ಪಟ್ಟ್ ಸೀರೆ, ಪಟ್ಟು ರವ್ಕೆ, ಪಟ್ಟೆ ಕುಂಟು ಎಂದರೆ ಪಟ್ಟೆ ಬಟ್ಟೆ ಈ ಎಲ್ಲ ನುಡಿಗಳು ಇಂದಿನ ತಲೆಮಾರಿನವರಿಗೆ ಗೊತ್ತೇ ಇಲ್ಲ. ಇದರಲ್ಲಿ ತುಳು ಕನ್ನಡ ಅಲ್ಲದೆ ದ್ರಾವಿಡದ ಮೂಲ ನುಡಿಗಳು ಅಡಗಿವೆ. ತುಳುವಿನಲ್ಲಿ ಪಕ್ಕಿದ ಪಟ್ಟ್ ಎಂದರೆ ಹಕ್ಕಿಯ ಗೂಡು ಎಂದು ಅರ್ಥ.ರೇಶಿಮೆ ನೂಲನ್ನು ರೇಶ್ಮೆ ಹುಳುವಿನ ಗೂಡಿನಿಂದ ತೆಗೆಯುತ್ತಾರೆ. ಹಾಗಾಗಿ ಅದು ಪಟ್ಟ್, ಪಟ್ಟೆ;
ಮಂಗಳೂರಿನ ಆರ್ಎಸ್ಎಸ್ ಮುಖಂಡರಾಗಿದ್ದ ಸತೀಶ್ ಪ್ರಭು ಅವರು ಇಂದು ನಿಧನರಾಗಿದ್ದಾರೆ. ಬ್ರೈನ್ ಹ್ಯಾಮರೇಜ್ಗೆ ಒಳಗಾಗಿದ್ದ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನದ ವೇಳೆ ನಿಧನ ಹೊಂದಿದ್ದಾರೆ. ಸತೀಶ್ ಪ್ರಭು ಅವರು ಪ್ರಸ್ತುತ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವಕ್ತರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಗಳೂರಿನ ಕಾರ್ಸ್ಟರೀಟ್ ಶ್ರೀ ವೆಂಕಟರಮಣ ದೇವಸ್ಥಾನದ ಟ್ರಸ್ಟಿಯಾಗಿದ್ದರು.
ಕೊಡಿಯಲ್ ತೇರಿನ ಚಿತ್ರಕ್ಕೆ ಸತತ ಮೂರು ವರ್ಷ ಕೊಂಚಾಡಿ ಸಾಗರ್ ದೇವಾಡಿಗ ಅಂತಾರಾಷ್ಟ್ರೀಯ ಪ್ರಶಸ್ತಿ ಪಡೆದುಕೊಂಡಿದ್ದಾರೆ. ‘6TH COLOURS OF LIFE’ INTERNATIONAL SALON 2026, Madhyamgram, Kolkata ಆಯೋಜಿಸಿದ ಅಂತಾರಾಷ್ಟ್ರೀಯ ಮಟ್ಟದ ಛಾಯಾಚಿತ್ರ ಸ್ಪರ್ಧೆಯಲ್ಲಿ SALON GOLD MEDAL ಪದಕವನ್ನು ಪಡೆದುಕೊಂಡಿದ್ದಾರೆ. ಕೊಂಚಾಡಿ ಸಾಗರ್ ದೇವಾಡಿಗ ಅವರಿಗೆ ಜಿಲ್ಲೆ, ರಾಜ್ಯ, ರಾಷ್ಟç, ಅಂತಾರಾಷ್ಟ್ರೀಯ ಪ್ರಶಸ್ತಿ, ಹಲವು ಚಿನ್ನದ ಪದಕ ಹಾಗೂ
ಎo.ಸಿ.ಸಿ. ಬ್ಯಾಂಕಿನ ಬೆಳ್ಮಣ್ ಶಾಖೆಯ ಪ್ರಥಮ ವಾರ್ಷಿಕೋತ್ಸವ ಹಾಗೂ ಒಂದೇ ವರ್ಷದಲ್ಲಿ ರೂ.10 ಕೋಟಿ ವ್ಯವಹಾರ ಗುರಿಯನ್ನು ಯಶಸ್ವಿಯಾಗಿ ದಾಟಿದ ಮಹತ್ವದ ಸಾಧನೆಯನ್ನು ಶನಿವಾರ, 28ನೇ ಫೆಬ್ರವರಿ 2026 ರಂದು ಬೆಳ್ಮಣ್ಶಾಖೆಯಲ್ಲಿ ಸಂಭ್ರಮದಿAದ ಆಚರಿಸಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಅನಿಲ್ ಲೋಬೋ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ, ಪರಪ್ಪಾಡಿಯ ಅವರ್ ಲೇಡಿ ಆಫ್ ಪರ್ಪೆಚುಯಲ್ ಸುಕುರ್ ಚರ್ಚ್ನ
