಳಿ ಬುಧವಾರ ಸಂಜೆ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸುಮಾರು 108

ವಿಟ್ಲ :ರೈಲಿನಡಿಗೆ ಬಿದ್ದು ವ್ಯಕ್ತಿ ಸಾವು

ಚಲಿಸುತ್ತಿದ್ದ ರೈಲಿನಡಿಗೆ ಬಿದ್ದು ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಬಾಯಿಲ ವೀರಕಂಭ ನಿವಾಸಿ ವಿಶ್ವನಾಥ್ ಎಂಬವರು ಸಾವನ್ನಪ್ಪಿದ ವ್ಯಕ್ತಿ ಎಂದು ತಿಳಿದುಬಂದಿದೆ. ಮೇಲ್ನೋಟಕ್ಕೆ ಆತ್ಮ ಹತ್ಯೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಪಿಯುಸಿ ಫಲಿತಾಂಶ: ದ.ಕ. ಪ್ರಥಮ, ಉಡುಪಿ ದ್ವಿತೀಯ

ಕರ್ನಾಟಕ 2023-24ರ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಯುಥಾಪ್ರಕಾರ ಹೆಣ್ಣುಮಕ್ಕಳು ಮೇಲುಗಯ್ ಸಾಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯು ಫಲಿತಾಂಶದಲ್ಲಿ ಮೊದಲ ಸ್ಥಾನ ಪಡೆದಿದೆ.ಗದಗ ಜಿಲ್ಲೆಯು ಫಲಿತಾಂಶದಲ್ಲಿ ಕೊನೆಯ ಸ್ಥಾನದಲ್ಲಿದೆ. ಬೆಂಗಳೂರಿನ ಮೇಧಾ ಡಿ. ಅವರು ಕಲಾ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದಿದ್ದಾರೆ; ಅಲ್ಲದೆ ವಿಜಯಪುರದ ವೇದಾಂತ್ ಮತ್ತು ಕವಿತಾ ಕೂಡ ಟಾಪರ್‌ಗಳಲ್ಲಿ ಇದ್ದಾರೆ. ವಿಜ್ಞಾನ ವಿಭಾಗದಲ್ಲಿ 598 ಅಂಕ ಪಡೆದ ವಿದ್ಯಾಲಕ್ಷ್ಮಿ ಮೊದಲ

ಬಂಟ್ವಾಳ: ಬೆಂಕಿಗೆ ಸುಟ್ಟು ಕರಕಲಾದ ಕಾರು

ಬಂಟ್ವಾಳ: ಚಲಿಸುತ್ತಿದ್ದ ಕಾರೊಂದು ಆಕಸ್ಮಿಕವಾಗಿ ಬೆಂಕಿ ಹೊತ್ತಿ ಉರಿದ ಘಟನೆ ರಾಯಿ- ಕುದ್ಕೊಳಿಯ ಮಧ್ಯೆ ನಡೆದಿದ್ದು ಡಸ್ಟರ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಪಾಯದಿಂದ ಪಾರಾಗಿದ್ದಾರೆ.‌ ಬೆಂಕಿಯ ಕೆನ್ನಲಿಗೆಗೆ ಕಾರು ಸಂಪೂರ್ಣ ಸುಟ್ಟು ಭಸ್ಮವಾಗಿದ್ದು ಅಗ್ನಿಶಾಮಕ ದಳ ಬೆಂಕಿ ನಂದಿಸಿದೆ. ಏಳಿಂಜೆಯ ಕೊಲ್ಲೆಟ್ಟು ನಿವಾಸಿ ಶರತ್ ಶೆಟ್ಟಿ ಅವರಿಗೆ ಸೇರಿದ ಕಾರು ಅದಾಗಿದ್ದು, ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಕೊಂಡಿದೆ. ಬೆಂಕಿ ಕಾಣಿಸಿಕೊಂಡ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳದ 55ನೇ ಸಂಸ್ಥಾಪನಾ ದಿನ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಇದರ 55ನೇ ಸಂಸ್ಥಾಪನ ದಿನವನ್ನು ರೋಟರಿ ಕ್ಲಬ್ ಬಂಟ್ವಾಳದ ಸಭಾಂಗಣದಲ್ಲಿ ಆಚರಿಸಲಾಯಿತು. ರೋಟರಿ ಕ್ಲಬ್ ಬಂಟ್ವಾಳದ ಅಧ್ಯಕ್ಷ ಪ್ರಕಾಶ್ ಬಾಳಿಗ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿಕಟಪೂರ್ವ ಜಿಲ್ಲಾ ಗವರ್ನರ್, ಕ್ಲಬ್‌ನ ಪೂರ್ವಾಧ್ಯಕ್ಷ ಎನ್.ಪ್ರಕಾಶ್ ಕಾರಂತ್ ಅನಿಸಿಕೆ ವ್ಯಕ್ತಪಡಿಸಿ 55 ವರ್ಷಗಳಲ್ಲಿ ರೋಟರಿ ಕ್ಲಬ್ ಬಂಟ್ವಾಳ ನಡೆದು ಬಂದ ಹಾದಿಯ್ನು ಅವಲೋಕನ ಮಾಡುವುದರ ಜೊತೆಗೆ ಕ್ಲಬ್‌ನ ಬೆಳವಣಿಗೆಗೆ ಸಹಕರಿಸಿದವರನ್ನು

