Home ಕರಾವಳಿ Archive by category ಮಂಗಳೂರು (Page 21)

ಬೆಳಗಾವಿ: ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕಿದ ಶ್ವಾನ..!!

ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳ ಪಾದಯಾತ್ರೆಯಲ್ಲಿ ಶ್ವಾನವೊಂದು ಅಯ್ಯಪ್ಪ ದೇವರ ಸನ್ನಿಧಾನದತ್ತ ಹೆಜ್ಜೆ ಹಾಕ್ತಿದೆ.ದಿನ ಪ್ರತಿ ಸುಮಾರು 40 ಕಿಮೀ ನಡೆಯುತ್ತಿರುವ ಶ್ವಾನವನ್ನು ಕಂಡು ಎಲ್ಲಾರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಬೇಕ್ಕೇರಿ ಗ್ರಾಮದಿಂದ ಅಯ್ಯಪ್ಪ ಮಾಲಾಧಾರಿಗಳ ತಂಡ ಶಬರಿಮಲೆಗೆ ಪಾದಯಾತ್ರೆ

ಮಂಗಳೂರು: ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿ, ದ.ಕ ಜಿಲ್ಲೆಯ 10ವಿದ್ಯಾರ್ಥಿಗಳು ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಬೀದರ್‌ನ ಜಿಲ್ಲಾ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಲಿರುವ ೨೦೨೩-೨೪ನೇ ಸಾಲಿನ ೧೯ ವರ್ಷದೊಳಗಿನ ಬಾಲಕ – ಬಾಲಕಿಯರ ರಾಜ್ಯಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾವಳಿಗೆ ದ.ಕ ಜಿಲ್ಲೆಯ10ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ. ಈ ಪಂದ್ಯಾವಳಿಯು ನ.21 ಮತ್ತು ನ.22 ರಂದು ನಡೆಯಲಿದ್ದು, ಮಂಗಳೂರಿನ ಸಂತ ಆಗ್ನೆಸ್ ಪಿಯು ಕಾಲೇಜಿನ ನಹ್ಲಾ ಫಾತಿಮಾ, ಸಂತ ಅಲೋಶಿಯಸ್ ಪಿಯು ಕಾಲೇಜಿನ ಆರ್ಣ ಸದೋರ್ತ, ಬಂಟ್ವಾಳದ ಕಾರ್ಮೆಲ್ ಕಂಪೊಸೈಟ್

ಮಂಗಳೂರು :’ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ಗೆ ಚಾಲನೆ

ಮಂಗಳೂರು: ಡಿಜಿಟಲ್ ಬಸ್ ಮೂಲಕ ಗ್ರಾಮೀಣ ಭಾಗದಲ್ಲಿ ಸರಕಾರಿ ಶಾಲಾ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ಒದಗಿಸುವ ‘ಕ್ಲಾಸ್ ಆನ್ ವ್ಹೀಲ್ಸ್’ ಡಿಜಿಟಲ್ ಕಂಪ್ಯೂಟರ್ ಸಾಕ್ಷರತಾ ಬಸ್ ಯೋಜನೆ ಸರಕಾರಕ್ಕೂ ಪ್ರೇರಣಾದಾಯಕ ಎಂದು ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಮೆಚ್ಚುಗೆ ವ್ಯಕ್ತಪಡಿಸಿದರು. ನಗರದ ಜೆಪ್ಪು ಸೈಂಟ್ ಜೋಸೆಫ್ಸ್ ಸೆಮಿನರಿ ಬಳಿಯ ಮರಿಯ ಜಯಂತಿ ಹಾಲ್ನಲ್ಲಿ ಶನಿವಾರ ಎಂಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ನ ದಶಮಾನೋತ್ಸವದ ನಿಮಿತ್ತ ‘ಕ್ಲಾಸ್ ಆನ್

ಮಂಗಳೂರು: ಸಭಾಧ್ಯಕ್ಷ ಸ್ಥಾನವನ್ನು ಪಕ್ಷವನ್ನು ಮೀರಿ ನೋಡಲು ಬಯಸುತ್ತೇನೆ: ಯು.ಟಿ. ಖಾದರ್

ನಾನು ಎಲ್ಲರಿಗೂ ಸೇರಿರುವ ವಿಧಾನ ಸಭಾಧ್ಯಕ್ಷ. ಈ ಸ್ಥಾನವನ್ನು ಯಾವುದೇ ರಾಜಕೀಯ ಜಾತಿ ಧರ್ಮದ ಆಧಾರದಲ್ಲಿ ನೋಡುವಂತಿಲ್ಲ. ಇದು ಎಲ್ಲವನ್ನೂ ಮೀರಿ ನೋಡಬೇಕಾದ ಸಂವಿಧಾನ ಬದ್ಧವಾದ ಸ್ಥಾನಮಾನ. ಎಲ್ಲರೂ ಗೌರವ ಕೊಡುವುದು ನನಗಲ್ಲ. ಸಂವಿಧಾನ ಪೀಠಕ್ಕೆ, ಸಭಾಧ್ಯಕ್ಷ ಸ್ಥಾನಕ್ಕೆ’ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಮುಸ್ಲಿಂ ಸ್ಪೀಕರ್‍ಗೆ ಬಿಜೆಪಿ ಶಾಸಕರು ನಮಸ್ಕರಿಸುವಂತೆ

