Home ಕರಾವಳಿ Archive by category ಬಂಟ್ವಾಳ (Page 34)

ಬೆಲೆ ಏರಿಕೆ ನಿಯಂತ್ರಿಸುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಸಂಪೂರ್ಣ ವಿಫಲ: ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ್

ಬಂಟ್ವಾಳ: ದೇಶದಲ್ಲಿ ವಸ್ತುಗಳ ಬೆಲೆ ಏರಿಕೆ ಹೆಚ್ಚಾಗಿದ್ದು ಇದನ್ನು ನಿಭಾಯಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರಕಾರ ವಿಫಲವಾಗಿದೆ ಎಂದು ಡಿಸಿಸಿ ಪ್ರಧಾನ ಕಾರ್ಯದರ್ಶಿ ಎಂ. ಚಂದ್ರಶೇಖರ ಪೂಜಾರಿ ಆರೋಪಿಸಿದರು. ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಪೆಟ್ರೋಲ್ ಡೀಸೆಲ್ ಕಚ್ಛಾ ಸಾಮಾಗ್ರಿಗಳ ದರ ವಿದೇಶದಲ್ಲಿ ಸಂಪೂರ್ಣ ಇಳಿಕೆಯಾಗಿದ್ದರೂ ಕೇಂದ್ರ

ನೀರುಮಾರ್ಗದ ಸುಬ್ರಹ್ಮಣ್ಯ ಭಜನಾ ಮಂದಿರ ಕಳವು ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಪ್ರತಿಭಟನೆ

ಮಂಗಳೂರು: ಸುಬ್ರಹ್ಮಣ್ಯ ಭಜನಾ ಮಂಡಳಿ ನೀರುಮಾರ್ಗ ಮಂಗಳೂರು ಇತ್ತೀಚಿಗೆ ಮಂದಿರದಲ್ಲಿ ನಡೆದ ಕಳವು ಪ್ರಕರಣ, ಗರ್ಭಗುಡಿಯ ಪಾವಿತ್ರ್ಯತೆಗೆ ದಕ್ಕೆ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳನ್ನು ಶೀಘ್ರ ಬಂಧಿಸಿವಂತೆ ಆಗ್ರಹಿಸಿ ಸಮಾನ ಮನಸ್ಕ ಸಂಘಟನೆಗಳು ಸೇರಿ ಮಂಗಳೂರು ನಗರದ ಹೊರವಲಯದ ನೀರುಮಾರ್ಗದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ವಿಹೆಚ್‍ಪಿ ಮುಖಂಡ ಶರಣ್ ಪಂಪ್ವೆಲ್ ಮಾತನಾಡಿ, ಭಜನಾ ಮಂದಿರ ಕೇವಲ ಭಜನ ಕೇಂದ್ರ ಅಲ್ಲ ಅದು

ದೇವಸ್ಥಾನ ಕೆಡವಿರುವುದಕ್ಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ

ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ ಅನೇಕ ದೇವಸ್ಥಾನ, ದೈವಸ್ಥಾನ ಮತ್ತು ಪ್ರಾರ್ಥನಾ ಮಂದಿರಗಳನ್ನು ತೆರವುಗೊಳಿಸುವುದರ ವಿರುದ್ದ

ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು  9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,

ರಸ್ತೆ ಬದಿಯ ಗಿಡಗಳನ್ನು ಕಿತ್ತೆಸೆದ ದುಷ್ಕರ್ಮಿಗಳು : ಅರಣ್ಯ ಹಾಗೂ ಪೊಲೀಸರಿಗೆ ದೂರು

ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನು ರಾತೋರಾತ್ರಿ ಸ್ಥಳೀಯ ಐವರು ವ್ಯಕ್ತಿಗಳು ಕಿತ್ತೆಸೆದು ಧ್ವಂಸಗೊಳಿಸಿರುವುದಾಗಿ ಮಾರ್ಕ್ ಸೇರಾ ಅವರು ದೂರು ನೀಡಿದ್ದಾರೆ. ನೆಟ್ಟ ಗಿಡಗಳನ್ನು ಕಿತ್ತು ಬಿಸಾಕಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಸೆ.27ರಂದು ಬೃಹತ್ ಪ್ರತಿಭಟನಾ ಸಭೆ

