Home ಕರಾವಳಿ Archive by category ಮಂಗಳೂರು (Page 297)

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ ನೊಳಗೆ ಸಿಲುಕಿಕೊಂಡ ಮೂವರ ರಕ್ಷಣೆ

ಮಂಗಳೂರಿನ ಮಿನಿವಿಧಾನಸೌಧದ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ಮೂವರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಿಸಿದ ಘಟನೆ ನಡೆದಿದೆ. ಮಿನಿ ವಿಧಾನಸೌಧದಲ್ಲಿ ಕೆಲಸಕ್ಕೆಂದು ಬಂದಿದ್ದ ಮೂವರು ಲಿಫ್ಟ್ ಹತ್ತಿದ್ದರು. ಹಿರಿಯ ಮಹಿಳೆ ಮತ್ತು ಇಬ್ಬರು ಹಿರಿಯ ಪುರುಷರು ಲಿಫ್ಟ್‌ನಲ್ಲಿ ತೆರಳಿದ್ದರು. ಲಿಫ್ಟ್ ಮೇಲೇರಿದ ಸ್ವಲ್ಪ ಕ್ಷಣದಲ್ಲಿ ನಿಂತುಕೊಂಡಿತ್ತು. ಲಿಫ್ಟ್‌ನಲ್ಲಿ

ಕೋಸ್ಟಲ್ ಬರ್ತ್, ಸಾಗರ ಮಾಲಾ ಯೋಜನೆಯ ವಿರುದ್ದ ಬೆಂಗರೆಯಲ್ಲಿ ಮೀನುಗಾರರಿಂದ ’ದೋಣಿಯೊಂದಿಗೆ ಪ್ರತಿಭಟನೆ’

ಕೇಂದ್ರ ಸರಕಾರದ ಮಹತ್ವಾಕಾಂಕ್ಷೆಯ ಸಾಗರ ಮಾಲಾ ಯೋಜನೆ ಕರ್ನಾಟಕ ಕರಾವಳಿ ಜಿಲ್ಲೆಗಳ ಮೀನುಗಾರ ಸಮುದಾಯದಲ್ಲಿ ಆತಂಕವನ್ನು ಸೃಷ್ಟಿಸುತ್ತಿದೆ. ಮಂಗಳೂರು ಬೆಂಗರೆಯ ಪಲ್ಗುಣಿ ನದಿ ದಂಡೆಯಲ್ಲಿ ಸಾಗರ ಮಾಲಾ ಯೋಜನೆಯಡಿ ದೇಶೀಯ ಹಡಗುಗಳ ನಿಲುಗಡೆಗಾಗಿ ಕೋಸ್ಟಲ್ ಬರ್ತ್ ನೂರು ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿದೆ. ಇದು ಸ್ಥಳೀಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ಬಲವಾದ ಪೆಟ್ಟು ನೀಡುತ್ತದೆ, ದುಡಿಮೆಯ ಅವಕಾಶವನ್ನು ನಾಶಗೊಳಿಸುತ್ತದೆ. ಮೀನುಗಾರರ

ಕರಾವಳಿಯಲ್ಲಿ ಚುರುಕುಗೊಂಡ ಮಳೆ

ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದೆ. ಕರಾವಳಿ ಭಾಗದಲ್ಲಿ ಬೆಳಗ್ಗೆಯಿಂದಲೇ ದಟ್ಟ ಮೋಡ ಕವಿದು ಮಳೆ ಸುರಿಯುತ್ತಿದೆ. ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿತ್ತು.  ಹವಾಮಾನ ಇಲಾಖೆ ವರದಿ ಪ್ರಕಾರ ಈ ವಾತಾವರಣ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮುಂದುವರೆಯಲಿದ್ದು, ಉತ್ತಮ ಮಳೆಯಾಗುವ ನಿರೀಕ್ಷೆ ಇದೆ. ಈ ಬಾರಿ ಬೇಸಿಗೆಯಿಂದಲೇ ಅಂದರೆ ಮೇ ತಿಂಗಳ ಆರಂಭದಿಂದಲೇ ಆಗಾಗ ಮಳೆ ಸುರಿಯುತ್ತಿತ್ತಾದರೂ ಮುಂಗಾರು

ಬೆಲೆಯೇರಿಕೆಯ ವಿರುದ್ಧ ಬೀದಿಬದಿ ವ್ಯಾಪಾರಸ್ಥರಿಂದ ಪ್ರತಿಭಟನೆ

ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ವಿಪರೀತ ಬೆಲೆಯೇರಿಕೆಯನ್ನು ವಿರೋಧಿಸಿ ಮಂಗಳೂರು ನಗರದ ಬೀದಿಬದಿ ವ್ಯಾಪಾರಸ್ಥರೂ ಕೂಡ ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ನಗರದ ಸ್ಟೇಟ್ ಬ್ಯಾಂಕ್ ಬಳಿ ಹಾಗೂ ಲೇಡಿಗೋಷನ್ ಬಳಿಯಲ್ಲಿ ಬೀದಿಬದಿ ವ್ಯಾಪಾರಸ್ಥರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ಜನವಿರೋಧಿ ನೀತಿಗಳ ವಿರುದ್ದ ಘೋಷಣೆಗಳನ್ನು ಕೂಗುವ ಮೂಲಕ ಬಿತ್ತಿಚಿತ್ರ ಹಿಡಿದು ಪ್ರತಿಭಟಿಸಿದರು.ಬೆಲೆಯೇರಿಕೆಯ ವಿರುದ್ದ CPIM ಮಂಗಳೂರು

