Home ಕರಾವಳಿ Archive by category ಮಂಗಳೂರು (Page 128)

ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿ : ಮಾಜಿ ಶಾಸಕ ಜೆ.ಆರ್. ಲೋಬೋ ಆರೋಪ

ಮಂಗಳೂರು : ಗೂಂಡಾ ಕಾಯ್ದೆ, ಭಯೋತ್ಪಾದನಾ ನಿಗ್ರಹ ಮೊದಲಾದ ಕಾನೂನು ಜಾರಿಯಲ್ಲಿದ್ದರೂ, ಗೋಡೆ ಬರಹದಂತಹ ಪ್ರಕರಣಗಳು ನಡೆದಾಗ ಸರಕಾರ, ಪೊಲೀಸ್ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದರೆ, ಜಿಲ್ಲೆಯಲ್ಲಿ ಕುಕ್ಕರ್ ಬಾಂಬ್ ಸ್ಫೋಟದಂತಹ ಪ್ರಕರಣಗಳು ನಡೆಯುತ್ತಿರಲಿಲ್ಲ. ಸರಕಾರದ ವೈಫಲ್ಯದಿಂದ ಇಂದು ಸಮಾಜದಲ್ಲಿ ಗೊಂದಲ ಸೃಷ್ಟಿಗೆ ಕಾರಣವಾಗಿದೆ ಎಂದು ಮಾಜಿ ಶಾಸಕ ಜೆ.ಆರ್.

ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿ ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು: ಬಜಾಜ್ ಕ್ಯೂಟ್ ಆಟೋ ಟ್ಯಾಕ್ಸಿಯನ್ನು ಸೋಮವಾರ ನಗರದ ಪುರಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಡುಗಡೆಗೊಳಿಸಲಾಯಿತು. ಈ ವೇಳೆ ಮಾತಾಡಿದ ಬಜಾಜ್ ಆಟೋ ಲಿಮಿಟೆಡ್ ಇದರ ಅಧ್ಯಕ್ಷ ಸಮರ್ ದೀಪ್ ಸುಭಂಧ್ ಅವರು, “ಬಜಾಜ್ ಕ್ಯೂಟ್ ದೇಶದ ಮೊದಲ ಆಟೋ ಟ್ಯಾಕ್ಸಿ ಆಗಿದ್ದು ಇದನ್ನು ಈಗಾಗಲೇ ಪಡೆದಿರುವ ಗ್ರಾಹಕರು ಮತ್ತು ಪ್ರಯಾಣಿಕರು ಖುಷಿಯಿಂದ ಸ್ವಾಗತಿಸಿದ್ದಾರೆ. ಮಂಗಳೂರು ರಾಜ್ಯದ ಎರಡನೇ ದೊಡ್ಡ ನಗರವಾಗಿದ್ದು ಹೀಗಾಗಿ ಬೆಂಗಳೂರು ಬಳಿಕ ಮಂಗಳೂರಿನಲ್ಲಿ

