Home ಕರಾವಳಿ Archive by category ಮಂಗಳೂರು (Page 305)

ಮರವಂತೆಯಲ್ಲಿ ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮ

ಕುಂದಾಪುರ: ಎಲ್ಲೆಡೆಯ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ಬಿಜೆಪಿ ದುರಾಡಳಿತದಿಂದ ರೋಸಿಹೋಗಿ, ಕಾಂಗ್ರೆಸ್ ಪಕ್ಷವನ್ನು ಮರಳಿ ಅಧಿಕಾರಕ್ಕೆ ತರುವ ಬಗ್ಗೆ ಮಾತನಾಡುತ್ತಿದ್ದಾರೆ. ಯುವಜನರು ಕಾಂಗ್ರೆಸ್‌ನತ್ತ ಮುಖಮಾಡುತ್ತಿದ್ದಾರೆ. ಇದು ಪಕ್ಷದ ನಾಯಕರಲ್ಲಿ ಹೊಸ ಭರವಸೆ ಮೂಡಿಸಿದೆ ಎಂದು ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಹೇಳಿದರು. ಮರವಂತೆಯಲ್ಲಿ ಭಾನುವಾರ

ಹೈಕಮಾಂಡ್ ನಿರ್ಧಾರಕ್ಕೆ ಬದ್ಧ: ಮಂಗಳೂರಿನಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಅವರವರ ಅಭಿಪ್ರಾಯ, ಹೇಳಿಕೆ ಕೊಡುವಂತಹ ಹಕ್ಕು, ಅವಕಾಶಗಳಿವೆ. ಅದರಂತೆ ಸ್ವಾಮೀಜಿಗಳು, ಹಿರಿಯರು ತಮ್ಮ ತಮ್ಮ ಭಾವನೆಗಳನ್ನು ವ್ಯಕ್ತಪಡಿಸಿದರೆ, ಅದನ್ನು ಗೌರವಿಸಬೇಕಾದ್ದು ಅನಿವಾರ್ಯ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.ಕಾಂಗ್ರೆಸ್ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿ ಮಾಧ್ಯಮ ದವರೊಂದಿಗೆ ಮಾತಾನಾಡಿದ ಅವರು, ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ವ್ವವಸ್ಥಿತವಾಗಿ ಆಡಳಿತ ನಡೆಯುತ್ತಿದೆ

ಆಸ್ಕರ್ ಫೆರ್ನಾಂಡಿಸ್ ಅವರು ಬಹುಬೇಗನೇ ಗುಣಮುಖರಾಗಿ ಬರಲಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್‌ನ ಹಿರಿಯ ಮುಖಂಡರಾದ ಆಸ್ಕರ್ ಫೆರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾಗಿರುವ ಹಿನ್ನಲೆಯಲ್ಲಿ ಇಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮಂಗಳೂರಿನ ಯೆನೆಪೋಯ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಆಸ್ಕರ್ ಅವರ ಕುಟುಂಬಿಕರಿಗೆ ಧೈರ್ಯ ತುಂಬಿದ್ದಾರೆ. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಕೊಂಕಣ್ ರೈಲ್ವೇ, ಹೆದ್ದಾರಿ ಅಭಿವೃದ್ಧಿ ಸೇರಿ ಹಲವು ಅಭಿವೃದ್ಧಿಗೆ ಆಸ್ಕರ್ ಕಾರಣಕರ್ತರು. ಒಂದು ಆದರ್ಶ

ಆಸ್ಕರ್ ಫೆರ್ನಾಂಡಿಸ್ ಆರೋಗ್ಯ ವಿಚಾರಿಸಿದ ಉಡುಪಿ ಅದಮಾರು ಮಠದ ಶ್ರೀಗಳು

ಮಂಗಳೂರು: ಕಾಂಗ್ರೆಸ್‌ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಉಡುಪಿ ಅದಮಾರು ಮಠದ ವಿಶ್ವಪ್ರೀಯ ತಿರ್ಥ ಸ್ವಾಮೀಜಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ರು. ಇದೇ ವೇಳೆ ಆಸ್ಕರ್ ಕುಟುಂಬಿಕರಿಗೆ ಧೈರ್ಯ ತುಂಬಿದರು. ಅದಮಾರು ಮಠ, ಗುರುಗಳು ಅಂದರೆ ಅಸ್ಕರ್ ಅವರಿಗೆ ಬಹಳ ಗೌರವ, ಇವರ ತಂದೆಯವರು ನಮ್ಮ ಗುರುಗಳಿಗೆ ಹೆಡ್ ಮಾಸ್ಟರ್ ಅಗಿದ್ದವರು. ಆಸ್ಕರ್ ಅವರು ಮಾಡಿದ ಸಮಾಜ ಸೇವೆ ಅನನ್ಯ.

