Home ಕರಾವಳಿ Archive by category ಮಂಗಳೂರು

ಮಂಗಳೂರು: ಹಿರಿಯ ವಿದ್ವಾಂಸ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿಯರ ವಾಚಕಿಯರ ಸಂಘ, ಹೇಮಾಂಶು ಪ್ರಕಾಶನ, ಆಕೃತಿ ಆಶಯ ಪಬ್ಲಿಕೇಶನ್ಸ್ ವತಿಯಿಂದ ಇತ್ತೀಚೆಗೆ ನಿಧನರಾದ ಹಿರಿಯ ವಿದ್ವಾಂಸರಾದ ಡಾ. ವಾಮನ ನಂದಾವರ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವು ನಗರದ ತುಳು ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆಯಿತು. ಆರದ ಎಣ್ಣೆ, ಮಾಸದ ಬತ್ತಿ, ಆರದ ದೀಪ ಎಂಬ ಹೆಸರಿನಲ್ಲಿ ನುಡಿನಮನ

ಡ್ರಗ್ಸ್ ಜಾಲ ಬೇಧಿಸಿರುವ ಪೊಲೀಸ್ ಇಲಾಖೆಯ ಕಾರ್ಯ ವೈಖರಿಗೆ ಶ್ಲಾಘನೆ ವ್ಯಕ್ತಪಡಿಸಿದ ಮಂಜುನಾಥ್ ಭಂಡಾರಿ

ಮಂಗಳೂರು ಸಿಸಿಬಿ ಪೊಲೀಸರು ರಾಜ್ಯದ ಇತಿಹಾಸದಲ್ಲೇ ಅತೀ ದೊಡ್ಡ ಡ್ರಗ್ಸ್ ಜಾಲವನ್ನು ಬೇಧಿಸಿರುವುದು ಪೊಲೀಸ್ ಇಲಾಖೆಯ ಬಗ್ಗೆ ಜಿಲ್ಲೆಯ ನಾಗರಿಕರು ಹೆಮ್ಮೆ ಪಡುವಂತಹ ವಿಷಯವಾಗಿದೆ ಎಂದು ವಿಧಾನ ಪರಿಷತ್ಸದಸ್ಯರಾದ ಮಂಜುನಾಥ ಭಂಡಾರಿ ಹೇಳಿದರು.ದಕ್ಷಿಣ ಕನ್ನಡ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಡ್ರಗ್ಸ್ ಜಾಲದ ಕಬಂಧಬಾಹುಗಳಲ್ಲಿ ಬಂಧಿಯಾಗಿದ್ದು ಜನಸಾಮಾನ್ಯರು ಆತಂಕ ಪಡುವಂತಹ ವಾತಾವರಣ ಸೃಷ್ಟಿಯಾಗಿತ್ತು. ಆದರೆ ಈ ಜಾಲದ ಬೆನ್ನುಬಿದ್ದ ಪೊಲೀಸರು ಅಂದಾಜು 75 ಕೋಟಿ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ (ರಿ) ಎಸ್. ಕೋಡಿ ಇವರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ವೇದಿಕೆಯ ವತಿಯಿಂದ ವಿಶ್ವ ಮಹಿಳಾ ದಿನಾಚರಣೆಯನ್ನು ದಿನಾಂಕ 15 .03.2025 ರಂದು ಪದ್ಮಾವತಿ ಲಾನ್ ಎಸ್ ಕೋಡಿ,‌ ತೋಕೂರು ಇಲ್ಲಿ ನೆರವೇರಿಸಲಾಯಿತು.ಈ ಕಾರ್ಯಕ್ರಮದ ಉದ್ಘಾಟನೆಯನ್ನು ಗೋವಿಂದ ದಾಸ್ ಪದವಿಪೂರ್ವ ಕಾಲೇಜು ಸುರತ್ಕಲ್ ಇಲ್ಲಿನ ಉಪನ್ಯಾಸಕರಾದ ಶ್ರೀಮತಿ ಪಲ್ಲವಿ ರಾಜೇಶ್ ರವರು ದೀಪ ಪ್ರಜ್ವಲನೆಗೊಳಿಸಿ ನೆರವೇರಿಸಿದರು. “ಸಮಾಜದಲ್ಲಿ

