ದಕ್ಷಿಣ ಕನ್ನಡ ಜಿಲ್ಲಾ ಆಯುಷ್ ಇಲಾಖೆ ಹಾಗೂ ಆವಿಷ್ಕಾರ ಯೋಗ ಮಂಗಳೂರು ಇದರ ಸಹಯೋಗದಲ್ಲಿ ಜೂನ್ 17 ರಿಂದ 21ರ ವರೆಗೆ ಆವಿಷ್ಕಾರ ಯೋಗ ಚಿಕಿತ್ಸಾ ಕೇಂದ್ರ ಬಿಜೈ ಮತ್ತು ಬಂಟ್ಸ್ ಹಾಸ್ಟೆಲ್‌ನಲ್ಲಿ ಯೋಗ ದಿನದ ಸಾಮಾನ್ಯ ಪ್ರೊಟೋಕಾಲ್‌ನ ಯೋಗ ತರಬೇತಿಯು ನಡೆಯಲಿದೆ. ಈ ಶಿಬಿರ ಉಚಿತವಾಗಿದ್ದು ಸಾರ್ವಜನಿಕರು ತರಬೇತಿಗೆ ಭಾಗವಹಿಸಬಹುದು. ತರಬೇತಿ ಸಿಗುವ ಸಮಯ ಬೆಳಿಗ್ಗೆ 6
ಕರಾವಳಿಯಲ್ಲಿ ಕೋಮು ಸಂಘರ್ಷ ತಡೆಯುವ ನಿಟ್ಟಿನಲ್ಲಿ ರಚಿಸಲಾದ ವಿಶೇಷ ಕಾರ್ಯ ಪಡೆ (ಸ್ಪೆಷಲ್ ಆ್ಯಕ್ಷನ್ ಫೋರ್ಸ್) ನ್ನು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಉದ್ಘಾಟಿಸಿದರು. ನಗರ ಪೊಲೀಸ್ ಕಮಿಷನರ್ ಕಚೇರಿ ಬಳಿಯ ಗೆಸ್ಟ್ ಹೌಸ್ ಕಟ್ಟಡದಲ್ಲಿ ವಿಶೇಷ ಕಾರ್ಯ ಪಡೆ ಕಚೇರಿ ಕಾರ್ಯಾಚರಣೆ ನಡೆಸಲಿದೆ. ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್, ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನಪರಿಷತ್ ಸದಸ್ಯರಾದ ಐವನ್ ಡಿ’ಸೊಜಾ ಮಂಜುನಾಥ ಭಂಡಾರಿ, ರಾಜ್ಯ ಪೊಲೀಸ್ ಮಹಾ
ತುರ್ತು ನಿರ್ವಹಣಾ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರಿನ ವಿವಿಧೆಡೆ ಜೂ.12ರಂದು ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂ ಪ್ರಕಟನೆ ತಿಳಿಸಿದೆ. ಜೂ.12ರಂದು ಬೆಳಗ್ಗೆ 1000 ಅಪರಾಹ್ನ 3ರವರೆಗೆ 110/33/11 ಕೆವಿ ಬಿಜೈ ಉಪಕೇಂದ್ರದಿಂದ ಹೊರಡುವ 11 ಕೆವಿ ದಡ್ಡಲ್ ಕಾಡ್ ಫೀಡರ್‌ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ, ಸಿ.ಎ.ಪಿ.ಎಲ್ ಕಾಲೇಜು ಸುತ್ತಮುತ್ತ, ದಡ್ಡಲ್ ಕಾಡ್ ಜಂಕ್ಷನ್, ಕೋಟೆಕಣಿ ರಸ್ತೆ ಸುತ್ತಮುತ್ತ ಕೊಟ್ಟಾರ ಚೌಕಿ
ಸರಕಾರಿ ನೌಕರರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಮಾಜಿ ಶಾಸಕ ಬಿ.ಎ.ಮೊಯ್ದಿನ್ ಬಾವ ಹಾಗೂ ಅವರ ಇಬ್ಬರು ಸಹಚರರ ವಿರುದ್ಧ ಪಣಂಬೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಣಂಬೂರಿನ ಎನ್.ಎಂ.ಪಿ.ಎ. ಕಾರ್ಯದರ್ಶಿ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜೂ.9ರಂದು ರಾತ್ರಿ 8 ಗಂಟೆ ಸುಮಾರಿಗೆ ಮಾಜಿ ಶಾಸಕ ಮೊಯ್ದಿನ್ ಬಾವಾ ಮತ್ತು ಅವರ ಇಬ್ಬರು ಸಹಚರರು ಕಾಮಗಾರಿಯ ಬಿಲ್ ಮಂಜೂರಾತಿ ವಿಚಾರವಾಗಿ ಎನ್.ಎಂ.ಪಿ.ಎ. ಕಚೇರಿಯ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪರಿಶಿಷ್ಟರ ಮೀಸಲು ಭೂಮಿಯಾಗಿರುವ ಡಿ. ಸಿ ಮನ್ನಾ ಭೂಮಿಯ ಮಂಜೂರಾತಿಗೆ ಸಂಬಂಧಿಸಿದ ನ್ಯೂನತೆಗಳನ್ನು ಸರಿಪಡಿಸುವ ಬಗ್ಗೆ ದಿನಾಂಕ: 10-6-2025 ರಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ವಿಧಾನ ಪರಿಷತ್ ಶಾಸಕರಾದ ಶ್ರೀ ಐವನ್ ಡಿಸೋಜಾರವರು ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ನಾಯಕರು ಮತ್ತು ದಲಿತ ಸಂಘಟನೆಗಳ ಮುಖಂಡರ ಜೊತೆ ಸುಧೀರ್ಘ ಚರ್ಚೆಯನ್ನು ನಡೆಸಿದರು. ಬ್ರಿಟೀಷರು ಭಾರತಕ್ಕೆ ಬಂದಾಗ ಇಲ್ಲಿನ