ಕೇಂದ್ರ ಸರಕಾರ ತಂದಿರುವ ಕೃಷಿ ಮಸೂದೆಗಳ ವಾಪಸ್ಸಾತಿಗೆ ಆಗ್ರಹಿಸಿ ಜಿಲ್ಲಾ ಮಟ್ಟದ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಬಂದ್ ಸೆಪ್ಟಂಬರ್ 27ರಂದು ಬಿ.ಸಿ. ರೋಡ್‌ನಲ್ಲಿ ನಡೆಯಲಿದೆ. ಕೇಂದ್ರ ಸರಕಾರ ತಂದಿರು ಕೃಷಿ ಮಸೂದೆಗಳ ವಾಪಸ್ಸಾತಿಗೆ ಹಾಗೂ ಬೆಳೆಗಳಿಗೆ ಕನಿಷ್ಟ ಬೆಂಬಲಬೆಲೆಯನ್ನು ಕಾನೂನಾತ್ಮಕ ಗೊಳಿಸಲು ಆಗ್ರಹಿಸಿ ದೆಹಲಿ ಹೊರವಲಯದಲ್ಲಿ ನಡೆಯುತ್ತಿರು ನಿರಂತರ ಹೋರಾಟಕ್ಕೆ ಸೆಪ್ಟೆಂಬರ್ 26ಕ್ಕೆ 10 ತಿಂಗಳು ತುಂಬುತ್ತದೆ.ಈ ನಿಟ್ಟಿನಲ್ಲಿ ಸಂಯುಕ್ತ

ಬುಡೋಳಿಯಲ್ಲಿ ಖಾಸಗಿ ಬಸ್ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ

ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಖಾಸಗಿ ಮತ್ತು ಕಂಟೈನರ್ ಲಾರಿ ನಡುವೆ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಮಂಗಳೂರಿಗೆ ಹೋಗುತ್ತಿದ್ದ ಖಾಸಗಿ ಬಸ್ ಮತ್ತು ಮಂಗಳೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಕಂಟೈನರ್ ಲಾರಿ ನಡುವೆ ಬುಡೋಳಿಯ ಬೊಳ್ಳುಕಲ್ಲು ಎಂಬಲ್ಲಿ ಅಪಘಾತ ಸಂಭವಿಸಿದೆ.ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು, ಸುಮಾರು ೫ ಕಿ.ಮೀ ದೂರದಲ್ಲಿ ಲಾರಿಯನ್ನು ಬೆನ್ನಟ್ಟಿದ ತಂಡ

ಅಡಿಕೆ ಮರ ಏರುವ ಬೈಕ್ ಆವಿಷ್ಕಾರ

ಬಂಟ್ವಾಳ: ಅಡಿಕೆ ಮರ ಏರುವ ಬೈಕ್ ಆವಿಷ್ಕರಿಸಿ ಜಗತ್ತಿನ ಗಮನ ಸೆಳೆದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಪ್ರಗತಿಪರ ಕೃಷಿಕ, ಸಂಶೋಧಕ ಗಣಪತಿ ಭಟ್ ಮತ್ತೊಮ್ಮೆ ಸುದ್ದಿಯಾಗುತ್ತಿದ್ದಾರೆ. ಮುಂದಿನ ವಿಶ್ವ ಟಿ-20 ಕ್ರಿಕೆಟ್ ಟೂರ್ನಿ ಸಂದರ್ಭ ಭಾರತ ಗೆದ್ದು ಬರುವಂತೆ ಜಾಹೀರಾತಿನಲ್ಲಿ ಗಣಪತಿ ಭಟ್, ಭಾರತ ಕ್ರಿಕೆಟ್ ತಂಡದ ಸದಸ್ಯರಿಗೆ ಚಿಯರ್ಸ್ ಮಾಡಲಿದ್ದಾರೆ. ಸ್ಟಾರ್ ಸ್ಪೋಟ್ಸ್ ಚಾನಲ್ ಈ ಅವಕಾಶವನ್ನು ಗ್ರಾಮೀಣ ಭಾಗದ ಒರ್ವ ಕೃಷಿಕನಿಗೆ

