Home ಕರಾವಳಿ Archive by category ಬಂಟ್ವಾಳ (Page 35)

ಕಾರ್ಮಿಕ ಇಲಾಖೆ ನೀಡುವ ಆಹಾರ ಕಿಟ್‍ನಲ್ಲಿ ತಾರತಮ್ಯ : ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪ್ರತಿಭಟನೆ

ಬಂಟ್ವಾಳ: ಕೆಎಸ್‍ಆರ್‍ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‍ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್

ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ ನಿಧನ

ಬಂಟ್ವಾಳ: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಸದಸ್ಯ,ಹಿರಿಯ ಪತ್ರಕರ್ತ, ಸಂಘಟಕ, ಸಾಮಾಜಿಕ ಕಾರ್ಯಕರ್ತ ಡಿ.ಎಂ.ಕುಲಾಲ್ (54) (ದೈಪಲ ಮಾಧವ ಕುಲಾಲ್) ಅವರು ಸುಧೀರ್ಘ ಕಾಲದ ಅಸೌಖ್ಯದಿಂದ ಗುರುವಾರ ಮಧ್ಯಾಹ್ನ ದೈಪಲದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.  ಮೃತರು ತಾಯಿ, ಪತ್ನಿ, ಒಂದು ಹೆಣ್ಣು, ಒಂದು ಗಂಡು ಮಕ್ಕಳ ಸಹಿತ ಬಂಧುಗಳನ್ನು ಅಗಲಿದ್ದಾರೆ. ಮುಂಗಾರು, ಮಂಗಳೂರು ಮಿತ್ರ, ನೇತ್ರಾವತಿ ವಾರ್ತೆ ಪತ್ರಿಕೆಯಲ್ಲಿ ಪತ್ರಕರ್ತರಾಗಿ ಕಾರ್ಯ

ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ದ.ಕ. ಜಿ.ಪಂ. ಹಿ.ಪ್ರಾ. ಶಾಲೆ ಬ್ರಹ್ಮರಕೂಟ್ಲು ಹಾಗೂ ಕಳ್ಳಿಗೆ ಗ್ರಾಮಾಭಿವೃದ್ದಿ ಸಂಘದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮ ಬುಧವಾರ ಶಾಲೆಯಲ್ಲಿ ನಡೆಯಿತು. ಮಾಜಿ ಸಚಿವ, ಕಳ್ಳಿಗೆ ಗ್ರಾಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಬಿ.ರಮಾನಾಥ ರೈ ಕಾರ್ಯಕ್ರಮ ಉದ್ಘಾಟಿಸಿ ಸಾಂಕೇತಿಕವಾಗಿ ಪುಸ್ತಕ ವಿತರಣೆ ಮಾಡಿದರು. ಬಳಿಕ ಮಾತನಾಡಿದ ಅವರು ಶಿಕ್ಷಣ ಪ್ರಗತಿಯ ಸಂಕೇತ ಆದರೆ ಹಿಂದೆಲ್ಲಾ ಎಲ್ಲರಿಗೂ ಶಿಕ್ಷಣ ಪಡೆಯುವ

1ನೇ ತರಗತಿಯಿಂದ ಶಾಲೆ ಆರಂಭಿಸಿ: ಪ್ರಕಾಶ್ ಅಂಚನ್ ನಿಯೋಗದಿಂದ ಶಿಕ್ಷಣ ಸಚಿವರಿಗೆ ಮನವಿ

ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು 9 ಮತ್ತು 10ನೇ ತರಗತಿಗಳು ಆರಂಭಗೊಂಡ ಬಳಿಕ ಎರಡು ದಿನದಲ್ಲಿ