ಮಂಗಳೂರು : ತುಳು, ಕನ್ನಡ ವಿದ್ವಾಂಸ ಡಾ. ವಾಮನ ನಂದಾವರ ವಿಧಿವಶ

ಹಿರಿಯ ವಿದ್ವಾಂಸ ಡಾ.ವಾಮನ ನಂದಾವರ (81) ಅವರು ಮಾ.15ರ ಶನಿವಾರ ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ವರ್ಷಗಳಿಂದ ಅನಾರೋಗ್ಯಪೀಡಿತರಾಗಿದ್ದರು. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ನಂದಾವರ ಗ್ರಾಮದ ಇವರು ಕನ್ನಡ ಹಾಗೂ ತುಳು ಭಾಷಾ ವಿದ್ವಾಂಸ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರಾಗಿದ್ದರು. ಹೆಸರಾಂತ ಜಾನಪದ ವಿದ್ವಾಂಸರಾಗಿದ್ದರು. ಹೇಮಾಂಶು ಪ್ರಕಾಶನದ ಮೂಲಕ ಅನೇಕ ಬರಹಗಾರರನ್ನು, ಕಲಾವಿದರನ್ನು ರೂಪಿಸಿದ ಇವರು ಹಲವಾರು

ಕುದ್ರೋಳಿ ಗಣೇಶ್ ಅವರಿಗೆ ಗೋಲ್ಡನ್ ಮ್ಯಾಜಿಷಿಯನ್ ರಾಷ್ಟ್ರೀಯ ಜಾದೂ ಪ್ರಶಸ್ತಿ

ಆಂಧ್ರಪ್ರದೇಶದ ಇಂಡಿಯನ್ ಮ್ಯಾಜಿಕ್ ಅಸೋಶಿಯೇಶನ್ ಸಂಸ್ಥೆಯು ಕರ್ನಾಟಕದ ಜಾದೂ ಕಲಾವಿದ ಕುದ್ರೋಳಿ ಗಣೇಶ್ ರವರಿಗೆ ಪ್ರತಿಷ್ಟಿತ ” ಗೋಲ್ಡನ್ ಮ್ಯಾಜಿಷಿಯನ್ ” ರಾಷ್ಟ್ರೀಯ ಜಾದೂ ಪ್ರಶಸ್ತಿ ನೀಡಿ ಗೌರವಿಸಿದೆ. ಕುದ್ರೋಳಿ ಗಣೇಶ್ ರವರು ಜಾದೂ ರಂಗದಲ್ಲಿ ಮಾಡಿರುವ ಸೃಜನಾತ್ಮಕ ಪ್ರಯೋಗಗಳನ್ನು ಗುರುತಿಸಿ ಜೀವಿತಾವಧಿಯ ಸಾಧನೆಗಾಗಿ ಈ ಪ್ರಶಸ್ತಿ ಸಂದಾಯವಾಗಿದೆ. ಆಂಧ್ರಪದೇಶದ ವಿಶಾಖಪಟ್ಟಣದಲ್ಲಿ ರಾಷ್ಟ್ರೀಯ ಜಾದೂ ದಿನಾಚರಣೆಯ ನೆನಪಿಗಾಗಿ ನಡೆದ ಅದ್ದೂರಿ

ಮಂಗಳೂರು : ತುಳು ರಂಗಭೂಮಿ, ತುಳು ಚಿತ್ರ ನಟ ವಿವೇಕ್ ಮಾಡೂರು ನಿಧನ

ಕಳೆದ ಕೆಲ ದಶಕಗಳಿಂದ ತುಳು ರಂಗಭೂಮಿಯಲ್ಲದೆ, ತುಳು ಚಿತ್ರರಂಗದಲ್ಲೂ ಕಲಾರಸಿಕರನ್ನ ತನ್ನ ಕುಬ್ಜ ದೇಹದಿಂದಲೇ ರಂಜಿಸುತ್ತಿದ್ದ ವಿವೇಕ್ ಮಾಡೂರು(52) ಇಂದು ಬೆಳಗ್ಗೆ ಹೃದಯಾಘಾತದಿಂದ ಮಾಡೂರಿನ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಗುರುವಾರ ರಾತ್ರಿ ಮನೆಯಲ್ಲಿ ಮಲಗಿದ್ದ ಅವರನ್ನು ಇಂದು ಬೆಳಿಗ್ಗೆ ಮನೆ ಮಂದಿ ಎಬ್ಬಿಸಲು ಹೋದಾಗ ಮೃತಪಟ್ಟಿರುವುದು ತಿಳಿದು ಬಂದಿದೆ. ಮೃತ ವಿವೇಕ್ ಅವರು ಪತ್ನಿ ವೇದಾವತಿ ಜೊತೆ ಮಾಡೂರಿನ ಸಹೋದರನ ಮನೆಯಲ್ಲಿ ವಾಸವಾಗಿದ್ದರು. ಈ ಹಿಂದೆ

