Home ಕರಾವಳಿ Archive by category ಮಂಗಳೂರು (Page 129)

ADGP ಅಲೋಕ್​ ಕುಮಾರ್​ಗೆ ಬೆದರಿಕೆ

ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆಯ ಬಳಿ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಹಿಂದೆ ಉಗ್ರರ ನಂಟು ಇರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಈ ಸ್ಫೋಟ ಪ್ರಕರಣದ ಇಡೀ ದೇಶದಾದ್ಯಂತ ಸದ್ದು ಮಾಡುತ್ತಿದೆ. ಇದರ ಮಧ್ಯೆ ಇದೀಗ ಆರೋಪಿ ಶಾರೀಕ್​​ನನ್ನು ಬೆಂಬಲಿಸಿ ಇಸ್ಲಾಮಿಕ್​​​ ರೆಸಿಸ್ಟೆನ್ಸ್​ ಕೌನ್ಸಿಲ್​ ಮಾಧ್ಯಮ ಹೇಳಿಕೆಯೊಂದನ್ನು

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ

ಪಾದಚಾರಿಗೆ ಬೈಕ್ ಢಿಕ್ಕಿ, ಗಾಯಾಳು ಆಸ್ಪತ್ರೆಯಲ್ಲಿ ಮೃತ್ಯು

ಎರ್ಮಾಳು ಕಲ್ಯಾಣ ಹೋಟೆಲ್ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಪಾದಚಾರಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಅವರು ಆಸ್ಪತ್ರೆಯಲ್ಲಿ ಮೃತ್ತ ಪಟ್ಟ ಘಟನೆ ಬುಧವಾರ ರಾತ್ರಿ ಸಂಭವಿಸಿದೆ.ಮೃತ್ತ ವ್ಯಕ್ತಿಯನ್ನು ಉತ್ತರ ಕನ್ನಡ ಮೂಲದ 46 ವರ್ಷದ ದೇವಪ್ಪ ಎಂದು ಗುರುತಿಸಲಾಗಿದೆ. ತೀವ್ರ ಗಾಯಗೊಂಡ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅವರು ತಡರಾತ್ರಿ 12 ಗಂಟೆಗೆ ಮೃತ್ತ ಪಟ್ಟಿದ್ದಾಗಿ ಪೊಲೀಸ್ಸ್ ಮೂಲಗಳು ತಿಳಿಸಿದೆ.

ಮಂಗಳೂರು: ಗ್ಯಾಸ್‌ ಸಿಲಿಂಡರ್‌ ಕಳವು ಆರೋಪಿಗೆ ಜೈಲು ಶಿಕ್ಷೆ

ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ ಆರೋಪಿ ಗಂಗಯ್ಯ ನೀಲಕಂಠಯ್ಯ ಮುತ್ತಯ್ಯನ ಮಠ ಯಾನೇ ಸ್ವಾಮಿಯನ್ನು ಸಾಕ್ಷ್ಯಾಧಾರ ಕೊರತೆಯಿಂದ ನ್ಯಾಯಾಲಯವು ಬಿಡುಗಡೆಗೊಳಿಸಿದೆ. ಪ್ರಕರಣದ ವಿವರಪಾಣೆಮಂಗಳೂರು ನರಿಕೊಂಬು ನಿವಾಸಿ ಅಣ್ಣು ಪೂಜಾರಿ (55) ಮತ್ತು ಗಂಗಯ್ಯ ನೀಲಕಂಠಯ್ಯ

ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಆರೋಗ್ಯ ವಿಚಾರಿಸಿದ ಗೃಹ ಸಚಿವ

ಮಂಗಳೂರಿಗೆ ಭೇಟಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಸಂಸದ,ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿ,ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್,ಕಾರ್ಪೋರೇಟರ್ ಮನೋಹರ್ ಕದ್ರಿ,ಬಿಜೆಪಿ‌ ಮುಖಂಡರುಗಳಾದ ಸಂತೋಷ್ ಕುಮಾರ್ ಬೋಳಿಯಾರ್, ಜಗದೀಶ ಶೇಣವ,ಚರಿತ್ ಪೂಜಾರಿ ಮತ್ತಿತರರು ಜೊತೆಗಿದ್ದರು

ಜಾತ್ಯಾತೀತ ಪಕ್ಷಗಳ ಜಂಟಿ ವೇದಿಕೆಯ ನಿಯೋಗ ಜಿಲ್ಲಾಧಿಕಾರಿಗಳ ಭೇಟಿ

ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುಚ್ಚಲು ಆಗ್ರಹಿಸಿ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಒಂದು ತಿಂಗಳು ಸಮೀಪಿಸುತ್ತಿರುವ ಹಿನ್ನಲೆಯಲ್ಲಿ ಹಾಗೂ ಟೋಲ್ ಗೇಟ್ ತೆರವು ಆದ್ಯಾದೇಶ ಹೊರಟು ಹತ್ತು ದಿನಗಳು ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸದಿರುವ ಕುರಿತು ಚರ್ಚಿಸಲು ದ.ಕ. ಜಿಲ್ಲಾ ಜಾತ್ಯಾತೀತ ಪಕ್ಷಗಳು ಹಾಗೂ ಸಮಾನ ಮನಸ್ಕ ಸಂಘಟನೆಗಳ ಜಂಟಿ ವೇದಿಕೆಯ ನಿಯೋಗ ದ‌.ಕ. ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿತು. ನಿಯೋಗದ ಆಕ್ಷೇಪ, ಬೇಡಿಕೆಗಳನ್ನು ಆಲಿಸಿದ