ಕೊರಗ ಕುಟುಂಬಗಳಿಗೆ ಮನೆ ನಿವೇಶನ ಹಸ್ತಾಂತರಿಸಲು ಆಗ್ರಹಿಸಿ ಪಾದಯಾತ್ರೆ

ಈ ನೆಲದ ಮೂಲನಿವಾಸಿಗಳಾಗಿ ಒಂದೊಮ್ಮೆ ಸಮಸ್ತ ಭೂಮಿಯ ಒಡೆಯರಾಗಿದ್ದ ಕೊರಗ ಕುಟುಂಬ ನೆಲೆ ಇಲ್ಲದೆ ಪರಿತಪಿಸಬೇಕಾಗಿದೆ. ಸ್ವಾತಂತ್ರ್ಯ ದೊರೆತು 70 ವರ್ಷ ಕಳೆದರೂ ಭೂಮಿಯ ಹಕ್ಕಿಗಾಗಿ ಹೋರಾಟ ನಡೆಸಬೇಕಾಗಿ ಬಂದುದು ನಮ್ಮ ವ್ಯವಸ್ಥೆಯ ಸೋಲು ಎಂದು ಖ್ಯಾತ ಜಾನಪದ ವಿದ್ವಾಂಸಕರೂ, ಪಗತಿಪರ ಚಿಂತಕರೂ ಆದ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಭಿಪ್ರಾಯ ಪಟ್ಟರು.ಅವರು ಮಂಗಳೂರಿನ ವಾಮಂಜೂರು ಜಂಕ್ಷನ್‍ನಲ್ಲಿ ಆದಿವಾಸಿ ಕೊರಗ ಕುಟುಂಬಗಳಿಗೆ 2018ರಲ್ಲಿ ಮಂಜೂರಾತಿ ಆದ 33

ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಕಾರ್ಯಕ್ರಮ, ರಾಜ್ಯ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ, ನಟ ರಿಷಬ್ ಶೆಟ್ಟಿ ಸಹಿತ ಕಾಂತಾರ ಚಿತ್ರ ತಂಡ ಆಗಮನ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು ಇದರ ಆಶ್ರಯದಲ್ಲಿ ಸಮಾಜ ಕಲ್ಯಾಣ ಯೋಜನೆಯ ಕಾರ್ಯಕ್ರಮ ಮತ್ತು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸನ್ಮಾನ ಕಾರ್ಯಕ್ರಮವು ಪಟ್ಲ ಫೌಂಡೇಶನ್ ಟ್ರಸ್ಟ್ ನ ಸಹಯೋಗದೊಂದಿಗೆ ಡಿಸೆಂಬರ್ 4 ರಂದು ಭಾನುವಾರ ಸಂಜೆ 4 ಗಂಟೆಗೆ ಮುಲ್ಕಿ ರಾಷ್ಟ್ರೀಯ ಹೆದ್ದಾರಿ ಬಳಿಯ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಚಲನ ಚಿತ್ರ ನಿರ್ದೇಶಕ, ನಟ

ಮಂಗಳೂರು: ಇನ್ಸ್‌ಪೆಕ್ಟರ್ ಶ್ಯಾಮ್‌ಸುಂದರ್ ವರ್ಗಾವಣೆ

ಮಂಗಳೂರು ಎಸಿಬಿಯಲ್ಲಿ ಇನ್ಸ್‌ಪೆಕ್ಟರ್ ಆಗಿದ್ದ ಶ್ಯಾಮ್‌ಸುಂದರ್ ಅವರನ್ನು ಸಿಸಿಬಿ ಇನ್ಸ್‌ಪೆಕ್ಟರ್ ಆಗಿ ವರ್ಗಾವಣೆಗೊಳಿಸಲಾಗಿದೆ. ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆಗೊಳಿಸಿ ಎಂದು ಸರ್ಕಾರವೇ ಆದೇಶ ಹೊರಡಿಸಿದ್ದು ಈ ಹಿನ್ನೆಲೆ ಅವರನ್ನು ಟ್ರಾನ್ಸ್‌ಫರ್ ಮಾಡಲಾಗಿದ ಸಿಸಿಬಿ ಇನಸ್‌ಪೆಕ್ಟರ್ ಆಗಿದ್ದ ಮಹೇಶ್‌ಪ್ರಸಾದ್ ಅವರನ್ನು ಸಿಐಡಿಗೆ ವರ್ಗಾಯಿಸಲಾಗಿದೆ.