ಬುಡೋಳಿಯಲ್ಲಿ ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ

ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಎಂಬಲ್ಲಿ ಸಂಭವಿಸಿದೆ. ಪೇರಮುಗೇರು ನಿವಾಸಿ ರುಕ್ಮಯ ಗಾಯಗೊಂಡ ಆಕ್ಟೀವಾ ಸವಾರ. ಉಪ್ಪಿನಂಗಡಿ ಕಡೆಯಿಂದ ಮಾಣಿ ಕಡೆಗೆ ಹೋಗುತ್ತಿದ್ದ ಆಕ್ಟೀವಾ ವಾಹನಕ್ಕೆ ಹಿಂದಿನಿಂದ ಬಂದ ಲಾರಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಆಕ್ಟೀವಾ ನಜ್ಜುಗುಜ್ಜಾಗಿದ್ದು, ಸವಾರ ಸಣ್ಣಪುಟ್ಟ ಗಾಯಗಳಿಂದ ಪವಾಢದೃಶ್ಯ

ಕೆ ಎಮ್ ಎಫ್ ವತಿಯಿಂದ ನಂದಿನಿ ಸಿಹಿ ಉತ್ಸವ: ಬಿ.ಸಿ. ರೋಡಿನ ಔಟ್‌ ಲೆಟ್‌ ನಲ್ಲಿ ಚಾಲನೆ

ಬಂಟ್ವಾಳ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ನಂದಿನಿ ಸಿಹಿ ಉತ್ಸವವನ್ನು ಆ. 19 ರಿಂದ ಹಮ್ಮಿಕೊಂಡಿದ್ದು ಬಿ.ಸಿ.ರೋಡಿನ ವಿತರಕರಾದ ಅಲೋಷಿಯಸ್ ಡಿಸೋಜಾ ಅವರ ಮಳಿಗೆಯಲ್ಲಿ ಚಾಲನೆ ನೀಡಲಾಯಿತು. ದ.ಕ. ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದ ನಿರ್ದೇಶಕಿ ಸವಿತ ಎನ್. ಶೆಟ್ಟಿ ದೀಪ ಪ್ರಜ್ವಲಿಸಿದರು. ಅವರು ವಿ4 ನ್ಯೂಸ್‌ನೊಂದಿಗೆ ಮಾತನಾಡಿ ನಂದಿನಿ ಸಿಹಿ ಉತ್ಸವದ  ಪ್ರಯುಕ್ತ ಎಲ್ಲಾ ನಂದಿನಿ ಸಹಿ ಉತ್ಪನ್ನಗಳ ಮೇಲೆ ಶೇ.10ರಷ್ಟು ರಿಯಾಯಿತಿಯನ್ನು

ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕೆ ಕಾರ್ಡ್ ಚಳವಳಿ: ಮನೋಹರ ಶೆಟ್ಟಿ

ವಿಟ್ಲ: ರಾಕ್ಷಸ ಪ್ರವೃತ್ತಿ ಕಂಪನಿ ಎದುರಿಗೆ ಸಿಗುವ ರೈತರನ್ನು ನಾಶ ಮಾಡಲು ಮುಂದಾಗಿದೆ. ಇತಿಹಾಸದ ದಿನದಲ್ಲಿ ಹಾಗೂ ಇತ್ತೀಚಿನದ ದಿನದಲ್ಲಿ ದೇವರನ್ನು ಪ್ರಾರ್ಥಿಸಿದಾಗ ಪ್ರತ್ಯಕ್ಷವಾಗಿ ರಾಕ್ಷಸರನ್ನು ವಧಿಸಿದ ಘಟನೆಗಳಿದೆ. ಎರಡನೇ ಹಂತದಲ್ಲಿ ರೈತಾಪಿ ವರ್ಗವನ್ನು ಧಮನಿಸುವ ದುಷ್ಟರ ನಿಗ್ರಹಕ್ಕಾಗಿ ದೈವ ದೇವರ ಬಳಿ ದೂರು ನೀಡುವ ಕಾರ್ಯ ಮಾಡಲಾಗುವುದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡುಕಂಬಳಗುತ್ತು ಹೇಳಿದರು.