ಸಹಕಾರ ಸಚಿವಾಲಯ ಸ್ಥಾಪಿಸುತ್ತಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ: ಎಸ್.ಆರ್. ಸತೀಶ್ಚಂದ್ರ

ಸುಮಾರು 117 ವರ್ಷಗಳ ಇತಿಹಾಸವಿರುವ ಸಹಕಾರ ಕ್ಷೇತ್ರಕ್ಕೆ ಸಹಕಾರ ಸಚಿವಾಲಯ ಬೇಕು ಎನ್ನುವ ಬೇಡಿಕೆಯನ್ನು ಕೇಂದ್ರ ಸರ್ಕರ ಪರಿಗಣಿಸಿ ಸಹಕಾರದಿಂದ ಸಮೃದ್ಧಿ ಎನ್ನುವ ಘೋಷವಾಕ್ಯದೊಂದಿಗೆ ಸಹಕಾರ ಸಚಿವಾಲಯವನ್ನು ರಚಿಸಿರುವ ಕೇಂದ್ರ ಸರ್ಕಾರಕ್ಕೆ ಸಹಕಾರಿಗಳ ಪರವಾಗಿ ಧನ್ಯವಾದವನ್ನು ತಿಳಿಸುತ್ತೇನೆ ಎಂದು ಸಹಕಾರ ಭಾರತಿಯ ಕರ್ನಾಟಕದ ರಾಜ್ಯಾಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು. ಅವರು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೊಷ್ಟಿ ನಡೆಸಿ ಮಾತನಾಡಿ ನಮ್ಮ

ಮಂಗಳೂರು ಸ್ಮಾರ್ಟ್‍ಸಿಟಿ ಕಾಮಗಾರಿ : ಡೊಂಗರಕೇರಿ ಕಟ್ಟೆಯ ಬಳಿ ಪುರಾತನ ಬಾವಿ ಪತ್ತೆ

ಮಂಗಳೂರು ನಗರದಾದ್ಯಂತ ಸ್ಮಾರ್ಟ್‍ಸಿಟಿ ಕಾಮಗಾರಿ ನಡೆಯುತ್ತಿದ್ದು ನಗರದ ಡೊಂಗರಕೇರಿ ಕಟ್ಟೆಯ ಬಳಿ ಕಾಮಗಾರಿಯನ್ನು ನಡೆಸುತ್ತಿರುವ ಸಂದರ್ಭ ಪುರಾತನ ಬಾವಿಯೊಂದು ಪತ್ತೆಯಾಗಿದೆ. ನಗರದ ಅಲ್ಲಿಲ್ಲಿ ಕಾಮಗಾರಿ ವೇಳೆ ಬಾವಿ ಪತ್ತೆಯಾಗುತ್ತಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ. ನಗರದ ಡೊಂಗರಕೇರಿ ಕಟ್ಟೆಯ ಬಳಿ ಸ್ಮಾರ್ಟ್‍ಸಿಟಿ ಯೋಜನೆಯಲ್ಲಿ ರಸ್ತೆ ಫುಟ್‍ಬಾತ್ ಕಾಮಗಾರಿ ನಡೆಯುತ್ತಿದ್ದು ಕಾಮಗಾರಿ ವೇಳೆ ಪುರಾತನ ಬಾವಿ ಪತ್ತೆಯಾಗಿದ್ದು, ತಕ್ಷಣ ಮಹಾನಗರ ಪಾಲಿಕೆ

ಕೇಂದ್ರ ಸಂಪುಟದಲ್ಲಿ ಸಹಕಾರಿ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ದ.ಕ. ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ

ಕೇಂದ್ರ ಸಂಪುಟದಲ್ಲಿ ಪ್ರಥಮ ಬಾರಿ ಸಹಕಾರಿ ಸಚಿವಾಲಯ ಸ್ಥಾಪಿಸಿದ್ದು, ಸಹಕಾರಿ ಕ್ಷೇತ್ರದ ಬೆಳವಣಿಗೆ ದೃಷ್ಟಿಯಿಂದ ಸ್ವಾಗತಾರ್ಹ ಮತ್ತು ಅಭಿನಂದನೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷರಾದ ರವಿರಾಜ್ ಹೆಗ್ಡೆಯವರು ಹೇಳಿದರು.ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ ಅವರು, 97ನೇ ಸಂವಿಧಾನಿಕ ತಿದ್ದುಪಡಿಯಂತೆ ರಾಜ್ಯಗಳ ಸಹಕಾರಿ ಕಾಯ್ದೆಯಲ್ಲಿ ಪುನರಪಿ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಹೆಚ್ಚಿನ ಒತ್ತು ನೀಡುವ ಅವಶ್ಯಕತೆವಿದೆಯೆಂದು ಕೊಡವೂರು ರವಿರಾಜ