ಡಿ. 1ರಿಂದ ಸುರತ್ಕಲ್‌ನಲ್ಲಿ ಟೋಲ್ ಸಂಗ್ರಹ ಇಲ್ಲ : ದ.ಕ. ಜಿಲ್ಲಾಧಿಕಾರಿ ಆದೇಶ

ಮಂಗಳೂರು : ವಿವಾದದ ಕೇಂದ್ರ ಬಿಂದು ಸುರತ್ಕಲ್ ಟೋಲ್ ರದ್ದುಗೊಳಿಸಿ ಈಗಾಗಲೇ  ಹೆದ್ದಾರಿ ಸಚಿವಾಲಯ ಆದೇಶಿಸಿದ ಬೆನ್ನಲೇ ಡಿಸೆಂಬರ್  1 ರಿಂದ ಸುರತ್ಕಲ್‌ನಲ್ಲಿ ವಾಹನಗಳಿಂದ ಟೋಲ್ ಸಂಗ್ರಹಿಸಲಾಗುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಎಂ.ಆರ್. ರವಿ ಕುಮಾರ್ ಅಧಿಕೃತ ಆದೇಶ ಹೊರಡಿಸಿದ್ದಾರೆ. ಸುರತ್ಕಲ್ ಟೋಲನ್ನು ಹೆಜಮಾಡಿಯಲ್ಲಿ ಹೆಚ್ಚುವರಿ ಶುಲ್ಕದೊಂದಿಗೆ ವಿಲೀನಗೊಳಿಸಿರುವುದನ್ನು ಮುಂದಿಟ್ಟು ಜಿಲ್ಲಾಧಿಕಾರಿಯವರು ಈ ಆದೇಶ ಮಾಡಿದ್ದಾರೆ. ಈ ಆದೇಶದನ್ವಯ ಡಿಸೆಂಬರ್

ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್

ಮಂಗಳೂರು, ನ. 28: ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತು ಅವರಿಗೆ ನೆರವು, ಸಹಕಾರ ನೀಡುವ ನಿಟ್ಟಿನಲ್ಲಿ ಎನ್‌ಎಸ್‌ಯುಐ ವತಿಯಿಂದ ಡಿ.1ರಿಂದ ಕ್ಯಾಂಪಸ್ ಗೇಟ್ ಮೀಟ್ ಆಯೋಜಿಸಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ತಿಳಿಸಿದ್ದಾರೆ. ಕಾಲೇಜು ಕ್ಯಾಂಪಸ್‌ಗೆ ಭೇಟಿ ನೀಡುವ ಎನ್‌ಎಸ್‌ಯುಐ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಫಾರಂ ನೀಡಿ ಅದರಲ್ಲಿ ಸಮಸ್ಯೆಗಳನ್ನು ಬರೆದು ತಿಳಿಸುವಂತೆ ಸೂಚಿಸಲಿದ್ದಾರೆ. ಬಳಿಕ

ಹಿಂದೂ ಕಾರ್ಯಕರ್ತರ ರಕ್ಷಣೆಗಾಗಿ ಚುನಾವಣೆಯಲ್ಲಿಸ್ಪರ್ಧೆ ಮಾಡ್ತೇನೆ : ‌ಪ್ರಮೋದ್ ಮುತಾಲಿಕ್‌

ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು ದೇಶದಲ್ಲಿ ಪ್ರಧಾನಿನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಮಾತ್ರ ಹಿಂದುತ್ವದ ರಕ್ಷಣೆ ಮಾಡುತ್ತಿದ್ದಾರೆ. ಬೇರೆ ಯಾರಿಗೂ ಹಿಂದುತ್ವದ ಕಾಳಜಿ ಇಲ್ಲ ಎಂದರು ಹಸುಗಳನ್ನು ರಕ್ಷಿಸಿದವರ ಮೇಲೆ, ಹಿಂದೂ ಯುವತಿಯರನ್ನು ರಕ್ಷಣೆ ಮಾಡಿದವರ ಮೇಲೆ ರೌಡಿ ಶೀಟರ್ ಓಪನ್ ಮಾಡಿದ್ದಾರೆ. ಬಿಜೆಪಿ‌ ಸರ್ಕಾರ ಆ ಕೇಸ್​ಗಳನ್ನು ವಾಪಸ್ ಪಡೆದುಕೊಂಡಿಲ್ಲ ಎಂದರು. ಮಂಗಳೂರು ಬಾಂಬ್ ಸ್ಫೋಟದ