ಕೋವಿಡ್ ನಿಯಂತ್ರಣಕ್ಕೆ ಕೋವಿಡ್ ಕೇರ್ ಸೆಂಟರ್‌ಗೆ ಮಹತ್ವಕೊಡಿ: ಬಿ.ಸಿ. ರೋಡ್‌ನಲ್ಲಿ ಸಚಿವ ಎಸ್. ಅಂಗಾರ

ಬಂಟ್ವಾಳ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ಹೋಂ ಐಸೋಲೆಶನ್‌ಗಿಂತ ಕೋವಿಡ್ ಕೇರ್ ಸೆಂಟರ್‌ಗೆ ಹೆಚ್ಚಿನ ಮಹತ್ವ ನೀಡಬೇಕು. ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಕಲ್ಪಿಸಿರುವ ವ್ಯವಸ್ಥೆಗಳ ಬಗ್ಗೆ ಜನರಿಗೆ ತಿಳುವಳಿಕೆ ಮೂಡಿಸಿ, ವಿಶ್ವಾಸ ತುಂಬುವ ಕೆಲಸ ಮಾಡಬೇಕು. ಇದರಿಂದಾಗಿ ವೈರಾಣು ಹರಡುವುದನ್ನು ತಪ್ಪಿಸುವುದರ ಜೊತೆಗೆ ರೋಗ ನಿಯಂತ್ರಣವೂ ಸಾಧ್ಯವಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ತಿಳಿಸಿದರು. ಬಿ.ಸಿ.ರೋಡಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ

ಬಿ.ಸಿ ರೋಡ್‌ನಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬಂಟ್ವಾಳ: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಬಿ.ಸಿ.ರೋಡಿನ ಮಿನಿವಿಧಾನ ಸೌಧದ ಮುಂಭಾಗ ಕೋವಿಡ್ ಮಾರ್ಗಸೂಚಿಯನ್ವಯ ಸರಳವಾಗಿ ಆಚರಿಸಲಾಯಿತು. ಬಂಟ್ವಾಳ ತಹಸೀಲ್ದಾರ್ ರಶ್ಮಿ ಎಸ್. ಆರ್ ಧ್ವಜಾರೋಹಣ ನೆರವೇರಿಸಿದರು. ಶಾಸಕ ರಾಜೇಶ್ ನಾಕ್, ಡಿವೈಎಸ್ಪಿ ವೆಲೈಂಟೀನ್ ಡಿಸೋಜಾ, ತಾ.ಪಂ. ಕಾರ್ಯನಿರ್ವಾಹಣಾಧಿಕಾರಿ ರಾಜಣ್ಣ ಉಪಸ್ಥಿತರಿದ್ದರು. ಬಂಟ್ವಾಳ ಪೋಲೀಸ್ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗ, ಗೃಹರಕ್ಷಕದಳ

ಬಂಟ್ವಾಳ: ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್‍ಗೊಳಿಸಿ ಪ್ರತಿಭಟನೆ

ವೇತನ ಪಾವತಿಯಾಗದ ಕಾರಣ ಕ್ಯಾಂಟೀನ್ ಬಂದ್ ಗೊಳಿಸಿ ಪ್ರತಿಭಟನೆ ನಡೆಸುತ್ತಿರುವ ಬಿ.ಸಿ.ರೋಡಿನ ಇಂದಿರಾ ಕ್ಯಾಂಟೀನ್ ಸಿಬ್ಬಂದಿಗಳ ಸಂಕಷ್ಟಕ್ಕೆ ಸ್ಪಂದಿಸಿರುವ ಮಾಜಿ ಸಚಿವ ಬಿ. ರಮನಾಥ ರೈ ಆಹಾರದ ಕಿಟ್ ನೀಡುವ ಭರವಸೆ ನೀಡಿದ್ದಾರೆ. ಬುಧವಾರ ಕ್ಯಾಂಟೀನ್ ಗೆ ಭೇಟಿ ನೀಡಿದ ಅವರು ಇಂದಿರಾ ಕ್ಯಾಂಟೀನ್ ಯಾವುದೇ ಕಾರಣಕ್ಕೂ ಮುಚ್ಚಲು ಬಿಡುವುದಿಲ್ಲ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ, ಎಂ ಎಸ್