ದ.ಕ ಜಿಲ್ಲಾಡಳಿತ ವತಿಯಿಂದ ನೆಹರೂ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಅಂಗಾರ ರವರು ಸಿದ್ದಪಡಿಸಿದ ಭಾಷಣದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ ಹೆಸರನ್ನು ಕೊನೆಯಲ್ಲಿ ಉಲ್ಲೇಖಿಸಿದ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಟೌನ್ ಹಾಲ್ ಮುಂಭಾಗದ ಗಾಂಧಿ ಪ್ರತಿಮೆ ಎದುರುಗಡೆ ಪ್ರತಿಭಟನೆ ನಡೆಯಿತು. ಇದೇ ವೇಳೆ
ನಗರದ ಮಲ್ಲಿಕಟ್ಟೆಯ ಸರ್ಕಲ್‌ನಲ್ಲಿ ಸಿಟಿ ಬಸ್ ಮೇಲೆ ತೆಂಗಿನಮರ ಬಿದ್ದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.ಸಿಟಿ ಬಸ್ ನಂತೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಬೃಹತ್ ತೆಂಗಿನಮರ ಬಸ್ ಮೇಲೆ ಬಿದ್ದಿದೆ. ಮರ ಬಿದ್ದ ಪರಿಣಾಮ ವಿದ್ಯುತ್ ಲೈನ್‌ಗಳು ಜಖಂಗೊಂಡಿವೆ. ಇನ್ನು ರಸ್ತೆಗೆ ಬಿದ್ದ ಮರದಿಂದ ತೆಂಗಿನಕಾಯಿಗಳನ್ನು ಸಾರ್ವಜನಿಕರು ಕಿತ್ತು ಕೊಂಡೊಯ್ದರು. ನಂತರ ಸಾರ್ವಕನಿಕರ ಸಹಕಾರದಲ್ಲಿ ಸಂಚಾರ ಪೊಲೀಸರು ಬಿದ್ದಿದ್ದ ತೆಂಗಿನಮರ ತೆರವು ಕಾರ್ಯಾಚರಣೆಯಲ್ಲಿ ತೊಡಗಿದರು.
ಚಿತ್ರಾಪುರ ಬೈಕಂಪಾಡಿ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ ಆರ್ಯ ಸುವರ್ಣ(45) ಮತ್ತು ಗುಣ ಸುವರ್ಣ(35) ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಪಡುಬಿದ್ರಿ ನಿವಾಸಿಗಳು. ಆರ್ಯ ಸುವರ್ಣ ಖಾಸಗಿ ಕಂಪನಿಯಲ್ಲಿ ಉದ್ಯೋಗದಲ್ಲಿದ್ದರು. ಗುಣ ಆರ್. ಸುವರ್ಣ ಡೆತ್ ನೋಟ್ ಬರೆದಿದ್ದು ಅದರಲ್ಲಿ ತಾವು ಆತ್ಮಹತ್ಯೆ ಮಾಡಲು ಕಾರಣವನ್ನು ಬರೆದಿದ್ದಾರೆ. ಸುಮಾರು 10ದಿನಗಳಿಂದ ಕೋವಿಡ್ ಬಾಧಿಸಿದ್ದು, ಅದು ವಿಕೋಪಕ್ಕೆ ಹೋಗಿ ಬ್ಲಾಕ್ ಫಂಗಸ್ ಭಯ ಕಾಡಿದೆ. ಗಂಡನಿಗೂ 3 ದಿನದಿಂದ
