Home ಕರಾವಳಿ Archive by category ಮಂಗಳೂರು (Page 14)

ಮೇ.24ರಂದು ರೋಹನ್ ಕಾರ್ಪೊರೇಷನ್ ಅರ್ಪಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮ

ಮಂಗಳೂರು: ರೋಹನ್ ಕಾರ್ಪೊರೇಷನ್ ಪ್ರಸ್ತುತಪಡಿಸುವ ರೆಡ್ ಎಫ್‌ಎಂ ತುಳು ಫಿಲ್ಮ್ ಅವಾರ್ಡ್ಸ್ ಕಾರ್ಯಕ್ರಮವು ಮೇ.24ರಂದು ಸಂಜೆ 5.30ಕ್ಕೆ ನಗರದ ಫಿಝಾ ಬೈ ನೆಕ್ಸಸ್ ಮಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿಸೋಜ, ಮಂಜುನಾಥ ಭಂಡಾರಿ, ಪೊಲೀಸ್

ಮಂಗಳೂರು: ಬ್ಯಾಷ್ಠಿಸ್ಟ್ ಡಿ’ಕುನ್ಹಾ ನಿಧನ

ಮಂಗಳೂರು: ಬಿಕರ್ಣಕಟ್ಟೆ ಜಯಶ್ರೀಗೇಟ್ ಇಲ್ಲಿನ ಹೋಲಿ ಫ್ಯಾಮಿಲಿ ನಿವಾಸಿ, ಬಂಟ್ವಾಳ ಪಾಣೆಮಂಗಳೂರುನಲ್ಲಿ ಟೈಲರ್ ವೃತ್ತಿ ನಡೆಸುತ್ತಾ ಭೌತಿಸ್ ಟೈಲರ್ ಎಂದೇ ಪ್ರಸಿದ್ಧಿ ಪಡೆದಿದ್ದ ಜನೋಪಕಾರಿ, ಕೊಡುಗೈದಾನಿ ಬ್ಯಾಷ್ಠಿಸ್ಟ್ ಡಿ’ಕುನ್ಹಾ (85) ಇಂದಿಲ್ಲಿ ಬುಧವಾರ ಮಂಗಳೂರುನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಬಂಟ್ವಾಳ ಪಾಣೆಮಂಗಳೂರು (ಕಲ್ಲಡ್ಕ ಮೊಗರ್ನಾಡ್) ಮಾತೆ ಇಗರ್ಜಿಯ ಪಾಲನಾ ಸಮಿತಿ ಸದಸ್ಯರಾಗಿ,ಮೆಲ್ಕಾರ್ ಯುವಕ ಸಂಘದ ಅಧ್ಯಕ್ಷರಾಗಿ ಮೆಲ್ಕಾರ್ ದಸರಾ

ಸುಹಾಸ್ ಹತ್ಯೆ: ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದಿದ್ದ ಶ್ವೇತಾ ಪೂಜಾರಿ ವಿರುದ್ಧ ಎಫ್‌ಐಆರ್!

ಮಂಗಳೂರು: ಇತ್ತೀಚಿಗೆ ಬಜ್ಪೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಘಟನಾ ಸ್ಥಳದಲ್ಲಿ ಕಾಣಿಸಿಕೊಂಡ ಬುರ್ಖಾಧಾರಿ ಮಹಿಳೆಯರನ್ನು ಯಾಕೆ ಬಂಧಿಸಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಉದ್ದೇಶಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನಿಸಿದ್ದ ಹಿಂದೂ ನಾಯಕಿ, ಬಿಜೆಪಿ ಮಹಿಳಾಮೋರ್ಚಾ ರಾಜ್ಯ ಕಾರ್ಯದರ್ಶಿ, ಮನಪಾ ನಿಕಟಪೂರ್ವ ಸದಸ್ಯೆ ಶ್ವೇತಾ ಪೂಜಾರಿ ಮೇಲೆ ಎಫ್‌ಐಆರ್ ದಾಖಲಾಗಿದ್ದು

