Home ಕರಾವಳಿ Archive by category ಮಂಗಳೂರು (Page 122)

ತುಳುನಾಡ ದೈವರಾಧನಾ ರಕ್ಷಣಾ ಚಾವಡಿ ವಾರ್ಷಿಕೋತ್ಸವ

ಮೂಡುಬಿದಿರೆ : ದೈವರಾಧನೆ ತುಳುನಾಡಿನ ಪರಂಪರೆ, ನಾವು ದೈವ-ದೇವರನ್ನು ಆರಾಧಿಸುತ್ತೇವೆ ಇದು ಇಲ್ಲಿನ ಮೂಲ ನಿವಾಸಿಗಳ ಸಂಸ್ಕೃತಿ’ ಎಂದು ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಹೇಳಿದರು. ಅವರು ವಾಲ್ಪಾಡಿ ಮಾಡದಂಗಡಿ ಶಾಲಾ ವಠಾರದಲ್ಲಿ ನಡೆದ ತುಳುನಾಡ ದೈವರಾಧನೆ ರಕ್ಷಣಾ ಚಾವಡಿ ಮೂಡುಬಿದಿರೆ ವಲಯದ 5ನೇ ವಾರ್ಷಿಕೋತ್ಸವದ ಸಮಾರಂಭವನ್ನು ಉದ್ಘಾಟಿಸಿ

ಮಂಗಳೂರಿನಲ್ಲಿ ಎಲ್‌ ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆ ಶುಭಾರಂಭ

ಡಿಜಿಟಲ್ ಕ್ಷೇತ್ರದಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿರುವ ಎಲ್‌ಕೋಡ್ ಟೆಕ್ನಾಲಾಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಬಿಜೈ ಕಾಪಿಕಾಡ್‌ನ ಅಜಂತಾ ಬಿಸ್‌ನೆಸ್ ಸೆಂಟರ್‌ನಲ್ಲಿ ಶುಭಾರಂಭಗೊಂಡಿತ್ತು. ನೂತನ ಎಲ್‌ಕೋಡ್ ಟೆಕ್ನಾಲಜೀಸ್ ಸಾಫ್ಟ್‌ವೇರ್ ಸಂಸ್ಥೆಯ ನೂತನ ಕಚೇರಿಯನ್ನು ಕರ್ಣಾಟಕ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ಮಹಾಬಲೇಶ್ವರ ಎಂ.ಎಸ್.ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಈಗ ಇರುವ ಡಿಜಿಟಲ್ ವ್ಯವಸ್ಥೆಯ ಕುರಿತಂತೆ

ಕುತ್ತಾರು ಕೊರಗಜ್ಜ ಆದಿಸ್ಥಳಕ್ಕೆ ನಟ ಶಿವರಾಜ್‍ಕುಮಾರ್ ಕುಟುಂಬ

ಉಳ್ಳಾಲ: ನಟಿ ರಕ್ಷಿತಾ ಪ್ರೇಮ್ ಸಲಹೆ ಮೇರೆಗೆ ಕರಾವಳಿಯ ಕಾರಣೀಕ ಶಕ್ತಿ ಕೊರಗಜ್ಜ ದೈವದ ಆದಿಸ್ಥಳ ಕುತ್ತಾರಿಗೆ ನಟ ಶಿವರಾಜ್ ಕುಮಾರ್ ಕುಟುಂಬ ಸಮೇತ ಭೇಟಿ ನೀಡಿದರು. ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್ ಗೆ ಮಂಗಳೂರಿಗೆ ಆಗಮಿಸಿರೋ ಶಿವರಾಜ್ ಕುಮಾರ್ ಇಂದು ಮೊದಲ ಬಾರಿಗೆ ಪತ್ನಿ ಗೀತ ಹಾಗೂ ಕುಟುಂಬಸ್ಥರೊಂದಿಗೆ ಕೊರಗಜ್ಜ ಕ್ಷೇತ್ರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇಂದು ಸಂಜೆ ಪಣಂಬೂರು ಬೀಚ್ ನಲ್ಲಿ ನಡೆಯಲಿರುವ ವೇದ ಸಿನಿಮಾದ ಫ್ರೀ ರಿಲೀಸ್ ಇವೆಂಟ್