ಹಳೆಯ ಕಾಲದ ತುಳುನಾಡಿನ ಬದುಕು ಪರಿಶ್ರಮದ ಹಾಗೂ ಕಷ್ಟದ ಬದುಕಾಗಿತ್ತು, ಈ ವಿಚಾರವನ್ನು ಹೊಸ ತಲೆಮಾರಿಗೆ ತಿಳಿಸುವ ಪ್ರಯತ್ನ ಮಾಡಬೇಕಾಗಿದೆ ಎಂದು ಒಎನ್‍ಜಿಸಿ ಎಂ.ಆರ್.ಪಿ.ಎಲ್ ಸಂಸ್ಥೆಯ ಡಿ.ಜಿ.ಎಂ ವೀಣಾ ಶೆಟ್ಟಿ ಅವರು ಹೇಳಿದರು. ಅವರು ತುಳು ಪರಿಷತ್ ಮತ್ತು ವೀ ಫೋರ್ ನ್ಯೂಸ್ ಕರ್ನಾಟಕ ವಾಹಿನಿ ಜಂಟಿಯಾಗಿ ಆಯೋಜಿಸಿದ “ಆಟಿದ ಪಾತೆರಕತೆ ಮತ್ತು ಕಬಿಗೋಷ್ಠಿ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಹಿರಿಯ ಸಂಶೋಧಕಿ ಡಾ. ಇಂದಿರಾ ಹೆಗ್ಡೆ ಅವರು
ವಿಶ್ವವಿದ್ಯಾನಿಲಯ ಸಂಧ್ಯಾ ಕಾಲೇಜು, ಮಂಗಳೂರು ಇಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂಭ್ರಮಾಚರಣೆ ನಡೆಯಿತು. ಜ್ಯೋತಿ ಬೆಳಗಿಸಿ ಅಮೃತ ಮಹೋತ್ಸವವನ್ನು ಉದ್ಘಾಟಿಸಿದ ಮಂಗಳೂರು ಪೊಲೀಸ್ ಇಲಾಖೆಯ ನಿವೃತ್ತ ಹೆಚ್ಚುವರಿ ಉಪಆಯುಕ್ತರಾದ ಶ್ರೀ ಉದಯ್ ನಾಯಕ್ ಅವರು ಮಾತನಾಡಿ, ನಮ್ಮ ಪ್ರಶ್ನೆಗಳು ಹಕ್ಕಿಗಾಗಿ ಮಾತ್ರವಲ್ಲ, ಕರ್ತವ್ಯದ ಕುರಿತಂತೆಯೂ ಸಮಾಲೋಚಿಸಬೇಕಾಗಿದೆ. ಬ್ರಿಟೀಷರಿಂದ ಈಗಾಗಲೇ ಹಾನಿಗೊಂಡ ನಮ್ಮ ಶಿಕ್ಷಣ ವ್ಯವಸ್ಥೆಯನ್ನು ಸರಿಪಡಿಸುವ ಅನಿವಾರ್ಯತೆಯಿದ್ದು,
ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) 75 ನೇ ಸ್ವಾತಂತ್ರ್ಯೋತ್ಸವವನ್ನು ರಕ್ತದಾನದ ಮೂಲಕ ವಿಶಿಷ್ಟವಾಗಿ ಆಚರಣೆ ಟೀಮ್ ಬಿ-ಹ್ಯೂಮನ್, ಮಂಗಳೂರು ಹಾಗೂ ಮುಬಾರಕ್ ವೆಲ್ಫೇರ್ ಅಸೋಸಿಯೇಷನ್ (ರಿ) ಸೋಮೇಶ್ವರ ಉಚ್ಚಿಲ ಇದರ ಜಂಟಿ ಆಶ್ರಯದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರದ ಮೂಲಕ ಭಾರತದ 75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವದ ಈ ಮಹತ್ವಪೂರ್ಣ ಗಳಿಗೆಯನ್ನು ಬಹಳ ಅರ್ಥವತ್ತಾಗಿ
ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ ಇಲ್ಲಿ 75ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾಲೇಜಿನಪ್ರಾಂಶುಪಾಲ ಡಾ. ಗಣನಾಥ ಶೆಟ್ಟಿ ಎಕ್ಕಾರು ಧ್ವಜಾರೋಹಣ ಗೈದರು. ಅವರು ಮಾತನಾಡಿ ಸಂವಿಧಾನದ ಆಶಯಗಳಾದ ಸಮಾನತೆ, ಸಹೋದರತೆ, ಸ್ವಾತಂತ್ರ್ಯಗಳನ್ನು ಅರ್ಥಮಾಡಿಕೊಂಡು ಅನುಸರಿಸಬೇಕು ಹಾಗೂ ನಾಗರಿಕರ ಕರ್ತವ್ಯಗಳನ್ನು ನಿಷ್ಠೆಯಿಂದ ಪಾಲಿಸಬೇಕು. ಮಾನವ ಸಂಪನ್ಮೂಲ ಅಭಿವೃದ್ಧಿಯ ಕಡೆಗೆ ಅಗತ್ಯವಾಗಿ