ಮಂಗಳೂರು ಮೀನುಗಾರಿಕಾ ದಕ್ಕೆ ಪ್ರದೇಶದಲ್ಲಿ ದುಡಿಯುತ್ತಿದ್ದ ವೇಳೆಯಲ್ಲಿ ತುಕ್ಕು ಹಿಡಿದ ದಾರಿದೀಪದ ಕಂಬವೊಂದು ಬಿದ್ದಿದ್ದರ ಪರಿಣಾಮವಾಗಿ ತಮಿಳುನಾಡು ಮೂಲದ ಕಾರ್ಮಿಕ ಮುರುಗನ್ ರವರು ಸ್ಥಳದಲ್ಲೇ ಮೃತಪಟ್ಟಿದ್ದು,ಈ ಸಾವಿಗೆ ಕಾರಣರಾದವರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿ ಹಾಗೂ ಈ ಸಾವಿಗೆ ನ್ಯಾಯ ದೊರಕಿಸಿಕೊಡಬೇಕು,ಮೃತರಾದ ಮುರುಗನ್ ಕುಟುಂಬಕ್ಕೆ ರೂ.25 ಲಕ್ಷದಷ್ಟು ಪರಿಹಾರ ನೀಡಬೇಕೆಂದು ಒತ್ತಾಯಿಸಿ ಕೇಂದ್ರ ಕಾರ್ಮಿಕ ಸಂಘಟನೆ CITU ಹಾಗೂ ಯುವಜನ ಸಂಘಟನೆ
ಮಂಗಳೂರು; ಸಚಿವರಾದ ಸಂತೋಷ್ ಲಾಡ್ ಗೆ, ಕಾರ್ಮಿಕರ ಬಗ್ಗೆ ವಿಶೇಷ ಕಾಳಜಿ ಇದೆ, ಆ ಕಾರಣದಿಂದ ಈ ರೀತಿಯ ಅತ್ಯುತ್ತಮ ಕಾರ್ಯಕ್ರಮಗಳು ನಡೆಯುತಿದೆ ಎಂದು ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ದಿ ಮಂಡಳಿ ಬೆಂಗಳೂರು ಇದರ ಅಧ್ಯಕ್ಷೆ ಶಾಲೆಟ್ ಪಿಂಟೋ ಹೇಳಿದರು. ಅವರು ಪದವಿನಂಗಡಿಯ ಶ್ರೀ ಗಣೇಶೋತ್ಸವ ಸಮಿತಿ ಶ್ರೀ ಬೆನಕ ಸಭಾಭವನದಲ್ಲಿ ನಡೆದ ದ.ಕ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ದ.ಕ ಜಿಲ್ಲೆ, ಕಾರ್ಮಿಕ ಇಲಾಖೆ, ಕಾರ್ಖಾನೆಗಳು, ಬಾಯ್ಲರ್ ಗಳು, ಕೈಗಾರಿಕಾ
ಪಣಂಬೂರು: ಲಾರಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಪಣಂಬೂರು ಇಂಡಿಯನ್ ಆಯಿಲ್ ಪೆಟ್ರೋಲ್ ಪಂಪ್ ಮುಂಭಾಗ ನಡೆದಿದೆ. ಮೃತ ಬೈಕ್ ಸವಾರನನ್ನು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕು ನಿವಾಸಿ ಸದ್ಯ ಮಂಗಳೂರು ಬಿಜೈಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿರುವ ಶಿವದಾಸ್ ಗಣಪತಿ ನಾಯ್ಕ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಶಿವದಾಸ್ ಗಣಪತಿ ನಾಯ್ಕ ಅವರು ಬೈಕಂಪಾಡಿಯ ಔಷಧಿ ತಯಾರಕ ಸಂಸ್ಥೆಯಲ್ಲಿ ಕೆಲಸ
