Home ಕರಾವಳಿ Archive by category ಬಂಟ್ವಾಳ (Page 17)

ಕಾಮಿಡಿ ಪ್ರೀಮಿಯರ್‌‌ ಲೀಗ್ ಸೀಸನ್-4 ಪ್ರದರ್ಶನಕ್ಕೆ ಬಿ.ಸಿ.ರೋಡಿನಲ್ಲಿ ಚಾಲನೆ

ಬಂಟ್ವಾಳ: ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಆಶ್ರಯದಲ್ಲಿ ಕಾಮಿಡಿ ಪ್ರೀಮಿಯರ್‌ ಲೀಗ್ ಸೀಸನ್- 4 ಫರ್ ಫಾರ್ಮೆನ್ಸ್ ಬಿ.ಸಿ.ರೋಡಿನ ಸ್ಪರ್ಶ ಕಲಾಮಂದಿರದಲ್ಲಿ ನಡೆಯಿತು. ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ ಕರಾವಳಿ ಭಾಗದಲ್ಲಿ ನಗುವಿಗೂ ಸ್ಟ್ಯಾಂಡರ್ಡ್ ಇದೆ. ಆದ್ದರಿಂದ ಹೊರ

ಶಾಸಕ ರಾಜೇಶ್ ನಾಯ್ಕ್ ಅವರಿಂದ ನಾಮಪತ್ರ ಸಲ್ಲಿಕೆ : 35 ಕಿ.ಮಿ. ನಡೆದು ಬಂದ ದಂಪತಿ

ಬಂಟ್ವಾಳ: ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ನಾಮಪತ್ರ ಸಲ್ಲಿಸಲು ಪೆÇಳಲಿ ಕ್ಷೇತ್ರದಿಂದ ಪಾದಾಯಾತ್ರೆಯ ಮೂಲಕ ಆಗಮಿಸುವ ಸುದ್ದಿ ತಿಳಿದ ದಂಪತಿ ತಮ್ಮ ಮನೆಯಿಂದ ಸುಮಾರು 35 ಕಿ.ಮಿ.ದೂರದವರೆಗೆ ಕಾಲ್ನಡಿಗೆಯಲ್ಲಿ ಆಗಮಿಸಿ ಪಕ್ಷದ ಅಭ್ಯರ್ಥಿಗೆ ಶುಭಾಶಯ ಕೋರಿದ ಘಟನೆ ಬಂಟ್ವಾಳದಲ್ಲಿ ನಡೆಯಿತು. ಬಡಗಕಜೆಕಾರು ಗ್ರಾ.ಪಂ.ಮಾಜಿ ಸದಸ್ಯ ಗಂಗಾಧರ ಪೂಜಾರಿ ತನ್ನ ಪತ್ನಿ ಚಂದ್ರಾವತಿ ಅವರ ಜೊತೆಗೂಡಿ ಕಜೆಕಾರಿನ ಮಹಾದೇಶ್ವರ ದೇವಸ್ಥಾನದಿಂದ

ಬಂಟ್ವಾಳ : ಸ್ಕೂಟರ್ ಗೆ ಬಸ್ಸು ಡಿಕ್ಕಿ, ಸವಾರ ಸಾವು

ಬಂಟ್ವಾಳ : ಕೆ.ಎಸ್.ಆರ್.ಟಿ.ಸಿ.ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಸ್ಕೂಟರ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಭಂಡಾರಿಬೆಟ್ಟು ನಿವಾಸಿ ಡೊಂಬಯ್ಯ ಮೂಲ್ಯ ಮೃತಪಟ್ಟ ವ್ಯಕ್ತಿ.ಅವರು ಬಂಟ್ವಾಳ ಬೈಪಾಸ್ ರಸ್ತೆಯಲ್ಲಿ ಜಕ್ರಿಬೆಟ್ಟು ಕಡೆಯಿಂದ ಬಿಸಿರೋಡು ಕಡೆಗೆ ಬರುತ್ತಿದ್ದ ಸಂದರ್ಭದಲ್ಲಿ ಧರ್ಮಸ್ಥಳ ಕಡೆಯಿಂದ ಬರುತ್ತಿದ್ದ ಸರಕಾರಿ ಬಸ್ ಹಿಂಬದಿಯಿಂದ ಸ್ಕೂಟರ್ ಗೆ ಡಿಕ್ಕಿಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ

