ಮೈಸೂರಿನಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಅನ್ನು ಖಂಡಿಸಿ ಹಾಗೂ ಆರೋಪಿಯನ್ನು ತಕ್ಷಣವೇ ಬಂಧಿಸಬೇಕೆಂದು ಆಗ್ರಹಿಸಿ, ದಕ್ಷಿಣ ಕನ್ನಡ ಜಿಲ್ಲಾ ಎನ್‌ಎಸ್‌ಯುಐ ನೇತೃತ್ವದಲ್ಲಿ ಮಂಗಳೂರಲ್ಲಿ ಪ್ರತಿಭಟನೆ ನಡೆಯಿತು. ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಎನ್‌ಎಸ್‌ಯುಐ ಮುಖಂಡರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
The campus of Srinivas College of Physiotherapy , Srinivas University,wore a festive look as students celebrated the festival of Onam at college campus in Pandeshwar, Mangalore on 25th August , 2021. The lobby was decorated with pookalam (a traditional flower arrangement), while students came dressed in their best traditional wear. The main attraction of the […]
ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕು. ಸರ್ಕಾರ ಅವಕಾಶ ನೀಡದಿದ್ದರೆ ಬಿಜೆಪಿ ಶಾಸಕರ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಶ್ರೀ ರಾಮ ಸೇನೆಯ ಆನಂದ ಶೆಟ್ಟಿ ಅಡ್ಯಾರ್ ಎಚ್ಚರಿಕೆ ನೀಡಿದರು. ನೂರಾರು ವರ್ಷಗಳಿಂದ ನಡೆದು ಬಂದ ಸಾರ್ವಜನಿಕ ಗಣೇಶೋತ್ಸವ ಈ ಬಾರಿ ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರ ನಿಷೇಧ ವಿಧಿಸಿದೆ. ಆದರೆ ಎಲ್ಲರ ಜೀವನ ಸಾಮಾನ್ಯ ಸ್ಥಿತಿಗೆ ಮರಳಿದ್ದರೂ ನಿರ್ಬಂಧ ವಿಧಿಸಿದ್ದು ಖಂಡನಾರ್ಹ. ಈ ಹಬ್ಬವನ್ನೇ ಅವಲಂಬಿಸಿರುವ
ಮಂಗಳೂರು: ಪತ್ರಕರ್ತ ಧೀರಜ್ ಪೊಯ್ಯಕಂಡ ಅವರ ಎರಡನೇ ಕಾದಂಬರಿ ’ಪರಾಶರ’ ನಗರದ ಪ್ರೆಸ್‌ಕ್ಲಬ್‌ನಲ್ಲಿ ಬಿಡುಗಡೆಗೊಂಡಿತು. ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಹಾಗೂ ಗುರು ಬೆಳದಿಂಗಳು ಸಂಸ್ಥೆಯ ಅಧ್ಯಕ್ಷ ಪದ್ಮರಾಜ್ ಆರ್. ಅವರು ಕಾದಂಬರಿಯನ್ನು ಬಿಡುಗಡೆಗೊಳಿಸಿದರು. ಲೇಖಕ ಧೀರಜ್ ಪೊಯ್ಯಕಂಡ ಅವರು ಮಾತನಾಡಿ, ಸೋಶಿಯಲ್ ಮಿಡಿಯಾಗಳ ದುರ್ಬಳಕೆ ಹಾಗೂ ಅದರಿಂದಾಗುವ ದುಷ್ಪರಿಣಾಮದ ಎಳೆಯನ್ನಿಟ್ಟುಕೊಂಡು ಈ ಕೈಂ, ಸಸೆನ್ಸ್ ಕಾದಂಬರಿ ರಚಿಸಲಾಗಿದೆ. ಪ್ರಸ್ತುತ
