Home ಕರಾವಳಿ Archive by category ಬಂಟ್ವಾಳ (Page 18)

ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಬಂಟ್ವಾಳ: ಜಿಲ್ಲೆಯ ಪ್ರತಿಷ್ಠಿತ ಸುದ್ದಿವಾಹಿನಿ ವಿ4 ನ್ಯೂಸ್ ಹಾಗೂ ತುಳುಕೂಟ ಬಂಟ್ವಾಳ ಇದರ ಜಂಟಿ ಆಶ್ರಯದಲ್ಲಿ ಎ.16ರಂದು ಭಾನುವಾರ ಬಿ.ಸಿ.ರೋಡಿನ ಜೋಡುಮಾರ್ಗ ಉದ್ಯಾನದ ಬಳಿಯ ಸ್ಪರ್ಶಾ ಕಲಾ ಮಂದಿರರದಲ್ಲಿ ನಡೆಯಲಿರುವ ನಾಲ್ಕನೆ ಸೀಸನ್‍ನ ಕಾಮಿಡಿ ಪ್ರೀಮಿಯರ್ ಲೀಗ್‍ನ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಗುರುವಾರ ಬಿ.ಸಿ.ರೋಡಿನ ಸ್ಪರ್ಶಾ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನ : 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 108 ತೆಂಗಿನ ಕಾಯಿ ಗಣಯಾಗ ಹಾಗೂ ಮೂಡಪ್ಪ ಸೇವೆ ವಿಜ್ರಂಭಣೆಯಿಂದ ನಡೆಯಿತು. ಬಂಟ್ವಾಳದ ಉದ್ಯಮಿ ನಾಗೇಶ್ ಸಾಲ್ಯಾನ್ ಹಾಗೂ ಪಲ್ಲವಿ ಎನ್. ಸಾಲ್ಯಾನ್ ಇವರು ಸೇವಾರ್ಥವಾಗಿ 108 ತೆಂಗಿನಕಾಯಿಯ ಗಣಯಾಗ, ಮೂಡಪ್ಪ ಸೇವೆ ಹಾಗೂ ರಂಗ ಪೂಜೆಯನ್ನು ನೆರವೇರಿಸಿದರು. ಈ ಸಂದರ್ಭ ಶ್ರೀ ದೇವರನ್ನು ಹೂವುಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು. ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿ ದೇವರ ದರ್ಶನ ಪಡೆದರು.

ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ : 11ನೇ ಸಾಲೆತ್ತೂರು ಶಾಖೆಯ ಶುಭಾರಂಭ

ಬಂಟ್ವಾಳ: ಸಜೀಪ ಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇದರ 11ನೇ ಸಾಲೆತ್ತೂರು ಶಾಖೆ ಸಾಲೆತ್ತೂರಿನ ರಥನ್ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್ ನೂತನ ಶಾಖೆಯನ್ನು ಉದ್ಘಾಟಿಸಿದರು. ಅವರು ಮಾತನಾಡಿ ಮೂರ್ತೆದಾರಿಕೆ ಕಡಿಮೆಯಾಗುತ್ತ ಬರುತ್ತಿದ್ದಂತೆಯೇ ಮೂರ್ತೆದಾರರ ಸಹಕಾರಿ ಸಂಘವನ್ನು ಸ್ಥಾಪನೆ ಮಾಡುವ ಮೂಲಕ ಬ್ಯಾಂಕಿಂಗ್ ಕ್ಷೇತ್ರಕ್ಕೆ ಕಾಲಿಟ್ಟ ಪರಿಣಾಮ ಇಂದು