ದೇಶಕ್ಕಾಗಿ ಜೈಲಿಗೆ ಹೋದವರು ಮತ್ತು ಹುತಾತ್ಮರಾದವರ ಬಗ್ಗೆ ಹಗುರವಾಗಿ ಮಾತನಾಡುವ ಸಿ.ಟಿ ರವಿಯಂತಹವರೇ ನಿಜವಾದ ದೇಶದ್ರೋಹಿ ಎಂದು ಮಾಜಿ ಸಚಿವ ಬಿ.ರಮಾನಾಥ್ ರೈ ಕಿಡಿಕಾರಿದ್ದಾರೆ. ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯ ಸಿ.ಟಿ.ರವಿ, ಈಶ್ವರಪ್ಪರಂತಹವರು ದೇಶದ ಸ್ವಾತಂತ್ರ್ಯಕ್ಕಾಗಿ ಬಲಿದಾನಗೈದವರನ್ನು, ಕೊಡುಗೆಗಳನ್ನು ನೀಡಿದವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ದೇಶದ ಪ್ರಪ್ರಥಮ
ಉದ್ಯೋಗ ಸೃಷ್ಟಿಸಿ ನಿರುದ್ಯೋಗದಿಂದ ರಕ್ಷಿಸಿ, ಸ್ಥಳೀಯರಿಗೆ ಆದ್ಯತೆ ಒದಗಿಸಲು ಆಗ್ರಹಿಸಿ, ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಡಿವೈಎಫ್‍ಐ ನೇತೃತ್ವದಲ್ಲಿ ಕ್ಲಾಕ್ ಟವರ್ ಬಳಿ ನಡೆದ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಉದ್ದೇಶಿಸಿ ಸಿಪಿಐಎಂ ಮುಖಂಡ ಸುನೀಲ್ ಕುಮಾರ್ ಬಜಾಲ್ ಅವರು, ನಿರುದ್ಯೋಗಿಗಳ ಪ್ರಮಾಣ ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ನಿರುದ್ಯೋಗದ ಪ್ರಮಾಣ ಸ್ವತಂತ್ರ ಭಾರತ ಯಾವತ್ತೂ ಕಂಡಿರದ ಮಟ್ಟಕ್ಕೆ ಏರಿಕೆಯಾಗಿದೆ.ಎಲ್ಲೆಲ್ಲೊ
ತಾಲಿಬಾನ್ ಮತಾಂಧ ಸಂಘಟನೆಯಿಂದ ಪ್ರೇರಿತರಾಗಿ ಆಂತರಿಕವಾಗಿ ನಮ್ಮ ದೇಶದಲ್ಲಿಯೂ ಕಾನೂನು ಮುರಿಯುವ ದುಸ್ಸಾಹಕ್ಕೆ ಕೈ ಹಾಕಿದರೆ ನಿಮ್ಮ ಮತಾಂಧ ತೆಯನ್ನು ಮಟ್ಟ ಹಾಕಲು ಸರಕಾರ ಬದ್ದವಾಗಿದೆ ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಎಚ್ಚರಿಸಿದ್ದಾರೆ. ಕಬಕದಲ್ಲಿ ಸ್ವಾತಂತ್ರ್ಯ ರಥವನ್ನು ತಡೆದು ವೀರ ಸಾವರ್ಕರ್ ಫೋಟೋ ತೆಗೆದು ಮತಾಂಧ ಟಿಪ್ಪು ಫೋಟೋ ಹಾಕಬೇಕೆಂಬ ಎಸ್ ಡಿ ಪಿ ಐ ಕಾರ್ಯಕರ್ತರ ಕಾನೂನು ಭಂಜಕ ಕೃತ್ಯವನ್ನು ಸಹಿಸುವುದಿಲ್ಲ.ದೇಶದಲ್ಲಿ ಕಾನೂನು,ಪಾಲಿಸಿ ಅದನ್ನು