Home ಕರಾವಳಿ Archive by category ಮಂಗಳೂರು (Page 2)

ಬಡಿಲಗುತ್ತು ಡಾ| ಮನೋಹರ್ ನಾರಾಯಣ ಶೆಟ್ಟಿ ನಿಧನ

ಮುಂಬೈ ನಿವಾಸಿ ಬಡಿಲಗುತ್ತು ಡಾ| ಮನೋಹರ್ ನಾರಾಯಣ ಶೆಟ್ಟಿ ಅವರು ಹೃದಯಾಘಾತದಿಂದ ಇತ್ತೀಚೆಗೆ ನಿಧನರಾದರು.ದಕ್ಷಿಣಕನ್ನಡ ಜಿಲ್ಲೆಯ ಪ್ರತಿಷ್ಠಿತ ಮನೆತನಗಳಲ್ಲಿ ಒಂದಾದ ಬಡಿಲಗುತ್ತು ಮನೆತನದ ದಿ.ಸೀತಮ್ಮ ಶೆಟ್ಟಿ ಮತ್ತು ದಿ. ಪಾಶಾಣಮೊಗರು ನಾರಾಯಣ ಶೆಟ್ಟಿ ದಂಪತಿಗಳ ಪುತ್ರರಾಗಿರುವ ಇವರು ಹಲವು ವರ್ಷಗಳಿಂದ ಮುಂಬೈಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು.ಮೃತರು

ಟೈಮ್ಸ್ ಆಫ್ ಕುಡ್ಲ ಪತ್ರಿಕೆ ಸಂಪಾದಕ ಶಶಿ ಆರ್. ಬಂಡಿಮಾರ್ ಹೃದಯಾಘಾತದಿಂದ ನಿಧನ

“ಟೈಮ್ಸ್ ಆಫ್ ಕುಡ್ಲ” ತುಳು ಪತ್ರಿಕೆಯ ಪ್ರಧಾನ ಸಂಪಾದಕ ಶಶಿ ಆರ್. ಬಂಡಿಮಾರ್ (41) ಬುಧವಾರ ರಾತ್ರಿ ನಾಗಾಲ್ಯಾಂಡ್ ನಲ್ಲಿ ಹೃದಯಾಘಾತದಿಂದ ನಿಧನರಾದರು.ಅವರು ತಾಯಿ, ಪತ್ನಿ, ಸಹೋದರಿ, ಇಬ್ಬರು ಸಹೋದರರು ಮತ್ತು ಅಪಾರ ಬಂಧು ಬಳಗದವರನ್ನು ಅಗಲಿದ್ದಾರೆ.ತುಳು ಸಂಸ್ಕೃತಿ ಆಚಾರ ವಿಚಾರದ ಉಳಿವಿಗಾಗಿ ಶ್ರಮಿಸಿ “ಟೈಮ್ಸ್ ಆಫ್ ಕುಡ್ಲ” ಎಂಬ ತುಳು ವಾರಪತ್ರಿಕೆಯನ್ನು 15 ವರ್ಷಗಳಿಂದ ನಡೆಸಿಕೊಂಡು ಬಂದಿದ್ದರು. ಸಣ್ಣ ಕೈಗಾರಿಕೆಯಲ್ಲೂ,

ಮಂಗಳೂರು : 3 ಸಾವಿರ ಲಂಚ ಸ್ವೀಕಾರಿಸುತ್ತಿದ್ದಾಗ ಲೋಕಾಯುಕ್ತ ದಾಳಿ,ಪೊಲೀಸ್ ನಿರೀಕ್ಷಕ, ಠಾಣೆ ಸಿಬ್ಬಂದಿ ವಶಕ್ಕೆ

ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ಕೆ ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ನಡೆದಿದೆ.ಓರ್ವ ವ್ಯಕ್ತಿ ಸ್ಕೂಟರ್ ವೊಂದನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ಮಾನ್ಯ ನ್ಯಾಯಾಲಯದಿಂದ ಆದೇಶವಾಗಿದ್ದು, ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಮಹಮ್ಮದ್ ಶರೀಫ್ ರವರನ್ನು ಭೇಟಿ ಮಾಡಿದಾಗ ರೂ. 5000 ಲಂಚದ ಹಣಕ್ಕೆ ಬೇಡಿಕೆ

