Mangaluru: A free covid vaccination camp was held on July 5 at Srinivas University, City Campus, Pandeshwara Pandeshwara here, under the aegis of National Service Project, in association with the district health and family welfare department and Jeppu Primary Health Centre. Srinivas University
ಮಂಗಳೂರು: ನಗರದ ಶ್ರೀನಿವಾಸ್ ವಿಶ್ವವಿದ್ಯಾಲಯ, ಸಿಟಿ ಕ್ಯಾಂಪಸ್ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಭೋದಕೇತರ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಶಿಬಿರ ಜರಗಿತು. ಶ್ರೀನಿವಾಸ್ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್. ಐತಾಳ್ ಕೋವಿಡ್ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ ಸಂದರ್ಭ ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ
ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ನಡುವಿನ ಮುಂಬಡ್ತಿ ಗೊಂದಲ ಹೊಸ ತಿರುವು ಪಡೆದುಕೊಂಡಿದೆ. ಈಗಾಗಲೇ ಮುಂಬಡ್ತಿ ಪಡೆದಿರುವ ಗ್ರೇಡ್ 2 ಪ್ರೌಢ ಶಾಲಾ ಶಿಕ್ಷಕರ ಹಿತವನ್ನು ಕಾಪಾಡಬೇಕು ಎಂಬ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಬಡ್ತಿ ಸರಕಾರಿ ಪ್ರೌಢಶಾಲಾ ಶಿಕ್ಷಕರ ಸಂಘ ಅಭಿಯಾನ ಆರಂಭಿಸಿದೆ. ಶಿಕ್ಷಕರ ಹಿಂಭಡ್ತಿ ಆದೇಶವನ್ನು ಮರು ಪರಿಶೀಲಿಸುವಂತೆ ಸರ್ಕಾರ ಮತ್ತು ಇಲಾಖೆಯ ಮೇಲೆ ಒತ್ತಡ ಹೇರುವಂತೆ ಸಂಘ ಮುಂದಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಉಸ್ತುವಾರಿ
ಮಂಗಳೂರು: ವಾಮಾಂಜೂರು ಟೈಗರ್ಸ್ ಇದರ ವತಿಯಿಂದ ಕೆ.ಎಂ.ಸಿ ಆಸ್ಪತ್ರೆ ಮಂಗಳೂರು ಇದರ ಸಹಯೋಗದೊಂದಿಗೆ ದಿ.ನವೀನ್ ಮಿಜಾರ್ ಇವರ ಎರಡನೇ ವರ್ಷದ ಪುಣ್ಯಸ್ಮರಣೆಯ ಸಲುವಾಗಿ ವಾಮಂಜೂರಿನ ಶ್ರೀ ರಾಮ ಭಜನಾ ಮಂದಿರದಲ್ಲಿ ಆದಿತ್ಯವಾರ ನಡೆದ ರಕ್ತದಾನ ಶಿಬಿರವನ್ನು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ವಾಮಂಜೂರು ಟೈಗರ್ಸ್ ಸಂಘಟನೆಯ ಪ್ರಮುಖರು ಶಾಸಕರ ಉಪಸ್ಥಿತಿಯಲ್ಲಿ ಸಸಿ ನೆಡುವ ಮೂಲಕ
ಮಂಗಳೂರು: ಧರ್ಮ ಸಮನ್ವಯ ಹಾಗೂ ಅಂತರ್ಧರ್ಮೀಯ ಸಂವಾದದ ಹರಿಕಾರ ವಂ. ಡಾ.ಜಾನ್ ಫೆರ್ನಾಂಡಿಸ್ (85) ಅಲ್ಪಕಾಲದ ಅನಾರೋಗ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ನಿಧನರಾದರು. 1936ರಲ್ಲಿ ಉದ್ಯಾವರದಲ್ಲಿ ಜನಿಸಿದ ಇವರು, 1963ರಲ್ಲಿ ಧರ್ಮಗುರುಗಳಾಗಿ ದೀಕ್ಷೆ ಪಡೆದರು. ಬಿಜೈ ಮತ್ತು ರೊಸಾರಿಯೊ ಧರ್ಮಕೇಂದ್ರಗಳಲ್ಲಿ ಸಹಾಯಕ ಗುರುಗಳಾಗಿ ಹಾಗೂ ಹೊಸಬೆಟ್ಟು (ಮೂಡುಬಿದಿರೆ), ಕಟಪಾಡಿ ಹಾಗೂ ಬೆಳ್ಮಣ್ ಚರ್ಚ್‌ಗಳಲ್ಲಿ ಪ್ರಧಾನ ಗುರುಗಳಾಗಿ ಸೇವೆ ಸಲ್ಲಿಸಿದ್ದರು.