ಕುಕ್ಕರ್ ಬಾಂಬ್ ಸ್ಫೋಟ : ಎನ್‍ಐಎಗೆ ಹಸ್ತಾಂತರಕ್ಕೆ ಕ್ರಮ

ಮಂಗಳೂರಿನ ನಾಗುರಿಯಲ್ಲಿ ಶನಿವಾರ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರಿಸಲು ಒಂದೆರಡು ದಿನಗಳಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಮಂಗಳೂರಿನ ನಾಗುರಿಯ ಸ್ಫೋಟ ಸ್ಥಳಕ್ಕೆ ಹಾಗೂ ಆಸ್ಪತ್ರೆಗೆ ಭೇಟಿ ನೀಡಿ ಬಳಿಕ ನಗರ ಪೊಲೀಸ್ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವ ಆರೋಪಿ ಶಾರೀಕ್

ರಾಜ್ಯದ ಗುಪ್ತಚರ, ಗೃಹ ಇಲಾಖೆಯ ವೈಫಲ್ಯಕ್ಕೆ ಕೈಗನ್ನಡಿ : ಮಂಗಳೂರಲ್ಲಿ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪ

ಮಂಗಳೂರಿನ ನಾಗುರಿಯಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟಪ್ರಕರಣ ಇದೊಂದು ರಾಜ್ಯದ ಗುಪ್ತಚರ ವಿಭಾಗ ಮತ್ತು ಗೃಹ ಇಲಾಖೆಯ ವೈಫಲ್ಯ ಎತ್ತಿತೋರಿಸುತ್ತಿದೆ ಅಂತಾ ಕೆಪಿಸಿಸಿ ವಕ್ತಾರ ಎ.ಸಿ.ವಿನಯ್ ರಾಜ್ ಆರೋಪಿಸಿದ್ರು. ಈ ಕುರಿತು ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ಈ ಘಟನೆಯ ಹಿಂದೆಇರುವ ಎಲ್ಲಾ ದೇಶ ದ್ರೋಹಿಗಳನ್ನು ಕೂಡಲೇ ಬಂಧಿಸಿ ಅವರನ್ನು ಯು.ಎ.ಪಿ.ಎ

ಶೂನ್ಯ ತ್ಯಾಜ್ಯದೊಂದಿಗೆ ಕಂಬಳ, ಕಾಂತಾರ ಟೀಮ್ ಜನಾಕರ್ಷಣೆ : ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ಕೋಟ್ಯಾನ್ ಹೇಳಿಕೆ

ಮೂಡುಬಿದಿರೆ: ಡಿ.24ರಂದು ಮೂಡುಬಿದಿರೆ ಒಂಟಿಕಟ್ಟೆಯಲ್ಲಿ ನಡೆಯುವ 20ನೇ ವರುಷದ ಹೊನಲು ಬೆಳಕಿನ ಕೋಟಿ ಚೆನ್ನಯ ಜೋಡುಕರೆ ಕಂಬಳವನ್ನು ಶೂನ್ಯ ತ್ಯಾಜ್ಯವಾಗಿ ಮತ್ತು ಕಾಂತಾರ ಸಿನೆಮಾ ದೊಂದಿಗೆ ವಿಭಿನ್ನವಾಗಿ ಜನಾಕರ್ಷಣೆಯೊಂದಿಗೆ ನಡೆಸಲುದ್ದೇಶಿಸಲಾಗಿದೆ ಎಂದು ಎಂದು ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ್ ತಿಳಿಸಿದರು. ಅವರು ಒಂಟಿಕಟ್ಟೆ ಕಡಲಕೆರೆ ಬಳಿಯ ಸೃಷ್ಟಿ ಗಾರ್ಡನ್ ಸಭಾಂಗಣದಲ್ಲಿ ಮಂಗಳವಾರ ಸಾಯಂಕಾಲ ನಡೆದ ಮೂಡುಬಿದಿರೆ ಕಂಬಳ ಸಮಿತಿಯ ಸಮಾಲೋಚನ ಸಭೆಯ

ಕುಕ್ಕರ್ ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ‌ ಗೃಹ ಸಚಿವರ‌ ಭೇಟಿ, ಪರಿಶೀಲನೆ

ನಗರದ ನಾಗೋರಿಯಲ್ಲಿ ಇತ್ತೀಚೆಗೆ ಆಟೋದಲ್ಲಿ ಕುಕ್ಕರ್‌ಬಾಂಬ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವರಾದ ಆರಗ‌ ಜ್ಞಾನೇಂದ್ರ ಅವರು‌ ನ.23ರ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಡಿಜಿಪಿ ಪ್ರವೀಣ್ ಸೂದ್, ಐಜಿಪಿ ಚಂದ್ರಗುಪ್ತ,ನಗರ ಪೊಲೀಸ್ ಆಯುಕ್ತ ಶಶಿ ಕುಮಾರ್, ಡಿಸಿಪಿ ಅನ್ಶು ಕುಮಾರ್ ಹಾಗೂ ಇತರೆ ಅಧಿಕಾರಿಗಳು ಹಾಜರಿದ್ದರು.