ದ ಟೈಮ್ಸ್ ಆಫ್ ಇಂಡಿಯಾ ಆಯೋಜಿಸಿದ್ದ ಟೈಮ್ಸ್ ಬಿಸಿನೆಸ್ ಅವಾರ್ಡ್ಸ್ & ಕಾಂಕ್ಲೇವ್ ೨೦೨೬ ಕಾರ್ಯಕ್ರಮವು ಮಂಗಳೂರಿನ ಅವತಾರ್ ಹೋಟೆಲ್ನಲ್ಲಿ ನಡೆಯಿತು. ಮಂಗಳೂರಿನ ಉದ್ಯಮಿ ಲಂಚುಲಾಲ್ ಕೆ.ಎಸ್. ಅವರು ಬಿಸ್ನೆಸ್ ಅವಾರ್ಡ್ಗೆ ಭಾಜನರಾಗಿದ್ದಾರೆ. ನಗರದ ಅವತಾರ್ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಗಳೂರು, ಮೈಸೂರು ಹಾಗೂ ಹುಬ್ಬಳ್ಳಿ ಭಾಗಗಳ ವಿವಿಧ ಕ್ಷೇತ್ರಗಳ ಉದ್ಯಮಿಗಳು ಭಾಗವಹಿಸಿದ್ದರು. ಉದ್ಯಮಿ ಲಂಚುಲಾಲ್ ಅವರು, ಈ ವರ್ಷದ ವ್ಯವಹಾರ ಮತ್ತು
ಮೂಡುಬಿದಿರೆ : ಕೆ. ಅಮರನಾಥ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ (ರಿ.) ಮತ್ತು ಎ.ಬಿ. ಶೆಟ್ಟಿ ಸ್ಮಾರಕ ದಂತ ವಿಶ್ವ ವಿದ್ಯಾನಿಲಯ ದೇರಳಕಟ್ಟೆ ಇಲ್ಲಿನ ಮಕ್ಕಳ ದಂತ ಚಿಕಿತ್ಸಾ ವಿಭಾಗ ಇದರ ಸಂಯುಕ್ತ ಆಶ್ರಯದಲ್ಲಿ “ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ’ವು ಕಲ್ಲಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿತು. ವನಜಾಕ್ಷಿ ಎಜುಕೇಶನ್ ಫೌಂಡೇಶನ್ ಮತ್ತು ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕ ಕೆ. ಶ್ರೀಪತಿ ಭಟ್ ಶಿಬಿರವನ್ನು
ಮಂಗಳೂರು ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದ ಹಳೆ ವಿದ್ಯಾರ್ಥಿನಿ ರಶಾ ಫಾತಿಮಾ ಅವರು ಕಳೆದ ಡಿಸೆಂಬರ್ನಲ್ಲಿ ನಡೆದ ಚಾರ್ಟರ್ಡ್ ಸರ್ಟಿಫೈಡ್ ಅಕೌಂಟೆಂಟ್ಸ್ ಅಸೋಸಿಯೇಷನ್ ನಡೆಸಿದ ಸುಧಾರಿತ ಹಣಕಾಸು ನಿರ್ವಹಣೆಯ ವಿಷಯದಲ್ಲಿ ವಿಶ್ವದಲ್ಲಿ 10 ರ್ಯಾಂಕ್ ಮತ್ತು ಅಖಿಲ ಭಾರತದಲ್ಲಿ 3ನೇ ರ್ಯಾಂಕ್ ಗಳಿಸಿ ಶೈಕ್ಷಣಿಕ ಕ್ಷೇತ್ರದಲ್ಲಿ ಗಮನಾರ್ಹ ಸಾಧನೆ ಮಾಡಿದ್ದಾರೆ. ರಶಾ ಫಾತಿಮಾ ಅವರ ಸಾಧನೆ ವಿಶ್ವವಿದ್ಯಾನಿಲಯಕ್ಕೆ ಮತ್ತು ವಾಣಿಜ್ಯ ಹಣಕಾಸು ಮತ್ತು




