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕಾಂತಾರ ಸಿನಿಮಾದ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ

ಇತಿಹಾಸ ಪ್ರಸಿದ್ಧ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಈ ವರ್ಷದ ಸೂಪರ ಹಿಟ್ ಕಾಂತಾರ ಚಲನಚಿತ್ರ ಸಿನಿಮಾ ನಿರ್ಮಾಪಕ ವಿಜಯ್ ಕಿರಂದೂರು ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಳದ ಅರ್ಚಕ ಹರಿನಾರಾಯಣ ದಾಸ ಅಸ್ರಣ್ಣ ವಿಜಯ್ ಅವರಿಗೆ ದೇವರ ಶೇಷ ವಸ್ತ್ರ ನೀಡಿ ದೇವಳದ ವತಿಯಿಂದ ಕಿರಂದೂರು ಅವರನ್ನು ಗೌರವಿಸಲಾಯಿತು.

ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ : ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿ

ಮಂಗಳೂರಿನ ಕೊಟ್ಟಾರ ಚೌಕಿಯ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳೊಂದಿಗೆ ಸಂಚಾರ ಜಾಗೃತಿ ಕುರಿತು ರ್‍ಯಾಲಿಯನ್ನ ನಗರದ ಲಾಲ್‍ಭಾಗ್ ಜಂಕ್ಷನ್‍ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಮಂಗಳೂರು ನಗರ ವ್ಯಾಪ್ತಿಯಲ್ಲಿ ರಸ್ತೆ ನಿಯಮ ಉಲ್ಲಂಘನೆ, ಹೆಲ್ಮೆಟ್ ಧರಿಸದೇ ವಾಹನ ಚಲಾವಣೆ ಮಾಡುವುದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶ್ರೀ ಚೈತನ್ಯ ಟೆಕ್ನೋ ಸ್ಕೂಲ್ ವತಿಯಿಂದ ಶಾಲಾ ಮಕ್ಕಳಿಂದ ರ್ಯಾಲಿ ನಡೆಸಲಾಯ್ತು. ಶ್ರೀ ಚೈತನ್ಯ

ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯ : ಸ್ಟ್ರೆಲಿಯಂ ಟೆಕ್ನಾಲಜಿ & ಇನೋವೇಶನ್ ಸೆಂಟರ್‍ಗೆ ಚಾಲನೆ

ಮೂಡುಬಿದಿರೆ: ಹ್ಯೂಸ್ಟನ್ ಮೂಲದ ಮ್ಯಾನುಫ್ಯಾಕ್ಟರಿಂಗ್ ಹಾಗೂ ಲಾಜಿಸ್ಟಿಕ್ಸ್ ಸಂಬಂಧಿತ ಸೈಲಿಯ ‘ಇಂಕ್’ ಅಂತರಾಷ್ಟ್ರೀಯ ಕಂಪೆನಿಯ ಸಹಭಾಗಿತ್ವದಲ್ಲಿ ವಿಮಾನ ತಂತ್ರಜ್ಞಾನ ಆಧಾರಿತ ‘ಸ್ಟ್ರೆಲಿಯಂ ಟೆಕ್ನಾಲಜಿ ಆಂಡ್ ಸೆಂಟರ್‍ನ್ನು ಮಿಜಾರಿನ ಆಳ್ವಾಸ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ, ಅವರು ನೂತನ ಲ್ಯಾಬ್‍ನ್ನು ಉದ್ಘಾಟಿಸಿ ಶುಭ ಹಾರೈಸಿದರು. ಸ್ಟೆಲಿಯಂ

ಡಿ.16ರಂದು ವಿಐಪಿಸ್ ಲಾಸ್ಟ್ ಬೆಂಚ್ ಸಿನಿಮಾ ರಿಲೀಸ್ : ಡಿ.10 ಪಣಂಬೂರು ಕಡಲ ಕಿನಾರೆಯಲ್ಲಿ ಪ್ರಮೋಷನ್