ಕಳೆದ ಜೂನ್ 1 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆದ ಯಕ್ಷ ಧ್ರುವ ಪಟ್ಲ ಫೌಂಡೇಷನ್ ನ ದಶಮಾನೋತ್ಸವದ ಅಂಗವಾಗಿ 2158 ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕಲಾವಿದರಿಗೆ ಅಂಚೆ ಅಪಘಾತ ವಿಮೆಯನ್ನು ಮಾಡಿಸುವ ಮೂಲಕ ಅವರ ಕುಟುಂಬಕ್ಕೆ ತಲಾ 10 ಲಕ್ಷದ ಸುರಕ್ಷತೆಯನ್ನು ಒದಗಿಸಲಾಯಿತು. ವಿಮಾ ಪ್ರೀಮಿಯಂ ನ್ನು ಪಟ್ಲ ಫೌಂಡೇಷನ್ ಪ್ರಾಯೋಜಿಸಿದ್ದು ಮಂಗಳೂರು ಅಂಚೆ ವಿಭಾಗದ ಸುಮಾರು 150 ಸಿಬ್ಬಂದಿಗಳು ಈ ಕಾರ್ಯಕ್ರಮವನ್ನು ಅತ್ಯಂತ ಶಿಸ್ತು ಮತ್ತು ಸಂಯಮದಿಂದ
ಬೆಂಗಳೂರು : ಕರಾವಳಿ ತೀರದ ಪ್ರವಾಸೋದ್ಯಮ ಅಭಿವೃದ್ಧಿ ಯೋಜನೆಯಲ್ಲಿ ಸ್ಥಳೀಯ ಮೀನುಗಾರರಿಗೆ ಆದ್ಯತೆ ನೀಡುವ ಬಗ್ಗೆ ವಿಶೇಷ ಕ್ರಮ ವಹಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿದರು. ಬೆಂಗಳೂರಿನ ವಿಕಾಸಸೌಧದ ಸಚಿವರ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ನಿಯೋಗದ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಇನ್ನಷ್ಟು ವಿಸ್ತೃತ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು, ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಯವರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿರೋಧಪಕ್ಷದ ನಾಯಕ ಅಶೋಕ್ ನೇತೃತ್ವದ ನಿಯೋಗ ದ.ಕ. ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜತೆ ಸಭೆ
ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ಬ್ರೋಕರ್ ಹಾವಳಿಯನ್ನು ನಿಯಂತ್ರಿಸಲು ಮುಂದಾದ ಕಮಿಷನರ್ ನೂರ್ ಝಹರಾ ಖಾನಂ ಅವರನ್ನು ವರ್ಗಾವಣೆ ಮಾಡಿಸಲು ಬೋಕರುಗಳೇ ತೆರೆಮರೆಯ ಕಸರತ್ತು ನಡೆಸಿದ್ದಾರೆ. ಆ ಜಾಗಕ್ಕೆ ಈ ಹಿಂದೆ ಮುಡಾದಲ್ಲಿ ಕಮಿಷನರ್ ಆಗಿ ಕಾರ್ಯ ನಿರ್ವಹಿಸಿ ನಿವೃತ್ತಿ ಅಂಚಿನಲ್ಲಿರುವ ಮಹಮ್ಮದ್ ನಜೀರ್ ಅವರನ್ನು ಕರೆತರಲು ಪ್ರಬಲ ಲಾಬಿ ನಡೆದಿದೆ. 2024ರ ಮಾರ್ಚ್ 22ರಂದು ಆಗಿನ ಮುಡಾ ಕಮಿಷನರ್ ಆಗಿದ್ದ ಮನ್ಸೂರ್ ಆಲಿ, ಕನ್ವರ್ಷನ್ ವಿಚಾರದಲ್ಲಿ
ವಿದ್ಯೆ ಎನ್ನುವುದು ಅಭಿನಾಷಿಯಾದದ್ದು ವಿದ್ಯೆ ನಮ್ಮ ಬದುಕಿಗೆ ಕವಿದಿರುವ ಕತ್ತಲೆಯನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುತ್ತದೆ ಇಂತಹ ಉತ್ತಮ ಕೆಲಸವನ್ನು ಆಕಾಂಕ್ಷಿಗಳ ತಂಡ ಮಾಡುತ್ತಿದೆ.ಅಂಚೆ ಇಲಾಖೆಯ ಪದೋನ್ನತಿ ಪರೀಕ್ಷೆಗಳಿಗಾಗಿ ಆಯೋಜಿಸಿದ ಉಚಿತ ತರಬೇತಿ ಶಿಬಿರ ಶ್ಲಾಘನೀಯ. ವಿದ್ಯೆ ಕಲಿತಷ್ಟು ಮುಗಿಯದೇ ಇರುವಂಥದ್ದು. ಇಲಾಖೆಯೊಳಗೆ ಪದೋನ್ನತಿಯನ್ನು ಹೊಂದಿ ಉತ್ತಮ ಪದವಿಯನ್ನು ಏರುವುದಕ್ಕೆ ಈ ಒಂದು ಉಚಿತ ತರಬೇತಿ ಶಿಬಿರ ಕಾರಣವಾಗುತ್ತದೆ.ತಾಯಿ ದುರ್ಗಾದೇವಿ



