ರಾಜ್ಯದಲ್ಲಿ ಮೊದಲ ಬಾರಿಗೆ ಆರಂಭಗೊಂಡ ಬ್ಯಾರಿ ಜಾನಪದ ಕಲೆಗಳ ಕೋರ್ಸ್

ಮಂಗಳೂರು:ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಸಂತ ಅಲೋಶಿಯಸ್ ಕಾಲೇಜು (ಸ್ವಾಯತ್ತ) ಮಂಗಳೂರು ಇದರ ಆಶ್ರಯದಲ್ಲಿ ’ಬ್ಯಾರಿ ದಫ್, ಕೋಲ್ಕಲಿ, ಒಪ್ಪನೆ ಪಾಟ್, ಕೈಕೊಟ್ಟ್ ಪಾಟ್ ಜಾನಪದ ಕಲೆಗಳ ಕೋರ್ಸ್ ತರಬೇತಿಯ ಪ್ರಮಾಣ ಪತ್ರ ವಿತರಣಾ ಹಾಗೂ ಪ್ರತಿಭಾ ಪ್ರದರ್ಶನ ಸಮಾರಂಭ ಕಾರ್ಯಕ್ರಮವು ಶನಿವಾರ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನ ಮಾಫೇಯಿ ಸೆಂಟರ್ ಏರಿಕ್ ಮಥಾಯಸ್ ಸಭಾಂಗಣದಲ್ಲಿ ನಡೆಯಿತು. ದಫ್, ಕೋಲ್ಕಲಿ ಬಾರಿಸೋ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು.

ಅಪರಾಧ ಪ್ರಕರಣದಲ್ಲಿ ಪೊಲೀಸರಿಗೆ ಸಹಕಾರಿಯಾಗಿದ್ದ ಸುಧಾ ಕ್ಯಾನ್ಸರ್ ಗೆ ಬಲಿ-ಅಂತಿಮ ನಮನ

ದ.ಕ. ಜಿಲ್ಲೆಯಾದ್ಯಂತ ಹಾಗೂ ಪೊಲೀಸ್ ಕಮಿಷನರೇಟ್ ವ್ಯಾಪ್ತಿ ಸೇರಿದಂತೆ ಹಲವಾರು ಅಪರಾಧ ಪ್ರಕರಣಗಳನ್ನು ಬೇಧಿಸುವಲ್ಲಿ ಪೊಲೀಸರಿಗೆ ಸಹಕಾರ ನೀಡಿರುವ ಪೊಲೀಸ್ ಶ್ವಾನ ’ಸುಧಾ’ ಕೊನೆಯುಸಿರೆಳೆದಿದೆ. ನಗರದ ಪೊಲೀಸ್ ಕಮಿಷನರೇಟ್ ವತಿಯಿಂದ ಪೊಲೀಸ್ ಮೈದಾನದಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಸುಧಾಗೆ ಭಾವಪೂರ್ಣ ಅಂತಿಮ ನಮನವನ್ನು ಸಲ್ಲಿಸಲಾಯಿತು. ಬಿಳಿ ವಸ್ತ್ರದಲ್ಲಿ ಶ್ವಾನ ಸುಧಾಳ ಮೃತದೇಹವನ್ನು ಸುತ್ತಿ, ಹೂವಿನಿಂದ ಅಲಂಕರಿಸಿ ಪೊಲೀಸ್ ವಾದ್ಯ, ತೋಪು ಹಾರಿಸುವಿಕೆ

ಕುಳಾಯಿ ಸರ ಕಳ್ಳತನ ಪ್ರಕರಣ : ಆರೋಪಿಯ ಬಂಧನ

ಸುರತ್ಕಲ್‌ನ ಕುಳಾಯಿ ವ್ಯಾಪ್ತಿಯಲ್ಲಿ ಮನೆಗೆ ನುಗ್ಗಿ ಮಹಿಳೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಸುರತ್ಕಲ್ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಮಂಗಳೂರು ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಅವರು, ಮಹಿಳೆಯ ಕರಿಮಣಿ ಸರ ಎಳೆದು ಪರಾರಿಯಾದ ಪ್ರಕರಣ ಬಗ್ಗೆ ಸಿಸಿಟಿ ಪೂಟೇಜ್ ಹಾಗೂ ಬೇರೆ ಆಯಾಮದಲ್ಲಿ ಮಾಹಿತಿ ಕಲೆ ಹಾಕಿದ ಸಂದರ್ಭದಲ್ಲಿ ಒರ್ವ ವ್ಯಕ್ತಿಯ ಸುಳಿವು ಸಿಕ್ಕಿತ್ತು. ಆ