ಮಂಗಳೂರು: ಮಿಸ್ಟರ್, ಮಿಸ್, ಮಿಸ್ಟರ್ ತುಳುನಾಡು-2025 ಸೀಸನ್ 4

ಅಲ್ಲೊಂದು ಸುಂದರ ಫ್ಯಾಷನ್ ಜಗತ್ತು ಅನಾವರಣಗೊಂಡಿತು. ಇನ್ನು ಕಲರ್ ಕಲರ್ ಬಟ್ಟೆಗಳಿಂದ ಯುವಕ-ಯುವತಿಯರಿಂದ ರ್‍ಯಾಂಪ್ ವಾಕ್ ಕೂಡ ಎಲ್ಲರ್ ಗಮನ ಸೆಳೆಯಿತು. ಎನ್‌ಬಿ ಗ್ರೂಫ್ ಅರ್ಪಿಸುವ ಅಸ್ತ್ರ ಮಿಸ್ಟರ್, ಮಿಸ್, ಮಿಸ್ ಟೀನ್, ಮಿಸೆಸ್ ತುಳುನಾಡು ಸೀಸನ್ – 4ರ ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಉಚ್ಚಿಲದ ಕಿಯಾಂಜಾ ಗಾರ್ಡನ್ ನ ವೇದಿಕೆಯಲ್ಲಿ ಸಂಭ್ರಮದಿಂದ ನಡೆಯಿತು. ದೇಶಿ ಮತ್ತು ವೆಸ್ಟರ್ನ್ ಕಲ್ಚರ್ ಬಟ್ಟೆಗಳನ್ನು ಧರಿಸಿ, ಯುವಕ – ಯುವತಿಯರ

ಮಂಗಳೂರಿನ ರಿಶಲ್ ಬ್ರಿಟ್ನಿ ಫೆರ್ನಾಂಡಿಸಗೆ ಕಿತ್ತೂರ್ ರಾಣಿ ಚೆನ್ನಮ್ಮ ಪ್ರಶಸ್ತಿ

ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ ಪಾತ್ರರಾಗಿ ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರು ಸುರತ್ಕಲ್ ನಿವಾಸಿಯಾಗಿದ್ದು ರೋನಾಲ್ಡ್ ಮತ್ತು ನಾನ್ಸಿ ಶಿಕ್ಷಕ ದಂಪತಿಯ ಪುತ್ರಿ. ಪ್ರಸ್ತುತ ಎಸ್ ಡಿ ಎಮ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ.  ಇವರಿಗೆ ಕರ್ನಾಟಕ ಸರ್ಕಾರದ ವತಿಯಿಂದ

ರಾಜ್ಯದ್ದು “ಈಗ ಬರ್ಕೊ-ಆಮೇಲೆ ಹರ್ಕೊ” ಬಜೆಟ್ :- ಶಾಸಕ ಕಾಮತ್

ಬಜೆಟ್ ಎಂಬುದು ಕೇವಲ ಬಿಳಿ ಹಾಳೆ ಅಲ್ಲ ಎಂದು ಬಜೆಟ್ ಭಾಷಣ ಆರಂಭಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಒಂದೊಂದು ಘೋಷಣೆ ಕೇಳುತ್ತಿದ್ದರೆ “ಈಗ ಬೇಕಾದ್ದನ್ನು ಬರೆದುಕೊಂಡು ಘೋಷಣೆ ಮಾಡೋದು, ಆಮೇಲೆ ಅದನ್ನು ಹರಿದು ಹಾಕೋದು” ಎನ್ನುವಂತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಹೇಳಿದರು. ಓಲೈಕೆ ರಾಜಕಾರಣದ ಕರಿ ಛಾಯೆ ಇಲ್ಲೂ ಎದ್ದು ಕಾಣುತ್ತಿದ್ದು ಹಿಂದುಳಿದ, ಶೋಷಿತ ವರ್ಗಗಳ ಕಡೆಗಣನೆ ಮಾಡಲಾಗಿದೆ. ನಾರಾಯಣ ಗುರು ಅಭಿವೃದ್ಧಿ ನಿಗಮ ಹಾಗೂ ಬಂಟ್

ದ.ಕ.ಜಿಲ್ಲೆಗೆ ಐತಿಹಾಸಿಕ ಬಜೆಟ್: ಹರೀಶ್ ಕುಮಾರ್

“ದ.ಕ.ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯ ಮುನ್ನೋಟದೊಂದಿಗೆ ಮಂಡಿಸಿದ ಐತಿಹಾಸಿಕ ಬಜೆಟ್ ಆಗಿದೆ. ಜಿಲ್ಲೆಯ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವೈದ್ಯಕೀಯ ಕಾಲೇಜ್ ಮಂಜೂರು, ಶೈಕ್ಷಣಿಕ, ಆರೋಗ್ಯ, ಕ್ರೀಡೆ, ಜಲಸಾರಿಗೆ, ಮೀನುಗಾರಿಕಾ ಅಭಿವೃದ್ಧಿ ಹಾಗೂ ಪ್ರವಾಸೋದ್ಯಮಗಳಿಗೆ ಭರಪೂರ ಅನುದಾನ ನೀಡಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿದ ಉತ್ತಮ ಬಜೆಟ್.” ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಹರೀಶ್ ಕುಮಾರ್ ಹೇಳಿದರು.