ಮರವೂರು ಸೇತುವೆ ಕುಸಿತದಿಂದ ಕಂಗೆಟ್ಟ ಸ್ಥಳೀಯರು : ಜಿಲ್ಲಾಡಳಿತದ ವಿರುದ್ಧ ಆಕ್ರೋಶ

ಸೇತುವೆಯೆಂದರೆ ಕೇವಲ ಎರಡು ಊರಿನ ಸಂಪರ್ಕದ ಕೊಂಡಿ ಮಾತ್ರವಲ್ಲ ಎರಡು ಊರಿನ ಜನರ ಸಂಬಂಧದ ಕೊಂಡಿ. ಮರವೂರು ಸೇತುವೆ ಕುಸಿತದಿಂದ ಎರಡು ಊರಿನ ಸಂಪರ್ಕ ಕಳೆದುಕೊಂಡು 3 ವಾರಗಳು ಕಳೆದಿವೆ. ಆದರೆ ಇದರ ದುರಸ್ತಿ ಕಾರ್ಯ ಮಾತ್ರ ಆಮೆಗತಿಯಲ್ಲಿ ನಡೆಯುತ್ತಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇಲ್ಲಿದೆ ಈ ಬಗ್ಗೆ ಸ್ಪೆಷಲ್ ರಿಪೋರ್ಟ್. ಮರವೂರು ಸೇತುವೆ ಕುಸಿತವಾಗಿ ಸುಮಾರು 3 ವಾರಗಳು ಕಳೆದಿವೆ. ಸಂಪೂರ್ಣ ಎರಡು ಕಡೆಯ ಸಂಪರ್ಕ ಕಳೆದುಕೊಂಡಿದೆ. ಕಾರಣಗಳ ಕುರಿತು

ಕೋಟಿ ಗಟ್ಟಲೆ ವೆಚ್ಚದಲ್ಲಿ ನಿರ್ಮಾಣಗೊಂಡು 3ವರ್ಷ ಕಳೆದರೂ, ಆರಂಭವಾಗಿಲ್ಲ ಉರ್ವ ಮಾರುಕಟ್ಟೆ

ಅದು ಬರೋಬರಿ 13.5 ರೂ ಕೋಟಿ ವೆಚ್ಚದಲ್ಲಿ ನಡೆದ ಮಾರ್ಕೇಟ್….. ಉದ್ಘಾಟನೆಗೊಂಡು 3 ವರ್ಷ ಕಳೆದರೂ , ವ್ಯಾಪಾರಕ್ಕಾಗಿ ಗ್ರಾಹಕರಿಗೆ ಬಿಟ್ಟುಕೊಟ್ಟಿಲ್ಲ…. ಬೀಕೋ ಎನ್ನುತ್ತಿರುವ ಕಟ್ಟಡ… ಹಾಗಾದ್ರೆ ಅದು ಯಾವ ಮಾರುಕಟ್ಟೆ ಅಂತೀರಾ ಇಲ್ಲಿದೆ ಸ್ಟೋರಿ… 2019ರ ಜೂನ್ 28ರಂದು ಮಂಗಳೂರಿನ ಉರ್ವನಲ್ಲಿ ನಿರ್ಮಾಣಗೊಂಡ ಮಾರ್ಕೇಟ್…..ಉದ್ಘಾಟನೆಗೊಂಡ ಬಳಿಕ ಮಳಿಗೆಗಳನ್ನು ಏಲಂ ಮಾಡದೇ ಬಿಕೋ ಎನ್ನುತ್ತಿರುವ ಕಟ್ಟಡ….. ಹೌದು ಮಂಗಳೂರು

ಪಚ್ಚನಾಡಿ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಮೇಯರ್ ಭೇಟಿ, ಪರಿಶೀಲನೆ

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕ ಮತ್ತು ಪಿಲಿಕುಳದಲ್ಲಿರುವ ಟರ್ಶಿಯರಿ ಟ್ರೀಟ್ ಮೆಂಟ್ ಪ್ಲಾಂಟ್‍ಗೆ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಮತ್ತು ಕಾರ್ಯಪಾಲಕ ಅಭಿಯಂತರ ಗುರುಪ್ರಸಾದ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಚ್ಚನಾಡಿಯಲ್ಲಿರುವ ಒಳಚರಂಡಿಯ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮೇಯರ್ ಪ್ರೇಮಾನಂದ ಶೆಟ್ಟಿ ಪ್ರತಿಕ್ರಿಯೆ ನೀಡಿ,