Home ಕರಾವಳಿ Archive by category ಮಂಗಳೂರು (Page 11)

ಎಸ್ ಸಿಡಿಸಿಸಿ ಬ್ಯಾಂಕ್  ಕಾರ್ಯಸಾಧನೆಗೆ ಸಚಿವರ ಮೆಚ್ಚುಗೆ

ಮಂಗಳೂರು * ಕರ್ನಾಟಕ ರಾಜ್ಯ ಪೊಲೀಸ್ ವಿಶೇಷ ಕಾರ್ಯಪಡೆ ಘಟಕದ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ ಕರ್ನಾಟಕ ಸರಕಾರದ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಶುಕ್ರವಾರ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (ಎಸ್ ಸಿಡಿಸಿಸಿ ಬ್ಯಾಂಕ್) ಗೆ ಆಗಮಿಸಿದ್ದು , ಈ ಸಂದರ್ಭದಲ್ಲಿ

ಎಮ್‌ಸಿಸಿ ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ:ಪ್ರಶಸ್ತಿ ಪ್ರದಾನ

ಮಂಗಳೂರು ಕಥೋಲಿಕ್ ಕೋ ಅಪರೇಟಿವ್ (ಎಮ್.ಸಿ.ಸಿ.) ಬ್ಯಾಂಕಿನ ವಾರ್ಷಿಕ ಪ್ರಗತಿ ಪರಿಶೀಲನೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವು ದಿನಾಂಕ 14.06.2025ರಂದು ಬ್ಯಾಂಕಿನ ಪಿ.ಎಫ್.ಎಕ್ಸ್. ಸಲ್ಡಾನ್ಹಾ ಮೆಮೊರಿಯಲ್ ಸಭಾಂಗಣದಲ್ಲಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಮಂಗಳೂರು ಧರ್ಮ ಪ್ರಾಂತ್ಯದ ರೊಸಾರಿಯೊ ಕಾಥೆದ್ರಾಲ್ ಚರ್ಚಿನ ರೆಕ್ಟರ್ ಹಾಗೂ ಪ್ರಧಾನ ಧರ್ಮಗುರುಗಳಾದ ವಂದನೀಯ ವಲೇರಿಯ ಡಿಸೋಜ

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು: ಚಾಲಕ ಅಪಾಯದಿಂದ ಪಾರು

ಚಾಲಕನ ನಿಯಂತ್ರಣ ತಪ್ಪಿ ಕಾರೋಂದು ಪಲ್ಟಿಯಾಗಿ ಸರ್ವೀಸ್ ರಸ್ತೆಯಿಂದ ಪಕ್ಕದ ಕಮರಿಗೆ ಉರುಳಿದ ಘಟನೆ ಸುರತ್ಕಲ್ ಎನ್‌ಐಟಿಕೆ ಬಳಿ ನಡೆದಿದೆ. ಕಾರಿನಲ್ಲಿ ಚಾಲಕ ಮಾತ್ರ ಇದ್ದು, ಪ್ರಯಾಣಿಕರಿಲ್ಲದ ಕಾರಣ ಬಹುದೊಡ್ಡ ದುರಂತ ತಪ್ಪಿ ಹೋಗಿದೆ. ಕಾರು ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ. ಕಾರು ಪಲ್ಟಿಯಾದ ರಭಸಕ್ಕೆ ನಜ್ಜುಗುಜ್ಜಾಗಿದೆ. ಓವರ್ ಸ್ಪೀಡ್ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಮುಂಬರುವ ಅಗ್ನಿಪಥ್ ಲಿಖಿತ ಮತ್ತು ದೈಹಿಕ ಸದೃಢತೆಯ ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಲ್ಲಿ ಆಹೋರಾತ್ರಿ ತರಬೇತಿ ಪ್ರಾರಂಭ

ಭಾರತ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ‘ಅಗ್ನಿಪಥ್ ‘ ಯೋಜನೆಯಡಿಯಲ್ಲಿ ಪ್ರತಿ ವರ್ಷ ಅಗ್ನಿವೀರರಾಗಿ ಆಯ್ಕೆ ಮಾಡಲು ನಡೆಸಲಾಗುವ ನೇಮಕಾತಿ, ಲಿಖಿತ ಮತ್ತು ದೈಹಿಕ ಸಾಧ್ಯತೆಯ ಪರೀಕ್ಷೆಗಳಿಗೆ ಪೂರ್ವ ತಯಾರಿ ಮಾಡಲು ಇಚ್ಛಿಸುವ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕೇಂದ್ರವಾಗಿರುವ ವಿದ್ಯಾಮಾತಾ ಅಕಾಡೆಮಿಯಲ್ಲಿ ದಿನಾಂಕ 18/06/2025 ಬುಧವಾರದಿಂದ ಆಹೋರಾತ್ರಿ ತರಬೇತಿಯನ್ನು ಪ್ರಾರಂಭಿಸಲಾಗುತ್ತಿದೆ. ತರಬೇತಿಯು ಮೂರು ವಿಭಾಗದಲ್ಲಿ