ಮುಡಿಪುವಿನ ಸೂರಜ್ ಪಿಯು, ಜ್ಞಾನದೀಪ ಶಾಲೆ: ಸಂಭ್ರಮದಿಂದ ನಡೆದ ಗಣರಾಜ್ಯೋತ್ಸವ

ಮುಡಿಪುವಿನ ಸೂರಜ್ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನದೀಪ ಶಾಲೆ ಗಣರಾಜ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು. ವಿದ್ಯಾರ್ಥಿಗಳು ಪ್ರಾರ್ಥನೆಯೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು ತೇಜಶ್ರೀ ಇವರು ಅತಿಥಿಗಳನ್ನು ಹಾಗೂ ನೆರೆದವರನ್ನು ಸ್ವಾಗತಿಸಿದರು ನಂತರ ಅತಿಥಿಗಳು ಧ್ವಜಾರೋಹಣವನ್ನು ನೆರವೇರಿಸಿದರು. ವಿದ್ಯಾರ್ಥಿಗಳಾದ ದೀಕ್ಷಿತ ಹಾಗೂ ಪ್ರತ್ವಿಕ್ ಅವರು ಈ ದಿನದ ಮಹತ್ವವನ್ನು ತಿಳಿಸಿದರು.ನಂತರ ಅತಿಥಿಗಳು ಕಾರ್ಯಕ್ರಮದ ಮತ್ತು ಭಾರತ ಸಂವಿಧಾನದ ಬಗ್ಗೆ

ಓಂ ಕ್ರಿಕೆಟರ್ಸ್ ಪಾವಂಜೆ ನೂತನ ಅಧ್ಯಕ್ಷರಾಗಿ ಸುಕೇಶ್ ಪಾವಂಜೆ ಆಯ್ಕೆ

ಓಂ ಕ್ರಿಕೆಟರ್ಸ್ ಪಾವಂಜೆ, ಹಳೆಯಂಗಡಿ ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಶ್ರೀ ಶರತ್ ರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ವಾರ್ಷಿಕ ವರದಿ ಮತ್ತು ಆಯವ್ಯಯದ ಮಂಡನೆಯನ್ನು ಕಿರಣ್ ರಾಜ್ ರವರು ನೆರವೇರಿಸಿ ಅನುಮೋದನೆಯನ್ನು ಪಡೆದರು.ಮುಂದಿನ ವರ್ಷಕ್ಕೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷರಾಗಿ ಶ್ರೀ ಸುಕೇಶ್ ಪಾವಂಜೆ, ಉಪಾಧ್ಯಕ್ಷರಾಗಿ ಶ್ರೀ ಮಿಥುನ್ ಸುವರ್ಣ,

ಫೇಮಸ್ ಯೂತ್ ಕ್ಲಬ್ಬಿನ ನೂತನ ಅಧ್ಯಕ್ಷರಾಗಿ ಸಂಪತ್ ಜೆ. ಶೆಟ್ಟಿ ಆಯ್ಕೆ

ಫೇಮಸ್ ಯೂತ್ ಕ್ಲಬ್ (ರಿ) 10ನೇ ತೋಕೂರು ಇದರ ವಾರ್ಷಿಕ ಮಹಾಸಭೆಯನ್ನು ದಿನಾಂಕ 26.01.2027ನೇ ಭಾನುವಾರ ಸಂಸ್ಥೆಯ ಕಾರ್ಯಾಲಯದಲ್ಲಿ ಅಧ್ಯಕ್ಷರಾದ ಶ್ರೀ ಭಾಸ್ಕರ್ ಅಮೀನ್ ತೋಕೂರುರವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು.ವಾರ್ಷಿಕ ವರದಿ ಮತ್ತು ಆಯವ್ಯಯದ ಮಂಡನೆಯನ್ನು ಕಾರ್ಯದರ್ಶಿ, ಹಿಮಕರ್ ಕೋಟ್ಯಾನ್ ರವರು ನೆರವೇರಿಸಿಕೊಟ್ಟರು.ಗೌರವಾಧ್ಯಕ್ಷರಾದ ಶ್ರೀ ಗುರುರಾಜ್ ಪೂಜಾರಿಯವರು ಉಪಸ್ಥಿತರಿದ್ದು ಈ ಹಿಂದಿನ ಆರು ವರ್ಷಗಳ ಕಾಲ ಸಂಸ್ಥೆಯು ಅತ್ಯುತ್ತಮ ಸಮಾಜಮುಖಿ

ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಉಚಿತ ಗರ್ಭಕಂಠದ ಕ್ಯಾನ್ಸರ್‌ ತಪಾಸಣೆ