ನಗರದ ಹೊಯಿಗೆ ಬಜಾರ್, ಜಪ್ಪಿನಮೊಗರು, ಕೂಳೂರು, ಮುಳಿಹಿತ್ಲು, ತೋಕೂರು ಪರಿಸರದಲ್ಲಿ ಗುಡಿಸಲು ನಿರ್ಮಿಸಿ ವಾಸವಾಗಿದ್ದ ಅಲೆಮಾರಿ ಸಮುದಾಯದ ಶಿಳ್ಳೆಕ್ಯಾತ ಕುಟುಂಬಗಳಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜಿಲ್ಲಾಧಿಕಾರಿಯ ಕಚೇರಿ ಸಭಾಂಗಣದಲ್ಲಿ ಟರ್ಪಾಲ್ ವಿತರಣಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಮಾತನಾಡಿದ ಅಲೆಮಾರಿ ಮತ್ತು ಅರೆ ಅಲೆಮಾರಿ ನಿಗಮದ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎದುರಾದ
ಮಂಗಳೂರಿನ ಮೂಲ ನದಿ ಮೀನುಗಾರರು ಗುರುಪುರ ಹೊಳೆಯಲ್ಲಿ ನಮ್ಮ ಪೂರ್ವಿಕರ ಕಾಲದಿಂದಲೂ ಸಾಂಪ್ರಾದಾಯಿಕ ಮೀನುಗಾರಿಕೆಯನ್ನು ನಡೆಸಿಕೊಂಡು ತಮ್ಮ ಜೀವನವನ್ನು ನಡೆಸುತ್ತಿದ್ದಾರೆ. ನದಿ ಮೀನುಗಾರಿಕೆಯೇ ಅವರ ಜೀವನಾದಾರ ಸಾಂಪ್ರಾದಾಯಿಕವಾದ ವಿವಿಧ ರೀತಿಯ ನದಿ ಮೀನುಗಾರಿಕೆಯನ್ನು ನಡೆಸುತ್ತಾ ಜೀವನ ಸಾಗಿಸುತ್ತಿರುವ ಮೀನುಗಾರರ ಜೀವನ ಈ ಕಷ್ಟವಾಗಿದೆ. ಹೌದು ಸಾಂಪ್ರದಾಯಿಕವಾದ ನದಿ ಮೀನುಗಾರಿಕೆಯನ್ನು ನೀರಿಗೆ ಇಳಿದು ಮೀನುಗಾರಿಕೆ ಮಾಡುವ ಪದ್ದತಿಯಲ್ಲಿ ಬೊಲ್ಪುಬಲೆ ಮತ್ತು
ಮಂಗಳೂರು ನಗರದಲ್ಲಿ ಲಾಕ್‌ಡೌನ್ ಸಂದರ್ಭ ರಸ್ತೆಯ ದುರಸ್ತಿ ಕಾರ್ಯ ಮಾಡಲು ಸಾಕಷ್ಟು ಸಮಯಾವಕಾಶ ಇದ್ದರೂ, ಇದೀಗ ಅನ್‌ಲಾಕ್ ಆದ ಬಳಿಕ ಹೆದ್ದಾರಿ ಇಲಾಖೆ ಕೂಳೂರು ಬಳಿ ಇಂಟರ್ ಲಾಕ್ ಕಾಮಗಾರಿಯನ್ನು ನಡೆಸುತ್ತಿದ್ದು, ಟ್ರಾಫಿಕ್ ಜಾಮ್‌ಗೆ ಪ್ರತ್ಯಕ್ಷ ಕಾರಣವಾಯಿತು. ಮಳೆ ನೀರು ನಿಂತು ಸೇತುವೆ ದಕ್ಷಿಣ ಭಾಗದಲ್ಲಿ ರಸ್ತೆ ಸಂಪೂರ್ಣ ಹಾಳಾಗಿದ್ದು, ಇಂದಯ ಇಂಟರ್‌ಲಾಕ್ ಕಾಮಗಾರಿ ನಡೆಸುವ ಉದ್ದೇಶದಿಂದ ಸೇತುವೆ ಬಂದ್ ಮಾಡಲಾಯಿತು. ಇದರಿಂದ ಹೊಸ ಸೇತುವೆಯಲ್ಲಿಯೇ
ಮಂಗಳೂರು: ಆಂಧ್ರಪ್ರದೇಶದಿಂದ ಕಾಸರಗೋಡಿಗೆ ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ ಮೇರೆಗೆ ವಾಹನ ತಪಾಸಣೆ ನಡೆಸಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಡಿಸಿಪಿ ಹರಿರಾಂ ಶಂಕರ್ ಹೇಳಿದರು. ಅವರು ಮಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾಧ್ಯಮಗೊಷ್ಟಿ ನಡೆಸಿ ಮಾತನಾಡಿ, ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೊಟ್ಟಾರ ಚೌಕಿ ಚೆಕ್ ಪೊಲೀಸ್ ಬಳಿ ಖಚಿತ ಮಾಹಿತಿ
ಸಂತ ಅಲೋಶಿಯಸ್ ಗೊನ್ಝಾಗ ಶಾಲೆಯಲ್ಲಿ ಮಕ್ಕಳಲ್ಲಿ ಆರೋಗ್ಯ ಮತ್ತು ಪೋಷಕಾಂಶಯುಕ್ತ ಆಹಾರದ ಬಗ್ಗೆ ಅರಿವು ನೀಡುವ ಉದ್ದೇಶದಿಂದ ಜೂನ್ ತಿಂಗಳಲ್ಲಿ ನ್ಯೂಟ್ರೀಲೈಟ್ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜರಗಿತು. ಈ ಪ್ರಯುಕ್ತ ಆಯೋಜಿಸಿರುವ ವಿವಿಧ ಪ್ರಾಯೋಗಿಕ ಚಟುವಟಿಕೆಗಳಲ್ಲಿ ಮಕ್ಕಳು ಅತ್ಯುತ್ಸಾಹದಿಂದ ಭಾಗವಹಿಸಿದರು. ಚಟುವಟಿಕೆಗಳಲ್ಲಿ ಭಾಗವಹಿಸಿದ ಮಕ್ಕಳ ಪ್ರಾತ್ಯಕ್ಷಿಕೆಗಳ ವಿಡಿಯೋವನ್ನು ಬಿಡುಗಡೆ ಮಾಡುವ ಮೂಲಕ ನ್ಯೂಟ್ರಿಲೈಟ್ 2021 ಸಮಾಪನಗೊಂಡಿತು. ಸಂಸ್ಥೆಯ

