ಮಳೆ ಹಾನಿಗೆ ತಕ್ಷಣ ಸ್ಪಂದಿಸಿ: ದ.ಕ. ಜಿಲ್ಲಾಡಳಿತಕ್ಕೆ ಸಚಿವ ದಿನೇಶ್ ಗುಂಡೂರವ್ ಸೂಚನೆ

ಮಂಗಳೂರು: ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುಂಜಾಗ್ರತೆ ಕ್ರಮಗಳನ್ನು ಕೈಗೆತ್ತಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಪಾಲಿಕೆ ಕಮಿಷನರ್ ಅವರೊಂದಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ ಸಚಿವರು, ಅಧಿಕಾರಿಗಳು ಸ್ಥಳದಲ್ಲಿದ್ದು, ಮಳೆ ಹಾನಿಯಿಂದ ಸಾರ್ವಜನಿಕರಿಗೆ ತೊಂದರೆಯಾಗದಂತೆ ಎಚ್ಚರಿಕೆ ವಹಿಸಿ

ಮಂಗಳೂರು: ಕೆವಿಎಎಫ್‌ಎಸ್‌ಯುಗೆ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ನಾಮನಿರ್ದೇಶನ

ರೈಸನ್ ನ್ಯೂಟ್ರಿಷನ್ ಸಂಸ್ಥೆಯ ನಿರ್ದೇಶಕ ಡಾ. ಸುಶಾಂತ್ ರೈ ಬೆಳ್ಳಿಪ್ಪಾಡಿ ಅವರನ್ನು ಮೂರು ವರ್ಷಗಳ ಅವಧಿಗೆ ರಾಜ್ಯ ಸರ್ಕಾರವು ಕರ್ನಾಟಕ ಪಶು ವೈದ್ಯಕೀಯ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನಾಮನಿರ್ದೇಶನ ಮಾಡಿದೆ. ಡಾ. ಸುಶಾಂತ್ ರೈ 2019-24ರ ವರೆಗೆ ಕರ್ನಾಟಕ ಕೋಳಿ ಸಾಕಾಣೆದಾರರ ಮತ್ತು ತಳಿಗಾರರ ಸಂಘದ ಅಧ್ಯಕ್ಷರಾಗಿ ಸತತ ಎರಡು ಬಾರಿ ಕಾರ್ಯ ನಿರ್ವಹಿಸಿದ್ದರು. ಹೈದ್ರಾಬಾದ್‌ನ ಐಸಿಎಆರ್-ಎನ್ ಐಎಎನ್‌ಪಿ ಮತ್ತು

ಮಂಗಳೂರು:ಮುಂದುವರಿದ ಮಳೆ: ಕೆತ್ತಿಕಲ್‌ನಲ್ಲಿ ಗುಡ್ಡ ಕುಸಿತ, ಸಂಚಾರಕ್ಕೆ ಅಡ್ಡಿ

ಮಂಗಳೂರು: ನಗರದಲ್ಲಿ ಭಾರಿ ಮಳೆ ಮುಂದುವರಿದಿದೆ. ನಗರದ ಹೊರ ವಲಯದ ಕೆತ್ತಿಕಲ್‌ನಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಗುಡ್ಡ ಜರಿದಿದ್ದು, ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿದೆ. ನಗರದಲ್ಲಿ ಶನಿವಾರ ಸುರಿದ ಭಾರಿ ಮಳೆಗೆ ಜಲಾವೃತವಾಗಿದ್ದ ಕೊಡಿಯಾಲ್ ಬೈಲ್, ಜಪ್ಪಿನಮೊಗರು ಮತ್ತಿತರ ಪ್ರದೇಶಗಳಲ್ಲಿ ನೀರಿನ ಪ್ರಮಾಣ ಇಳಿದಿದೆ. ಮನೆಯೊಳಗೆ ತುಂಬಿದ್ದ ಕೆಸರು ನೀರನ್ನು ಸ್ವಚ್ಛಗೊಳಿಸುವಲ್ಲಿ ಈ ಪ್ರದೇಶದ ನಿವಾಸಿಗಳು ನಿರತರಾಗಿದ್ದಾರೆ. ರಾತ್ರಿಯೂ ಬಿಟ್ಟು ಬಿಟ್ಟು