ವಿಶ್ವ ಗರ್ಭಕಂಠದ ಕ್ಯಾನ್ಸರ್‌ ಜಾಗೃತಿ ತಿಂಗಳ ಅಂಗವಾಗಿ ಕೆ.ಎಂ.ಸಿ. ಆಸ್ಪತ್ರೆಯು ಉಚಿತ ಗರ್ಭಕಂಠದ ಕ್ಯಾನ್ಸರ್‌ ತಪಾಸಣೆ ಕಾರ್ಯಕ್ರಮವನ್ನು ಜನವರಿ 27 ರಿಂದ 31ರವರೆಗೆ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗಶಾಸ್ತ್ರ ವಿಭಾಗದಲ್ಲಿ ಆಯೋಜಿಸಿದೆ. ಈ ಶಿಬಿರವನ್ನು ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದ ಪ್ರಸೂತಿ ಮತ್ತು ಸ್ತ್ರೀರೋಗಶಾಸ್ತ್ರ ವಿಭಾಗ ಮತ್ತು ಕೆಎಂಸಿ ಆಸ್ಪತ್ರೆ ಅತ್ತಾವರ ಆಂಕಾಲಜಿ ಕೇಂದ್ರವು ಇಂಡಿಯನ್‌ ಕ್ಯಾನ್ಸರ್ ಸೊಸೈಟಿ ಬೆಂಗಳೂರು ಇವರ

ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಆಯ್ಕೆ

ಮಂಗಳೂರು ಪ್ರೆಸ್ ಕ್ಲಬ್‌ನ 2024ನೇ ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ.ಮುಹಮ್ಮದ್ ಆರೀಫ್ ಪಡುಬಿದಿರೆ (ವಿಜಯ ಕರ್ನಾಟಕ), ಜಿತೇಂದ್ರ ಕುಂದೇಶ್ವರ (ವಿಶ್ವವಾಣಿ), ಭಾಸ್ಕರ ರೈ ಕಟ್ಟ ( ಸುದ್ದಿ ಬಿಡುಗಡೆ) , ರಘರಾಮ ನಾಯಕ್ (ಹೊಸದಿಗಂತ) ಹಾಗೂ ಪತ್ರಿಕಾ ಛಾಯಾಗ್ರಾಹಕ ಸತೀಶ್ ಇರಾ ( ಉದಯವಾಣಿ ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಪುರಸ್ಕಾರ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ,

ಕುಲಶೇಖರ : ಶ್ರೀ ವೀರನಾರಾಯಣ ಮಾತೃ ಮಂಡಳಿಯ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಆಯ್ಕೆ

ಇತಿಹಾಸ ಪ್ರಸಿದ್ಧ ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಮುಂದಿನ ಅವಧಿಗೆ ದೇವಳದ ಮಾತೃ ಮಂಡಳಿಯ ನೂತನ ಅಧ್ಯಕ್ಷೆಯಾಗಿ ಪಾರ್ವತಿ ಶೇಖರ್.ಬಿ.ಕೆ ಶಕ್ತಿನಗರ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷೆಯಾಗಿ ನಾಗವೇಣಿ ಮಾಧವ, ಪ್ರಧಾನ ಕಾರ್ಯದರ್ಶಿಯಾಗಿ ಅಶ್ವಿನಿ ಕಿಶೋರ್, ಜತೆ ಕಾರ್ಯದರ್ಶಿಯಾಗಿ ಮಮತಾ ದೇವದಾಸ್, ಕೋಶಾಧಿಕಾರಿಗಳಾಗಿ ಪುಷ್ಪ ಸುಂದರ್ ಹಾಗೂ ಭಾರತಿ.ವಿ, ಜತೆ ಕೋಶಾಧಿಕಾರಿಗಳಾಗಿ ಮೋಹಿನಿ ಮೋನಪ್ಪ ಹಾಗು ಸುಕನ್ಯ ಪ್ರಜ್ವಲ್, ಸಾಂಸ್ಕೃತಿಕ ಕಾರ್ಯದರ್ಶಿಗಳಾಗಿ

ಮಂಗಳೂರು : ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ

ರೋಟರಿ ಕ್ಲಬ್ ಬೈಕಂಪಾಡಿ ಮತ್ತು ಮಹಿಳಾ ವೇದಿಕೆ ಬಂಟರ ಸಂಘ ಸುರತ್ಕಲ್, ಇವರ ವತಿಯಿಂದ ಇಂದು ವಿಶೇಷವಾಗಿ ಮಹಿಳೆಯರಿಗೆ ಗರ್ಭಕಂಠದ ಕ್ಯಾನ್ಸರ್ ಬಗ್ಗೆ ಅರಿವು ಕಾರ್ಯಕ್ರಮ ಬಂಟರ ಭವನ ಸುರತ್ಕಲ್ ನಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಕೆಎಂಸಿ ಹಾಸ್ಪಿಟಲ್ ಮಂಗಳೂರು ಇದರ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ಆರ್. ನಾಯಕ್ ರವರು ಗರ್ಭಕಂಠದ ಕ್ಯಾನ್ಸರ್ ನ ಮುನ್ನೆಚ್ಚರಿಕೆಗಳು ಹಾಗೂ ತಡೆಗಟ್ಟುವಿಕೆಯ ಬಗ್ಗೆ ಉಪಯುಕ್ತವಾದ ಮಾಹಿತಿಯನ್ನು