ವಿಟ್ಲ: ಖಾಸಗಿ ಬಸ್ ಹಾಗೂ ಪಿಕಪ್ ವಾಹನ ಢಿಕ್ಕಿ: ಹಲವರಿಗೆ ಗಾಯ

ವಿಟ್ಲ: ವಿಟ್ಲ ಕಲ್ಲಡ್ಕ ರಸ್ತೆಯ ಗೋಳ್ತಮಜಲು ಎಂಬಲ್ಲಿ ಖಾಸಗಿ ಬಸ್ಸಿಗೆ ಪಿಕಪ್ ವಾಹನ ಮುಖಾಮುಖಿ ಢಿಕ್ಕಿಯಾಗಿ ಹಲವರು ಗಾಯಗೊಂಡ ಘಟನೆ ನಡೆದಿದೆ. ವಿಟ್ಲ ಕಡೆಗೆ ಕಾಂಕ್ರೀಟ್ ಮಿಕ್ಸರ್ ಯಂತ್ರವನ್ನು ಒಯ್ಯುತ್ತಿದ್ದ ಪಿಕಪ್ ಆಕಸ್ಮಿಕವಾಗಿ ವಿಟ್ಲದಿಂದ ಮಂಗಳೂರಿಗೆ ಸಾಗುತ್ತಿದ್ದ ಖಾಸಗಿ ಬಸ್ಸಿಗೆ ಢಿಕ್ಕಿಯಾಗಿದೆ. ಪಿಕಪ್ ನಲ್ಲಿ ಹಲವು ಮಂದಿ ಇದ್ದರೆನ್ನಲಾಗಿದೆ. ಖಾಸಗಿ ಬಸ್‌ನಲ್ಲೂ ಹಲವು ಪ್ರಯಾಣಿಕರಿದ್ದು, ಅಪಘಾತದಿಂದ ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.

ಪದ್ಮನಾಭ ಸಾವಂತ್ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಯಲಿ: ಕಾಂಗ್ರೆಸ್ ಒತ್ತಾಯ

ಬಂಟ್ವಾಳ: ದ.ಕ.ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ಸಮಿತಿ ಉಪಾಧ್ಯಕ್ಷ, ಸಾಮಾಜಿಕ ಹಾಗೂ ಆರ್‌ಟಿಐ ಕಾರ್ಯಕರ್ತ ಪದ್ಮನಾಭ ಸಾವಂತ ಅವರ ಸಾವು ಮೇಲ್ನೋಟಕ್ಕೆ ಆತ್ಮಹತ್ಯೆಯಂತೆ ಕಂಡು ಬಂದರೂ ಸರಿಯಾಗಿ ಪರಿಶೀಲಿಸಿದರೆ ಇದೊಂದು ಕೊಲೆ ಎನ್ನುವ ಅನುಮಾನ ವ್ಯಕ್ತವಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ ಆರೋಪಿಸಿದ್ದಾರೆ.ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪದ್ಮನಾಭ ಸಾಮಂತ್ ಆರ್‌ಟಿಐ

ಬಂಟ್ವಾಳ: ಸಾಮಾಜಿಕ ಹೋರಾಟಗಾರ ಪದ್ಮನಾಭ ಸಾಮಂತ್ ಆತ್ಮಹತ್ಯೆ?

ಬಂಟ್ವಾಳ: ಸಾಮಾಜಿಕ ಕಾರ್ಯಕರ್ತ, ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಪದ್ಮನಾಭ ಸಾಮಂತ್ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಅವರ ಶವ ಪತ್ತೆಯಾಗಿದೆ. ವಾಮದಪದವಿನ ಅವರ ಮನೆ ಬಳಿಯ ಗುಡ್ಡದಲ್ಲಿರುವ  ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ವಿವಿಧ ಸಾಮಾಜಿಕ ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಪದ್ಮನಾಭ ಸಾಮಂತ್ ಅವರ ಸಾವು ಅನೇಕ ಊಹಪೋಹಗಳಿಗೆ ಕಾರಣವಾಗಿದೆ. ಇತ್ತೀಚೆಗೆ ಉದ್ಯೋಗ ಕೊಡಿಸುವ ನೆಪದಲ್ಲಿ ಹಣ ಪಡೆದುಕೊಂಡಿದ್ದರು