ಉಡುಪಿ : ಹತ್ಯೆ ಪ್ರಕರಣ – ಕೊಲೆಗೆ ಬಳಸಿದ ಚೂರಿ ಪತ್ತೆಗೆ ಪೊಲೀಸರಿಂದ ತೀವ್ರ ಶೋಧ

ನೇಜಾರು ತಾಯಿ ಮತ್ತು ಮೂವರು ಮಕ್ಕಳನ್ನು ಭೀಕರವಾಗಿ ಕೊಲೆಗೈದ ಆರೋಪಿ ಮಂಗಳೂರು ಏರ್ ಇಂಡಿಯಾ ಎಕ್ಸ್ ಪ್ರೆಸ್ ಉದ್ಯೋಗಿ ಪ್ರವೀಣ್ ಅರುಣ್ ಚೌಗುಲೆ(39) ಬಹಳ ಯೋಜಿತವಾಗಿ ಈ ಕೃತ್ಯ ಎಸಗಿರುವುದು ಪೊಲೀಸ್ ತನಿಖೆಯಿಂದ ಬಯಲಾಗಿದೆ. ಯಾವುದೇ ಸಾಕ್ಷ್ಯಾಧಾರ ಮತ್ತು ತನ್ನ ಮುಖ ಪರಿಚಯ ಸಿಗಬಾರದೆಂಬ ಉದ್ದೇಶದಿಂದ ಪ್ರವೀಣ್ ಚೌಗುಲೆ ಈ ಪೂರ್ವ ಯೋಜಿತ ಕೊಲೆಗಾಗಿ ತನ್ನ ಕಾರು, ಮಾಸ್ಕ್, ಹಲವು ರಿಕ್ಷಾ, ಬೈಕ್, ಬಸ್‍ಗಳನ್ನು ಬಳಸಿದ್ದನು. ಅದೇ ರೀತಿ ಬ್ಯಾಗ್ ಮತ್ತು

ಮಂಗಳೂರು: ನ.21ರಂದು ಪುರಭವನದಲ್ಲಿ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ

ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಕರ್ತರ 4ನೇ ಜಿಲ್ಲಾ ಸಮ್ಮೇಳನ ನ.21ರಂದು ಮಂಗಳೂರಿನ ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷರಾದ ಶ್ರೀನಿವಾಸ್ ನಾಯಕ್ ಇಂದಾಜೆ ತಿಳಿಸಿದರು. ಅವರು ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಸಮ್ಮೇಳನವನ್ನು ನ.21ರಂದು ಬೆಳಿಗ್ಗೆ 10ಕ್ಕೆ ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದು, ಸಮಾರಂಭದ ಅಧ್ಯಕ್ಷತೆಯನ್ನು ದ.ಕ ಜಿಲ್ಲಾ

ಮಂಗಳೂರು: ಅದೈತ್ ಹೂಂಡೈ ಕಾರು ಸಂಸ್ಥೆಯಿಂದ ಗ್ರಾಹಕರಿಗೆ ವಿಶೇಷ ಕೊಡುಗೆ..!

ಕಾರು ಮಾರಾಟ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಅದೈತ್ ಹ್ಯೂಂಡೈಯವರು ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡುತ್ತಿದ್ದಾರೆ.ಕಾರು ಮಾರಾಟ ಕ್ಷೇತ್ರದಲ್ಲಿ ತನ್ನದೇ ಆದ ಚಾಪು ಮೂಡಿಸಿರುವ ಅದೈತ್ ಹೂಂಡಾಯಿ ಹೊಸ ಹೊಸ ಕಾರುಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವ ಮೂಲಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ವಾಹನ ಖರೀದಿಗೆ ಆಕರ್ಷಕ ಬಹುಮಾನ ಹಾಗೂ ಉತ್ತಮ ಕ್ಯಾಶ್ ಪ್ರೈಸ್ ನೀಡಲಿದೆ.ಹೊಸ ಕಾರು ಖರೀದಿ ಮಾಡುವವರಿಗೆ ಟೆಕ್ನೋಬೈಟ್ ಬ್ಲುಟೂತ್ ಸ್ಪೀಕರ್, ಕಾಶ್ ಬ್ಯಾಕ್