ಮಂಗಳೂರು: ಕುಂಟಿಕಾನದಲ್ಲಿ ‘ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನೆ

ಮಂಗಳೂರಿನ ಕುಂಟಿಕಾನದ ಎಜೆ ಅಸ್ಪತ್ರೆಯ ಸಮೀಪದಲ್ಲಿ ಕದ್ರಿಯ ಫೈರ್ ಸ್ಟೇಷನ್ ಹಿಂಭಾಗದಲ್ಲಿ ’ಕಲರವ’ ಮಕ್ಕಳ ಅಭಿವೃದ್ಧಿ ಕೇಂದ್ರದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಡಾ. ಶಿಲ್ಪ ಹೆಗ್ಡೆ ಮಾಲಕತ್ವದಲ್ಲಿ ಕಲರವ ಸೆಂಟರ್ ಫಾರ್ ಚೈಲ್ಡ್ ಡೆವಲಪ್‌ಮೆಂಟ್ ನಗರದ ಕುಂಟಿಕಾನ ಸಮೀಪದಲ್ಲಿ ಕಾರ್ಯಾರಂಭಗೊಂಡಿದೆ. ಕಲರವ ನೂತನ ಕೇಂದ್ರವನ್ನು ಜಯಶ್ರೀ ಹೆಗ್ಡೆ ಮತ್ತು ಗಜಾನನ ಹೆಗ್ಡೆ ಅವರು ರಿಬ್ಬನ್ ಕತ್ತರಿಸಿ ಉದ್ಘಟಿಸಿದರು. ನಂತರ ತರಗತಿ ಕೊಠಡಿಗಳನ್ನು ಸಂಸದ ಬ್ರಿಜೇಶ್ ಚೌಟ

ಮಂಗಳೂರು ವಿ. ವಿ. ರಾಣಿ ಅಬ್ಬಕ್ಕ ಅಧ್ಯಯನ ಪೀಠದ ಸಲಹಾ ಸಮಿತಿ ಸದಸ್ಯರಾಗಿ ಯೋಗೀಶ್ ಕೈರೋಡಿ ಆರಂಬೋಡಿ ಆಯ್ಕೆ

ಪ್ರಸ್ತುತ ಮೂಡುಬಿದಿರೆ ಆಳ್ವಾಸ್ ಪದವಿ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿರುವ ಕೈರೋಡಿ ನಿವಾಸಿ ಲೇಖಕ ಡಾ. ಯೋಗೀಶ್ ಕೈರೋಡಿ ಇವರನ್ನು ಮಂಗಳೂರು ವಿಶ್ವ ವಿದ್ಯಾನಿಲಯದ ರಾಣಿ ಅಬ್ಬಕ್ಕ ಅಧ್ಯಯನ‌ ಪೀಠದ ಸಲಹಾ ಸಮಿತಿಗೆ ಸರಕಾರದ ನಾಮ ನಿರ್ದೇಶಿತ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಆಗಿ ಡಾ. ಅನಿಲ್ ಕೆ. ಭಟ್ ನೇಮಕ

ಮಣಿಪಾಲ: ಮಣಿಪಾಲದ ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ (ಕೆಎಂಸಿ) ಡೀನ್ ಆಗಿ ಡಾ. ಅನಿಲ್ ಕೆ ಭಟ್ ಅವರನ್ನು ಮೇ 1, 2025 ರಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ. ಅತುತ್ತಮ ವೈದ್ಯರು, ಶಿಕ್ಷಣ ತಜ್ಞರು ಮತ್ತು ಆಡಳಿತಾಧಿಕಾರಿಯಾಗಿರುವ ಡಾ. ಭಟ್ ಅವರು ಮೂಳೆಚಿಕಿತ್ಸೆ, ಕೈ ಶಸ್ತ್ರಚಿಕಿತ್ಸೆ, ಸಂಶೋಧನೆ ಮತ್ತು ವೈದ್ಯಕೀಯ ಶಿಕ್ಷಣದಲ್ಲಿ ಸುಮಾರು ಎರಡು ದಶಕಗಳಿಗೂ ಹೆಚ್ಚಿನ ಅನುಭವ ಹೊಂದಿದ್ದಾರೆ. ಈ ನೇಮಕಾತಿ ಬಗ್ಗೆ ಮಾತನಾಡಿದ, ಮಾಹೆಯ ಉಪಕುಲಪತಿ ಲೆಫ್ಟಿನೆಂಟ್

ಮಂಗಳೂರು : ದ.ಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ರವಿರಾಜ ಹೆಗ್ಡೆ ಕೊಡವೂರು, ಉಪಾಧ್ಯಕ್ಷರಾಗಿ ಉದಯ್ ಎಸ್. ಕೋಟ್ಯಾನ್ ಅವಿರೋಧ ಆಯ್ಕೆ