ಆಸ್ಕರ್ ಫೆರ್ನಾಂಡಿಸ್ ಅವರ ಆರೋಗ್ಯ ವಿಚಾರಿಸಿದ ಡಾ. ಡಿ. ವಿರೇಂದ್ರ ಹೆಗ್ಗಡೆ

ಕಾಂಗ್ರೆಸ್ ನ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನ ಯೆನೆಪೋಯಾ ಆಸ್ಪತ್ರೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಇದೇ ವೇಳೆ ಆಸ್ಕರ್ ಅವರ ಆರೋಗ್ಯ ವಿಚಾರಿಸಿದ ಹೆಗ್ಗಡೆಯವರು ಮಂಜುನಾಥ ಸ್ವಾಮಿಯ ಪ್ರಸಾದ ಹಾಕಿದರು. ಆಸ್ಕರ್ ರನ್ನ ಕಂಡ ಬಳಿಕ ಕುಟುಂಬಿಕರ ಜೊತೆ ಮಾತನಾಡಿ ಧೈರ್ಯ ತುಂಬಿದರು. ಅಲ್ಲದೆ ಕೆಲ ಕಾಲ ಆಸ್ಪತ್ರೆಯ ವೈದ್ಯರ ಜೊತೆ ಮಾತುಕತೆ

ಸಂಸದರ ಧ್ವನಿಯನ್ನೇ ಗುರುತಿಸಲಾಗದ ಶಾಸಕರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ..?: ರಮಾನಾಥ ರೈ

 ದಕ್ಷಿಣ ಕನ್ನಡ ಜಿಲ್ಲಾ ಸಂಸದರ ಧ್ವನಿಯನ್ನು ಗುರುತಿಸಲಾಗದವರು ಜನರ ಸಮಸ್ಯೆಗಳಿಗೆ ಸ್ಪಂದಿಸುವರೇ ಎಂದು ಮಾಜಿ ಸಚಿವ ರಮಾನಾಥ ರೈ ಪ್ರಶ್ನಿಸಿದ್ದಾರೆ.  ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ತಮ್ಮ ಸೇಹಿತರ ಜತೆ ಮಾತನಾಡುತ್ತಾ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆ ನೀಡಿರುವಂತಹ ಆಡಿಯೋ ಧ್ವನಿ ನಳಿನ್ ಕುಮಾರ್ ಕಟೀಲ್ ಅವರದ್ದು. ಇದನ್ನು ಮುಖ್ಯಮಂತ್ರಿ ಯಡಿಯೂರಪ್ಪನವರೂ ಹೇಳಿಕೊಂಡಿದ್ದಾರೆ ಎಂದು ಅವರು

ಮಂಗಳೂರು ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾದಿಂದ ಕಾರ್ಯಕಾರಿಣಿ  ಸಭೆ 

ಕಾವೂರು: ಮಂಗಳೂರು ಉತ್ತರ ಮಂಡಲ ಮಹಿಳಾ ಮೋರ್ಚಾ  ಇದರ ಕಾರ್ಯಕಾರಿಣಿ ಸಭೆ ಕಾವೂರು ಬಿಜೆಪಿ ಕಚೇರಿಯಲ್ಲಿ ಶನಿವಾರ ಜರಗಿತು. ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಕಾರ್ಯಕಾರಿಣಿ ಉದ್ಘಾಟಿಸಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ಎಲ್ಲರಿಗೂ ಅವಕಾಶ ಲಭಿಸುತ್ತದೆ. ಪಕ್ಷದ ಮೇಲೆ ನಿಷ್ಟೆಯಿಟ್ಟು ನಾವು ಪಕ್ಷದ ಹಿತಕ್ಕಾಗಿ ಕೆಲಸ ಮಾಡಿದಾಗ ನಾಯಕರು ಇದನ್ನು ಗುರುತಿಸಿ ಪಕ್ಷ  ಸಂಘಟನೆ ಜವಾಬ್ದಾರಿ ಜತೆಗೆ ಸ್ಥಳೀಯ ಚುನಾವಣಾ ಕಣಕ್ಕೂ ಇಳಿಸಲು ಸೂಚಿಸಬಹುದು.ಬಿಜೆಪಿ ಇತರ