ಮಂಗಳೂರು: ಮಣಿಪಾಲ ಆರೋಗ್ಯ ಕಾರ್ಡ್ ಯೋಜನೆಯ 2021ನೇ ಸಾಲಿನ ದಾಖಲಾತಿಯು ಪ್ರಾರಂಭವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಅತ್ತಾವರ ಕೆ.ಎಂ.ಸಿ, ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಜಾನ್ ರಾಮಪುರಮ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಮಣಿಪಾಲ್ ಆರೋಗ್ಯ ಕಾರ್ಡ್ ಯೋಜನೆಯು ಸಮುದಾಯಕ್ಕೆ ಕೈಗೆಟುಕುವ ವೆಚ್ಚದಲ್ಲಿ ಗುಣಮಟ್ಟದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ
ಮಂಗಳೂರು ಕಮೀಷರೇಟ್ ವ್ಯಾಪ್ತಿಯ ಒಟ್ಟು 7 ಮಂದಿ ಅಘ್ಘಾನಿಸ್ತಾನದಿಂದ ಸುರಕ್ಷಿತವಾಗಿ ಮಂಗಳೂರಿಗೆ ಆಗಮಿಸಿದ್ದಾರೆ ಎಂದು ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ. ಕಳೆದ ಕೆಲ ಸಮಯದಿಂದ ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗಳ ಹಿನ್ನೆಲೆಯಲ್ಲಿ ಕಾಬೂಲ್‌ನಿಂದ ದಿಲ್ಲಿಗೆ ಏರ್‌ಲಿಫ್ಟ್ ಆಗಿ ಕಳೆದರಡು ದಿನಗಳಿಂದ ತಮ್ಮ ಮನೆಗಳಿಗೆ ಆಗಮಿಸಿರುವ ಏಳು ಮಂದಿ ಮಂಗಳೂರಿಗರ ಜತೆ ತಮ್ಮ ಕಚೇರಿಯಲ್ಲಿ ಅವರ ಕುಶೋಲಪರಿ ನಡೆಸಿದರು. ಪ್ರಸಾದ್ ಆನಂದ್, ದಿನೇಶ್
ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ ಎತ್ತಿದ್ದಾರೆ. ಮಾತ್ರವಲ್ಲದೆ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ ಕೋಡಿಕಲ್ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಬಹುನಿರೀಕ್ಷಿತ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನವು ಮಂಗಳೂರಿನ ಪ್ರಶಾಂತವಾದ ಕುಳಾಯಿ ಕೋಡಿಕೆರೆ ಎಂಬಲ್ಲಿ 1.5 ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿದೆ. ಆಗಸ್ಟ್ 27ರಂದು ಭೂಮಿ ಪೂಜೆಯನ್ನು ನೆರವೇರಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶ್ರೀ ರಾಧಾ ಗೋವಿಂದ ದೇವಸ್ಥಾನದ ನಾಮ ನಿಷ್ಠ ದಾಸ್ ಅವರು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಯು ಸಂಸದ ನಳಿನ್ ಕುಮಾರ್
ಮಂಗಳೂರಿನ ಪಣಂಬೂರಿನ ಸಮುದ್ರ ತೀರದಲ್ಲಿ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ ಸಿಕ್ಕಿದಂತಾಗಿದೆ. ವಿ4 ನ್ಯೂಸ್‌ನ ವರದಿಗೆ ಎಚ್ಚೆತ್ತು ಮಂಗಳೂರು ಮಹಾನಗರ ಪಾಲಿಕೆ ಸ್ವಚ್ಛತಾ ಕಾರ್ಯವನ್ನ ಕೈಗೊಂಡಿದೆ. ಇನ್ನು ನಗರ ಪಾಲಿಕೆ ಸಿಬ್ಬಂದಿಗಳು ಸ್ವಚ್ಛ ಕಾರ್ಯವನ್ನು ಕೈಗೊಂಡಿದ್ದಾರೆ. ಪಣಂಬೂರು ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ಬೀಚ್ ಸೌಂದರ್ಯಕ್ಕೆ ಧಕ್ಕೆಯಾಗಿತ್ತು. ಸಮುದ್ರಕ್ಕೆ ಪ್ರವಾಸಿಗರೇ ಎಸೆದ ಕಸ ಈಗ ದೊಡ್ಡ