ದಕ್ಷಿಣ ಕನ್ನಡ ಸಹಕಾರ ಹಾಲು ಉತ್ಪಾದಕರ ಒಕ್ಕೂಟದ ಆಡಳಿತ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದಿದ್ದು ರಿಟರ್ನಿಂಗ್ ಅಧಿಕಾರಿಯಾದ ರಾಜು ಬಿ. ಇವರು ಚುನಾವಣೆ ಪ್ರಕ್ರಿಯೆ ನಡೆಸಿರುತ್ತಾರೆ. ಶ್ರೀ. ರವಿರಾಜ ಹೆಗ್ಡೆ ಕೊಡವೂರು ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಹಾಗೂ ಶ್ರೀ ಉದಯ್ ಎಸ್. ಕೋಟ್ಯಾನ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡಿರುತ್ತಾರೆ. ಶ್ರೀ ರವಿರಾಜ ಹೆಗ್ಡೆಯವರು 2009-2014, 2014-2019 ಹಾಗೂ 2019-2022 ಅವಧಿಯಲ್ಲಿ ದ.ಕ. ಹಾಲು

ಅತ್ಯಾಧುನಿಕ ರೊಬೋಟಿಕ್ ತಂತ್ರಜ್ಞಾನ ಮೂಲಕ ಯಶಸ್ವಿ ಶಸ್ತ್ರಚಿಕಿತ್ಸೆ: ಎ.ಜೆ. ಆಸ್ಪತ್ರೆ ಯಲ್ಲಿ ಆರೋಗ್ಯ ಕ್ಷೇತ್ರದ ಹೊಸ ಮುನ್ನಡೆ

ಮಂಗಳೂರು: ಕಾರವಾರ ಮೂಲಕ ಮಹಿಳೆಯೊಬ್ಬರ ಮೂತ್ರಪಿಂಡದಲ್ಲಿ ಗೆಡ್ಡೆ ಇರುವುದು ಪತ್ತೆಯಾಗಿತ್ತು. ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ರೊಬೋಟಿಕ್ ತಂತ್ರಜ್ಞಾನವನ್ನು ಬಳಸಿ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಯಿತು. ಇದು ವೈದ್ಯರ ವಿಶೇಷ ಸಾಧನೆ ಆಗಿದೆ. ಕಾರವಾರದ 48 ವರ್ಷದ ಕೂಲಿ ಕಾರ್ಮಿಕ ಮಹಿಳೆಯೊಬ್ಬರು ಎರಡು ತಿಂಗಳಿನಿಂದ ತೀವ್ರವಾದ ಎಡ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಕಾರ್ವಾರದಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಆಕೆಯ ಎಡ ಮೂತ್ರಪಿಂಡದಲ್ಲಿ

ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಕೋಮು ಹಿಂಸಾಚಾರ ನಿಯಂತ್ರಿಸಲು ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆ’ಯನ್ನು ರಚಿಸಲಿದ್ದೇವೆ’ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಕೋಮುಸೂಕ್ಷ್ಮ ಪರಿಸ್ಥಿತಿಯ ಕುರಿತು ಅವಲೋಕಿಸಲು ಹಿರಿಯ ಪೊಲೀಸ್ ಆಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಯವರ ಜೊತೆ ಶನಿವಾರ ವಿಶೇಷ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ‘ಕೋಮು ಹಿಂಸೆ ನಿಗ್ರಹ ಕಾರ್ಯಪಡೆಯನ್ನು ನಕ್ಸಲ್

ಮಂಗಳೂರು:ಸುಹಾಸ್ ಶೆಟ್ಟಿ ಹತ್ಯೆ: 8 ಆರೋಪಿಗಳ ಬಂಧನ:ಗೃಹ ಸಚಿವ ಡಾ. ಜಿ. ಪರಮೇಶ್ವರ್

ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಎಂಟು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ‘ ಎಲ್ಲ ಆರೋಪಿಗಳು ಪೊಲೀಸ್ ಕಸ್ಟಡಿಯಲ್ಲಿದ್ದಾರೆ’ ಎಂದರು. ಆರೋಪಿಗಳ ವಿವರ ನೀಡಿದ ಪೊಲೀಸ್ ಕಮಿಷನರ್ ಅನುಪಮ್‌ ಅಗ್ರವಾಲ್ ‘ಕಿನ್ನಿಪದವಿನಲ್ಲಿ ಮೇ 1 ರಂದು ರಾತ್ರಿ ಸುಹಾಸ್ ಶೆಟ್ಟಿ ಕೊಲೆ ನಡೆದಿತ್ತು. ಕಿನ್ನಿಪದವಿನಲ್ಲಿ ವಾಸವಾಗಿರುವ