ಬಂಟ್ವಾಳ: ದ.ಕ. ಗ್ಯಾರೇಜ್ ಮಾಲಕರ ಸಂಘದ ಮಹಾಸಭೆ

ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ಇದರ ಬಂಟ್ವಾಳ ವಲಯದ ವಾರ್ಷಿಕ ಮಹಾಸಭೆ ಹಾಗೂ ನೂತನ ಜಿಲ್ಲಾ ಅಧ್ಯಕ್ಷರ ಭೇಟಿ ಕಾರ್ಯಕ್ರಮ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬಜಾರ್ ಸಮೂಹ ಸಂಸ್ಥೆಗಳ ಆಡಳಿತ ಪಾಲುದಾರ ಸುಧಾಕರ್ ಆಚಾರ್ಯ ಉದ್ಘಾಟಿಸಿದರು. ಅವರು ಮಾತನಾಡಿ ನಾವು ಶಕ್ತಿಯುತರಾದಾಗ ಸಂಘಟನೆಯು ಬಲಯುತವಾಗಿರುತ್ತದೆ. ಸಂಘಟನೆಯಲ್ಲಿ ಇರುವ ಜೊತೆಗೆ ಸಮಾಜದ ಕಾರ್ಯದಲ್ಲೂ ತೊಡಗಿಸಿಕೊಳ್ಳಬೇಕಾಗಿದೆ ಎಂದರು. ಮುಖ್ಯ ಅತಿಥಿ

ಚುನಾವಣೆ ಜಾಗೃತಿ : ಬಣ್ಣದ ಚಿತ್ರಗಳಿಂದ ಸೆಳೆಯುವ ಮತಗಟ್ಟೆಗಳು

ಬಂಟ್ವಾಳ: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ತಯಾರಿಯನ್ನು ಆರಂಭಿಸಿದೆ. ಇತ್ತ ಚುನಾವಣೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಲು ದ.ಕ. ಜಿಲ್ಲಾಡಳಿತವೂ ಕಾಯೋನ್ಮುಖವಾಗಿದ್ದು ಆಯ್ದ ಮತಗಟ್ಟೆಗಳಲ್ಲಿ(ಶಾಲೆಗಳಲ್ಲಿ) ಬಣ್ಣದ ಚಿತ್ರಗಳನ್ನು ರಚಿಸಿ ಮತದಾರರನ್ನು ಮತಗಟ್ಟೆಗೆ ಸೆಳೆಯಲು ಹೊಸ ಪ್ರಯತ್ನ ನಡೆಸಿದೆ. ಕರಾವಳಿಯ ಜಾನಪದ ಕಲೆಗಳಾದ ಯಕ್ಷಗಾನ, ಕಂಬಳ ಸೇರಿದಂತೆ ಪರಂಪರೆ

ಬಂಟ್ವಾಳ: ಕಾಂಗ್ರೆಸ್ ವತಿಯಿಂದ ಕರಾವಳಿ ಪ್ರಜಾಧ್ವನಿ ಯಾತ್ರೆ

ಬಂಟ್ವಾಳ: ಕರ್ನಾಟಕವನ್ನು ಸಾಮಾಜಿಕ ಸಾಮರಸ್ಯದ, ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿಸಿ ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸಲು ಕಾಂಗ್ರೆಸ್ ಆಡಳಿತದ ಸರಕಾರವನ್ನು ಆಯ್ಕೆ ಮಾಡಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಹೇಳಿದರು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವತಿಯಿಂದ ನಡೆಯುತ್ತಿರುವ ಕರಾವಳಿ ಪ್ರಜಾಧ್ವನಿ ಯಾತ್ರೆ ಪ್ರಯುಕ್ತ ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ವಗ್ಗ, ಕಾರಿಂಜ ಕ್ರಾಸ್ ಜಂಕ್ಷನ್‌ನಲ್ಲಿ ಶನಿವಾರ ನಡೆದ ಸಾರ್ವಜನಿಕ

Bantwala : ಲೋಕಾಯುಕ್ತ ಎಸ್ಪಿಯಿಂದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ

ಬಂಟ್ವಾಳ: ತಾಲೂಕು ಕಚೇರಿಯಲ್ಲಿ ಕಡತಗಳು ಕಾಣೆಯಾಗುತ್ತಿರುವುದು ಏಕೆ ಎಂದು ಲೋಕಾಯುಕ್ತ ಎಸ್ಪಿ ಸೈಮನ್ ಗರಂ ಆದ ಘಟನೆ ಮಂಗಳವಾರ ಬಂಟ್ವಾಳ ತಾಲೂಕಿನಲ್ಲಿ ಕರೆದ ಸಾರ್ವಜನಿಕ ಕುಂದುಕೊರತೆ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಡೆಯಿತು. ಎಸ್ಪಿ ನೇತೃತ್ವದಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಕ್ರಮದಲ್ಲಿ ಸುಮಾರು ಹದಿನೈದರಷ್ಟು ಮಂದಿ ತಮ್ಮ ದೂರು, ದುಮ್ಮಾನ ಸಲ್ಲಿಸಿದರು. ಈ ಸಂದರ್ಭ ಕರೋಪಾಡಿ ಗ್ರಾಮದ ವಿಕ್ಟರ್ ವೇಗಸ್ ಎಂಬವರು ದೂರು ನೀಡಿ, ತನ್ನ ಕಡತಗಳ