ಏಕಾಂಗಿಯಾಗಿ ಬಾವಿ ತೋಡಿದ ಬಂಟ್ವಾಳದ ಸೃಜನ್ ಗೆ ಸೆಲ್ಯೂಟ್ ಟು ಸೈಲೆಂಟ್ ವರ್ಕರ್ ಪ್ರಶಸ್ತಿ

ಬಂಟ್ವಾಳ: ಏಕಾಂಗಿಯಾಗಿ ಬಾವಿ ತೋಡಿ ಅಸಾಮಾನ್ಯ ಸಾಧನೆ ತೋರಿದ ಬಾಲಕ ನರಿಕೊಂಬು ಗ್ರಾಮದ ನಾಯಿಲ ಕಾಪಿಕಾಡುವಿನ ಸೃಜನ್ ಪೂಜಾರಿಗೆ ಜೆಸಿಐ ಬಂಟ್ವಾಳ ಸೆಲ್ಯೂಟ್ ಟೂ ಸೈಲೆಂಟ್ ವರ್ಕರ್ ಪ್ರಶಸ್ತಿ ನೀಡಿ ಗೌರವಿಸಿದೆ. ಬಾಲಕನ ಸಾಧನೆಯ ಬಗ್ಗೆ ಮಾಧ್ಯಮಗಳ ವರದಿಯನ್ನು ಆಧಾರಿಸಿ ಬುಧವಾರ ಅವರ ಮನೆಗೆ ತೆರಳಿದ ಜೆಸಿಐ ಬಂಟ್ವಾಳದ ಅಧ್ಯಕ್ಷ ರಾಜೇಂದ್ರ ಕೆ. ಹಾಗೂ ಸದಸ್ಯರು ಸೃಜನ್ ಸಾಧನೆಯನ್ನು ಶ್ಲಾಘಿಸಿ ಪ್ರಶಸ್ತಿ ನೀಡಿ ಗೌರವಿಸಿದರು. ಎಲೆ ಮರೆಯ ಕಾಯಿಯಂತೆ ಸಾಧನೆ ಮಾಡುವ

ಎ.16ರಂದು ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಸನ್ ಪ್ರೀಮಿಯಮ್ ರಿಫೈಂಡ್ ಸನ್ ಫ್ಲವರ್ ಆಯಿಲ್ ಪ್ರೆಸೆಂಟ್ಸ್ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ -4ರ ಎರಡನೇ ಸುತ್ತಿನ ಫರ್ಪಾಮೆನ್ಸ್ ಎ.16ರಂದು ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ಅದ್ದೂರಿಯಾಗಿ ನಡೆಯಲಿದೆ ಎಂದು ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ ಜೈನ್ ಹೇಳಿದರು. ಸ್ಪರ್ಶಾ ಕಲಾಮಂದಿರದಲ್ಲಿ ನಡೆದ

ಮೋದಿ, ಅದಾನಿ, ಅಂಬಾನಿಗೆ ಬಂದ ಅಮೃತಕಾಲ ದಲಿತರಿಗೆ ಬರುವುದು ಯಾವಾಗ : ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನೆ

ಬಂಟ್ವಾಳ: ಪ್ರಧಾನಮಂತ್ರಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಸಚಿವರಿಗೆ, ದೊಡ್ಡ ಉದ್ಯಮಿಗಳಿಗೆ ಇಂದು ಅಮೃತಕಾಲ, ಪ್ರತಿದಿನವೂ ದಲಿತ ದೌರ್ಜನ್ಯ ನಡೆಯುತ್ತಿದ್ದು, ಅದೀಗ ಹೆಚ್ಚಾಗಿದೆ, ದಲಿತರಿಗೆ ಅಮೃತ ಕಾಲಬರುವುದು ಯಾವಾಗ ಎಂದು ರಾಜ್ಯಸಭಾ ಸದಸ್ಯ ಡಾ. ಎಲ್. ಹನುಮಂತಯ್ಯ ಪ್ರಶ್ನಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಆಶ್ರಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಘಟಕಗಳ

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಶನಿವಾರ ಮಧ್ಯಾಹ್ನ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲು ನಿವಾಸಿ, ಶಾಲಾ ಬಾಲಕನೋರ್ವನ ಮೃತದೇಹ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾದ ಘಟನೆ ಶನಿವಾರ ತಡ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನದ ವೇಳೆಗೆ ಪಾಣೆಮಂಗಳೂರು ಅಜ್ಜಿ ಮನೆಗೆ ಬಂದಿದ್ದ ಬಾಲಕ ಅಲ್ಲಿ

ರಸ್ತೆ ರಫಘಾತದಲ್ಲಿ ಕೊಡಂಗೆಯ ಸದಾಶಿವ ಆಚಾರ್ಯ ನಿಧನ

ಬಂಟ್ವಾಳ: ಇಲ್ಲಿನ ಕೊಡಂಗೆ ನಿವಾಸಿ ಸದಾಶಿವ ಆಚಾರ್ಯ (77) ಅವರು ಶುಕ್ರವಾರ ತಡರಾತ್ರಿ ಬಿ.ಸಿ.ರೋಡಿನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ನಿಧನರಾದರು.ಮೃತರು ಪತ್ನಿ 4ಗಂಡು ಹಾಗೂ 5ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಪುತ್ತೂರಿನ ಸಂಬಂಧಿಯ ಮನೆಯಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸ್ಸು ಮನೆಗೆ ಬರುತ್ತಿದ್ದ ವೇಳೆ ಅವರು ಪ್ರಯಾಣಿಸುತ್ತಿದ್ದ ಕಾರು ಬಿ.ಸಿ.ರೋಡಿನ ಪದ್ಮ ಪೆಟ್ರೋಲ್ ಪಂಪ್ ಬಳಿ ಆಕಸ್ಮಿಕವಾಗಿ ಸ್ಕಿಡ್ ಆಗಿ ಬಿದ್ದು ಗಂಭೀರ

ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎ.16ರಂದು ಭಾನುವಾರ ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ನಡೆಯಲಿರುವ ನಾಲ್ಕನೆ ಸೀಸನ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ನ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಬಿ.ಸಿ.ರೋಡಿನ ಸ್ಪರ್ಶಾ ಕಲಾಮಂದಿರದಲ್ಲಿ ನಡೆಯಿತು. ಬಂಟ್ವಾಳ ತುಳುಕೂಟದ ಅಧ್ಯಕ್ಷ ಸುದರ್ಶನ್ ಜೈನ್ ಆಮಂತ್ರಣ ಪತ್ರಿಕೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.