ಎ.ಎಸ್. ಪ್ರೋಡಕ್ಷನ್ ಅಡಿಯಲ್ಲಿ ತಯಾರಾದ ಅದ್ಧೂರಿ ತುಳು ಚಲನಚಿತ್ರ ವಿಐಪಿಸ್ ಲಾಸ್ಟ್ ಬೆಂಚ್ ಇದರ ಪ್ರೊಮೋಷನ್ ಕಾರ್ಯಕ್ರಮ ನಡೆಯಲಿದ್ದು, ಇದರ ಜೊತೆಗೆ ಡಾ. ಶಿವರಾಜ್‍ಕುಮಾರ್ ನಟನೆಯ ವೇದ ಸಿನಿಮಾದ ಪ್ರೀ ರಿಲೀಸ್ ಈವೆಂಟ್‍ನ ಅದ್ಧೂರಿ ಮನೋರಂಜನಾ ಕಾರ್ಯಕ್ರಮ ಡಿಸೆಂಬರ್ 10ರಂದು ಮಂಗಳೂರಿನ ಕಡಲ ಕಿನಾರೆಯಲ್ಲಿ ನಡೆಯಲಿದೆ ಎಂದು ಎ. ಎಸ್ ಪ್ರೊಡಕ್ಷನ್‍ನ ಎಕ್ಸಿಕ್ಯುಟಿವ್ ಪ್ರೋಡ್ಯೂಸರ್ ಕಿಶೋರ್ ಹೇಳಿದರು. ಅವರು ನಗರದ

ಆಶ್ರಮದಲ್ಲಿ ಶಾಸಕ ವೇದವ್ಯಾಸ್ ಕಾಮಾತ್ ರ ಹುಟ್ಟುಹಬ್ಬ ದ ಸಂಭ್ರಮಾಚರಣೆ

ಬಿಜೆಪಿಯ ರಾಜ್ಯಧ್ಯಕ್ಷರು ಹಾಗೂ ಸಂಸದರಾದ ಶ್ರೀಯುತ ನಳಿನ್ ಕುಮಾರ್ ಕಟೀಲ್ ಹಾಗೂ ಜನಪ್ರಿಯ ಶಾಸಕರು, ಬಡವರ ಬಂಧು, ಜನ ನಾಯಕ ಮಾನ್ಯ ಶ್ರೀ ಡಿ ವೇದವ್ಯಾಸ್ ಕಾಮತ್ ರವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಯುವಮೋರ್ಚಾ ದಕ್ಷಿಣ ಮಂಡಲದ ವತಿಯಿಂದ ಶ್ರದ್ದಾನಂದ ಆಶ್ರಮ ಆರ್ಯ ಸಮಾಜ ಹಾಗೂ ಭಗಿನಿ ಸಮಾಜ ಅನಾಥಾಶ್ರಮದ ಮಕ್ಕಳಿಗೆ ಉಪಹಾರದ ವ್ಯವಸ್ಥೆ ಕಲ್ಪಿಸಿ ಮಕ್ಕಳ ಸಮ್ಮುಖದಲ್ಲಿ ಶಾಸಕರ ಹುಟ್ಟುಹಬ್ಬವನ್ನು ದೀಪ ಬೆಳಗಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ

ಮೂಡುಬಿದಿರೆ ಪುರಸಭೆಯ ಅಧಿವೇಶನ : ಹಸಿಕಸ ವಿಲೇವಾರಿಯಲ್ಲಿ ಅಡಚಣೆ

ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ ಅವರು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳುತ್ತಾರೆ. ಹಾಗಾದರೆ ಪುರಸಭೆಯ ಸದಸ್ಯರಾಗಿರುವ ನಮಗೆ ಗೌರವವಿಲ್ಲವೇ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ 23ಕೋಟಿಯಷ್ಟು ಹಣವನ್ನು

ಕಾರು ಢಿಕ್ಕಿ ಅಡ್ಯಾರ್ ಸೆಲೂನ್ ಮಾಲೀಕ ಮೃತ್ಯು

ಮಂಗಳೂರು : ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