ಕಾರ್ಮಿಕ ವಿರೋಧಿ ಬಿ.ಜೆ.ಪಿ ಸರಕಾರವನ್ನು ಸೋಲಿಸಿ – ಕಾಮ್ರೇಡ್ ಪಿ.ಪಿ.ಅಪ್ಪಣ್ಣ

ಬಂಟ್ವಾಳ : ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎ.ಐ.ಸಿ.ಸಿ.ಟಿ.ಯು) ದ.ಕ ಜಿಲ್ಲಾ ಸಮಾವೇಶ ಬಿ.ಸಿ.ರೋಡಿ ನಲ್ಲಿ ನಡೆಯಿತು.ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದ ಎ.ಐ.ಸಿ‌.ಸಿ.ಟಿ.ಯು ರಾಜ್ಯ ಪ್ರಧಾನ ಕಾರ್ಯದರ್ಶಿ ಕಾಮ್ರೇಡ್ ಪಿ.ಪಿ.ಅಪ್ಪಣ್ಣ ಮಾತನಾಡಿ ಎ.ಐ‌.ಸಿ.ಸಿ.ಟಿ.ಯು ಸಂಘಟನೆ ಒಂದು ಕೇಂದ್ರ ಕಾರ್ಮಿಕ ಸಂಘಟನೆಯಾಗಿದ್ದು ಕಾರ್ಮಿಕರ ಹಕ್ಕುಗಳಿಗಾಗಿ ನಿರಂತರವಾಗಿ ಹೋರಾಟ ನಡೆಸುತ್ತಿದ್ದು , ಹಲವಾರು ಚಳುವಳಿಗಳನ್ನು ನಡೆಸುವುದರ ಮೂಲಕ

ಬಂಟ್ವಾಳ: ಹೆಜ್ಜೇನು ನೊಣಗಳು ದಾಳಿ : ಒರ್ವನಿಗೆ ಗಂಭೀರ ಗಾಯ

ಬಂಟ್ವಾಳ: ಬಸ್ಸು ನಿಲ್ದಾಣಕ್ಕೆ ನಡೆದುಕೊಂಡು ಹೋಗುತ್ತಿದ್ದ ಮೂವರು ವ್ಯಕ್ತಿಗಳಿಗೆ ಹೆಜ್ಜೇನು ನೊಣಗಳು ದಾಳಿ ನಡೆಸಿ ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ನಡೆದಿದೆ. ಘಟನೆಯಲ್ಲಿ ಒರ್ವ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರ ಅಲ್ಪಸ್ವಲ್ಪ ಗಾಯಗಳಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಆದಿತ್ಯವಾರ ಮಧ್ಯಾಹ್ನ  ಕಲ್ಪನೆ ಎಂಬಲ್ಲಿ ನಡೆದಿದೆ. ಕಲ್ಪನೆ ನಿವಾಸಿ ಪೂವಪ್ಪ ( 61) ಗಂಭೀರವಾಗಿ ಗಾಯವಾಗಿದ್ದು,ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು,

ಬ್ರಹ್ಮರಕೋಟ್ಲು ಟೋಲ್‍ಗೇಟ್ ಅವ್ಯವಸ್ಥೆ ವಿರುದ್ಧ ಆಕ್ರೋಶ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಬ್ರಹ್ಮರಕೋಟ್ಲು ಟೋಲ್ ಗೇಟ್ ಅವ್ಯವಸ್ಥೆ ಹಾಗೂ ಬಂಟ್ವಾಳ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರದ ವಿರುದ್ಧ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಿದ್ದೇವೆ ಎಂದು ಎಸ್.ಡಿ.ಪಿ.ಐ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ , ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಇಲ್ಯಾಸ್ ತುಂಬೆ ತಿಳಿಸಿದ್ದಾರೆ. ಬಿ.ಸಿ.ರೋಡ್ ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