ಮುಲ್ಕಿ : ಹೆಲ್ಪ್ ಲೈನ್ ಸೇವಾ ತಂಡದಿಂದ ಬಡಕುಟುಂಬಕ್ಕೆ ನೂತನ ಗೃಹ ಹಸ್ತಾಂತರ

ಸಾಮಾಜಿಕವಾಗಿ ಗುರುತಿಸಿಕೊಂಡಿರುವ ಮಂಗಳೂರಿನ ಹೆಲ್ಪ್ ಲೈನ್ ಸೇವಾ ತಂಡವು ಮುಲ್ಕಿ ತಾಲೂಕಿನ ಐಕಲ ಗ್ರಾ.ಪಂ ವ್ಯಾಪ್ತಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ ಬಡಕುಟುಂಬದ ಶಾಂತಿಯವರ ಅವ್ಯವಸ್ಥೆಯಲ್ಲಿದ ಮನೆಯನ್ನು ಸೇವಾ ಯೋಜನೆಯಲ್ಲಿ ವಿಶೇಷ ಮುತುವರ್ಜಿಯಲ್ಲಿ ನಿರ್ಮಿಸಿ ಕೊಟ್ಟಿದ್ದು, ನೂತನ ಮನೆಯ ಹಸ್ತಾಂತರ ಕಾರ್ಯಕ್ರಮ ನಡೆಯಿತು. ನೂತನ ಗೃಹ “ಅನುಗ್ರಹ” ವಿಶೇಷ ಹೋಮ ಪೂಜೆಯೊಂದಿಗೆ ಗೃಹಪ್ರವೇಶ ಗೃಹಹಸ್ತಾಂತರ ನಡೆಯಿತು. ಹೆಲ್ಪ್ ಲೈನ್

ಮೈಸೂರು ಚಾಮುಂಡೇಶ್ವರಿ ಅಮ್ಮನ ಕನ್ನಡ ಗೀತೆ : ಯೂಟ್ಯೂಬ್ ಚಾನೆಲ್‍ನಲ್ಲಿ ಶೀಘ್ರದಲ್ಲಿ ಬಿಡುಗಡೆ

ದಯಾ ಕ್ರಿಯೇಷನ್ ಆರ್ಪಿಸುವ ಮೈಸೂರು ಚಾಮುಂಡೇಶ್ವರಿ ಅಮ್ಮನ ಬೆಟ್ಟದ ತಾಯಿ ಚಾಮುಂಡಿ ಕನ್ನಡ ಭಕ್ತಿ ಗೀತೆ ಪೋಸ್ಟರ್ ಬಿಡುಗಡೆಗೊಂಡಿದೆ. ಶೀಘ್ರದಲ್ಲಿ ಕನ್ನಡ ಭಕ್ತಿ ಗೀತೆ ನಿಮ್ಮ ಮುಂದೆ ಬರಲಿದೆ. ಈ ಹಾಡಿಗೆ ಸಾಹಿತ್ಯ ಗಡಿನಾಡ ಸಾಹಿತ್ಯ ಕುವರ ಬಿರುದಾಂಕಿತ ಬಿ. ಉದನೇಶ್ವರ ಪ್ರಸಾದ್ ಮೂಲಡ್ಕ ಸಾಹಿತ್ಯ ಬರೆದಿದ್ದಾರೆ. ತನುಷ ಎಸ್ ಕುಂದರ್ ಬ್ರಹ್ಮಾವರ ಗಾಯನ ಮತ್ತು ಬಾಲ ನಟಿ ಲಿಖಿತ ಶೇರ್ವಾನಿ ಅಭಿನಯದಲ್ಲಿ ಮೂಡಿಬರಲಿದೆ. ಈ ಹಾಡಿಗೆ ರವಿರಾಜ್ ಶೆಟ್ಟಿ. ಸಂಗೀತ