ಮಂಗಳೂರು: ಭಾರೀ ಮಳೆ ಹಿನ್ನೆಲೆ: ಸಂತ್ರಸ್ತರಿಗೆ ಕದ್ರಿ ಕ್ಷೇತ್ರದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆ

ನಗರದಲ್ಲಿ ಮಳೆಯಿಂದ ಸಂತ್ರಸ್ತರಿಗೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ರವಿವಾರ ಮಧ್ಯಾಹ್ನ ಊಟದ ವ್ಯವಸ್ಥೆ ನೀಡಲು ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನಿರ್ಧಾರ ಮಾಡಿದೆ. ಮಂಗಳೂರು ನಗರದ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಮನೆಯ ಒಳಗಡೆ ನೀರು ನುಗ್ಗಿ ಜನರಿಗೆ ಇಂದು ಮಧ್ಯಾಹ್ನ ಅಡುಗೆ ಮಾಡಲು ಕೂಡ ತೊಂದರೆಯಾಗಿದೆ. ಈ ಸಂದರ್ಭದಲ್ಲಿ ಮಧ್ಯಾಹ್ನದ ಊಟದ ವ್ಯವಸ್ಥೆಯನ್ನು ಇಂತಹ ಕುಟುಂಬಗಳಿಗೆ ಶ್ರೀ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮಾಡಲಾಗಿದೆ. ಅಧ್ಯಕ್ಷರು

ದಕ್ಷಿಣ ಕನ್ನಡದಲ್ಲಿ ಬಿರುಸಿನ ಮಳೆ: ನಿಗಾ ವಹಿಸಲು ಜಿಲ್ಲಾಧಿಕಾರಿ ಸೂಚನೆ

ಭಾರಿ ಮಳೆ ಮುಂದುವರಿಯುವ ಸಾಧ್ಯತೆ ಇದ್ದು, ಎಲ್ಲಾ ತಹಶೀಲ್ದಾರರು ಹಾಗೂ ಇನ್ಸಿಡೆಂಟ್ ಕಮಾಂಡರ್ ಗಳು ಅಪಾಯದಂಚಿನಲ್ಲಿರುವ ಮನೆಗಳ ಕುಟುಂಬಗಳನ್ನು ಕಾಳಜಿ ಕೇಂದ್ರ /ಸುರಕ್ಷಿತ ಸ್ಥಳಗಳಿಗೆ ಕೂಡಲೇ ಸ್ಥಳಾಂತರಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚಿಸಿದ್ದಾರೆ.ನೆರೆ ಉಂಟಾಗುವ ಪ್ರದೇಶಗಳ ಮೇಲೆ ತೀರಾ ನಿಗಾ ವಹಿಸಿ ಎಲ್ಲಾ ರಕ್ಷಣಾ ಸಾಮಾಗ್ರಿಗಳನ್ನು ಸನ್ನದ್ಧವಾಗಿರಿಸಬೇಕು. ಯಾವುದೇ ಸಾವು ನೋವು ಸಂಭವಿಸದಂತೆ ಎಚ್ಚರಿಕೆಯನ್ನು ವಹಿಸಬೇಕು. ಎಲ್ಲಾ ತಾಲೂಕು ಹಾಗೂ

ಕರಾವಳಿ ಸಹಿತ 3 ಜಿಲ್ಲೆಗಳಲ್ಲಿ ಭಾರೀ ಮಳೆ:ರೆಡ್‌ ಅಲರ್ಟ್‌ ಘೋಷಣೆ

ರಾಜ್ಯದಲ್ಲಿ ಮುಂಗಾರು ಮಳೆ ಹಲವೆಡೆ ವ್ಯಾಪಿಸಿ ಉತ್ತಮ ಮಳೆಯಾಗುತ್ತಿದ್ದು, ಕೆಲವು ಉತ್ತಮ ಮಳೆಯಾಗಿ ಜನಜೀವನ ವ್ಯಸ್ತಗೊಂಡಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಉತ್ತಮ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸಹಿತ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾನುವಾರ (ಜೂ.15) ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಹವಾಮಾನ ಇಲಾಖೆ  ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ. ಕರಾವಳಿ ಭಾಗದಲ್ಲಿ ಜೂ.15ರಂದು