ಸಜೀಪಮೂಡ‌ದಲ್ಲಿ ಪುರುಷಾಮೃಗದ ಅಪರೂಪದ ಶಿಲ್ಪವುಳ್ಳ ಬಂಗರಸನ ಶಾಸನ ಪತ್ತೆ

ದಕ್ಷಿಣ ಕನ್ನಡ‌ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಅನ್ನಪಾಡಿ ಬಾಲಗಣಪತಿ ದೇವಾಲಯದ ಬಳಿಯ ದಿ. ಮೋನಪ್ಪ ಪೂಜಾರಿಯವರ ತೋಟದಲ್ಲಿರುವ ಶಾಸನವನ್ನು ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಇದರ ಅಧ್ಯಕ್ಷರಾದ ಡಾ| ತುಕಾರಾಮ ಪೂಜಾರಿಯವರು ಹಾಗೂ ಬಂಟ್ವಾಳ ತಾಲೂಕು ಪಂಚಾಯತಿನ ಮಾಜಿ ಅಧ್ಯಕ್ಷರಾದ ಶ್ರೀ ಯಶವಂತ ದೇರಾಜೆ ಅವರು ಈ ಮೊದಲು ಪತ್ತೆ ಮಾಡಿರುತ್ತಾರೆ. ಪ್ರಾಚ್ಯಸಂಚಯ ಸಂಶೋಧನಾ ಕೇಂದ್ರ – ಉಡುಪಿ (ಎನ್.ಟಿ‌.ಸಿ- ಎ.ಒ.ಎಂ ನ ಅಂಗ

ಬಂಟ್ವಾಳ: ಮೇಗಿನ ಕುರಿಯಾಳದಲ್ಲಿ 13ನೇ ಶತಮಾನದ ಶಾಸನ‌ ಪತ್ತೆ

ಬಂಟ್ವಾಳ : ತಾಲೂಕಿನ ಮೇಗಿನ‌ ಕುರಿಯಾಳದಲ್ಲಿ ಪ್ರಾಚ್ಯಸಂಚಯ ಸಂಶೋಧನ ಕೇಂದ್ರ‌-ಉಡುಪಿ,(ಎನ್.ಟಿ.ಸಿ.-ಎ.ಒ.ಎಂ-ನ ಅಂಗ ಸಂಸ್ಥೆ) ಇದರ ಅಧ್ಯಯನ‌ ನಿರ್ದೇಶಕ ಪ್ರೊ.ಎಸ್‌.ಎ.ಕೃಷ್ಣಯ್ಯ ಅವರು ಇತ್ತೀಚೆಗೆ ಪತ್ತೆ ಮಾಡಿದ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಅವರು ಓದಿ ಅರ್ಥೈಸಿದ್ದಾರೆ. ಗ್ರಾನೈಟ್ (ಕಣ)ಶಿಲೆಯಲ್ಲಿ ಕೊರೆಯಲ್ಪಟ್ಟ ಈ ಶಾಸನವು ಕನ್ನಡ ಲಿಪಿ ಮತ್ತು ಭಾಷೆಯಲ್ಲಿದ್ದು 25 ಸಾಲುಗಳನ್ನು ಹೊಂದಿದೆ. ಶಾಸನವು