ಡಾ|| ಚೂಂತಾರು ಕಸಾಪ ರಾಜ್ಯ ಸಮಿತಿಗೆ ನೇಮಕ

ಕನ್ನಡ ಸಾಹಿತ್ಯ ಪರಿಷತ್ತು ಮಂಗಳೂರು ತಾಲೂಕು ಘಟಕ ಇದರ ಗೌರವ ಕಾರ್ಯದರ್ಶಿಗಳಾದ ಡಾ|| ಮುರಲೀ ಮೋಹನ್ ಚೂಂತಾರು ಅವರನ್ನು ಸಮಸ್ತ ಕನ್ನಡಿಗರ ಏಕಮಾತ್ರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ ಬೆಂಗಳೂರು ಇದರ ಮಾರ್ಗದರ್ಶಿ ಸಮಿತಿಗೆ ಸದಸ್ಯರಾಗಿ ಕಸಾಪ ಇದರ ರಾಜ್ಯಾಧ್ಯಕ್ಷರಾದ ಶ್ರೀ ನಾಡೋಜ ಡಾ|| ಮಹೇಶ್ ಜೋಶಿ ಅವರು ದಿನಾಂಕ: 11-11-2023 ರಂದು ಆದೇಶ ನೀಡಿ ಪ್ರಕಟಣೆ ನೀಡಿರುತ್ತಾರೆ. ಕನ್ನಡ ಸಾಹಿತ್ಯ ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿಸುವ

ಸೂಟರ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರದಲ್ಲಿ ಬಲೀಂದ್ರ ಪೂಜೆ

ಮಂಗಳೂರು * ಅತೀ ಪುರಾತನ ಬಬ್ಬುಸ್ವಾಮಿ ಕ್ಷೇತ್ರಗಳಲ್ಲಿ ಒಂದಾಗಿರುವ ಸೂಟರ್ ಪೇಟೆ ಶ್ರೀ ಕೋರ್ದಬ್ಬು ದೇವಸ್ಥಾನದಲ್ಲಿ ಬಲೀಂದ್ರ ಪೂಜೆಯನ್ನು ವಿಶಿಷ್ಟ ಹಾಗೂ ಅತ್ಯಂತ ಪಾರಂಪರಿಕ ರೀತಿಯಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು. ಅಂಧಕಾರವನ್ನು ಕಳೆಯುವ ದೀಪಾವಳಿ ಹಬ್ಬದ ಮೂರನೇ ದಿನವೇ ಬಲಿಪಾಡ್ಯಮಿ. ಈ ದಿನವೂ ಕೂಡ ವಿಶಿಷ್ಟತೆಯನ್ನು ಪಡೆದಂತಹ ದಿನ.ಪ್ರಜಾಹಿತ ರಾಜನಾಗಿ , ದಾನಶೂರನೆಂದು ಪ್ರಖ್ಯಾತಿ ಪಡೆದ ಬಲೀಂದ್ರನ ಪೂಜೆಯನ್ನು ದೈವಸ್ದಾನಗಳಲ್ಲಿ ದೀಪಾವಳಿ

ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ ಲಾಂಛನ ಬಿಡುಗಡೆ

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಸಂಸದ ಶ್ರೀ ನಳಿನ್ ಕುಮಾರ್ ಕಟೀಲ್ ಅವರ ಮಾರ್ಗದರ್ಶನ ಹಾಗೂ ಶಾಸಕ ಶ್ರೀ ಡಿ.ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ 2023 ಮಾರ್ಚ್ ನಲ್ಲಿ ನಡೆದ ಮಂಗಳೂರಿನ “ಸ್ಟ್ರೀಟ್ ಫುಡ್ ಫಿಯೆಸ್ಟ” ಸುಮಾರು 150ಕ್ಕೂ ಹೆಚ್ಚು ಆಹಾರ ಮಳಿಗೆಗಳಿಂದ ಲಕ್ಷಾಂತರ ಜನರನ್ನು ಆಕರ್ಷಿಸಿ ಭಾರೀ ಜನ ಮನ್ನಣೆ ಪಡೆಯುವ ಮೂಲಕ ಅತ್ಯಂತ ಯಶಸ್ವಿಯಾಗಿತ್ತು. ಆ ಯಶಸ್ಸಿನಿಂದ ಪ್ರೇರಣೆಗೊಂಡ ಸಾರ್ವಜನಿಕರು ಮುಂದಿನ ಸ್ಟ್ರೀಟ್ ಫುಡ್